Site icon Vistara News

Nipah Virus: ಕೇರಳದಲ್ಲಿ ನಿಫಾ ವೈರಸ್‌ ತಗುಲಿದ್ದ ಬಾಲಕ ಸಾವು

nipah virus

ತಿರುವನಂತಪುರಂ: ಕೇರಳದಲ್ಲಿ ನಿಫಾ ಸೋಂಕು(Nipah Virus) ತಗುಲಿದ್ದ 14ವರ್ಷದ ಬಾಲಕ ಹೃದಯಾಘಾತ(Cardiac Arrest)ದಿಂದ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಮಾಹಿತಿ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಪಾಲಕ್ಕಾಡು ಮಲಪ್ಪುರಂ ಜಿಲ್ಲೆಯ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಇಂದು ಬೆಳಗ್ಗೆ 10:50 ಚಿಕಿತ್ಸೆ ಫಲಕಾರಿಗದೇ ಕೊನೆಯುಸಿರೆಳೆದಿದ್ದಾನೆ ಎಂದಿದ್ದಾರೆ.

ಎನ್‌ಐವಿ-ಪುಣೆ ಶನಿವಾರ ಬಾಲಕನಿಗೆ ನಿಪಾ ವೈರಸ್ ಇರುವುದು ದೃಢಪಡಿಸಿದ ನಂತರ, ಖಾಸಗಿ ಆಸ್ಪತ್ರೆಯಿಂದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆತನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಇಂದು ಬೆಳಗ್ಗೆ ಮೂತ್ರದ ಪ್ರಮಾಣ ಕಡಿಮೆಯಾಗಿದ್ದು, ಭಾರೀ ಹೃದಯಾಘಾತದಿಂದಾಗಿ ಆತನ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.

ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ನಂತರವೇ ಅಂತ್ಯಕ್ರಿಯೆಯ ಕುರಿತು ಹೆಚ್ಚಿನ ನಿರ್ಧರಿಸಲಾಗುತ್ತದೆ ಎಂದು ಜಾರ್ಜ್ ಹೇಳಿದರು. ಇನ್ನು ಬಾಲಕನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರಸ್ತುತ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಐಸೋಲೇಶನ್‌ನಲ್ಲಿಡಲಾಗಿದೆ.

ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.

ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ.

ಇದನ್ನೂ ಓದಿ: HD Kumaraswamy: ಕೇಂದ್ರ ಸಚಿವರಾದ ಬಳಿಕ ಮೊದಲ ಬಾರಿಗೆ ಹಾಸನಕ್ಕೆ ಎಚ್‌ಡಿಕೆ ಭೇಟಿ; ಮಳೆಯಿಂದ ಹಾನಿಯಾದ ಪ್ರದೇಶಗಳ ಪರಿಶೀಲನೆ

Exit mobile version