Nipah Virus: ಕೇರಳದಲ್ಲಿ ನಿಫಾ ಭೀತಿ; ಬಾಲಕ ಸಾವಿನ ಬೆನ್ನಲ್ಲೇ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆ - Vistara News

ದೇಶ

Nipah Virus: ಕೇರಳದಲ್ಲಿ ನಿಫಾ ಭೀತಿ; ಬಾಲಕ ಸಾವಿನ ಬೆನ್ನಲ್ಲೇ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆ

Nipah Virus: ನಿನ್ನೆಯಷ್ಟೇ ಮಣಪ್ಪುರಂನಲ್ಲಿ ನಿಫಾ ಸೋಂಕು ತಗುಲಿದ್ದ 14ವರ್ಷ ಬಾಲಕ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ. ಈಗಾಗಲೇ ಆರೋಗ್ಯ ಇಲಾಖೆ ಒಟ್ಟು 350ಸಂಪರ್ಕಿತರ ಪಟ್ಟಿ ತಯಾರು ಮಾಡಿದೆ. ಅವರಲ್ಲಿ 101 ಜನರನ್ನು ಗಂಭೀರ ಎಂದು ಪರಿಗಣಿಸಲಾಗಿದೆ. ಈ ಪಟ್ಟಿಯಲ್ಲಿ 68 ಆರೋಗ್ಯ ಸಿಬ್ಬಂದಿಗಳೂ ಇದ್ದಾರೆ. ಬಾಲಕ ಸೋಂಕಿಗೆ ತುತ್ತಾದ ಬಳಿಕ ಖಾಸಗಿ ಬಸ್‌ನಲ್ಲಿ ಪ್ರಯಾಣಿಸಿದ್ದ ಎನ್ನಲಾಗಿದೆ.

VISTARANEWS.COM


on

Nipah Virus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ತಿರುವನಂತಪುರಂ: ಕೇರಳದಲ್ಲಿ ನಿಫಾ ಸೋಂಕು(Nipah Virus) ತಗುಲಿದ್ದ 14ವರ್ಷದ ಬಾಲಕ ಹೃದಯಾಘಾತ(Cardiac Arrest)ದಿಂದ ಸಾವನ್ನಪ್ಪಿರುವ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರಲ್ಲಿ ನಿಫಾ ವೈರಸ್‌ ಕಂಡುಬಂದಿದೆ. ಇನ್ನು ರಾಜ್ಯದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ. ನಿನ್ನೆ ಮೃತಪಟ್ಟ ಬಾಲಕ ಜೊತೆ ನೇರ ಸಂಪರ್ಕ ಹೊಂದಿದ್ದ 13ಮಂದಿಯ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಾಗಿದೆ.

ನಿನ್ನೆಯಷ್ಟೇ ಮಣಪ್ಪುರಂನಲ್ಲಿ ನಿಫಾ ಸೋಂಕು ತಗುಲಿದ್ದ 14ವರ್ಷ ಬಾಲಕ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ. ಈಗಾಗಲೇ ಆರೋಗ್ಯ ಇಲಾಖೆ ಒಟ್ಟು 350ಸಂಪರ್ಕಿತರ ಪಟ್ಟಿ ತಯಾರು ಮಾಡಿದೆ. ಅವರಲ್ಲಿ 101 ಜನರನ್ನು ಗಂಭೀರ ಎಂದು ಪರಿಗಣಿಸಲಾಗಿದೆ. ಈ ಪಟ್ಟಿಯಲ್ಲಿ 68 ಆರೋಗ್ಯ ಸಿಬ್ಬಂದಿಗಳೂ ಇದ್ದಾರೆ. ಬಾಲಕ ಸೋಂಕಿಗೆ ತುತ್ತಾದ ಬಳಿಕ ಖಾಸಗಿ ಬಸ್‌ನಲ್ಲಿ ಪ್ರಯಾಣಿಸಿದ್ದ ಎನ್ನಲಾಗಿದೆ.

ಇನ್ನು ಸೋಂಕು ದೃಢಪಟ್ಟಿರುವ ಒಟ್ಟು ಆರು ಮಂದಿ ಪಾಲಕ್ಕಾಡ್‌ ಮತ್ತು ತಿರುವನಂತಪುರಂ ಜಿಲ್ಲೆಯವರಾಗಿದ್ದಾರೆ. ಇಬ್ಬರು ಪಾಲಕ್ಕಾಡು ಸರ್ಕಾರಿ ಆಸ್ಪತ್ರೆಯಲ ಸಿಬ್ಬಂದಿಗಳಾಗಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿತ್ತು. ಇನ್ನು ಸರ್ಕಾರ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

ಎನ್‌ಐವಿ-ಪುಣೆ ಶನಿವಾರ ಬಾಲಕನಿಗೆ ನಿಪಾ ವೈರಸ್ ಇರುವುದು ದೃಢಪಡಿಸಿದ ನಂತರ, ಖಾಸಗಿ ಆಸ್ಪತ್ರೆಯಿಂದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆತನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಇಂದು ಬೆಳಗ್ಗೆ ಮೂತ್ರದ ಪ್ರಮಾಣ ಕಡಿಮೆಯಾಗಿದ್ದು, ಭಾರೀ ಹೃದಯಾಘಾತದಿಂದಾಗಿ ಆತ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.
ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ನಂತರವೇ ಅಂತ್ಯಕ್ರಿಯೆಯ ಕುರಿತು ಹೆಚ್ಚಿನ ನಿರ್ಧರಿಸಲಾಗುತ್ತದೆ ಎಂದು ಜಾರ್ಜ್ ಹೇಳಿದರು. ಇನ್ನು ಬಾಲಕನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರಸ್ತುತ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಐಸೋಲೇಶನ್‌ನಲ್ಲಿಡಲಾಗಿದೆ.

ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.

ಇದನ್ನೂ ಓದಿ: Kanwar Yatra: ಕನ್ವರ್‌ ಯಾತ್ರೆ ವೇಳೆ ಅಂಗಡಿಗಳಿಗೆ ನಾಮ ಫಲಕ ಕಡ್ಡಾಯ ಆದೇಶಕ್ಕೆ ಸುಪ್ರೀಂ ತಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

VISTARANEWS.COM


on

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್

ವಾಷಿಂಗ್ಟನ್: ಅಮೆರಿಕದಲ್ಲಿ H-1B ವೀಸಾ ಹೊಂದಿರುವ ವಿದೇಶಿ ಉದ್ಯೋಗಿಗಳಿಗೆ ಹೆಚ್ಚುವರಿ ಶುಲ್ಕ ವಿಧಿಸುವ ಟ್ರಂಪ್ ಆಡಳಿತದ ನಿರ್ಧಾರಕ್ಕೆ ಕೋರ್ಟ್‌ ಬ್ರೇಕ್‌ ಹಾಕಿದೆ. ಫೆಡರಲ್ ನ್ಯಾಯಾಧೀಶ ಲಿಯೋ ಸೊರೊಕಿನ್ ಮಹತ್ವದ ತೀರ್ಪು ನೀಡಿದ್ದು, H-1Bಯ ವೀಸಾ ಅರ್ಜಿಗಳ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ಅಸಿಂಧು ಎಂದು ಘೋಷಿಸಿದ್ದಾರೆ.

ಈ ತೀರ್ಪಿನಿಂದ ಅಮೆರಿಕದಲ್ಲಿ ಕೆಲಸ ಮಾಡುತ್ತಿರುವ ಸಾವಿರಾರು ಭಾರತೀಯ ಐಟಿ ಉದ್ಯೋಗಿಗಳಿಗೆ ಉದ್ಯೋಗಿಗಳು ನಿರಾಳರಾಗುವಂತೆ ಮಾಡಿದೆ. ವಿದೇಶಿ ಪರಿಣತ ಉದ್ಯೋಗಿಗಳನ್ನು ಅವಲಂಬಿಸಿರುವ ಅಮೆರಿಕದ ಕಂಪನಿಗಳು ಹಾಗೂ ವಿಶ್ವವಿದ್ಯಾಲಯಗಳಿಗೂ ಇದು ಅನುಕೂಲಕರ ಬೆಳವಣಿಗೆಯಾಗಿದೆ.

ಡೊನಾಲ್ಡ್ ಟ್ರಂಪ್ ಸರ್ಕಾರ, ಸ್ಥಳೀಯ ಅಮೆರಿಕನ್ನರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ವಲಸೆ ನೀತಿಗಳನ್ನು ಕಠಿಣಗೊಳಿಸಲಾಗಿತ್ತು. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ, ಟ್ರಂಪ್‌ ಹೊಸ H-1Bಯ ವೀಸಾ ಅರ್ಜಿಗಳಿಗೆ ಒಂದು ಲಕ್ಷ ಡಾಲರ್‌ ಶುಲ್ಕವನ್ನು ಪಾವತಿಸುವ ಘೋಷಣೆಗೆ ಸಹಿ ಹಾಕಿದ್ದರು.

ಆದರೆ ನ್ಯಾಯಾಲಯವು ಸರ್ಕಾರದ ಈ ಕ್ರಮವು ಕಾನೂನುಬದ್ಧ ಅಧಿಕಾರದ ವ್ಯಾಪ್ತಿಯನ್ನು ಮೀರಿ ಜಾರಿಗೊಳಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ಶುಲ್ಕ ವಿಧಿಸುವ ನಿಯಮವನ್ನು ರದ್ದುಗೊಳಿಸಿದೆ. ಇದರಿಂದ ವಿದೇಶಿ ಪರಿಣತ ಉದ್ಯೋಗಿಗಳನ್ನು ನೇಮಿಸಿಕೊಳ್ಳುವ ಸಂಸ್ಥೆಗಳಿಗೆ ಆರ್ಥಿಕ ಭಾರ ಕಡಿಮೆಯಾಗುವ ಸಾಧ್ಯತೆ ಇದೆ.

ಇದೇ ವೇಳೆ, ಟ್ರಂಪ್ ಆಡಳಿತದ ವಲಸೆ ನೀತಿಗೆ ಇದು ಪ್ರಮುಖ ಹಿನ್ನಡೆಯಾಗಿ ಪರಿಗಣಿಸಲಾಗುತ್ತಿದೆ. ಸರ್ಕಾರವು ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸುತ್ತಿರುವುದಾಗಿ ವರದಿಯಾಗಿದೆ.

ನ್ಯಾಯಾಲಯದ ತೀರ್ಪನ್ನು ಅಮೆರಿಕದಲ್ಲಿರುವ ಭಾರತೀಯ ಮೂಲದ ಉದ್ಯೋಗಿಗಳು ಹಾಗೂ ಉದ್ಯಮ ವಲಯ ಸ್ವಾಗತಿಸಿದ್ದು, H-1B ವೀಸಾ ವ್ಯವಸ್ಥೆಯ ಮೇಲಿನ ಅನಿಶ್ಚಿತತೆ ಕಡಿಮೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

Also Read: ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ದೆಹಲಿಗೆ ತೆರಳಲಿರುವ ಸಿಎಂ ಡಿ.ಕೆ. ಶಿವಕುಮಾರ್ : ಕ್ಯಾಬಿನೆಟ್‌ ವಿಸ್ತರಣೆಗೆ ಸಿಗುತ್ತಾ ಸಮ್ಮತಿ

VISTARANEWS.COM


on

ಸಿಎಂ ಡಿ.ಕೆ. ಶಿವಕುಮಾರ್

ಸಿಎಂ ಡಿ.ಕೆ. ಶಿವಕುಮಾರ್ ಹೈಕಮಾಂಡ್ ಭೇಟಿಗೆ ಸಜ್ಜು

ಸಿಎಂ ಡಿ.ಕೆ. ಶಿವಕುಮಾರ್ ಅವರು ನಾಳೆಯಿಂದ ಎರಡು ದಿನಗಳ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿರುವ ಸಿಎಂ, ಜೂನ್ 11ರಂದು ನಡೆಯಲಿರುವ ರಾಷ್ಟ್ರೀಯ ನೀತಿ ಆಯೋಗದ ಆಡಳಿತ ಮಂಡಳಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ.

ದೆಹಲಿ ಪ್ರವಾಸದ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿರುವ ಮುಖ್ಯಮಂತ್ರಿ, ರಾಜ್ಯದ ರಾಜಕೀಯ ಬೆಳವಣಿಗೆಗಳು ಹಾಗೂ ಸಚಿವ ಸಂಪುಟ ವಿಸ್ತರಣೆ ಕುರಿತು ಮಹತ್ವದ ಚರ್ಚೆ ನಡೆಸುವ ಸಾಧ್ಯತೆ ಇದೆ. ಸಚಿವ ಸ್ಥಾನಾಕಾಂಕ್ಷಿಗಳ ಒತ್ತಡ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ವಿಚಾರಕ್ಕೆ ವೇಗ ಸಿಗುವ ನಿರೀಕ್ಷೆಯಿದೆ.

Also Read: ರಾಮಲಿಂಗಾರೆಡ್ಡಿ ಜೊತೆ ಮಾತನಾಡುತ್ತೇನೆ – ಡಿಕೆಶಿ

🟦 Facebook : https://www.facebook.com/vistaranews
❤️ Instagram : https://www.instagram.com/vistaranew

Continue Reading

Latest

ಇಂಡಿ ಒಕ್ಕೂಟದ ಸಭೆಗೆ ಆರಂಭದಲ್ಲೇ ಹಿನ್ನಡೆ: ಡಿಎಂಕೆ, ಆಪ್ ಗೈರು; ದೆಹಲಿಯಲ್ಲಿ ಮಹತ್ವದ ಚರ್ಚೆ

VISTARANEWS.COM


on

ಇಂಡಿ ಒಕ್ಕೂಟ

ದೆಹಲಿ:

ಇಂಡಿ ಒಕ್ಕೂಟ

ಸಾಲು ಸಾಲು ಚುನಾವಣಾ ಸೋಲುಗಳ ಬಳಿಕ ಪ್ರತಿಪಕ್ಷಗಳ ಇಂಡಿ (INDIA) ಮೈತ್ರಿಕೂಟದ ಮಹತ್ವದ ಸಭೆ ದೆಹಲಿಯಲ್ಲಿ ಆರಂಭವಾಗಲಿದೆ. ದೆಹಲಿಯಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ ಇಂಡಿ ಒಕ್ಕೂಟದ ಒಟ್ಟು 23 ಪಕ್ಷಗಳು ಭಾಗವಹಿಸುವ ಸಾಧ್ಯತೆ ಇದೆ.

ಈ ಸಭೆಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಗಮಿಸಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ ಹೋರಾಟದ ರೂಪುರೇಷೆ ಸಿದ್ಧಪಡಿಸುವುದು ಹಾಗೂ ಮುಂದಿನ ರಾಜಕೀಯ ತಂತ್ರಗಳನ್ನು ಚರ್ಚಿಸುವುದು ಸಭೆಯ ಪ್ರಮುಖ ಅಜೆಂಡಾ ಆಗಿದೆ.

ಸಭೆ ಆರಂಭಕ್ಕೂ ಮುನ್ನವೇ ಹಿನ್ನಡೆ ಎದುರಾಗಿದೆ. ಡಿಎಂಕೆ ಸಭೆಯನ್ನು ಬಹಿಷ್ಕರಿಸಿದ್ದು, ಆಮ್ ಆದ್ಮಿ ಪಕ್ಷ ಕೂಡ ದೂರ ಉಳಿದಿದೆ. ಇದರಿಂದ ಮೈತ್ರಿಕೂಟದ ಒಳಗಿನ ಭಿನ್ನಾಭಿಪ್ರಾಯಗಳು ಮತ್ತೆ ಚರ್ಚೆಗೆ ಗ್ರಾಸವಾಗಿವೆ.

ವಿಜಯ್ ನೇತೃತ್ವದ ಟಿವಿಕೆ ಪಕ್ಷ ಸಭೆಗೆ ತನ್ನ ಪ್ರತಿನಿಧಿಯನ್ನು ಕಳುಹಿಸಿದ್ದು ಗಮನ ಸೆಳೆದಿದೆ. ಪ್ರತಿಪಕ್ಷಗಳ ನಡುವೆ ಮತ್ತೊಮ್ಮೆ ಒಗ್ಗಟ್ಟು ಮೂಡಿಸಲು ಈ ಸಭೆ ಮಹತ್ವ ಪಡೆದುಕೊಂಡಿದೆ.

ಸಭೆಗೆ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ಪ್ರಮುಖ ನಾಯಕರು ಆಗಮಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಒಗ್ಗಟ್ಟಾಗಿ ಹೋರಾಟ ಮಾಡಲು ರಣತಂತ್ರ ರೂಪಿಸುವ ನಿಟ್ಟಿನಲ್ಲಿ ನಾಯಕರು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಇಂಡಿ ಒಕ್ಕೂಟದ ಭವಿಷ್ಯದ ದಿಕ್ಕು ಹಾಗೂ ಮುಂದಿನ ರಾಜಕೀಯ ನಡೆಗಳ ಬಗ್ಗೆ ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಹೊರಬೀಳುವ ನಿರೀಕ್ಷೆ ಇದೆ.

Also Read: ಸಿಇಟಿ ಫಲಿತಾಂಶ ಪ್ರಕಟ

❇️ Follow and Like us on Social Media Platforms

🟦 Facebook : https://www.facebook.com/vistaranews
❤️ Instagram : https://www.instagram.com/vistaranews

Continue Reading

Latest

ಬಿಜೆಪಿಗೆ ರಾಜೀನಾಮೆ ಬಳಿಕ ಹೊಸ ರಾಜಕೀಯ ಚಳವಳಿ ಘೋಷಿಸಿದ ಅಣ್ಣಾಮಲೈ; ತಮಿಳುನಾಡಿನಲ್ಲಿ ಏಕಾಂಗಿ ಹೋರಾಟದ ನಿರ್ಧಾರ

VISTARANEWS.COM


on

ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಮ್ಮ ಮುಂದಿನ ರಾಜಕೀಯ ಹೆಜ್ಜೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಯನ್ನು ಆರಂಭಿಸುವುದಾಗಿ ಘೋಷಿಸಿರುವ ಅವರು, ಮುಂದಿನ ದಿನಗಳಲ್ಲಿ ಜನರೊಂದಿಗೆ ನೇರವಾಗಿ ಹೆಜ್ಜೆ ಹಾಕಲು ತೀರ್ಮಾನಿಸಿರುವುದಾಗಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಣ್ಣಾಮಲೈ, “ಬಿಜೆಪಿಗೆ ನಾನು ಯಾವುದೇ ಸಮಸ್ಯೆಯಾಗಲು ಬಯಸುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರ ಬಗ್ಗೆ ನನಗೆ ಅಪಾರ ಗೌರವವಿದೆ” ಎಂದು ಹೇಳಿದರು.

“ನನ್ನ ರಾಜೀನಾಮೆ ನಿರ್ಧಾರವನ್ನು 2025ರ ಡಿಸೆಂಬರ್‌ನಲ್ಲಿಯೇ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಕಳೆದ 18 ತಿಂಗಳಿಂದ ಪಕ್ಷದೊಳಗೆ ಕೆಲವು ಭಿನ್ನಾಭಿಪ್ರಾಯಗಳು ಇದ್ದವು. ಆದರೆ ಯಾವುದೇ ಗದ್ದಲವಿಲ್ಲದೆ ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ್ದೇನೆ” ಎಂದು ಅವರು ಸ್ಪಷ್ಟಪಡಿಸಿದರು.

ತಮಿಳುನಾಡಿನ ಹಿತಾಸಕ್ತಿಗಳ ಬಗ್ಗೆ ಮಾತನಾಡಿದ ಅಣ್ಣಾಮಲೈ, “ತಮಿಳುನಾಡಿನ ಅಸ್ಮಿತೆಯನ್ನು ನಾನು ಎಂದಿಗೂ ಬಿಟ್ಟುಕೊಟ್ಟಿಲ್ಲ. ಈ ಮಣ್ಣು, ನೀರು ಮತ್ತು ರಾಜ್ಯದ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸಿದ್ದೇನೆ. ನಾನು ಹೆಮ್ಮೆಯ ಭಾರತೀಯ ಹಾಗೂ ಸಾಂಪ್ರದಾಯಿಕ ತಮಿಳಿಗ” ಎಂದರು.

“ತಮಿಳುನಾಡಿನ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ. ಮೇಕೆದಾಟು ಅಣೆಕಟ್ಟು ಯೋಜನೆ ಸೇರಿದಂತೆ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳಲ್ಲಿ ತಮಿಳುನಾಡಿನ ಪರವಾಗಿ ನಿಲುವು ತಾಳಿದ್ದೇನೆ. ಟಂಗ್‌ಸ್ಟನ್, ಮೀಥೇನ್ ಹಾಗೂ ಹೈಡ್ರೋಕಾರ್ಬನ್ ಯೋಜನೆಗಳ ವಿರುದ್ಧವೂ ಹೋರಾಟ ನಡೆಸಿದ್ದೇನೆ” ಎಂದು ಹೇಳಿದರು.

ಮುಂದಿನ ರಾಜಕೀಯ ಯೋಜನೆ ಕುರಿತು ಮಾತನಾಡಿದ ಅವರು, “ತಮಿಳುನಾಡಿನಲ್ಲಿ ಹೊಸ ರಾಜಕೀಯ ಚಳವಳಿಗೆ ಅಧಿಕೃತ ಚಾಲನೆ ನೀಡುತ್ತಿದ್ದೇನೆ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. ಜನರ ಆಶಯಗಳನ್ನು ಪ್ರತಿಬಿಂಬಿಸುವ ಪರ್ಯಾಯ ರಾಜಕೀಯ ಶಕ್ತಿಯನ್ನು ಕಟ್ಟುವ ಗುರಿ ಹೊಂದಿದ್ದೇವೆ” ಎಂದು ಘೋಷಿಸಿದರು.

Continue Reading
Advertisement
Latest26 minutes ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest4 hours ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ1 day ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest1 day ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest1 day ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest1 day ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest2 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest2 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

ಪಿಂಕ್ ಲೈನ್ ಮೆಟ್ರೋ
Latest2 days ago

ಆಗಸ್ಟ್ 15ಕ್ಕೆ ಪಿಂಕ್ ಲೈನ್ ಮೆಟ್ರೋ ಸಂಚಾರ ಆರಂಭ? ದಕ್ಷಿಣ ಬೆಂಗಳೂರಿಗೆ ಸಂಚಾರ ದಟ್ಟಣೆಯಿಂದ ಮುಕ್ತಿ ನಿರೀಕ್ಷೆ

ಮುಂದಿನ ಐದು ದಿನ ಭಾರೀ ಮಳೆ
Latest2 days ago

ಮುಂದಿನ ಐದು ದಿನ ಭಾರೀ ಮಳೆಯ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌