ತಿರುವನಂತಪುರಂ: ಕೇರಳದಲ್ಲಿ ನಿಫಾ ಸೋಂಕು(Nipah Virus) ತಗುಲಿದ್ದ 14ವರ್ಷದ ಬಾಲಕ ಹೃದಯಾಘಾತ(Cardiac Arrest)ದಿಂದ ಸಾವನ್ನಪ್ಪಿರುವ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರಲ್ಲಿ ನಿಫಾ ವೈರಸ್ ಕಂಡುಬಂದಿದೆ. ಇನ್ನು ರಾಜ್ಯದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ನಿನ್ನೆ ಮೃತಪಟ್ಟ ಬಾಲಕ ಜೊತೆ ನೇರ ಸಂಪರ್ಕ ಹೊಂದಿದ್ದ 13ಮಂದಿಯ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಾಗಿದೆ.
ನಿನ್ನೆಯಷ್ಟೇ ಮಣಪ್ಪುರಂನಲ್ಲಿ ನಿಫಾ ಸೋಂಕು ತಗುಲಿದ್ದ 14ವರ್ಷ ಬಾಲಕ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ. ಈಗಾಗಲೇ ಆರೋಗ್ಯ ಇಲಾಖೆ ಒಟ್ಟು 350ಸಂಪರ್ಕಿತರ ಪಟ್ಟಿ ತಯಾರು ಮಾಡಿದೆ. ಅವರಲ್ಲಿ 101 ಜನರನ್ನು ಗಂಭೀರ ಎಂದು ಪರಿಗಣಿಸಲಾಗಿದೆ. ಈ ಪಟ್ಟಿಯಲ್ಲಿ 68 ಆರೋಗ್ಯ ಸಿಬ್ಬಂದಿಗಳೂ ಇದ್ದಾರೆ. ಬಾಲಕ ಸೋಂಕಿಗೆ ತುತ್ತಾದ ಬಳಿಕ ಖಾಸಗಿ ಬಸ್‌ನಲ್ಲಿ ಪ್ರಯಾಣಿಸಿದ್ದ ಎನ್ನಲಾಗಿದೆ.
ಇನ್ನು ಸೋಂಕು ದೃಢಪಟ್ಟಿರುವ ಒಟ್ಟು ಆರು ಮಂದಿ ಪಾಲಕ್ಕಾಡ್ ಮತ್ತು ತಿರುವನಂತಪುರಂ ಜಿಲ್ಲೆಯವರಾಗಿದ್ದಾರೆ. ಇಬ್ಬರು ಪಾಲಕ್ಕಾಡು ಸರ್ಕಾರಿ ಆಸ್ಪತ್ರೆಯಲ ಸಿಬ್ಬಂದಿಗಳಾಗಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿತ್ತು. ಇನ್ನು ಸರ್ಕಾರ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.
14-year-old Ashmil Danish, who succumbed to the Nipah virus in Kerala😰 #NipahVirus pic.twitter.com/4Cz9jG2UJu
— Asheem (@peekeymon) July 21, 2024
ಎನ್‌ಐವಿ-ಪುಣೆ ಶನಿವಾರ ಬಾಲಕನಿಗೆ ನಿಪಾ ವೈರಸ್ ಇರುವುದು ದೃಢಪಡಿಸಿದ ನಂತರ, ಖಾಸಗಿ ಆಸ್ಪತ್ರೆಯಿಂದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆತನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಇಂದು ಬೆಳಗ್ಗೆ ಮೂತ್ರದ ಪ್ರಮಾಣ ಕಡಿಮೆಯಾಗಿದ್ದು, ಭಾರೀ ಹೃದಯಾಘಾತದಿಂದಾಗಿ ಆತ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.
ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ನಂತರವೇ ಅಂತ್ಯಕ್ರಿಯೆಯ ಕುರಿತು ಹೆಚ್ಚಿನ ನಿರ್ಧರಿಸಲಾಗುತ್ತದೆ ಎಂದು ಜಾರ್ಜ್ ಹೇಳಿದರು. ಇನ್ನು ಬಾಲಕನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರಸ್ತುತ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಐಸೋಲೇಶನ್‌ನಲ್ಲಿಡಲಾಗಿದೆ.
ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.
ಇದನ್ನೂ ಓದಿ: Kanwar Yatra: ಕನ್ವರ್ ಯಾತ್ರೆ ವೇಳೆ ಅಂಗಡಿಗಳಿಗೆ ನಾಮ ಫಲಕ ಕಡ್ಡಾಯ ಆದೇಶಕ್ಕೆ ಸುಪ್ರೀಂ ತಡೆ