Nipah Virus: ಕೇರಳದಲ್ಲಿ ನಿಫಾ ಕೇಸ್ ಪತ್ತೆ; ಡೆಂಗ್ಯೂ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೊಂದು ಭೀತಿ - Vistara News

ದೇಶ

Nipah Virus: ಕೇರಳದಲ್ಲಿ ನಿಫಾ ಕೇಸ್ ಪತ್ತೆ; ಡೆಂಗ್ಯೂ ಬೆನ್ನಲ್ಲೇ ಕರ್ನಾಟಕಕ್ಕೆ ಮತ್ತೊಂದು ಭೀತಿ

Nipah Virus: ಇನ್ನು ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಚಾರ್ಜ್‌ ಪ್ರತಿಕ್ರಿಯಿಸಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚೆ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Nipah Virus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ನೆರೆಯ ರಾಜ್ಯ ಕೇರಳದಲ್ಲಿ ಮತ್ತೆ ನಿಫಾ ವೈರಸ್‌(Nipah Virus) ಆತಂಕ ಹೆಚ್ಚುತ್ತಿದ್ದು, 14 ವರ್ಷದ ಬಾಲಕನಲ್ಲಿ ಈ ಮಾರಣಾಂತಿಕ ವೈರಸ್‌ ಪತ್ತೆ ಆಗಿದೆ. ಈಗಾಗಲೇ ಡೆಂಗ್ಯೂ ವೈರಸ್‌ ಕೇಸ್‌ಗಳು ದಿನೇ ದಿನೇ ಹೆಚ್ಚುತ್ತಿರುವ ಭೀತಿಯಲ್ಲಿರುವ ಕರ್ನಾಟಕಕ್ಕೆ ಇದೀಗ ನಿಫಾ ವೈರಸ್‌ ಆತಂಕ ಕಾಡಿದೆ. ಕೇರಳ(Kerala)ದ ಮಲಪ್ಪುರಂ ಜಿಲ್ಲೆಯಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಇದರ ಪರಿಣಾಮ ಇದೀಗ ಹೈ ಅಲರ್ಟ್ ಘೋಷಿಸಲಾಗಿದೆ.

ಇನ್ನು ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಚಾರ್ಜ್‌ ಪ್ರತಿಕ್ರಿಯಿಸಿದ್ದು, 14 ವರ್ಷದ ಬಾಲಕನಲ್ಲಿ ನಿಫಾ ವೈರಸ್ ಪತ್ತೆಯಾಗಿದೆ. ಬಾಲಕನ ಮೊದಲ ಸಂಪರ್ಕಿತರನ್ನು ಪತ್ತೆ ಹಚ್ಚೆ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಸಂಭವನೀಯ ವೈರಸ್ ಹರಡುವಿಕೆಯ ಬಗ್ಗೆ ರಾಜ್ಯ ಸರ್ಕಾರ ಜಾಗರೂಕತೆ ವಹಿಸಿದೆ. ನಿಫಾ ವೈರಸ್ ಹರಡುವುದನ್ನು ತಡೆಯಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಸಾರ್ವಜನಿಕ ಸುರಕ್ಷತೆಯನ್ನು ಖಾತರಿಪಡಿಸುವುದು, ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸುವುದು ಮತ್ತು ನಿಯಂತ್ರಣದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಮಲಪ್ಪುರಂನಲ್ಲಿರುವ ಸರ್ಕಾರಿ ತಂಗುದಾಣದಲ್ಲಿ 24 ಗಂಟೆಗಳ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ.

ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ.

ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.
ಬಾಲಕನ ಸ್ಥಿತಿ ಗಂಭೀರವಾಗಿದೆ. ಆತನನ್ನು ಕೋಝಿಕ್ಕೋಡ್‌ ವೈದ್ಯಕೀಯ ಕಾಲೇಜಿಗೆ ವರ್ಗಾಯಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 14 ವರ್ಷದ ಬಾಲಕನ ಮಾದರಿಗಳನ್ನು ಪುಣೆ ಎನ್‌ಐವಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ಇದೀಗ ವರದಿ ಬಂದಿದ್ದು, ನಿಫಾ ವೈರಸ್ ದೃಢಪಟ್ಟಿದೆ. ನಿಫಾ ವೈರಸ್ ಖಚಿತವಾಗುತ್ತಿದ್ದಂತ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ಬಾಲಕನನ್ನು ಇದೀಗ ಕೋಝಿಕೋಡ್ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಇದೀಗ ಬಾಲಕನ ಸಂಪರ್ಕಿತರನ್ನು ಪತ್ತೆ ಹಚ್ಚಲಾಗುತ್ತಿದೆ. ಪೋಷಕರು ಸೇರಿದಂತೆ ಮೊದಲ ಸಂಪರ್ಕಿತರನ್ನು ಈಗಾಗಲೇ ಐಸೋಲೇಶನ್ ಮಾಡಲಾಗಿದೆ. ಇವರ ಮಾದರಿಗಳನ್ನು ಸಂಗ್ರಹಿಸಿ ಪುಣೆಗೆ ಕಳುಹಿಸಲಾಗಿದೆ.

ಕೇರಳದಲ್ಲಿ ಸುಮಾರು ಹತ್ತು ತಿಂಗಳ ಹಿಂದೆ ನಿಫಾ ಸೋಂಕಿನಿಂದಾಗಿ ಮೂವರು ಮೃತಪಟ್ಟಿದ್ದರು. ಹಾಗಾಗಿ, ರಾಜ್ಯ ಸರ್ಕಾರವು ಕಂಟೇನ್‌ಮೆಂಟ್‌ ವಲಯಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸುವ ಮೂಲಕ ಸೋಂಕು ಹರಡುವುದನ್ನು ತಡೆಯಲು ಮುಂದಾಗಿತ್ತು. ಕಲ್ಲಿಕೋಟೆಯಲ್ಲಿಯೇ ಆರು ಜನರಿಗೆ ಸೋಂಕು ತಗುಲಿದ ಕಾರಣ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಸುಮಾರು 9 ಗ್ರಾಮಗಳನ್ನು ಕಂಟೇನ್‌ಮೆಂಟ್‌ ವಲಯಗಳು ಎಂದು ಗುರುತಿಸಲಾಗಿತ್ತು.

ಇದನ್ನೂ ಓದಿ: Foreign Secretary: ಕೇರಳಕ್ಕಾಗಿ ‘ವಿದೇಶಾಂಗ ಕಾರ್ಯದರ್ಶಿ’ಯನ್ನು ನೇಮಿಸಿದ ಪಿಣರಾಯಿ; ಭುಗಿಲೆದ್ದ ವಿವಾದ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kanwar Yatra: ಮುಸ್ಲಿಮರ ವಿರುದ್ಧ ಬಿಜೆಪಿಯ ದ್ವೇಷದ ರಾಜಕೀಯ ಎಂದ ಓವೈಸಿ; ಜಿನ್ನಾರಂತೆ ವರ್ತನೆ ಎಂದು ಬಿಜೆಪಿ ಟಾಂಗ್‌

Kanwar Yatra: ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಓವೈಸಿ, ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಇದೇ ಸಾಕ್ಷಿ. ಇದರ ಬಹುದೊಡ್ಡ ಕ್ರೆಡಿಟ್‌ ಜಾತ್ಯಾತೀತ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿ ಮತ್ತು ಹಿಂದೂತ್ವದ ನಾಯಕರಿಗೆ ಸಲ್ಲುತ್ತದೆ ಎಂದು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Kanwar Yatra
Koo

ಹೊಸದಿಲ್ಲಿ: ಹಿಂದೂಗಳ ಪವಿತ್ರ ಯಾತ್ರೆಯಾಗಿರುವ ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿರುವ ಬಗ್ಗೆ ಎಐಎಂಐಎಂ(AIMIM) ಅಧ್ಯಕ್ಷ ಅಸಾದುದ್ದೀನ್‌ ಓವೈಸಿ(Asaduddin Owaisi) ಕಿಡಿ ಕಾರಿದ್ದಾರೆ. ಇದು ಮುಸ್ಲಿಂ ಸಮುದಾಯದ ವಿರುದ್ಧ ಬಿಜೆಪಿ ಸರ್ಕಾರದ ದ್ವೇಷವನ್ನು ತೋರಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಓವೈಸಿ, ಭಾರತೀಯ ಮುಸ್ಲಿಮರ ವಿರುದ್ಧ ದ್ವೇಷ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಇದೇ ಸಾಕ್ಷಿ. ಇದರ ಬಹುದೊಡ್ಡ ಕ್ರೆಡಿಟ್‌ ಜಾತ್ಯಾತೀತ ಪಕ್ಷ ಎಂದು ಕರೆಸಿಕೊಳ್ಳುವ ಬಿಜೆಪಿ ಮತ್ತು ಹಿಂದೂತ್ವದ ನಾಯಕರಿಗೆ ಸಲ್ಲುತ್ತದೆ ಎಂದು ಪೋಸ್ಟ್‌ ಮಾಡಿದ್ದಾರೆ.

ಓವೈಸಿಯನ್ನು ಜಿನ್ನಾಗೆ ಹೋಲಿಕೆ

ಓವೈಸಿ ಟ್ವೀಟ್‌ ಬೆನ್ನಲ್ಲೇ ಬಿಜೆಪಿ ಮುಖಂಡ ಸುಖಾಂತಾ ಮಜುಮ್ದಾರ್‌ ಓವೈಸಿ ವಿರುದ್ಧ ಕಿಡಿ ಕಾರಿದ್ದಾರೆ. ಪ್ರತಿಪಕ್ಷಗಳು ಜನರನ್ನು ದಾರಿ ತಪ್ಪಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಇಂತಹದ್ದೇ ಪ್ರಕಟಣೆಯನ್ನು ಸಮಾಜವಾದಿ ಪಕ್ಷ ಅಧಿಕಾರದಲ್ಲಿರುವಾಗಲೂ ಹೊರಡಿಸಲಾಗಿತ್ತು. ಓವೈಸಿ ಪಾಕಿಸ್ತಾನ ಸ್ಥಾಪಕ ಮೊಹಮ್ಮದ್‌ ಅಲಿ ಜಿನ್ಹಾರಂತೆ ವರ್ತಿಸುತ್ತಿದ್ದಾರೆ ಎಂದಿದ್ದಾರೆ.

ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ:Karnataka HC: ನ್ಯಾಯಮೂರ್ತಿಗಳು ಕೂಡ ಮನುಷ್ಯರೇ; ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ಹಿಂಪಡೆದ ಹೈಕೋರ್ಟ್

Continue Reading

ದೇಶ

Kanwar Yatra: “ಹೆಸರು ಬಹಿರಂಗ ಪಡಿಸುವಲ್ಲಿ ರಾಮನಿಗಿಲ್ಲದ ಸಮಸ್ಯೆ ರೆಹಮಾನ್‌ಗೆ ಏಕೆ?”-ಬಾಬಾ ರಾಮ್‌ ದೇವ್‌ ಪ್ರಶ್ನೆ

Kanwar Yatra: ರಾಮ್‌ದೇವ್‌ಗೆ ತನ್ನ ಗುರುತು ಬಹಿರಂಗ ಪಡಿಸುವಲ್ಲಿ ಸಮಸ್ಯೆ ಇಲ್ಲವೆಂದ ಮೇಲೆ ರೆಹ್ಮಾನ್‌ಗೆ ಏಕೆ ಸಮಸ್ಯೆ ಆಗುತ್ತಿದೆ? ಪ್ರತಿಯೊಬ್ಬರಿಗೆ ತಮ್ಮ ಹೆಸರಿನ ಬಗ್ಗೆ ಹೆಮ್ಮೆ ಇರಬೇಕು. ಹೆಸರು ಮುಚ್ಚಿಡುವ ಅವಶ್ಯಕತೆ ಇಲ್ಲ. ಮಾಡುವ ಕೆಲಸದಲ್ಲಿ ಶುದ್ದತೆ ಇರಬೇಕು. ನಮ್ಮ ಕೆಲಸದಲ್ಲಿ ನೀಯತ್ತು ಇದ್ದರೆ ನಾವು ಹಿಂದೂವೋ ಅಥವಾ ಮುಸ್ಲಿಮರೋ ಎಂಬ ವಿಚಾರ ಮುಖ್ಯವಾಗುವುದಿಲ್ಲ ಎಂದಿದ್ದಾರೆ.

VISTARANEWS.COM


on

Kanwar Yatra
Koo

ಲಖನೌ: ಕನ್ವರ್ ಯಾತ್ರೆ (Kanwar Yatra) ಸಾಗುವ ಮಾರ್ಗದಲ್ಲಿನ ಹೋಟೆಲ್‌, ರೆಸ್ಟೋರೆಂಟ್‌ ಮತ್ತು ತಿನಿಸು ಮಾರಾಟಗಾರರು ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಶುಕ್ರವಾರ ಆದೇಶ ಹೊರಡಿಸಿರುವುದು ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದೆ. ಯೋಗಿ ನಡೆಗೆ ಹಲವು ವಿರೋಧಗಳು ಕೇಳಿ ಬಂದಿರುವ ಬೆನ್ನಲ್ಲೇ ಯೋಗ ಗುರು ಬಾಬಾ ರಾಮದೇವ್‌(Baba Ramdev) ಕೂಡ ಬೆಂಬಲ ಸೂಚಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಾಬಾ ರಾಮ್‌ದೇವ್‌, ತಮ್ಮ ಹೆಸರಿನ ಬಗ್ಗೆ ಎಲ್ಲರಿಗೂ ಗೌರವ ಇರಬೇಕು. ರಾಮ್‌ದೇವ್‌ಗೆ ತನ್ನ ಗುರುತು ಬಹಿರಂಗ ಪಡಿಸುವಲ್ಲಿ ಸಮಸ್ಯೆ ಇಲ್ಲವೆಂದ ಮೇಲೆ ರೆಹ್ಮಾನ್‌ಗೆ ಏಕೆ ಸಮಸ್ಯೆ ಆಗುತ್ತಿದೆ? ಪ್ರತಿಯೊಬ್ಬರಿಗೆ ತಮ್ಮ ಹೆಸರಿನ ಬಗ್ಗೆ ಹೆಮ್ಮೆ ಇರಬೇಕು. ಹೆಸರು ಮುಚ್ಚಿಡುವ ಅವಶ್ಯಕತೆ ಇಲ್ಲ. ಮಾಡುವ ಕೆಲಸದಲ್ಲಿ ಶುದ್ದತೆ ಇರಬೇಕು. ನಮ್ಮ ಕೆಲಸದಲ್ಲಿ ನೀಯತ್ತು ಇದ್ದರೆ ನಾವು ಹಿಂದೂವೋ ಅಥವಾ ಮುಸ್ಲಿಮರೋ ಎಂಬ ವಿಚಾರ ಮುಖ್ಯವಾಗುವುದಿಲ್ಲ ಎಂದಿದ್ದಾರೆ.

ಕನ್ವರ್ ಯಾತ್ರೆ ಶ್ರಾವಣ ಮಾಸದಲ್ಲಿ ನಡೆಯುತ್ತದೆ. ಈ ಯಾತ್ರೆಯ ಮೂಲಕ ಶಿವಭಕ್ತರು ಹರಿದ್ವಾರದಿಂದ ಪುಣ್ಯ ತೀರ್ಥ ತಂದು ಉತ್ತರ ಪ್ರದೇಶದ ಮುಜಾಫರ್‌ನಗರದ ಮಾರ್ಗವಾಗಿ ತೆರಳುತ್ತಾರೆ. ಈ ವರ್ಷದ ಕನ್ವರ್ ಯಾತ್ರೆಯು ಜುಲೈ 22ರಂದು ಪ್ರಾರಂಭವಾಗಿ ಆಗಸ್ಟ್ 2ರವರೆಗೆ ನಡೆಯಲಿದೆ.ಕನ್ವರ್ ಯಾತ್ರೆ ಸಾಗುವ ಮಾರ್ಗದಲ್ಲಿರುವ ಹೋಟೆಲ್, ಢಾಬಾಗಳು ಮತ್ತು ಇತರ ವ್ಯಾಪಾರಿಗಳು ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.

ಕನ್ವರ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತರ ಗೊಂದಲವನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಜಾಫರ್‌ನಗರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಸಿಂಗ್ ಗುರುವಾರ ತಿಳಿಸಿದ್ದರು. ಅದಾಗ್ಯೂ ಪ್ರತಿಪಕ್ಷಗಳು ಈ ನಡೆಯನ್ನು ಖಂಡಿಸಿದ್ದವು. ಇದೀಗ ಸ್ವತಃ ಮುಖ್ಯಮಂತ್ರಿಯೇ ಈ ಆದೇಶ ಹೊರಡಿಸಿರುವುದು ಕುತೂಹಲ ಮೂಡಿಸಿದೆ.

ʼʼಧಾರ್ಮಿಕ ಯಾತ್ರಾರ್ಥಿಗಳ ಪಾವಿತ್ರ್ಯವನ್ನು ಕಾಪಾಡುವ ಉದ್ದೇಶದ ಹಿನ್ನೆಲೆಯಲ್ಲಿ ಮುಜಾಫರ್‌ನಗರ ಪೊಲೀಸರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನುವುದನ್ನು ಸಿಎಂ ಯೋಗಿ ಆದಿತ್ಯನಾಥ್‌ ಗಮನಿಸಿದರು. ಹೀಗಾಗಿ ಅವರು ರೆಸ್ಟೋರೆಂಟ್, ಹೋಟೆಲ್‌, ರಸ್ತೆಬದಿಯ ಢಾಬಾ ಅಥವಾ ಆಹಾರದ ಗಾಡಿ ಸೇರಿದಂತೆ ಪ್ರತಿಯೊಂದು ಕಡೆ ಮಾಲೀಕರ ಹೆಸರು ಮತ್ತು ವಿವರಗಳನ್ನು ಪ್ರದರ್ಶಿಸುವಂತೆ ಸೂಚಿಸಿದ್ದಾರೆʼʼ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಮಾತನಾಡಿ, ಮುಸ್ಲಿಂ ಮಾರಾಟಗಾರರು ಹಿಂದುಗಳಂತೆ ನಟಿಸಿ ಯಾತ್ರಾರ್ಥಿಗಳಿಗೆ ಮಾಂಸಾಹಾರವನ್ನು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. “ಅವರು ವೈಷ್ಣೋ ಡಾಬಾ ಭಂಡಾರ್, ಶಕುಂಭರಿ ದೇವಿ ಹೋಟೆಲ್‌ ಮತ್ತು ಶುದ್ಧ ಸಸ್ಯಾಹಾರಿ ಎಂದು ಬೋರ್ಡ್‌ ಸ್ಥಾಪಿಸಿ ಮಾಂಸಾಹಾರ ಮಾರಾಟ ಮಾಡುತ್ತಾರೆ” ಎಂದು ಅವರು ತಿಳಿಸಿದ್ದರು.

ಮುಜಾಫರ್‌ನಗರ ಪೊಲೀಸರ ಆದೇಶಕ್ಕೆ ಕಿಡಿ ಕಾರಿದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, “ಕನ್ವರ್ ಯಾತ್ರೆಯ ಉದ್ದಕ್ಕೂ ಇರುವ ಹೊಟೇಲ್‌ಗಳಲ್ಲಿ ಮಾಲೀಕರು ಮತ್ತು ಸಿಬ್ಬಂದಿಯ ಹೆಸರನ್ನು ಪ್ರದರ್ಶಿಸಬೇಕೆಂಬ ಉತ್ತರ ಪ್ರದೇಶ ಪೊಲೀಸರು ನೀಡಿರುವ ಆದೇಶವು ‘ಸಾಮಾಜಿಕ ಅಪರಾಧ’. ಜನರ ನಡುವಿನ ಸಾಮರಸ್ಯವನ್ನು ಕೆಡಿಸಲು ಇಂತಹ ಆದೇಶಗಳನ್ನು ತಹೊರಡಿಲಾಗುತ್ತಿದೆʼʼ ಎಂದು ಅವರು ಕಿಡಿಕಾರಿದ್ದಾರೆ.

ಉಜ್ಜೈನಿಯಲ್ಲೂ ನಿಯಮ ಜಾರಿ

ಉತ್ತರಾಖಂಡ ಮತ್ತು ಯುಪಿ ಸರ್ಕಾರದ ಕ್ರಮದ ನಂತರ, ಉಜ್ಜಯಿನಿ ಮಹಾನಗರ ಪಾಲಿಕೆಯೂ ಅಂಗಡಿಯವರಿಗೆ ತಮ್ಮ ಹೆಸರನ್ನು ಪ್ರದರ್ಶಿಸಲು ಆದೇಶಿಸಿದೆ. ಉಜ್ಜಯಿನಿ ಮೇಯರ್ ಮುಖೇಶ್ ತತ್ವಾಲ್ ಅವರು ಶನಿವಾರ, ಉಲ್ಲಂಘಿಸುವವರು ಮೊದಲ ಅಪರಾಧಕ್ಕೆ ₹ 2,000 ಮತ್ತೆ ಮತ್ತೆ ಈ ಆದೇಶವನ್ನು ಉಲ್ಲಂಘಿಸಿದರೆ ₹ 5,000 ದಂಡವನ್ನು ಪಾವತಿಸಬೇಕಾಗುತ್ತದೆ ಎಂದಿದ್ದಾರೆ.

ಉಜ್ಜಯಿನಿ ಧಾರ್ಮಿಕ ಮತ್ತು ಪವಿತ್ರ ನಗರ. ಜನರು ಧಾರ್ಮಿಕ ಆಸ್ತ (ನಂಬಿಕೆ) ಯೊಂದಿಗೆ ಇಲ್ಲಿಗೆ ಬರುತ್ತಾರೆ. ಅವರು ಯಾರ ಸೇವೆಯನ್ನು ಪಡೆಯುತ್ತಿದ್ದಾರೆಂದು ಅಂಗಡಿಯ ಮಾಲೀಕರ ಬಗ್ಗೆ ತಿಳಿದುಕೊಳ್ಳುವ ಹಕ್ಕಿದೆ. ಗ್ರಾಹಕರು ಅತೃಪ್ತರಾಗಿದ್ದರೆ ಅಥವಾ ಮೋಸ ಹೋದರೆ, ಅಂಗಡಿಯ ಮಾಲೀಕರ ವಿವರಗಳನ್ನು ತಿಳಿದುಕೊಳ್ಳುವುದರಿಂದ ಪರಿಹಾರವನ್ನು ಪಡೆಯಲು ಅವರಿಗೆ ಅವಕಾಶ ನೀಡುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ:Bangla Agitation Explainer: ಬಾಂಗ್ಲಾದೇಶ ಏಕೆ ಹೊತ್ತಿ ಉರಿಯುತ್ತಿದೆ? ವಿದ್ಯಾರ್ಥಿಗಳು ಏಕೆ ಹಿಂಸಾಚಾರಕ್ಕಿಳಿದಿದ್ದಾರೆ?

Continue Reading

ದೇಶ

Central Budget 2024: ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಟೀಂನಲ್ಲಿ ಯಾರೆಲ್ಲಾ ಇದ್ದಾರೆ ಗೊತ್ತಾ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್

Central Budget 2024: ಜಂಟೀ ಅಧಿವೇಶನ ಉದ್ದೇಶಿಸಿ ಮಾತನಾಡುತ್ತಾ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ಈ ಬಾರಿ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಡಲಿದೆ ಎಂದು ಹೇಳಿದ್ದರು. ಹೀಗಾಗಿ ಈ ಬಾರಿ ಆರ್ಥಿಕ ಅಭಿವೃದ್ಧಿಗೆ ಪೂಕರವಾದ ಬಜೆಟ್‌ ಮಂಡನೆ ಆಗುವ ನಿರೀಕ್ಷೆ ಇದೆ.

VISTARANEWS.COM


on

Koo

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ(PM Narendra Modi) ನೇತೃತ್ವದ ಎನ್‌ಡಿಎ ಸರ್ಕಾರ(NDA Government) ಮೂರನೇ ಬಾರಿ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಜೆಟ್‌(Central Budget 2024) ಅನ್ನು ಮಂಗಳವಾರ ಮಂಡಿಸಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitharaman) ಸತತ ಏಳನೇ ಬಾರಿ ಬಜೆಟ್‌ ಮಂಡಿಸಲಿದ್ದಾರೆ. ಆ ಮೂಲಕ ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ. ಜಂಟೀ ಅಧಿವೇಶನ ಉದ್ದೇಶಿಸಿ ಮಾತನಾಡುತ್ತಾ ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಅವರು, ಈ ಬಾರಿ ಬಜೆಟ್‌ನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆಯನ್ನಿಡಲಿದೆ ಎಂದು ಹೇಳಿದ್ದರು. ಹೀಗಾಗಿ ಈ ಬಾರಿ ಆರ್ಥಿಕ ಅಭಿವೃದ್ಧಿಗೆ ಪೂಕರವಾದ ಬಜೆಟ್‌ ಮಂಡನೆ ಆಗುವ ನಿರೀಕ್ಷೆ ಇದೆ. ಇನ್ನು ಈ ಕೇಂದ್ರ ಬಜೆಟ್‌ ತಯಾರಿಯ ಹಿಂದೆ ಯಾರೆಲ್ಲ ಕಾರ್ಯ ನಿರ್ವಹಿಸಿದ್ದಾರೆ ಎನ್ನುವ ಬಗ್ಗೆ ವಿವರ ಇಲ್ಲಿದೆ.

ಟಿ.ವಿ.ಸೋಮನಾಥನ್‌ (T.V.Somnathan)

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ತಂಡದ ಹಿರಿಯ, ಸನುಭವಿ ಸದಸ್ಯ ಟಿ.ವಿ.ಸೋಮನಾಥನ್‌. ಇವರು 1987ನೇ ಸಾಲಿನ ಐಎಎಸ್‌ ಅಧಿಕಾರಿ. ತಮಿಳುನಾಡು ಮೂಲದ ಇವರು ಅರ್ಥಶಾಸ್ತ್ರದಲ್ಲಿ ಪಿ.ಎಚ್‌.ಡಿ ಪಡೆದಿದ್ದಾರೆ. ಪ್ರಸ್ತುತ ಅವರು ಭಾರತದ ಹಣಕಾಸು ಇಲಾಖೆಯ ಕಾರ್ಯದರ್ಶಿ (ವೆಚ್ಚ ಇಲಾಖೆ) ಆಗಿದ್ದಾರೆ. ಇದಕ್ಕೂ ಮೊದಲು ಅವರು ಪ್ರಧಾನ ಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿಯಾಗಿದ್ದರು. ಆರಂಭದಲ್ಲಿ ವಾಷಿಂಗ್ಟನ್ ಡಿ.ಸಿ.ಯ ವಿಶ್ವ ಬ್ಯಾಂಕಿನಲ್ಲಿ ನಿರ್ದೇಶಕರಾಗಿ ಡೆಪ್ಯುಟೇಶನ್ ಮೇಲೆ ಕಾರ್ಯ ನಿರ್ವಹಿಸಿದ್ದಾರೆ.

ಅಜಯ್‌ ಸೇಥ್‌ (Ajay Seth)

ಡಿಪಾರ್ಟ್‌ಮೆಂಟ್‌ ಆಫ್‌ ಎಕನಾಮಿಕ್‌ ಅಫೈರ್ಸ್‌ (DEA)ಯ ಕಾರ್ಯದರ್ಶಿಯಾಗಿರುವ ಅಜಯ್‌ ಸೇಥ್‌ 1987ರ ಕರ್ನಾಟಕ ಕೇಡರ್‌ ಬ್ಯಾಚ್‌ನ ಐಎಎಸ್‌ ಅಧಿಕಾರಿ. 2021ರಲ್ಲಿ ಅವರು ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು. ಅಜಯ್‌ ಸೇಥ್‌ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಪದವಿ ಮತ್ತು ಮ್ಯಾನೇಜ್‌ಮೆಂಟ್‌ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

ತುಹಿನ್ ಕಾಂತ್ ಪಾಂಡೆ (Tuhin Kant Pandey)

ಪಂಜಾಬ್‌ ಕೇಡರ್‌ನ 1988ರ ಐಎಎಸ್‌ ಅಧಿಕಾರಿ ತುಹಿನ್‌ ಕಾಂತ ಪಾಂಡೆ. ಪ್ರಸ್ತುತ ಇವರು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣೆ ಇಲಾಖೆ (DIPAM)ನ ಕಾರ್ಯದರ್ಶಿಯಾಗಿದ್ದಾರೆ. ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವ ಪ್ರಯತ್ನ ಮತ್ತು ಜೀವ ವಿಮಾ ನಿಗಮ(ಎಲ್ಐಸಿ)ದ ಆರಂಭಿಕ ಸಾರ್ವಜನಿಕ ಕೊಡುಗೆ(ಐಪಿಒ)ಯ ಘೋಷಣೆ ಕಾರಣದಿಂದ ಅವರು ಜನಪ್ರಿಯರಾಗಿದ್ದಾರೆ.

ಸಂಜಯ್‌ ಮಲ್ಹೋತ್ರ (Sanjay Malhotra)

ರಾಜಸ್ಥಾನ ಕೇಡರ್‌ನ 1990ರ ಬ್ಯಾಚ್ ಅಧಿಕಾರಿ ಸಂಜಯ್‌ ಮಲ್ಹೋತ್ರಾ ಅವರು ಪ್ರಸ್ತುತ ಕಂದಾಯ ಕಾರ್ಯದರ್ಶಿ. ಇದಕ್ಕೂ ಮುನ್ನ ಅವರು ಹಣಕಾಸು ಸೇವೆಗಳ ವಿಭಾಗದ ಮುಖ್ಯಸ್ಥರಾಗಿದ್ದರು. ಅಲ್ಲದೆ ಅವರು ಹಣಕಾಸು ಸಚಿವರ ಬಜೆಟ್ ಭಾಷಣದ 2ನೇ ಭಾಗದ ಕರಡು ರಚನೆಯಲ್ಲಿಯೂ ತೊಡಗಿಸಿಕೊಂಡಿದ್ದರು.

ವಿವೇಕ್‌ ಜೋಶಿ (Vivek Joshi)

ನಿರ್ಮಲಾ ಸೀತಾರಾಮನ್‌ ತಂಡದ ಹೊಸ ಸದಸ್ಯ ವಿವೇಕ್‌ ಜೋಶಿ. ಇವರು ಹರಿಯಾಣ ಕೇಡರ್‌ನ 1989ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. 2022ರ ನವೆಂಬರ್‌ನಲ್ಲಿ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿವೇಕ್ ಜೋಶಿ ಅವರು ಜಿನೀವಾ ವಿಶ್ವವಿದ್ಯಾಲಯದಿಂದ ಅಂತಾರಾಷ್ಟ್ರೀಯ ಅರ್ಥಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ವಿ.ಅನಂತ ನಾಗೇಶ್ವರನ್‌ (V.Anantha Nageswaran)

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಆಪ್ತ ಸಲಹೆಗಾರರಲ್ಲಿ ವಿ.ಅನಂತ ನಾಗೇಶ್ವರನ್ ಕೂಡ ಒಬ್ಬರು. ಭಾರತ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿರುವ ಇವರು ಬರಹಗಾರ ಹಾಗೂ ಶಿಕ್ಷಕರೂ ಹೌದು. ಭಾರತದ ಆರ್ಥಿಕತೆಯ ಮೇಲೆ ಜಾಗತಿಕ ಅಂಶಗಳ ಪರಿಣಾಮಗಳನ್ನು ಅವರು ಗಮನಿಸುತ್ತಿರುತ್ತಾರೆ. ಭಾರತದ ಅಧ್ಯಕ್ಷತೆಯಲ್ಲಿ ನಡೆದ ಜಿ20 ಸಭೆಯಲ್ಲೂ ಪ್ರಮುಖ ಪಾತ್ರ ವಹಿಸಿದ್ದರು. ಅಹ್ಮದಾಬಾದ್‌ ಐಐಎಂನಲ್ಲಿ ಎಂಬಿಎ ಪದವಿ ಪಡೆದಿದ್ದಾರೆ.

ಇದನ್ನೂ ಓದಿ:Union Budget 2024: ಸ್ಟಾಂಡರ್ಡ್‌ ಡಿಡಕ್ಷನ್‌, 80 ಸಿ ಮೊತ್ತ ಹೆಚ್ಚಳ; ಬಜೆಟ್‌ನಲ್ಲಿ ಏನೆಲ್ಲ ತೆರಿಗೆ ರಿಲೀಫ್?

Continue Reading

ದೇಶ

Road Rage Case: ನಡು ರಸ್ತೆಯಲ್ಲೇ ಮಹಿಳೆಯ ಕೂದಲು ಎಳೆದು ಮೂಗಿಗೆ ಪಂಚ್‌; ವೈರಲಾಗ್ತಿದೆ ಈ ವಿಡಿಯೋ

Road Rage Case: ಗಾಯಾಳು ಮಹಿಳೆಯನ್ನು ಡಿಜಿಟಲ್‌ ಕಂಟೆಂಟ್‌ ಕ್ರಿಯೇಟರ್‌ ಜೆರ್ಲಿನ್‌ ಡಿ ಸೋಜಾ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಆಕೆ ವಿಡಿಯೋದಲ್ಲಿ ವಿವರಿಸಿದ್ದು, ತಾವು ತಮ್ಮ ಎರಡು ಮಕ್ಕಳ ಜೊತೆ ಪಶಾನ್‌ ಬರೇರ್‌ ಲಿಂಕ್‌ ರೋಡ್‌ನಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದಿದ್ದಾರೆ. ನಮ್ಮ ಸ್ಕೂಟರ್‌ನ ಹಿಂದೆ ಸುಮಾರು ಎರಡು ಕಿ.ಮೀನಿಂದ ಸ್ಪಪ್ನಿಲ್‌ ತಮ್ಮ ಕಾರಿನಲ್ಲಿ ವೇಗವಾಗಿ ಹಿಂಬಾಲಿಸುತ್ತಲೇ ಬಂದಿದ್ದಾರೆ. ವೇಗವಾಗಿ ಬಂದು ಅವರ ಕಾರು ನನ್ನ ಸ್ಕೂಟರ್‌ ಎದುರು ಬಂದು ತಡೆದಿತ್ತು.

VISTARANEWS.COM


on

Road Rage Case
Koo

ಪುಣೆ: ಓವರ್‌ ಟೇಕ್‌ ಮಾಡಲು ಜಾಗ ಕೊಡಲಿಲ್ಲವೆಂದು ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಮಹಿಳೆ ಮೇಲೆ ವ್ಯಕ್ತಿಯೋರ್ವ ಹಲ್ಲೆ ನಡೆಸಿರುವ ಘಟನೆ ಪುಣೆಯಲ್ಲಿ ನಡೆದಿದೆ(Road Rage Case). ಸ್ವಪ್ನಿಲ್‌ ಕೇಕ್ರೆ ಎಂಬ ವ್ಯಕ್ತಿ ಸ್ಕೂಟರ್‌ನಲ್ಲಿ ಮಹಿಳೆಯ ಕೂದಲು ಹಿಡಿದು ಎಳೆದಾಡಿ, ಆಕೆ ಮೂಗಿಗೆ ಎರಡು ಬಾರಿ ಪಂಚ್‌ ಮಾಡಿ ಒಡೆದು ಹಾಕಿದ್ದಾನೆ. ಮಹಿಳೆಯ ಮೂಗಿನಲ್ಲಿ ರಕ್ತ ಬರುವಂತೆ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಮಹಿಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌(Viral Video) ಆಗುತ್ತಿದೆ. ಆರೋಪಿ ಸ್ವಪ್ನಿಲ್‌ನನ್ನು ಆತನ ಪತ್ನಿ ಸಮೇತ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಇನ್ನು ಗಾಯಾಳು ಮಹಿಳೆಯನ್ನು ಡಿಜಿಟಲ್‌ ಕಂಟೆಂಟ್‌ ಕ್ರಿಯೇಟರ್‌ ಜೆರ್ಲಿನ್‌ ಡಿ ಸೋಜಾ ಎಂದು ಗುರುತಿಸಲಾಗಿದೆ. ಘಟನೆ ಬಗ್ಗೆ ಆಕೆ ವಿಡಿಯೋದಲ್ಲಿ ವಿವರಿಸಿದ್ದು, ತಾವು ತಮ್ಮ ಎರಡು ಮಕ್ಕಳ ಜೊತೆ ಪಶಾನ್‌ ಬರೇರ್‌ ಲಿಂಕ್‌ ರೋಡ್‌ನಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದಿದ್ದಾರೆ. ನಮ್ಮ ಸ್ಕೂಟರ್‌ನ ಹಿಂದೆ ಸುಮಾರು ಎರಡು ಕಿ.ಮೀನಿಂದ ಸ್ಪಪ್ನಿಲ್‌ ತಮ್ಮ ಕಾರಿನಲ್ಲಿ ವೇಗವಾಗಿ ಹಿಂಬಾಲಿಸುತ್ತಲೇ ಬಂದಿದ್ದಾರೆ. ವೇಗವಾಗಿ ಬಂದು ಅವರ ಕಾರು ನನ್ನ ಸ್ಕೂಟರ್‌ ಎದುರು ಬಂದು ತಡೆದಿತ್ತು.

ಕೋಪದಲ್ಲಿ ಕಾರಿನಿಂದ ಇಳಿದ ಅವರೂ ಏಕಾಏಕಿ ನನ್ನನ್ನು ಕೂದಲು ಹಿಡಿದು ಎಳದಾಡಿದ್ದಾರೆ. ಸಾಲದೆನ್ನುವುದಕ್ಕೆ ನನ್ನ ಮೂಗಿಗೆ ಹೊಡೆದಿದ್ದಾರೆ. ನನ್ನ ಜೊತೆ ಇದ್ದ ಇಬ್ಬರು ಮಕ್ಕಳ ಬಗ್ಗೆಯೂ ಆತ ಕೇರ್‌ ಮಾಡಲೇ ಇಲ್ಲ. ಆ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದಿತ್ತು.ಈ ನಗರ ಹೇಗೆ ಸುರಕ್ಷಿತವಾಗಿದೆ. ಜನರು ಏಕೆ ಇಷ್ಟೋಂದು ಕ್ರೂರವಾಗಿ ವರ್ತಿಸುತ್ತಾರೆ? ಕೊನೆಗೆ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯೊಬ್ಬರು ನಮಗೆ ಸಹಾಯ ಮಾಡಿದರು ಎಂದು ಜೆರ್ಲಿನ್‌ ತಮ್ಮ ವಿಡಿಯೋದಲ್ಲಿ ಹೇಳಿದ್ದಾರೆ.

ಕಾರಿನಲ್ಲಿದ್ದ ವ್ಯಕ್ತಿ ವಿನಾ:ಕಾರಣ ತನ್ನ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆಕೆ ಹೇಳಿದ್ದಾಳೆ. ಸ್ಕೂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿಲ್ಲ. ಅವನು ಎಷ್ಟು ಶಕ್ತಿಶಾಲಿ ಎಂದು ತೋರಿಸಲು ಅವನು ಬಹುಶಃ ಅದನ್ನು ಮಾಡಿದ್ದಾನೆ. ಮಕ್ಕಳಿಗೆ ದೈಹಿಕವಾಗಿ ಗಾಯವಾಗಿಲ್ಲ ಆದರೆ ಅವರು ಹೆದರಿ ಕಿರುಚುತ್ತಿದ್ದರು,” ಎಂದು ಜೆರ್ಲಿನ್‌ ಪತಿ ಹೇಳಿದ್ದಾರೆ.

ಎರಡು ತಿಂಗಳ ಹಿಂದೆಯಷ್ಟೇ ಪುಣೆಯಲ್ಲಿ ಸಂಭವಿಸಿದ್ದ ಹಿಟ್‌ ಆಂಡ್‌ ರನ್‌ ಕೇಸ್‌ ಇಡೀ ದೇಶದ ಗಮನ ಸೆಳೆದಿತ್ತು. 24 ವರ್ಷದ ಇಬ್ಬರು ಟೆಕ್ಕಿಗಳ ಮೇಲೆ 17 ವರ್ಷದ ಹುಡುಗನೋರ್ವ ಕುಡಿದ ಮತ್ತಿನಲ್ಲಿ ತನ್ನ ಪೋರ್ಷೆ ಕಾರಿನಲ್ಲಿ ಡಿಕ್ಕಿ ಹೊಡೆದಿದ್ದ. ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು. ಸದ್ಯ ಆರೋಪಿಗಳು ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ಇದನ್ನೂ ಓದಿ: Foreign Secretary: ಕೇರಳಕ್ಕಾಗಿ ‘ವಿದೇಶಾಂಗ ಕಾರ್ಯದರ್ಶಿ’ಯನ್ನು ನೇಮಿಸಿದ ಪಿಣರಾಯಿ; ಭುಗಿಲೆದ್ದ ವಿವಾದ

Continue Reading
Advertisement
theft case
ಚಿತ್ರದುರ್ಗ11 mins ago

Theft Case : ಅಡ್ಡಗಟ್ಟಿದ ಪೊಲೀಸ್‌ ಜೀಪ್‌ ಮೇಲೆ ಕಲ್ಲು ತೂರಿ ಆಂಧ್ರದ ಡೆಡ್ಲಿ ಕಳ್ಳರ ಗ್ಯಾಂಗ್‌ ಎಸ್ಕೇಪ್‌!

Niveditha Shivarajkumar Fire fly rachana inder Heroine
ಸ್ಯಾಂಡಲ್ ವುಡ್17 mins ago

Niveditha Shivarajkumar: ʻಫೈರ್ ಫ್ಲೈ’ ಸಿನಿಮಾಗೆ ‘ಹೆಂಗೆ ನಾವು’ ಹುಡುಗಿ ನಾಯಕಿ! ಯಾವಾಗ ತೆರೆಗೆ?

Kanwar Yatra
ದೇಶ22 mins ago

Kanwar Yatra: ಮುಸ್ಲಿಮರ ವಿರುದ್ಧ ಬಿಜೆಪಿಯ ದ್ವೇಷದ ರಾಜಕೀಯ ಎಂದ ಓವೈಸಿ; ಜಿನ್ನಾರಂತೆ ವರ್ತನೆ ಎಂದು ಬಿಜೆಪಿ ಟಾಂಗ್‌

Gold Rate Today
ಚಿನ್ನದ ದರ27 mins ago

Gold Rate Today: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ಇಂದಿನ ಬೆಲೆ ತಿಳಿದುಕೊಳ್ಳಿ

Om shiva, Kannada movie team song out
ಸಿನಿಮಾ35 mins ago

Kannada New Movie: ಭಾರ್ಗವ್ ಕೃಷ್ಣ ಅಭಿನಯದ `ಓಂ ಶಿವಂ’ ಚಿತ್ರದ ಲಿರಿಕಲ್ ಸಾಂಗ್ ಬಿಡುಗಡೆ

Paris Olympics 2024
ಕ್ರೀಡೆ1 hour ago

Paris Olympics 2024: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿ ನೇರಳೆ ಬಣ್ಣದ ಟ್ರ್ಯಾಕ್; ಏನಿದರ ವಿಶೇಷತೆ?

Karnataka HC
ಕರ್ನಾಟಕ1 hour ago

Karnataka HC: ನ್ಯಾಯಮೂರ್ತಿಗಳು ಕೂಡ ಮನುಷ್ಯರೇ; ಮಕ್ಕಳ ಅಶ್ಲೀಲ ದೃಶ್ಯ ವೀಕ್ಷಣೆ ಅಪರಾಧವಲ್ಲ ಆದೇಶ ಹಿಂಪಡೆದ ಹೈಕೋರ್ಟ್

Dr Bro shreenaval kishori Craze social media stars
ವೈರಲ್ ನ್ಯೂಸ್1 hour ago

Dr Bro: ಸೋಷಿಯಲ್​ ಮೀಡಿಯಾ ಸ್ಟಾರ್‌ಗಳ ಮೇಲೆ ಹೆಚ್ಚಾಯ್ತು ಕ್ರೇಜ್‌! ನಿಮಗ್ಯಾರಿಷ್ಟ?

Kanwar Yatra
ದೇಶ1 hour ago

Kanwar Yatra: “ಹೆಸರು ಬಹಿರಂಗ ಪಡಿಸುವಲ್ಲಿ ರಾಮನಿಗಿಲ್ಲದ ಸಮಸ್ಯೆ ರೆಹಮಾನ್‌ಗೆ ಏಕೆ?”-ಬಾಬಾ ರಾಮ್‌ ದೇವ್‌ ಪ್ರಶ್ನೆ

karnataka Rain
ಮಳೆ1 hour ago

Karnataka Rain : ಭಾರಿ ಮಳೆಗೆ ಮುಂದುವರಿದ ಸಾವು-ನೋವು; ಮನೆ ಗೋಡೆ ಕುಸಿದು ವ್ಯಕ್ತಿ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ1 day ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ2 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ2 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ3 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ5 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ6 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ6 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌