NIRF Ranking 2023 best engineering colleges in karnataka NIRF rank wiseNIRF Ranking 2023 : ರಾಜ್ಯದ ಬೆಸ್ಟ್‌ ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿ ಪ್ರಕಟ; ಇವು ಟಾಪ್‌ 10 ಕಾಲೇಜುಗಳು! Vistara News

ದೇಶ

NIRF Ranking 2023 : ರಾಜ್ಯದ ಬೆಸ್ಟ್‌ ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿ ಪ್ರಕಟ; ಇವು ಟಾಪ್‌ 10 ಕಾಲೇಜುಗಳು!

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಬಿಡುಗಡೆ ಮಾಡಿದ ಎನ್‌ಐಆರ್‌ಎಫ್‌ ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿ ಪ್ರಕಾರ ರಾಜ್ಯದಲ್ಲಿನ ಬೆಸ್ಟ್‌ ಎಂಜಿನಿಯರಿಂಗ್‌ ಕಾಲೇಜುಗಳು ಯಾವವು? ಇಲ್ಲಿದೆ ಟಾಪ್‌ 10 ಕಾಲೇಜುಗಳ ಪಟ್ಟಿ.

VISTARANEWS.COM


on

NIRF Ranking 2023 nit surathkal
ಸುರತ್ಕಲ್‌ನ ಎನ್‌ಐಟಿ ಕ್ಯಾಂಪಸ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ರಾಷ್ಟ್ರೀಯ ಸಾಂಸ್ಥಿಕ ರ‍್ಯಾಂಕಿಂಗ್‌ ಚೌಕಟ್ಟಿನ (ಎನ್‌ಐಆರ್‌ಎಫ್‌) ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಜ್ಯದ ಎಂಜಿನಿಯರಿಂಗ್‌ ಕಾಲೇಜುಗಳ ಪಟ್ಟಿಯಲ್ಲಿ ಸುರತ್ಕಲ್‌ನ ಎನ್‌ಐಟಿ (National Institute of Technology) ಮೊದಲ ಸ್ಥಾನ ಪಡೆದುಕೊಂಡಿದೆ.

ರಾಷ್ಟ್ರೀಯ ಪಟ್ಟಿಯಲ್ಲಿ ಈ ಕಾಲೇಜು 13ನೇ ಸ್ಥಾನದಲ್ಲಿದೆ. ಮದ್ರಾಸ್‌ ಐಐಟಿ ಮೊದಲ ಸ್ಥಾನ ಪಡೆದಿದ್ದರೆ, ದಿಲ್ಲಿ ಐಐಟಿ ಎರಡನೇ ಸ್ಥಾನದಲ್ಲಿದೆ. ಬಾಂಬೆ ಐಐಟಿ ಮೂರನೇ ಸ್ಥಾನ ಪಡೆದುಕೊಂಡಿದೆ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಾಜ್‌ಕುಮಾರ್‌ ರಾಜನ್‌ ಸಿಂಗ್‌ ಸೋಮವಾರ ವಾರ್ಷಿಕ ರ‍್ಯಾಂಕಿಂಗ್‌ (NIRF Ranking 2023) ಪಟ್ಟಿಯನ್ನು ನವ ದೆಹಲಿಯಲ್ಲಿ ಬಿಡುಗಡೆ ಮಾಡಿದ್ದಾರೆ.

ಮಣಿಪಾಲ್‌ನ ಮಣಿಪಾಲ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 45ನೇ ಸ್ಥಾನ ಪಡೆದುಕೊಂಡಿದೆ. ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 55 ನೇ ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಎಂ.ಎಸ್‌. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 59ನೇ ಸ್ಥಾನದಲ್ಲಿದ್ದರೆ, ಬೆಂಗಳೂರಿನ ಇಂಟರ್‌ನ್ಯಾಷನಲ್‌ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್‌ ಟೆಕ್ನಾಲಜಿ 62 ಸ್ಥಾನ ಪಡೆದುಕೊಂಡಿದೆ. ಬೆಂಗಳೂರಿನ ಆರ್‌ವಿ ಎಂಜಿನಿಯರಿಂಗ್‌ ಕಾಲೇಜು 70 ನೇ ಸ್ಥಾನದಲ್ಲಿದೆ. ಬಿಎಂಎಸ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ 73, ತುಮಕೂರಿನ ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ 91, ಬೆಂಗಳೂರಿನ ಪಿಇಎಸ್‌ ಯೂನಿರ್ವಸಿಟಿ 93 ನೇ ಸ್ಥಾನ ಪಡೆದುಕೊಂಡಿವೆ.

ಎನ್‌ಐಆರ್‌ಎಫ್‌ ರ‍್ಯಾಂಕಿಂಗ್‌ ಪ್ರಕಾರ ಟಾಪ್‌ 10 ಕಾಲೇಜುಗಳು;

ಕ್ರಮ ಸಂಖ್ಯೆಎಂಜಿನಿಯರಿಂಗ್‌ ಕಾಲೇಜುಗಳ ಹೆಸರುರಾಷ್ಟ್ರೀಯ ರ‍್ಯಾಂಕಿಂಗ್‌
1ಎನ್‌ಐಟಿ ಸುರತ್ಕಲ್‌, ಮಂಗಳೂರು 13
2ಮಣಿಪಾಲ್‌ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ್‌45
3ವಿಶ್ವೇಶ್ವರಯ್ಯ ತಾಂತ್ರಿಕ ವಿವಿ, ಬೆಳಗಾವಿ55
4ಎಂ.ಎಸ್‌. ರಾಮಯ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು59
5ಇಂಟರ್‌ನ್ಯಾಷನಲ್‌ ಇನ್‌ಸ್ಟಿಟ್ಯೂಟ್ ಆಫ್ ಇನ್‌ಫಾರ್ಮೆಷನ್‌ ಟೆಕ್ನಾಲಜಿ, ಬೆಂಗಳೂರು 62
6ಆರ್‌ವಿ ಎಂಜಿನಿಯರಿಂಗ್‌ ಕಾಲೇಜು, ಬೆಂಗಳೂರು70
7ಬಿಎಂಎಸ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ಬೆಂಗಳೂರು 73
8ಸಿದ್ಧಗಂಗಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ , ತುಮಕೂರು 91
9ಪಿಇಎಸ್‌ ಯೂನಿರ್ವಸಿಟಿ, ಬೆಂಗಳೂರು 93
10ನ್ಯೂ ಹಾರಿಜನ್‌ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌, ಬೆಂಗಳೂರು 114

ಒಟ್ಟಾರೆ ದೇಶದ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) (ಭಾರತೀಯ ವಿಜ್ಞಾನ ಸಂಸ್ಥೆ) ಎರಡನೇ ಸ್ಥಾನ ಪಡೆದುಕೊಂಡಿದೆ. ಇಂಡಿಯನ್‌ ಇನ್ಸ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ (ಐಐಟಿ) ಮದ್ರಾಸ್‌ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 14 ಸ್ಥಾನ ಪಡೆದುಕೊಂಡಿದ್ದರೆ, ಸುರತ್ಕಲ್‌ನ ಎನ್‌ಐಟಿ 33 ಸ್ಥಾನ ಪಡೆದುಕೊಂಡಿದೆ. ಕಳೆದ ವರ್ಷ 33 ಸ್ಥಾನ ಪಡೆದುಕೊಂಡಿದ್ದ ಮೈಸೂರು ವಿಶ್ವವಿದ್ಯಾಲಯ ಈ ಬಾರಿ 47 ಸ್ಥಾನಕ್ಕೆ ಕುಸಿದಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 54 ಸ್ಥಾನ ಪಡೆದುಕೊಂಡಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ (Click Here) ಕ್ಲಿಕ್‌ ಮಾಡಿ.

ಬೆಸ್ಟ್‌ ವಿವಿಗಳ ಪಟ್ಟಿಯಲ್ಲಿ ಐಐಎಸ್‌ಸಿ ಫಸ್ಟ್‌

ಎನ್‌ಐಆರ್‌ಎಫ್‌ ವಿವಿಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಸೈನ್ಸ್‌ ಎಂದಿನಂತೆ ಮೊದಲ ಸ್ಥಾನ ಪಡೆದುಕೊಂಡಿದೆ. ರಾಜ್ಯದ ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ 8ನೇ ಸ್ಥಾನದಲ್ಲಿದೆ. ಮೈಸೂರು ವಿವಿ 27ನೇ ಸ್ಥಾನ ಪಡೆದುಕೊಂಡಿದೆ. ಮೈಸೂರಿನ ಜೆಎಸ್‌ಎಸ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರೀಸರ್ಚ್‌ 33 ಸ್ಥಾನದಲ್ಲಿದ್ದರೆ, ಬೆಂಗಳೂರು ವಿವಿ 68, ಬೆಳಗಾವಿಯ ಕೆಎಲ್‌ಇ ಅಕಾಡೆಮಿ ಆಫ್‌ ಹೈಯರ್‌ ಎಜುಕೇಷನ್‌ ಆ್ಯಂಡ್‌ ರಿಸರ್ಚ್‌ 70, ಕುವೆಂಪು ವಿವಿ 73, ಮಂಗಳೂರಿನ ಎನ್‌ಐಟಿಟಿಇ 74, ವಿಶ್ವೇಶ್ವರಯ್ಯ ತಾಂತ್ರಿಕ ವಿವಿ 80, ಬೆಂಗಳೂರಿನ ಜೈನ್‌ ವಿವಿ 85, ಮಂಗಳೂರಿನ ಯಾನೆಪೋಯ ವಿವಿ 86 ನೇ ಸ್ಥಾನ ಪಡೆದುಕೊಂಡಿವೆ.

ದೇಶದ ಅತ್ಯುತ್ತಮ ಡೆಂಟಲ್‌ ಕಾಲೇಜುಗಳ ಪಟ್ಟಿಯಲ್ಲಿ ಮಣಿಪಾಲ್‌ನ ಮಣಿಪಾಲ್‌ ಕಾಲೇಜ್‌ ಆಫ್‌ ಡೆಂಟಲ್‌ ಸೈನ್ಸ್‌ ಎರಡನೇ ಸ್ಥಾನ ಪಡೆದುಕೊಂಡಿದ್ದರೆ, ಮಂಗಳೂರಿನ ಎ.ಬಿ.ಶೆಟ್ಟಿ ಮೆಮೋರಿಯಲ್‌ ಇನ್ಸ್‌ಟಿಟ್ಯೂಟ್‌ ಆಫ್‌ ಡೆಂಟಲ್‌ ಸೈನ್ಸ್‌ ಐದನೇ ಸ್ಥಾನ ಪಡೆದುಕೊಂಡಿದೆ.

ಈ ಬಾರಿ ದೇಶದ 8,686 ಶಿಕ್ಷಣ ಸಂಸ್ಥೆಗಳು ಈ ರ‍್ಯಾಂಕಿಂಗ್‌ ಪೈಪೋಟಿಯಲ್ಲಿ ಭಾಗಿಯಾಗಿದ್ದವು. ಒಟ್ಟು 12 ವಿಭಾಗಗಳಲ್ಲಿ ರ‍್ಯಾಂಕಿಂಗ್‌ ನೀಡಲಾಗಿದೆ.

ಇದನ್ನೂ ಓದಿ: NIRF Ranking 2023 : ಬೆಂಗಳೂರು ಐಐಎಸ್‌ಸಿ ಸೆಕೆಂಡ್‌; ಲಾ ಮತ್ತು ರಿಸರ್ಚ್‌ನಲ್ಲಿ ಬೆಂಗಳೂರು ಫಸ್ಟ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ಭರದಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

VISTARANEWS.COM


on

Shri Ram Janmabhoomi Mandir carvings are wonderful
Koo

ಅಯೋಧ್ಯೆ: ಉತ್ತರ ಪ್ರದೇಶದ (Uttar Pradesh) ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ರಾಮ ಮಂದಿರ (Ayodhya Ram Mandir) ಬಹುತೇಕ ಸಿದ್ಧವಾಗಿದೆ. ಜನವರಿ 22ರಂದು ರಂದು ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ನಡುವೆ ರಾಮ ಮಂದಿರ ಗರ್ಭಗಡಿ (Sanctum Sanctorum) ಹಾಗೂ ದೇವಾಲಯ ಒಳಗಿರುವ ಅದ್ಭುತ, ಮನಮೋಹಕ ಕಲಾಕೃತಿಗಳ (carvings) ಫೋಟೋಗಳನ್ನು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಿಲೀಸ್ ಮಾಡಿದೆ.

ಅದ್ಭುತ ಕೆತ್ತನೆಗಳನ್ನು ಹೊಂದಿರುವ ಮಂದಿರ ಒಳಾಂಗಣ ಫೋಟೋಗಳು ಭಾರೀ ವೈರಲ್ ಆಗಿವೆ. ಸುಂದರ ಕಲಾಕೃತಿಗಳನ್ನು ಮಂದಿರದೊಳಗೆ ಕಾಣಬಹುದಾಗಿದೆ. ನಿನ್ನೆಯಷ್ಟೇ ರಾಮ ಮಂದಿರದ ಗರ್ಭಗಡಿಯು ಚಿತ್ರವನ್ನು ಹಂಚಿಕೊಳ್ಳಲಾಗಿತ್ತು. ಜನವರಿ 22ರಂದು ನಡೆಯಲಿರುವ ಪ್ರಾಣ ಪ್ರತಿಷ್ಠೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಮಂತ್ರಣ ನೀಡಲಾಗಿದೆ. ಸುಮಾರು 10 ಸಾವಿರದಿಂದ 15 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮನಮೋಹಕ ರಾಮ ಮಂದಿರ ಗರ್ಭ ಗುಡಿ

ಶ್ರೀ ರಾಮ (Lord Ram Idol) ದೇವರ ಮೂರ್ತಿ ಪ್ರತಿಷ್ಠಾಪನೆಯಾಗಲಿರುವ ಗರ್ಭ ಗುಡಿಯ (Sanctum Sanctorum) ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಅವರು ಈ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಷೇರ್ ಮಾಡಿಕೊಂಡಿದ್ದಾರೆ. ರಾಮನನ್ನು ಪ್ರತಿಷ್ಠಾಪಿಸುವ ಪೀಠ ಮತ್ತು ಗರ್ಭಗುಡಿಯನ್ನು ಫೋಟೋದಲ್ಲಿಕಾಣಬಹುದು.

ಭಗವಾನ್ ಶ್ರೀ ರಾಮ ಅವರ ಗರ್ಭಗುಡಿ ಬಹುತೇಕ ಸಿದ್ಧವಾಗಿದೆ. ಇತ್ತೀಚೆಗೆ ಲೈಟಿಂಗ್-ಫಿಟ್ಟಿಂಗ್ ಕೆಲಸವೂ ಪೂರ್ಣಗೊಂಡಿದೆ. ಕೆಲವು ಛಾಯಾಚಿತ್ರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಎಕ್ಸ್ ವೇದಿಕೆಯಲ್ಲಿ ಬರೆದುಕೊಂಡಿದ್ದಾರೆ. ಮತ್ತೊಂದೆಡೆ, ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಶುಕ್ರವಾರ ಶ್ರೀರಾಮ ಜನ್ಮಭೂಮಿ ಮಂದಿರದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಯ ಫೋಟೋಗಳನ್ನು ಬಿಡುಗಡೆ ಮಾಡಿದೆ.

ಟ್ರಸ್ಟ್‌ನ ಮೇಲ್ವಿಚಾರಣೆಯಲ್ಲಿ ದೇವಾಲಯದ ನಿರ್ಮಾಣವು ಪ್ರಗತಿಯಲ್ಲಿದ್ದು, ಇದು ದೇವಾಲಯದೊಳಗಿನ ಸಂಕೀರ್ಣ ಕೆತ್ತನೆಗಳ ಚಿತ್ರಗಳನ್ನು ಕಾಣಬಹುದು. ಇದಕ್ಕೂ ಮೊದಲು ಚಂಪತ್ ರಾಯ್ ಅವರು ಶ್ರೀ ರಾಮ ದೇವರ ಮೂರ್ತಿ ಕೆತ್ತನೆ ಶೇ.90ರಷ್ಟು ಮುಗಿದಿದೆ ಎಂದು ಹೇಳಿದ್ದರು.

ರಾಮ ಜನ್ಮಭೂಮಿ ದೇವಸ್ಥಾನದಲ್ಲಿ, ಅಯೋಧ್ಯೆಯ ಮೂರು ಸ್ಥಳಗಳಲ್ಲಿ ಭಗವಾನ್ ರಾಮನ ಐದು ವರ್ಷದ ಮಗುವಿನ ರೂಪವನ್ನು ಚಿತ್ರಿಸುವ 4’3″ ವಿಗ್ರಹವನ್ನು ನಿರ್ಮಿಸಲಾಗುತ್ತಿದೆ. ಮೂವರು ಕುಶಲಕರ್ಮಿಗಳು ಮೂರು ವಿಭಿನ್ನ ಶಿಲೆಗಳಯಲ್ಲಿ ವಿಗ್ರಹವನ್ನು ನಿರ್ಮಿಸುತ್ತಿದ್ದಾರೆ. ಈ ವಿಗ್ರಹಗಳು 90 ಪ್ರತಿಶತದಷ್ಟು ಸಿದ್ಧವಾಗಿವೆ ಮತ್ತು ಅಂತಿಮ ಕಾರ್ಯವು ಸುಮಾರು ಒಂದು ವಾರ ತೆಗೆದುಕೊಳ್ಳುತ್ತದೆ ಎಂದು ರಾಮ ಮಂದಿರ ಟ್ರಸ್ಟ್ ಕಾರ್ಯದರ್ಶಿ ಅವರು ಈ ಹಿಂದೆ ಹೇಳಿದ್ದರು.

ಪ್ರಾಣ-ಪ್ರತಿಷ್ಠಾ ಸಮಾರಂಭದ ವೈದಿಕ ವಿಧಿವಿಧಾನಗಳು ಜನವರಿ 16 ರಂದು ಮುಖ್ಯ ಸಮಾರಂಭಕ್ಕೆ ಒಂದು ವಾರ ಮುಂಚಿತವಾಗಿ ಪ್ರಾರಂಭವಾಗುತ್ತವೆ. ಮಹಾಮಸ್ತಕಾಭಿಷೇಕ ಸಮಾರಂಭದಲ್ಲಿ ಲಕ್ಷ್ಮೀಕಾಂತ ದೀಕ್ಷಿತ್ ಮುಖ್ಯ ವಿಧಿವಿಧಾನಗಳನ್ನು ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸುಮಾರು 10ರಿಂದ 15 ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಈ ಸುದ್ದಿಯನ್ನೂ ಓದಿ: ಮನಮೋಹಕ ರಾಮ ಮಂದಿರ ಗರ್ಭ ಗುಡಿ! ಪ್ರಾಣ ಪ್ರತಿಷ್ಠೆಗೆ ದಿನಗಣನೆ ಶುರು

Continue Reading

ದೇಶ

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Murder Case: 2011ರಲ್ಲಿ ಮೀರತ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಯುವಕನೊಬ್ಬ ತಪ್ಪಾಗಿ ಸಿಕ್ಕಿಸಲಾಗಿತ್ತು.

VISTARANEWS.COM


on

man accused of murder wins acquittal after studying law and fighting own Case
Koo

ನವದೆಹಲಿ: ಇದು ಅಸಾಧ್ಯವನ್ನು ಸಾಧ್ಯವಾಗಿಸಿದವನ ಕತೆ. ತಾನು ಮಾಡದ ಕೊಲೆಗಳ (Meerut Murder Case) ಆರೋಪಕ್ಕಾಗಿ 12 ವರ್ಷಗಳ ಕಾಲ ಜೈಲಿನಲ್ಲಿದ್ದ ಯುವಕ, ಸೆರೆಮನೆಯಲ್ಲೇ ಕಾನೂನು ಓದಿ, ತನ್ನ ಕೇಸ್ ಅನ್ನು ತಾನೇ ವಾದ ಮಾಡಿ (fight his own Case) ಕೊನೆಗೂ ಕೋರ್ಟ್‍‌ನಿಂದ ಆರೋಪ ಮುಕ್ತನಾಗಿ ಹೊರ ಬಂದಿದ್ದಾರೆ(Court acquitted). ಹೌದು, ಮೀರತ್‌ನ ಅಮಿತ್ ಚೌಧರಿ (Amit Chaudhary) ಇಂಥ ವಿಸ್ಮಯಕಾರಿ ಸಾಹಸವನ್ನು ಮಾಡಿರುವ ಸಾಹಸಿ.

2011ರಲ್ಲಿ ಮೀರತ್‌ನಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳ ಕೊಲೆಯಾಗಿತ್ತು. ಈ ಕೊಲೆ ಪ್ರಕರಣ ಸಂಬಂಧ ಇವರನ್ನು ಬಂಧಿಸಲಾಗಿತ್ತು. ಕ್ರಮೇಣ ಈ ಕೊಲೆಗೆ ಸಂಚು ರೂಪಿಸಿದ್ದ ಕಾಳಿ ಗ್ಯಾಂಗ್‌ನ ಸದಸ್ಯ ಎಂದು ಆರೋಪಿಸಲಾಯಿತು. ಕೊಲೆ ನಡೆದ ಸಮಯದಲ್ಲಿ ಚೌಧರಿ ತಮ್ಮ ಸಹೋದರಿ ಮನೆ ಇರುವ ಶಾಮ್ಲಿಯಲ್ಲಿದ್ದರು. ಆದರೂ, ಈ ಪ್ರಕರಣದಲ್ಲಿ 17 ಆರೋಪಿಗಳ ಪೈಕಿ ಚೌಧರಿ ಒಬ್ಬರಾದರು. ಅಂತಿಮವಾಗಿ ಭಾರತೀಯ ದಂಡ ಸಂಹಿತೆ ಮತ್ತು ರಾಷ್ಟ್ರೀಯ ಭದ್ರತಾ ಏಜೆನ್ಸಿಯ ಅಡಿಯಲ್ಲಿ ಕಠಿಣ ಶಿಕ್ಷೆಯನ್ನು ಎದುರಿಸಬೇಕಾಯಿತು.

ಕೊಲೆಯಂಥ ಗಂಭೀರ ಆರೋಪಗಳನ್ನು ಎದುರಿಸಿದ ನಂತರ, ಕಿರ್ತಾಲ್ ಗ್ರಾಮದ ರೈತ ಕುಟುಂಬದಿಂದ ಬಂದ ಚೌಧರಿ, ಹಠಾತ್ತನೆ ಪಾತಾಳ ಕಂಡ ತನ್ನ ಮತ್ತು ತಮ್ಮ ಕುಟುಂಬವನ್ನು ಮತ್ತೆ ಹೋರಾಡಲು ಮತ್ತು ಅವರ ಜೀವನದ ದಿಕ್ಕನ್ನು ಬದಲಾಯಿಸಲು ಯೋಚಿಸಿದರು. ಮತ್ತು ಆ ನಿಟ್ಟಿನಲ್ಲಿ ಪ್ರಯತ್ನಪಡಲು ಆರಂಭಿಸಿದರು.

ಅಮಿತ್ ಚೌಧರಿ ಜೈಲಿನಲ್ಲಿದ್ದಾಗಲೂ ಸಾಕಷ್ಟು ಕಷ್ಟಗಳನ್ನು ಎದುರಿಸಿದ್ದಾರೆ. ಚೌಧರಿ ಇದ್ದ ಮುಜಾಫ್ಫರ್‌ನಗರ ಜೈಲಿನಲ್ಲಿ ಗ್ಯಾಂಗಸ್ಟರ್‌ಗಳಾದ ಅನಿಲ್ ದುಜನಾ, ವಿಕ್ಕಿ ತ್ಯಾಗಿಯಂಥವರಿದ್ದರು. ಅವರು ಚೌಧರಿಯನ್ನು ತಮ್ಮ ಗ್ಯಾಂಗಿ‌ಗೆ ಸೇರಿಸಿಕೊಳ್ಳಲು ಮುಂದಾದರು. ಆದರೆ, ಅಲ್ಲಿನ ಜೈಲರ್ ಗೂಂಡಾಗಳಿಂದ ಚೌಧರಿಯನ್ನು ದೂರ ಇಡುವುದಕ್ಕಾ ಬೇರೆ ಬ್ಯಾರಾಕ್‌ಗೆ ವರ್ಗಾಯಿಸಿದರು.

2013ರಲ್ಲಿ ಜಾಮೀನು ಮೇಲೆ ಬಿಡುಗಡೆಯಾದ ಬಳಿಕ ಚೌಧರಿ ಕಾನೂನು ಪದವಿ ಕಲಿಯಲು ಮುಂದಾದರು. ಬಿಎ ಪೂರ್ಣಗೊಳಿಸಿ, ಎಲ್ಎಲ್‌ಬಿ, ಎಲ್‌ಎಲ್‌ಎಂ ಪಾಸು ಮಾಡಿದರು. ಅಷ್ಟೇ ಅಲ್ಲದೇ, ಬಾರ್ ಕೌನ್ಸಿಲ್ ಪರೀಕ್ಷೆಯನ್ನೂ ಪಾಸು ಮಾಡಿದರು. ಪೊಲೀಸ್ ಅಧಿಕಾರಿಗಳ ಕೊಲೆ ಪ್ರಕರಣದಲ್ಲಿ ತಾನು ನಿರಪರಾಧಿ ಎಂದು ಸಾಬೀತುಪಡಿಸಿ, ತಮ್ಮ ಕುಟುಂಬವು ಸಮಾಜದಲ್ಲಿ ತಲೆ ಎತ್ತಿ ನಡೆಯುವುದನ್ನು ನೋಡುವುದೇ ಗುರಿಯಾಗಿತ್ತು.

ಲಾಯರ್ ಆದ ಮೇಲೆ ತಮ್ಮ ಕೇಸನ್ನು ತಾವೇ ನಡೆಸಲು ಆರಂಭಿಸಿದರು ಚೌಧರಿ. ಆದರೆ, ಪ್ರಕರಣದ ವಿಚಾರಣೆ ತುಂಬ ನಿಧಾನವಾಗಿ ನಡೆಯುತ್ತಿತ್ತು. ಯಾರ ಹೇಳಿಕೆಯನ್ನು ದಾಖಲಿಸಲಿಲ್ಲ. ಈ ಪ್ರಕರಣದಲ್ಲಿ ಚೌಧರಿ ನಿರಪರಾಧಿ ಎಂಬುದಕ್ಕೆ ಸಾಕ್ಷ್ಯ ಕೊಡ ದೊರೆಯಿತು. ಈ ಪ್ರಕರಣದಲ್ಲಿ ಹೇಳಿಕೆ ದಾಖಲಿಸಲು ಆಗಮಿಸಿದ ಸಾಕ್ಷಿಯೊಬ್ಬರು, ಕೋರ್ಟ್‌ನಲ್ಲಿ ವಕೀಲ ಹಾಗೂ ಆರೋಪಿಯಾಗಿರುವ ಅಮಿತ್ ಚೌಧರಿ ಪಕ್ಕದಲ್ಲೇ ನಿಂತರೂ ಗುರುತಿಸಲಿಲ್ಲ. ಈ ಬೆಳವಣಿಗೆಯು ನ್ಯಾಯಾಧೀಶರಿಗೆ ತನ್ನನ್ನು ತಪ್ಪಾಗಿ ಈ ಕೇಸಿನಲ್ಲಿ ಸಿಕ್ಕಿಸಲಾಗಿದೆ ಎಂದು ಮನವರಿಕೆಯಾಯಿತು ಎನ್ನುತ್ತಾರೆ ಚೌಧರಿ ಅವರು.

ಅಂತಿಮವಾಗಿ ಪುರಾವೆಗಳು ಇಲ್ಲದ್ದರಿಂದ ಇಬ್ಬರು ಪೊಲೀಸ್ ಅಧಿಕಾರಿಗಳ ಕೊಲೆ ಪ್ರಕರಣದಲ್ಲಿ ಅಮಿತ್ ಚೌಧರಿ ಸೇರಿದಂತೆ 13 ಜನರನ್ನು ಇತ್ತೀಚೆಗಷ್ಟೇ ಖುಲಾಸೆಗೊಳಿಸಿತು. ಯಾವುದೇ ತಪ್ಪು ಮಾಡದೇ 12 ವರ್ಷ ಜೈಲಿನಲ್ಲಿ ಕಳೆದ ಚೌಧರಿಗೆ ಸೇನೆ ಸೇರಬೇಕು ಎಂಬ ಆಸೆ ಇತ್ತು. ಆದರೆ, ಈಗ ಎಲ್ಲ ಆದ್ಯತೆಗಳು ಬದಲಾಗಿವೆ. ಅಪರಾಧ ನ್ಯಾಯದಲ್ಲಿ ಪಿಎಚ್‌ಡಿ ಮಾಡುವ ಆಸೆಯನ್ನು ಅಮಿತ್ ಚೌಧರಿ ಹೊಂದಿದ್ದಾರೆ.

ಈ ಸುದ್ದಿಯನ್ನೂ ಓದಿ: ನಿಠಾರಿ ಸರಣಿ ಕೊಲೆ ಪ್ರಕರಣ: ಕೋಲಿ, ಪಂಧೇರ್‌ ಎದುರಿಸುತ್ತಿದ್ದ ಆರೋಪ ಏನು? ಅವರಿಗೇಕೆ ಗಲ್ಲು ಶಿಕ್ಷೆಯಾಗಿತ್ತು?

Continue Reading

ದೇಶ

Akash Anand: ಯಾರಿವರು ಮಾಯಾವತಿ ಉತ್ತರಾಧಿಕಾರಿ ಆಕಾಶ್ ಆನಂದ್?

Akash Anand: 28 ವರ್ಷದ ಆಕಾಶ್ ಆನಂದ್ ಅವರು ಮಾಯಾವತಿಯ ಸಹೋದರನ ಪುತ್ರರಾಗಿದ್ದಾರೆ. ಲಂಡನ್‌ನಲ್ಲಿ ವ್ಯಾಸಂಗ ಮಾಡಿ, ಎಂಬಿಎ ಪದವಿ ಪಡೆದಿದ್ದಾರೆ.

VISTARANEWS.COM


on

Akash anand is BSP Leader mayawati's political heir
Koo

ನವದೆಹಲಿ: ಉತ್ತರ ಪ್ರದೇಶ (Uttar Pradesh) ಮತ್ತು ಉತ್ತರಾಖಂಡ (Uttarakhand) ಹೊರತುಪಡಿಸಿ ಬಹುಜನ ಸಮಾಜ ಪಕ್ಷದ (BSP) ಉತ್ತರಾಧಿಕಾರಿಯಾಗಿ ಮಾಯಾವತಿ (Mayawati) ತಮ್ಮ ಸೋದರಳಿಯ ಆಕಾಶ್ ಆನಂದ್ (Akash Anand) ಅವರನ್ನು ಭಾನುವಾರ ಘೋಷಿಸಿದ್ದಾರೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಆಕಾಶ್ ಆನಂದ್ (ಮಾಯಾವತಿ ಅವರ ಸೋದರಳಿಯ) ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಘೋಷಿಸಿದ್ದಾರೆ” ಎಂದು ಪಕ್ಷದ ಮುಖಂಡ ಉದಯ್​ವೀರ್ ಸಿಂಗ್ ಸುದ್ದಿ ಸಂಸ್ಥೆ ಎಎನ್ಐಗೆ ಮಾಹಿತಿ ನೀಡಿದ್ದಾರೆ. ಪಕ್ಷದೊಳಗೆ ಆಕಾಶ್ ಆನಂದ್ ಬಗ್ಗೆ ಪರಿಚಯವಿತ್ತು. ಆದರೆ, ದೇಶದ ರಾಜಕಾರಣದಲ್ಲಿ ಅವರು ಹೆಸರು ಅಷ್ಟೇನೂ ಚಿರಪರಿಚಿತವಾಗಿರಲಿಲ್ಲ.

ಆಕಾಶ್ ಆನಂದ್ ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರಾಗಿದ್ದಾರೆ ಮತ್ತು ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಬಿಎಸ್‌ಪಿಯ ಉಸ್ತುವಾರಿಯಾಗಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಅವರು ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಬಿಎಸ್‌ಪಿಗಾಗಿ ವ್ಯಾಪಕವಾಗಿ ಕೆಲಸ ಮಾಡಿದರು. ದಲಿತರು, ಧಾರ್ಮಿಕ ಅಲ್ಪಸಂಖ್ಯಾತರು, ಒಬಿಸಿಗಳು ಮತ್ತು ಬುಡಕಟ್ಟು ಜನಾಂಗದವರ ಸಮಸ್ಯೆಗಳನ್ನು ಒಳಗೊಂಡ ಪಕ್ಷದ ಚುನಾವಣಾ ಪ್ರಚಾರವನ್ನು ತಯಾರಿಸಲು ನಿಯೋಗದ ಭಾಗವಾಗಿ ಮಾಯಾವತಿ ಅವರನ್ನು ನಿಯೋಜಿಸಿದ್ದರು.

2017ರಲ್ಲಿ ರಾಜಕೀಯ ಪ್ರವೇಶಿಸಿದ ಆಕಾಶ್

ಆಕಾಶ್ ಆನಂದ್ ತಮ್ಮ 22ನೇ ವಯಸ್ಸಿನಲ್ಲಿ 2017ರಲ್ಲಿ ರಾಜಕಾರಣವನ್ನು ಪ್ರವೇಶಿಸಿದರು. ಲಂಡನ್‌ನಲ್ಲಿ ಓದಿರುವ ಆಕಾಶ್ ಎಂಬಿಎ ಪದವೀಧರರು. ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ರ್ಯಾಲಿಯಲ್ಲಿ ಮಾಯಾವತಿಯವರೊಂದಿಗೆ ಅವರ ರಾಜಕೀಯ ಚೊಚ್ಚಲ ಪ್ರವೇಶವಾಗಿತ್ತು, ಅಲ್ಲಿ ಅವರು ಅಖಿಲೇಶ್ ಯಾದವ್ ಮತ್ತು ಅಜಿತ್ ಸಿಂಗ್ ಅವರೊಂದಿಗೆ ವೇದಿಕೆ ಹಂಚಿಕೊಂಡರು.

2019ರಲ್ಲಿ ಆಕಾಶ್ ಆನಂದ್ ಉತ್ತರ ಪ್ರದೇಶದ ಆಗ್ರಾದಲ್ಲಿ ತಮ್ಮ ಮೊದಲ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಆಗ ಬಿಎಸ್‌ಪಿ ಮಹಾಘಟಬಂಧನ್‌ನ ಒಂದು ಭಾಗವಾಗಿತ್ತು, ಇದು 2019 ರ ಸಾರ್ವತ್ರಿಕ ಚುನಾವಣೆಯ ಪೂರ್ವದಲ್ಲಿ ಅಜಿತ್ ಸಿಂಗ್ ಅವರ ರಾಷ್ಟ್ರೀಯ ಲೋಕದಳದೊಂದಿಗೆ ಅಖಿಲೇಶ್ ಯಾದವ್ ಮತ್ತು ಮಾಯಾವತಿ ನೇತೃತ್ವದಲ್ಲಿ ರಚನೆಯಾದ ಕಾಂಗ್ರೆಸ್ ಮತ್ತು ಬಿಜೆಪಿ ವಿರೋಧಿ ಬಣವಾಗಿತ್ತು.

ಪಾದಯಾತ್ರೆ ಸಂಘಟಿಸಿದ್ದ ಆಕಾಶ್ ಆನಂದ್

ಸಾಮಾನ್ಯವಾಗಿ ಬಹುಜನ ಸಮಾಜ ಪಾರ್ಟಿಯ ಪಾದಯಾತ್ರೆಗಳಂಥ ರಾಜಕೀಯ ಚಟುವಟಿಕೆಗಳನ್ನು ನಡೆಸುವುದಿಲ್ಲ. ಆದರೆ, ಆಕಾಶ್ ಆನಂದ್ ಅವರು ಈ ಪದ್ಧತಿಯನ್ನು ಮುರಿದು ಇದೇ ಮೊದಲ ಬಾರಿಗೆ, 14 ದಿನಗಳ ಸರ್ವಜನ ಹಿತಾಯ, ಸರ್ವಜನ ಸುಖಾಯ ಸಂಕಲ್ಪ ಯಾತ್ರೆಯನ್ನು ಕೈಗೊಂಡಿದ್ದರು. ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಮತ್ತು ರಾಜಸ್ಥಾನದ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅವರು ಈ ಯಾತ್ರೆ ನಡೆಸಿದ್ದರು.

ಮಾಯಾವತಿ ಅವರು ಆಕಾಶ್ ಆನಂದ್ ಅವರನ್ನು ದೀರ್ಘಾವಧಿಗೆ ಸಿದ್ಧ ಮಾಡುತ್ತಿದ್ದರು. ಮಾಯಾವತಿಯವರ ಸಹೋದರ ಆನಂದ್ ಕುಮಾರ್ ಅವರ ಪುತ್ರರಾಗಿರುವ 28 ವರ್ಷದ ಆಕಾಶ್ ಆನಂದ್ ಬಿಎಸ್ಪಿ ವಲಯಗಳಲ್ಲಿ ಚಿರಪರಿಚಿತ ಹೆಸರು. ಇನ್‌ಸ್ಟಾಗ್ರಾಮದಲ್ಲಿ ಅವರು ತಮ್ಮನ್ನು ತಾವು “ಬಾಬಾ ಸಾಹೇಬ್ ಅವರ ದೃಷ್ಟಿಯ ಯುವ ಬೆಂಬಲಿಗರು. ನಾನು ಶಿಕ್ಷಣ, ಸಬಲೀಕರಣ ಮತ್ತು ಸಮಾನತೆಗಾಗಿ ನಿಲ್ಲುತ್ತೇನೆ” ಎಂದು ಕರೆದುಕೊಂಡಿದ್ದಾರೆ.

ಈ ಸುದ್ದಿಯನ್ನೂ ಓದಿ: Mayawati : ಸೋದರಳಿಯನನ್ನೇ ಉತ್ತರಾಧಿಕಾರಿಯಾಗಿ ಘೋಷಿಸಿದ ಬಿಎಸ್​ಪಿ ನಾಯಕಿ ಮಾಯಾವತಿ

Continue Reading

ದೇಶ

Chhattisgarh CM: ವಿಷ್ಣು ದೇವ ಸಾಯಿ ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿ

Vishnu Deo Sai: 90 ಸ್ಥಾನಗಳಿರುವ ಛತ್ತೀಸ್‌ಗಢ ವಿಧಾನಸಭೆಯಲ್ಲಿ ಬಿಜೆಪಿ 54 ಸ್ಥಾನಗಳನ್ನು ಗೆದ್ದುಕೊಂಡು ಭರ್ಜರಿ ಜಯ ಸಾಧಿಸಿತ್ತು.

VISTARANEWS.COM


on

Vishnu Deo Sai New chief minister of Chhattisgarh
Koo

ನವದೆಹಲಿ: ಛತ್ತೀಸ್‌ಗಢ ನೂತನ ಮುಖ್ಯಮಂತ್ರಿಯಾಗಿ (Chhattisgarh Chief Minister) ಭಾರತೀಯ ಜನತಾ ಪಾರ್ಟಿಯು (BJP Party) ವಿಷ್ಣು ದೇವ ಸಾಯಿ (Vishnu Deo Sai) ಅವರನ್ನು ಆಯ್ಕೆ ಮಾಡಿದೆ. ಈ ಮೂಲಕ ಒಂದು ವಾರದಿಂದ ಉಂಟಾಗಿದ್ದ ಕುತೂಹಲಕ್ಕೆ ತೆರೆ ಬಿದ್ದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿ ಮಾಜಿ ಸಿಎಂ ರಮಣ್ ಸಿಂಗ್, ಬಿಜೆಪಿ ಅಧ್ಯಕ್ಷ ಅರುಣ್ ಸಾವೋ ಸೇರಿದಂತೆ ಹಲವು ನಾಯಕರ ಹೆಸರಿದ್ದವು. ಅಂತಿಮವಾಗಿ ಕೇಂದ್ರ ನಾಯಕತ್ವ ವಿಷ್ಣು ದೇವ ಸಾಯಿ ಅವರನ್ನು ಆಯ್ಕೆ ಮಾಡಿದೆ. ವಿಷ್ಮು ದೇವ ಸಾಯಿ ಅವರು ಆದಿವಾಸಿ ಸಮುದಾಯದ ಮುಖವಾಗಿದ್ದಾರೆ.

ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಈ ವೇಳೆ, ಎಲ್ಲ ಶಾಸಕರ ಅಭಿಪ್ರಾಯವನ್ನು ಪಡೆದು ಅಂತಿಮವಾಗಿ ಹೊಸ ಮುಖ್ಯಮಂತ್ರಿಯನ್ನು ಘೋಷಣೆ ಮಾಡಲಾಗಿದೆ. ವೀಕ್ಷಕರಾಗಿ ಬಿಜೆಪಿ ನಾಯಕರಾದ ಬಿಜೆಪಿ ನಾಯಕರಾದ ಸರ್ಬಾನಂದ್ ಸೋನೋವಾಲ, ಅರ್ಜುನ ಮುಂಡಾ ಆಗಮಿಸಿದ್ದರು.

ವಿಷ್ಣು ದೇವ ಸಾಯಿ ಅವರು ಕುಂಕುರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 87,604 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಬಿಜೆಪಿಯ ಮಾಜಿ ರಾಜ್ಯ ಮುಖ್ಯಸ್ಥರಾದ ದೇವ್ ಸಾಯಿ ಅವರು ಬುಡಕಟ್ಟು ಮುಖವನ್ನು ಆಯ್ಕೆ ಮಾಡಿದರೆ ಮುಖ್ಯಮಂತ್ರಿ ಹುದ್ದೆಗೆ ಪಕ್ಷದ ಮೊದಲ ಆಯ್ಕೆಯಾಗುತ್ತಾರೆ ಎಂದು ಊಹಿಸಲಾಗಿತ್ತು.

ವಿಷ್ಣದೇವ್ ಸಾಯ ಅವರು ಈ ಮೊದಲು ಮೋದಿ ಸಂಪುಟದಲ್ಲ ಕೇಂದ್ರ ಉಕ್ಕು ಇಲಾಖೆಯ ರಾಜ್ಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 16 ನೇ ಲೋಕಸಭೆಯಲ್ಲಿ ಛತ್ತೀಸ್‌ಗಢದ ರಾಯಗಢ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ವಿಷ್ಣು ದೇವ ಸಾಯಿ ಅವರು 2020ರಿಂದ 2022ರವರೆಗೆ ಛತ್ತೀಸ್‌ಗಢ ಬಿಜೆಪಿ ಅಧಯಕ್ಷರೂ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜಸ್ಥಾನ ಮತ್ತು ಛತ್ತೀಸ್‌ಗಢದಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸಲು ಬಿಜೆಪಿ ಯಶಸ್ವಿಯಾಗಿದೆ. ಮಧ್ಯಪ್ರದೇಶವನ್ನು ಭರ್ಜರಿ ಜಯದೊಂದಿಗೆ ಉಳಿಸಿಕೊಂಡಿದೆ. ಇದು ಕೇಸರಿ ಪಕ್ಷವು ಹಿಂದಿಯ ಹೃದಯಭಾಗದಲ್ಲಿ ತನ್ನ ಹಿಡಿತವನ್ನು ಬಿಗಿಗೊಳಿಸುವುದಕ್ಕೆ ಕಾರಣವಾಯಿತು ಮತ್ತು 2024 ರ ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೆ ದೊಡ್ಡ ಉತ್ತೇಜನವನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ.

ಈ ಸುದ್ದಿಯನ್ನೂ ಓದಿ: Revanth Reddy: ರೇವಂತ್ ರೆಡ್ಡಿ ತೆಲಂಗಾಣ ನೂತನ ಮುಖ್ಯಮಂತ್ರಿ; ಕಾಂಗ್ರೆಸ್ ಘೋಷಣೆ

Continue Reading
Advertisement
South Africa vs India 1
ಕ್ರಿಕೆಟ್10 mins ago

IND vs SA: ಭಾರತ-ದಕ್ಷಿಣ ಆಫ್ರಿಕಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ; ಪಂದ್ಯ ವಿಳಂಬ

Shri Ram Janmabhoomi Mandir carvings are wonderful
ದೇಶ15 mins ago

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಅದ್ಭುತ ಕಲಾಕೃತಿಗಳು!

Bus-jeep accident
ಉಡುಪಿ21 mins ago

Road Accident: ಕಾರ್ಕಳ ಬಳಿ ಖಾಸಗಿ ಬಸ್‌-ಜೀಪ್ ನಡುವೆ ಭೀಕರ ಅಪಘಾತ; 12 ಮಂದಿಗೆ ಗಂಭೀರ ಗಾಯ

Killers who killed lawyer for property in kalaburagi
ಕರ್ನಾಟಕ46 mins ago

ವಕೀಲನ ಹತ್ಯೆ ಮಾಡಿ ರಕ್ತದ ಕೈಯಲ್ಲೇ ದಂಪತಿಯಿಂದ ಹಣ ಪಡೆದಿದ್ದ ಸುಪಾರಿ ಕಿಲ್ಲರ್ಸ್‌!

air india
ಉದ್ಯೋಗ47 mins ago

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

man accused of murder wins acquittal after studying law and fighting own Case
ದೇಶ50 mins ago

ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಅಮಾಯಕ, ಲಾ ಓದಿ ತನ್ನ ಕೇಸನ್ನು ತಾನೇ ಗೆದ್ದ!

Kate Cross reveals ‘soft spot for RCB’ after bagging deal
ಕ್ರಿಕೆಟ್51 mins ago

ಚೆನ್ನೈ ತಂಡದ ಕಟ್ಟರ್‌ ಅಭಿಮಾನಿಯನ್ನು ಖರೀದಿ ಮಾಡಿದ ಆರ್​ಸಿಬಿ ಫ್ರಾಂಚೈಸಿ

Mysore people
ಕರ್ನಾಟಕ59 mins ago

Congress Guarantee: ಸಿಎಂ ಸಿದ್ದರಾಮಯ್ಯ ತವರಲ್ಲೇ ಸಿಗದ ಗ್ಯಾರಂಟಿ ಯೋಜನೆಗಳು; ಸ್ಲಂ ನಿವಾಸಿಗಳ ಪರದಾಟ

Winter Food Tips
ಆಹಾರ/ಅಡುಗೆ1 hour ago

Winter Food Tips: ಚಳಿಗಾಲದಲ್ಲಿ ದೇಹವನ್ನು ಬೆಚ್ಚಗಿಡುವ ದೇಸೀ ಸಿಹಿತಿಂಡಿಗಳಿವು!

ipl fans
ಕ್ರಿಕೆಟ್2 hours ago

IPL 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​; ಐಪಿಎಲ್​ ಆರಂಭಕ್ಕೆ ಡೇಟ್​ ಫಿಕ್ಸ್!​

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ4 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ6 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ14 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌