ವಾರಾಣಸಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಖ್ಯಸ್ಥ ಮುಕೇಶ್ ಅಂಬಾನಿ (Mukesh Ambani) ಹಾಗೂ ನೀತಾ ಅಂಬಾನಿ ಪುತ್ರ ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚಂಟ್ (Radhika Merchant) ಅವರ ಮದುವೆಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆಯೇ, ನೀತಾ ಅಂಬಾನಿ (Nita Ambani) ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ (Kashi Vishwanath Temple) ಭೇಟಿ ನೀಡಿದ್ದು, ಮಗನ ಮದುವೆಗೆ ದೇವರನ್ನು ಆಮಂತ್ರಿಸಿದ್ದಾರೆ. ಜುಲೈ 12ರಂದು ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ನೀತಾ ಅಂಬಾನಿ ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಿವನ ಎದುರು ಮಗನ ಮದುವೆಯ ಆಮಂತ್ರಣ ಪತ್ರಿಕೆಯನ್ನು ದೇವರ ಎದುರು ಇರಿಸಿ, ವಿಶೇಷ ಪೂಜೆ ಸಲ್ಲಿಸಿ, ತಾವು ನಂಬುವ ದೇವರನ್ನು ಆಹ್ವಾನಿಸಿದ್ದಾರೆ. ಅಷ್ಟೇ ಅಲ್ಲ, ಗಂಗಾರತಿ ಕಾರ್ಯಕ್ರಮದಲ್ಲೂ ನೀತಾ ಅಂಬಾನಿ ಭಾಗವಹಿಸಿದರು. ಇದಾದ ನಂತರ ಅವರು ಕಾಶಿ ವಿಶ್ವನಾಥ ಕಾರಿಡಾರ್ ಹಾಗೂ ನಮೋ ಘಾಟ್‌ನಲ್ಲಿರುವ ಸ್ವಚ್ಛತೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
#WATCH | Reliance Foundation Founder and Chairperson, Nita Ambani says, "Today I am here with the invitation for the wedding of Anant and Radhika to offer it to the almighty…"
— ANI (@ANI) June 24, 2024
She has arrived in Varanasi and will offer prayers at Kashi Vishwanath temple pic.twitter.com/vo6e4FJMXf
“ನಮ್ಮ ಕುಟುಂಬವು ಕಾಶಿ ವಿಶ್ವನಾಥನನ್ನು ಆರಾಧಿಸುತ್ತದೆ. ನಾನು ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಅವರ ವೆಡ್ಡಿಂಗ್ ಕಾರ್ಡ್ ತೆಗೆದುಕೊಂಡು ಇಲ್ಲಿಗೆ ಬಂದಿದ್ದೇನೆ. ನಾನು ಆರಾಧಿಸುವ ದೇವರನ್ನು ಮಗನ ಮದುವೆಗೆ ಆಹ್ವಾನಿಸಿದ್ದೇನೆ. ಇಲ್ಲಿನ ಅಭಿವೃದ್ಧಿ, ಧಾರ್ಮಿಕ ವಿಧಿವಿಧಾನಗಳನ್ನು ನೋಡಿ ನನಗೆ ಖುಷಿಯಾಯಿತು. ಮಗನ ಮದುವೆ ಬಳಿಕ ಇಲ್ಲಿಗೆ ಮತ್ತೆ ಆಗಮಿಸುತ್ತೇನೆ” ಎಂದು ನೀತಾ ಅಂಬಾನಿ ಅವರು ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್ನಲ್ಲಿ ಮದುವೆ ನಡೆಯಲಿದೆ.
ಜುಲೈ 12 ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.
ಇದನ್ನೂ ಓದಿ: Sonakshi-Zaheer wedding: ಸೋನಾಕ್ಷಿ-ಜಹೀರ್ ಆರತಕ್ಷತೆ ವೇಳೆ ನಟಿ ರೇಖಾ ಕಾಲಿಗೆ ನಮಸ್ಕರಿಸಿದ ಸಿದ್ಧಾರ್ಥ್!