2017ರಲ್ಲಿ ನಡೆದ ತಪ್ಪನ್ನು ಮರೆಯೋಣ ಎಂದ ಜೆಡಿಯು ಮುಖ್ಯಸ್ಥ ನಿತೀಶ್​ ಕುಮಾರ್ - Vistara News

ದೇಶ

2017ರಲ್ಲಿ ನಡೆದ ತಪ್ಪನ್ನು ಮರೆಯೋಣ ಎಂದ ಜೆಡಿಯು ಮುಖ್ಯಸ್ಥ ನಿತೀಶ್​ ಕುಮಾರ್

ನಿತೀಶ್ ಕುಮಾರ್ ಶೀಘ್ರದಲ್ಲಿಯೇ ದೆಹಲಿಗೂ ತೆರಳಿ ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿ ಭೇಟಿ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

VISTARANEWS.COM


on

Nitish Kumar
ತೇಜಸ್ವಿ ಯಾದವ್​ ಮತ್ತು ತೇಜ್​ ಪ್ರತಾಪ್​ ಯಾದವ್​ ಜತೆ ನಿತೀಶ್​ ಕುಮಾರ್​
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪಟನಾ: ಕಳೆದೆರಡು ದಿನಗಳಿಂದ ಅಡ್ಡಗೋಡೆ ಮೇಲೆ ದೀಪವಿಟ್ಟಂಥ ಸನ್ನಿವೇಶ ಇದ್ದ ಬಿಹಾರ ರಾಜಕಾರಣಕ್ಕೀಗ (Bihar Politics) ಒಂದು ಸ್ಪಷ್ಟತೆ ಸಿಕ್ಕಿದೆ. ಇಂದು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿ, ಬಿಜೆಪಿಯೊಂದಿಗಿನ ಮೈತ್ರಿ ಕಡಿತವನ್ನು ಅಧಿಕೃತಗೊಳಿಸಿದ ಬಳಿಕ ನಿತೀಶ್​ ಕುಮಾರ್​ ಸೀದಾ ಹೋಗಿದ್ದು ಆರ್​ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್​ ನಿವಾಸಕ್ಕೆ. ಅಲ್ಲಿ, ಆರ್​ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್​​ರನ್ನು ಭೇಟಿಯಾಗಿ ‘2017ರಲ್ಲಿ ಏನಾಯಿತೋ ಅದೊಂದು ಪ್ರಮಾದ. ಅದನ್ನು ಮರೆತುಬಿಡೋಣ, ಹೊಸ ಅಧ್ಯಾಯ ಪ್ರಾರಂಭ ಮಾಡೋಣ’ ಎಂದು ಹೇಳಿದ್ದಾರೆ. ಅಂದರೆ 2013ರಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಕಳೆದುಕೊಂಡು, ಮಹಾ ಘಟ್​ ಬಂಧನ್​ ಸೇರಿ, ಮತ್ತೆ 2017ರಲ್ಲಿ ಮಹಾ ಘಟ್​ ಬಂಧನ್​ ತೊರೆದು ಬಿಜೆಪಿ ಜತೆ ಮರು ಮೈತ್ರಿ ಮಾಡಿಕೊಂಡಿದ್ದು ತಪ್ಪು ಎಂಬ ಅರ್ಥದಲ್ಲಿ ಮಾತನಾಡಿದ್ದಾರೆ.

ಅಷ್ಟಾದ ಬಳಿಕ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್​ ಒಟ್ಟಾಗಿ ರಾಜ್ಯಪಾಲರನ್ನು ಭೇಟಿಯಾಗಲು ರಾಜಭವನಕ್ಕೆ ತೆರಳಿದ್ದಾರೆ. ಸರ್ಕಾರ ರಚನೆಗೆ ಹಕ್ಕು ಪ್ರತಿಪಾದಿಸಲು ಈ ಇಬ್ಬರೂ ನಾಯಕರು ಹೋಗಿದ್ದು, ನಾಳೆ ಯೇ(ಆಗಸ್ಟ್​ 10)ಯೇ ಜೆಡಿಯು-ಆರ್​ಜೆಡಿ-ಕಾಂಗ್ರೆಸ್​ ಮೈತ್ರಿಯ ಮಹಾ ಘಟ್​ ಬಂಧನ್​ ಸರ್ಕಾರ ರಚನೆಯಾಗಲಿದೆ. ನಿತೀಶ್ ಕುಮಾರ್ ಮತ್ತೊಮ್ಮೆ​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಅವರು ಈಗಾಗಲೇ ಮಹಾ ಘಟ್​ ಬಂಧನ್​​ದ ನಾಯಕರಾಗಿಯೂ ಆಯ್ಕೆಯಾಗಿದ್ದಾರೆ.

ಇನ್ನೊಂದೆರಡು ದಿನದಲ್ಲೇ ನಿತೀಶ್ ಕುಮಾರ್​ ದೆಹಲಿಗೆ ತೆರಳಿ, ಸೋನಿಯಾ ಗಾಂಧಿ ಮತ್ತು ರಾಹುಲ್​ ಗಾಂಧಿಯನ್ನು ಭೇಟಿಯಾಗಲಿದ್ದಾರೆ ಎಂದೂ ಹೇಳಲಾಗಿದೆ. ಬಿಹಾರದಲ್ಲಿ ಜೆಡಿಯು ಮತ್ತು ಆರ್​ಜೆಡಿ ಮೈತ್ರಿಯೊಂದಿಗೆ ಕಾಂಗ್ರೆಸ್ ಕೈಜೋಡಿಸಿದ್ದು, ವಿಧಾನಸಭೆಯ ಸ್ಪೀಕರ್​ ಸ್ಥಾನ ಮತ್ತು ಸಂಪುಟದಲ್ಲಿ ಮೂರ್ನಾಲ್ಕು ಸಚಿವ ಸ್ಥಾನ ನೀಡಬೇಕು ಎಂಬುದು ಆ ಪಕ್ಷದ ಬೇಡಿಕೆ ಎನ್ನಲಾಗಿದೆ. ಇಷ್ಟೆಲ್ಲದರ ಮಧ್ಯೆ ಲೋಕ ಜನಶಕ್ತಿ ಪಾರ್ಟಿ (ರಾಮ್​ ವಿಲಾಸ್​) ನಾಯಕ ಚಿರಾಗ್​ ಪಾಸ್ವಾನ್​ ಅವರು ಪ್ರತಿಕ್ರಿಯೆ ನೀಡಿ, ‘ಬಿಹಾರದಲ್ಲಿ ಶೀಘ್ರದಲ್ಲೇ ಚುನಾವಣೆ ನಡೆಸಬೇಕು’ ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Bihar Politics | ಮತ್ತೆ ಮಗ್ಗಲು ಹೊರಳಿಸಿದ ನಿತೀಶ್​ ಕುಮಾರ್​; ಈಗ್ಯಾಕೆ ಬಿಜೆಪಿ ನಂಟು ಬಿಟ್ಟಿತು ಜೆಡಿಯು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Exit Poll: ಇಂದು (ಜೂ. 1) ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಲೋಕಸಭೆ ಚುನಾವಣೆಯ ಮತದಾನ ಕೊನೆಗೊಳ್ಳಲಿದೆ. ಹೀಗಾಗಿ ಇಂದೇ ಎಕ್ಸಿಟ್‌ ಪೋಲ್‌ ಫಲಿತಾಂಶವೂ ಹೊರಬೀಳಲಿದೆ. ಮತದಾರರು ಯಾವ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬುದನ್ನು ಕೇಳಿ ಅದರ ಆಧಾರದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಲಭಿಸಲಿದೆ ಎಂದು ಅಂದಾಜಿಸಲಾಗುತ್ತದೆ. ಇದನ್ನು ಎಕ್ಸಿಟ್‌ ಪೋಲ್‌ ಎನ್ನಲಾಗುತ್ತದೆ.

VISTARANEWS.COM


on

Exit Poll
Koo

ನವದೆಹಲಿ: ಲೋಕಸಭೆ ಚುನಾವಣೆ(Lok Sabha Election 2024) ಕೊನೆಯ ಹಂತಕ್ಕೆ ಬಂದು ತಲುಪಿದೆ. ಇನ್ನೇನು ಬಾಕಿ ಉಳಿದಿರುವ ಒಂದು ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡರೆ ದೇಶದ ಜನರ ಚಿತ್ತ ಫಲಿತಾಂಶ(Election Result)ದತ್ತ ಹೊರಳುತ್ತದೆ ಫಲಿತಾಂಶಕ್ಕೂ ಮುನ್ನ ಇತ್ತೀಚಿನ ಹಲವು ವರ್ಷಗಳಿಂದ ಜನ ಚುನಾವಣೋತ್ತರ ಸಮೀಕ್ಷೆ(Exit Poll)ಗಳ ಬಗ್ಗೆ ಅತಿ ಹೆಚ್ಚಿನ ಆಸಕ್ತಿ ತೋರುತ್ತಾರೆ. ಇಂದು (ಜೂ. 1) ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಲೋಕಸಭೆ ಚುನಾವಣೆಯ ಮತದಾನ ಕೊನೆಗೊಳ್ಳಲಿದೆ. ಹೀಗಾಗಿ ಇಂದೇ ಎಕ್ಸಿಟ್‌ ಪೋಲ್‌ ಫಲಿತಾಂಶವೂ ಹೊರಬೀಳಲಿದೆ.

ಎಕ್ಸಿಟ್‌ ಪೋಲ್‌ ಎಂದರೇನು?

ಮತದಾರರು ಯಾವ ರಾಜಕೀಯ ಪಕ್ಷವನ್ನು ಬೆಂಬಲಿಸುತ್ತಾರೆ ಎಂಬುದನ್ನು ಕೇಳಿ ಅದರ ಆಧಾರದಲ್ಲಿ ಯಾವ ಪಕ್ಷಕ್ಕೆ ಎಷ್ಟು ಸೀಟು ಲಭಿಸಲಿದೆ ಎಂದು ಅಂದಾಜಿಸಲಾಗುತ್ತದೆ. ಈ ಬಗ್ಗೆ ಎಕ್ಸಿಟ್ ಪೋಲ್ ನಡೆಸುವವರು ಮತದಾರರನ್ನು ಪ್ರಶ್ನಿಸುತ್ತಾರೆ. ಇದನ್ನು ಎಕ್ಸಿಟ್‌ ಪೋಲ್‌ ಎನ್ನಲಾಗುತ್ತದೆ. ಚುನಾವಣೆಯ ಮೊದಲು ನಡೆಸಲಾದ ಅಭಿಪ್ರಾಯ ಸಂಗ್ರಹಕ್ಕಿಂತ ಇದು ಭಿನ್ನ. ಮತದಾರರ ಮೇಲೆ ಪ್ರಭಾವ ಬೀರಿದ ವಿಷಯಗಳು, ವ್ಯಕ್ತಿತ್ವಗಳು ಮತ್ತು ನಿಷ್ಠೆಗಳಂತಹ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣೋತ್ತರ ಸಮೀಕ್ಷೆ ನಡೆಸಲಾಗುತ್ತಿದೆ.

ಜನಪ್ರಿಯ ಎಕ್ಸಿಟ್ ಪೋಲ್‌ಗಳ ವಿವರಗಳು

ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸಲು ವಿವಿಧ ಏಜೆನ್ಸಿಗಳು ವಿವಿಧ ವಿಧಾನಗಳು ಮತ್ತು ಮಾದರಿಗಳನ್ನು ಬಳಸಿಕೊಳ್ಳುತ್ತವೆ. ವೈಯಕ್ತಿಕವಾಗಿ ಅಥವಾ ಆನ್‌ಲೈನ್‌ ಸರ್ವೆ ಮೂಲಕ ಮತದಾರರ ಅಭಿಪ್ರಾಯ ಪಡೆಯಲಾಗುತ್ತದೆ. ಇಂಡಿಯಾ ಟುಡೆ-ಆಕ್ಸಿಸ್, ಸಿಎನ್‌ಎನ್ ನ್ಯೂಸ್ 18-ಐಪಿಎಸ್‌ಒಎಸ್, ಟೈಮ್ಸ್ ನೌ-ವಿಎಂಆರ್, ರಿಪಬ್ಲಿಕ್-ಜನ್ ಕಿ ಬಾತ್, ರಿಪಬ್ಲಿಕ್-ಸಿವೋಟರ್, ನ್ಯೂಸ್‌ಎಕ್ಸ್-ಎನ್‌ಇಟಿಎ ಮತ್ತು ಟುಡೇಸ್ ಚಾಣಕ್ಯ ಮುಂತಾದವು ಎಕ್ಸಿಟ್ ಪೋಲ್‌ಗಳನ್ನು ನಡೆಸುವ ಕೆಲವು ಪ್ರಸಿದ್ಧ ಸಂಸ್ಥೆಗಳು.

ಎಕ್ಸಿಟ್ ಪೋಲ್‌ಗಳ ನಿಯಮಗಳು

ಭಾರತದಲ್ಲಿ ಎಕ್ಸಿಟ್ ಪೋಲ್‌ಗಳನ್ನು ನಿಷೇಧಿಸದಿದ್ದರೂ, ಭಾರತೀಯ ಚುನಾವಣಾ ಆಯೋಗವು (ಇಸಿಐ) ಅವುಗಳ ನಡವಳಿಕೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಾದ ನಿಯಮಗಳನ್ನು ಜಾರಿಗೊಳಿಸಿದೆ. ಎಕ್ಸಿಟ್ ಪೋಲ್‌ಗಳನ್ನು ಯಾವಾಗ ನಡೆಸಬಹುದು ಮತ್ತು ಪ್ರಕಟಿಸಬಹುದು ಎಂಬುದಕ್ಕೆ ಇಸಿಐ ಕೆಲವು ಮಾರ್ಗಸೂಚಿಗಳನ್ನು ನೀಡಿದೆ. ಎಕ್ಸಿಟ್ ಪೋಲ್‌ಗಳಿಗೆ ನಿರ್ದಿಷ್ಟ ಸಮಯದೊಳಗೆ ಮಾತ್ರ ಅನುಮತಿ ನೀಡಲಾಗುತ್ತದೆ. ಮತದಾನ ಮುಗಿದ ನಂತರವೇ ಇದನ್ನು ಪ್ರಕಟಿಸಬೇಕು.

ಮತದಾನದ ಅವಧಿ ಮುಗಿಯುವ ಮೊದಲು ಭಾರತದ ಯಾವುದೇ ಭಾಗದಲ್ಲಿ ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟಿಸಬಾರದು ಅಥವಾ ಪ್ರಸಾರ ಮಾಡಬಾರದು ಎಂದು ECI ಷರತ್ತು ವಿಧಿಸಿದೆ. ಇನ್ನೂ ಮತ ಚಲಾಯಿಸದ ಮತದಾರರ ಮೇಲೆ ಪ್ರಭಾವ ಬೀರುವುದನ್ನು ತಡೆಯಲು ಈ ಈ ನಿಯಮ ಜಾರಿಗೊಳಿಸಲಾಗಿದೆ. ಇದಲ್ಲದೆ ಅಂತಿಮ ಸುತ್ತಿನ ಮತದಾನ ಮುಗಿದ ನಂತರವೇ ಎಕ್ಸಿಟ್‌ ಪೋಲ್‌ ಫಲಿತಾಂಶವನ್ನು ಪ್ರಕಟಿಸಬಹುದು. ಹೆಚ್ಚುವರಿಯಾಗಿ, ನ್ಯಾಯಯುತ ಮತ್ತು ನಿಷ್ಪಕ್ಷಪಾತ ಪ್ರಕ್ರಿಯೆಯನ್ನು ಖಚಿತಪಡಿಸಿಕೊಳ್ಳಲು ಚುನಾವಣೋತ್ತರ ಸಮೀಕ್ಷೆಗಳನ್ನು ನಡೆಸುವ ಎಲ್ಲ ಮಾಧ್ಯಮಗಳು ಚುನಾ ಆಯೋಗದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

ಎಕ್ಸಿಟ್‌ ಪೋಲ್‌ ಆರಂಭವಾಗಿದ್ದು ಯಾವಾಗ?

ಎಕ್ಟಿಟ್‌ ಪೋಲ್‌ಗೆ ಸುಮಾರು 7 ದಶಕಗಳ ಇತಿಹಾಸವಿದೆ. ಎಕ್ಸಿಟ್‌ ಪೋಲ್‌ ಅನ್ನು 1957ರಲ್ಲೇ ಆರಂಭಿಸಲಾಗಿತ್ತು. ಅಂದಿನಿಂದ ಎಕ್ಸಿಟ್‌ ಪೋಲ್‌ನ ವಿಧಾನದಲ್ಲಿ ಅನೇಕ ಬದಲಾವಣೆ ಸಂಭವಿಸಿದೆ. ಅದರಲ್ಲಿಯೂ ಮಾದರಿ ಸಂಗ್ರಹದಲ್ಲಿ ಗಮನಾರ್ಹ ಬದಲಾವಣೆಯಾಗಿದೆ. ಆರಂಭದ ದಿನಗಳಲ್ಲಿ ದೇಶಾದ್ಯಂತ ಸುಮಾರು 20-30 ಸಾವಿರ ಮಂದಿಯಿಂದ ಅಭಿಪ್ರಾಯ ಸಂಗ್ರಹಿಸಲಾಗುತ್ತಿತ್ತು. ಇದೀಗ ಎಕ್ಸಿಟ್‌ ಪೋಲ್‌ ನಡೆಸುವ ಸಂಸ್ಥೆಗಳು ಸುಮಾರು 10 ಲಕ್ಷ ಮಂದಿಯನ್ನು ಸಂಪರ್ಕಿಸುತ್ತವೆ. ಲಕ್ಷಾಂತರ ಮಂದಿಯಿಂದ ಅಭಿಪ್ರಾಯ ಸಂಗ್ರಹಣೆ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಎಂಬಂತಾಗಿದೆ.

ಯಾವಾಗ ಎಕ್ಸಿಟ್‌ ಫೋಲ್‌ ಫಲಿತಾಂಶ ಹೊರ ಬೀಳುತ್ತದೆ?

ಕೊನೆಯ ಹಂತದ ಮತದಾನ ನಡೆಯಲಿರುವ ಜೂ. 1ರಂದು ಎಕ್ಸಿಟ್‌ ಪೋಲ್‌ ನಡೆಯಲಿದೆ. ಸಂಜೆ 6 ಗಂಟೆಗೆ ಮತದಾನ ಪ್ರಕ್ರಿಯೆ ಮುಗಿಯಲಿದ್ದು, 6:30ರ ನಂತರ ಎಕ್ಸಿಟ್‌ ಪೋಲ್‌ ಫಲಿತಾಂಶ ಹೊರ ಬೀಳಲಿದೆ.

ಇದನ್ನೂ ಓದಿ: Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Continue Reading

ಕರ್ನಾಟಕ

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Hum Do Humare Barah:ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ.

VISTARANEWS.COM


on

hum do humare barah
Koo

ವಿಜಯನಗರ: ಮುಸ್ಲಿಂ ಸಮುದಾಯವನ್ನು (muslim community) ಕೇಂದ್ರೀಕರಿಸಿದ ಚಿತ್ರಕತೆ (Screen play) ಹೊಂದಿರುವ ʼಹಮ್‌ ದೋ, ಹಮಾರೇ ಬಾರಹ್ʼ (Hum Do Humare Barah) ಚಿತ್ರ ಬಿಡುಗಡೆಗೆ ಆಕ್ಷೇಪಣೆ ವ್ಯಕ್ತವಾಗಿದೆ. ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ ಮತ್ತು ಮುಸ್ಲಿಂ ಸಮಾಜದಿಂದ ವಿರೋಧ ವ್ಯಕ್ತವಾಗಿದ್ದು, ರಾಜ್ಯದಲ್ಲಿ ಇದರ ಬಿಡುಗಡೆ ತಡೆಯುವಂತೆ ವಿಜಯನಗರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗಿದೆ.

ಯಾವುದೀ ಸಿನಿಮಾ?

ʼಹಮ್‌ ದೋ, ಹಮಾರೇ ಬಾರಹ್ʼ (hum do humare barah) ಚಿತ್ರ ನಿಗದಿಯಂತೆ ಜೂನ್ 7ರಂದು ಬಿಡುಗಡೆಯಾಗಬೇಕಿದೆ. ಆದರೆ ಬಾಲಿವುಡ್ ಹಿರಿಯ ನಟ ಅನ್ನು ಕಪೂರ್ ಅಭಿನಯದ ಈ ಚಿತ್ರದ ಸುತ್ತ ಈಗಲೇ ವಿವಾದದ ಕಾರ್ಮೋಡ ಕವಿದಿದೆ. ಒಂದೆಡೆ, ಚಿತ್ರದ ಪಾತ್ರವರ್ಗ ಮತ್ತು ಸಿಬ್ಬಂದಿಗೆ ಕೊಲೆ ಮತ್ತು ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ. ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ಕೂಡ ಇದರ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಚಿತ್ರದ ಬಿಡುಗಡೆಯನ್ನು ನಿಷೇಧಿಸುವಂತೆ ಎನ್‌ಸಿಪಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ನಟ ಅನ್ನು ಕಪೂರ್ ಮಹಾರಾಷ್ಟ್ರ ಪೊಲೀಸ್ ಮತ್ತು ಗೃಹ ಸಚಿವಾಲಯದಿಂದ ಭದ್ರತೆಯನ್ನು ಕೋರಿದ್ದಾರೆ.

ಕಮಲ್ ಚಂದ್ರ ನಿರ್ದೇಶನದ ಈ ಚಿತ್ರದಲ್ಲಿ ಅನ್ನು ಕಪೂರ್ ಹೊರತಾಗಿ ಪಾರ್ಥ್ ಸಮಾನ್, ಅಶ್ವಿನಿ ಕಲ್ಸೇಕರ್ ಮತ್ತು ಪರಿತೋಷ್ ತಿವಾರಿ ಪ್ರಮುಖ ಪಾತ್ರಗಳಲ್ಲಿದ್ದಾರೆ. ಇತ್ತೀಚೆಗೆ ಈ ಚಿತ್ರವು ಕಾನ್ ಚಲನಚಿತ್ರೋತ್ಸವದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಅಲ್ಲಿ ಅದು ಪ್ರಶಂಸಿಸಲ್ಪಟ್ಟಿದೆ. ಈ ಚಿತ್ರದ ಟೀಸರ್ ನೋಡಿದ ಮೇಲೆ ನಮಗೆ, ನಮ್ಮ ಕಲಾವಿದರಿಗೆ ಹಾಗೂ ನಿರ್ದೇಶಕರಿಗೆ ಜೀವ ಬೆದರಿಕೆ ಬರುತ್ತಿದೆ ಎಂದು ಅನ್ನು ಕಪೂರ್ ಹೇಳಿದ್ದಾರೆ. “ಐಸಿಸ್‌ ಮಾದರಿಯಲ್ಲಿ ಶಿರಚ್ಛೇದ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಲಾಗುತ್ತಿದೆ. ನಮ್ಮ ಚಿತ್ರಕ್ಕೆ ಸಂಬಂಧಿಸಿದ ಎಲ್ಲಾ ಕಲಾವಿದರಿಗೆ ರಕ್ಷಣೆ ನೀಡುವಂತೆ ನಾನು ಮಹಾರಾಷ್ಟ್ರ ಪೊಲೀಸರು, ಗೃಹ ಸಚಿವರು ಮತ್ತು ಗೃಹ ಸಚಿವಾಲಯವನ್ನು ಕೋರುತ್ತೇನೆ” ಎಂದಿದ್ದಾರೆ.

“ನಮಗೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಫೋನ್ ಮೂಲಕ ಬೆದರಿಕೆ ಹಾಕಲಾಗುತ್ತಿದೆ. ಆದರೆ ಭಯಪಡುವ ಅಗತ್ಯವಿಲ್ಲ ಎಂದು ನನ್ನ ಚಿತ್ರತಂಡಕ್ಕೆ ಹೇಳುತ್ತೇನೆ. ಸಿನಿಮಾ ನೋಡದೆ ಅದರ ಬಗ್ಗೆ ಯಾವುದೇ ಅಭಿಪ್ರಾಯ ಮೂಡಿಸಿಕೊಳ್ಳಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ. ನಮ್ಮ ಸಿನಿಮಾ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುತ್ತದೆ. ಇದು ಜನಸಂಖ್ಯೆ ನಿಯಂತ್ರಣದ ಬಗ್ಗೆ ಮಾತನಾಡುತ್ತದೆ. ಯಾವುದೇ ಧರ್ಮವನ್ನು ಅವಮಾನಿಸುವುದು ಅಥವಾ ಮಾನಹಾನಿ ಮಾಡುವುದು ನಮ್ಮ ಉದ್ದೇಶವಲ್ಲ” ​​ಎಂದು ಅನ್ನು ಕಪೂರ್‌ ಹೇಳಿದ್ದಾರೆ.

ಕರ್ನಾಟಕದಲ್ಲೂ ಆಕ್ಷೇಪ

ಹೊಸಪೇಟೆಯ ಅಂಜುಮನ್ ಖಿದ್ಮತೆ ಇಸ್ಲಾಂ ಸಂಘಟನೆ, “ಈ ಚಿತ್ರದ ನಿರ್ದೇಶಕ ಮತ್ತು ನಿರ್ಮಾಪಕರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಶಾಂತಿ ಸೌಹಾರ್ದತೆ ಕದಡುವ ಕೆಲಸ ಈ ಸಿನಿಮಾದಿಂದ ಮಾಡಲಾಗುತ್ತಿದೆ. ಚಿತ್ರೀಕರಣ ಮಾಡಬೇಕು ಅಂದ್ರೆ ಪ್ರಜ್ವಲ್ ರೇವಣ್ಣರವರ ಪೆನ್ ಡ್ರೈವ್ ವಿಷಯ ಮೇಲೆ ಚಿತ್ರ ಮಾಡಲಿ. ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಚಿತ್ರ ಮಾಡಲಿ. ಸಾಮಾನ್ಯ ಜನರು ಪಡುತ್ತಿರುವ ಕಷ್ಟಗಳನ್ನು ಅರ್ಥ ಮಾಡಿಕೊಂಡು ಚಿತ್ರೀಕರಣ ಮಾಡಲಿ. ಧರ್ಮವನ್ನು ಮುಂದಿಟ್ಟು ಚಿತ್ರೀಕರಣ ಮಾಡೋದು ಎಷ್ಟರ ಮಟ್ಟಿಗೆ ಸರಿ? ರಾಜ್ಯ ಸರ್ಕಾರ ಚಿತ್ರ ಬಿಡುಗಡೆಗೆ ತಡೆ ಹಾಕಬೇಕು” ಎಂದು ಒತ್ತಾಯಿಸಿದೆ.‌

ಇದನ್ನೂ ಓದಿ: Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Continue Reading

ವಾಣಿಜ್ಯ

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

LPG Price Cut: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ. ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

VISTARANEWS.COM


on

LPG Price Cut
Koo

ನವದೆಹಲಿ: ಜೂನ್‌ 1ರಿಂದ ಜಾರಿಗೆ ಬರುವಂತೆ ತೈಲ ಮಾರುಕಟ್ಟೆ ಕಂಪನಿಗಳು (OMCs) ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆಯನ್ನು 69.50 ರೂ. ಕಡಿಮೆ ಮಾಡಿವೆ (LPG Price Cut). ಇದರೊಂದಿಗೆ 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ ಬೆಲೆ ಬೆಂಗಳೂರಿನಲ್ಲಿ 69.50 ರೂ. ಕಡಿತಗೊಂಡು 1,756 ರೂ.ಗೆ ತಲುಪಿದೆ.

ಇನ್ನು ದೆಹಲಿಯಲ್ಲಿ ಪರಿಷ್ಕೃತ ದರ 1,676 ರೂ. ಆಗಿದೆ. ಹಿಂದೆ 1745.50 ರೂ. ಆಗಿತ್ತು. ಮುಂಬೈಯಲ್ಲಿಯೂ 69.50 ರೂ. ಇಳಿಕೆಯಾಗಿದ್ದು ಹೊಸ ಬೆಲೆಯನ್ನು 1,629 ರೂ.ಗೆ ನಿಗದಿಪಡಿಸಲಾಗಿದೆ. ಚೆನ್ನೈನಲ್ಲಿ 1,840.5೦ ರೂ., ಕೋಲ್ಕತ್ತಾದಲ್ಲಿ ದರ ಪರಿಷ್ಕರಣೆಯ ಬಳಿಕ 1,787 ರೂ. ಇದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಪ್ರತಿ ತಿಂಗಳ 1ನೇ ತಾರೀಕಿನಂದು ಅಡುಗೆ ಅನಿಲ ಬೆಲೆಗಳನ್ನು ಪರಿಷ್ಕರಿಸುತ್ತವೆ. ಈ ರೀತಿಯ ಏರಿಳಿತಗಳು ಸಾಮಾನ್ಯವಾಗಿ ಇಂಧನ ವೆಚ್ಚಗಳು ಮತ್ತು ಮಾರುಕಟ್ಟೆ ಡೈನಾಮಿಕ್ಸ್ ಬದಲಾವಣೆಗಳಿಂದ ಪ್ರಭಾವಿತವಾಗಿರುತ್ತವೆ.

ವಾಣಿಜ್ಯ ಎಲ್‌ಪಿಜಿ ಬೆಲೆಗಳ ಕಡಿತವು ಈ ಸಿಲಿಂಡರ್‌ಗಳನ್ನೇ ಅವಲಂಬಿಸಿರುವ ವ್ಯವಹಾರಗಳ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ. ಜಾಗತಿಕ ತೈಲ ಮಾರುಕಟ್ಟೆಯ ಪ್ರವೃತ್ತಿಗಳನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರಿಸುವುದಾಗಿ ಮತ್ತು ದೇಶಾದ್ಯಂತದ ಗ್ರಾಹಕರಿಗೆ ನ್ಯಾಯಯುತ ಬೆಲೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಹೊಂದಾಣಿಕೆಗಳನ್ನು ಮಾಡುವುದಾಗಿ ಒಎಂಸಿಗಳು ಭರವಸೆ ನೀಡಿವೆ.

ಸತತ ಇಳಿಕೆ

ಕಳೆದ ತಿಂಗಳು ಕೂಡ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು ಕಡಿತಗೊಳಿಸಲಾಗಿತ್ತು. ಮೇ 1ರಂದು ದರ ಪರಿಷ್ಕರಿಸಿ 19 ರೂ. ಇಳಿಕೆ ಮಾಡಲಾಗಿತ್ತು. ಏಪ್ರಿಲ್‌ನಲ್ಲಿಯೂ 19 ಕೆಜಿಯ ಸಿಲಿಂಡರ್‌ ಬೆಲೆಯನ್ನು 30.50 ರೂ. ಇಳಿಸಲಾಗಿತ್ತು. ತೈಲ ಮಾರುಕಟ್ಟೆ ಕಂಪನಿಗಳು ಹಿಂದಿನ ಘೋಷಣೆಯನ್ನು ಮಾರ್ಚ್ 1ರಂದು ಮಾಡಿದ್ದು, ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಸಿಲಿಂಡರ್‌ಗಳ ದರಗಳನ್ನು ಹೆಚ್ಚಿಸಿದ್ದವು. ಆ ಸಮಯದಲ್ಲಿ, OMCಗಳು ವಾಣಿಜ್ಯ ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ಗ್ಯಾಸ್ ಸಿಲಿಂಡರ್ ಬೆಲೆಗಳಲ್ಲಿ 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಗಳನ್ನು 25 ರೂ. ಹೆಚ್ಚಿಸಿದ್ದವು.

ವಿವಿಧ ನಗರಗಳಲ್ಲಿ ಪರಿಷ್ಕೃತ ದರ

ನಗರಪರಿಷ್ಕೃತ ದರಹಿಂದಿನ ದರ
ಬೆಂಗಳೂರು1,756 ರೂ.1,825.50
ಕೋಲ್ಕತ್ತಾ1,787 ರೂ.1,859 ರೂ.
ಮುಂಬೈ1,629 ರೂ.1,698.50 ರೂ.
ಚೆನ್ನೈ1,840.50 ರೂ.1,911 ರೂ.
ನವದೆಹಲಿ1,676 ರೂ.1745.50 ರೂ.

ಗೃಹಬಳಕೆಯ ಸಿಲಿಂಡರ್‌ ಬೆಲೆ ಯಥಾಸ್ಥಿತಿ

ಈ ಮಧ್ಯೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಇಳಿಕೆ ಅಥವಾ ಏರಿಕೆ ಆಗಿಲ್ಲ. ಬೆಂಗಳೂರಿನಲ್ಲಿ ಗೃಹಬಳಕೆಯ ಸಿಲಿಂಡರ್‌ ಬೆಲೆ 805.50 ರೂ. ಇದೆ.

ಇದನ್ನೂ ಓದಿ: LPG Aadhaar Link: ಎಲ್‌ಪಿಜಿ ಕನೆಕ್ಷನ್‌ಗೆ ಆಧಾರ್ ಲಿಂಕ್ ಮಾಡಿಸುವುದು ಹೇಗೆ? ಇಲ್ಲಿದೆ ಸುಲಭ ವಿಧಾನ

Continue Reading

ದೇಶ

Heat Wave: ಬಿಹಾರದಲ್ಲಿ ಬಿಸಿಲಾಘಾತ; ಶಾಖಕ್ಕೆ 10 ಮತಗಟ್ಟೆ ಸಿಬ್ಬಂದಿ ಸೇರಿ 14 ಮಂದಿ ಬಲಿ

Heat Wave: ಬಿಹಾರದಲ್ಲಿ ಬಿಸಿಗಾಳಿಯ ಶಾಖಕ್ಕೆ ಜನ ತತ್ತರಿಸಿ ಹೋಗಿದ್ದು, 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿ ಸುಮಾರು 14 ಮಂದಿ ಬಿಸಿಲಿನ ಶಾಖಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಸಾವು ನೋವು ಭೋಜ್‌ಪುರದಲ್ಲಿ ನಡೆದಿದ್ದು, ಅಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ 5 ಮಂದಿ ಮೃತಪಟ್ಟಿದ್ದಾರೆ. ರೋಹ್ಟಾಸ್‌ನಲ್ಲಿ ಮೂವರು ಚುನಾವಣಾ ಅಧಿಕಾರಿಗಳು, ಕೈಮೂರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.

VISTARANEWS.COM


on

Heat Wave
Koo

ಪಟನಾ: ದೇಶದಲ್ಲಿ ಕಂಡು ಕೇಳರಿಯದ ಪ್ರಮಾಣದಲ್ಲಿ ಉಷ್ಣಾಂಶ ಹೆಚ್ಚಾಗುತ್ತಿದೆ. ಜತೆಗೆ ಉತ್ತರ ಭಾರತದ ವಿವಿಧ ಭಾಗದಲ್ಲಿ ಬಿಸಿಗಾಳಿ (Heat Wave) ಬೀಸುತ್ತಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಅದರಲ್ಲಿಯೂ ಬಿಹಾರ(Bihar)ದಲ್ಲಿ ಬಿಸಿಗಾಳಿಯ ಶಾಖಕ್ಕೆ ಜನ ತತ್ತರಿಸಿ ಹೋಗಿದ್ದಾರೆ. 24 ಗಂಟೆಗಳಲ್ಲಿ 10 ಮತಗಟ್ಟೆ ಸಿಬ್ಬಂದಿ ಸೇರಿ ಸುಮಾರು 14 ಮಂದಿ ಬಿಸಿಲಿನ ಶಾಖಕ್ಕೆ ಬಲಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಪತ್ತು ನಿರ್ವಹಣಾ ಇಲಾಖೆ ಹೊರಡಿಸಿದ ಪ್ರಕಟಣೆಯಲ್ಲಿ ಈ ವಿವರಗಳನ್ನು ನೀಡಲಾಗಿದೆ. ಹೆಚ್ಚಿನ ಸಾವು ನೋವು ಭೋಜ್‌ಪುರದಲ್ಲಿ ನಡೆದಿದ್ದು, ಅಲ್ಲಿ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿದ್ದ 5 ಮಂದಿ ಮೃತಪಟ್ಟಿದ್ದಾರೆ. ರೋಹ್ಟಾಸ್‌ನಲ್ಲಿ ಮೂವರು ಚುನಾವಣಾ ಅಧಿಕಾರಿಗಳು, ಕೈಮೂರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಜೀವ ಕಳೆದುಕೊಂಡಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

ಜತೆಗೆ ರಾಜ್ಯದ ವಿವಿಧ ಭಾಗಳಲ್ಲಿಯೂ ಅನೇಕರು ಬಿಸಿಲಿನ ಝಳಕ್ಕೆ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದು, ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ. ರಾಜ್ಯದ ಹಲವೆಡೆ ತಾಪಮಾನ 44 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಗುರುವಾರ ಬಕ್ಸಾರ್‌ನಲ್ಲಿ ಅತೀ ಹೆಚ್ಚು 47.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು. ಬಿಸಿ ಗಾಳಿ ವ್ಯಾಪಕವಾಗಿ ಬೀಸುತ್ತಿರುವ ಪರಿಣಾಮ ಎಲ್ಲ ಶಾಲೆಗಳು, ಕೋಚಿಂಗ್‌ ಸೆಂಟರ್‌ಗಳು ಮತ್ತು ಅಂಗನವಾಡಿಗಳಿಗೆ ಜೂನ್‌ 8ರ ತನಕ ರಜೆ ಸಾರಲಾಗಿದೆ.

ಪ್ರತಿಪಕ್ಷ ನಾಯಕ ತೇಜಸ್ವಿ ಯಾದವ್ ಶಾಲೆಗಳಿಗೆ ಶಿಕ್ಷಕರು ಬರಬೇಕು ಎನ್ನುವ ಸರ್ಕಾರದ ಆದೇಶದ ವಿರುದ್ಧ ತಿರುಗಿ ಬಿದ್ದಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ “ಪ್ರತಿಪಕ್ಷಗಳ ಒತ್ತಡದಿಂದಾಗಿ ಸರ್ಕಾರಿ ಶಾಲೆಗಳನ್ನು ಈಗಾಗಲೇ ಮುಚ್ಚಲಾಗಿದೆ. ಈ ತೀವ್ರ ಶಾಖದ ಅಲೆ ಎಲ್ಲೆಡೆ ವ್ಯಾಪಿಸಿರುವಾಗ ಶಿಕ್ಷಕರನ್ನು ಶಾಲೆಗಳಿಗೆ ಬರಲು ಏಕೆ ಹೇಳಲಾಗುತ್ತಿದೆ? ವಿದ್ಯಾರ್ಥಿಗಳು ಸ್ವತಃ ಶಾಲೆಯಲ್ಲಿ ಇಲ್ಲದಿದ್ದಾಗ ಶಿಕ್ಷಕರು ಏನು ಮಾಡುತ್ತಾರೆ? ಈ ಸುಡುವ ಬಿಸಿಲಿನಲ್ಲಿ ಶಿಕ್ಷಕರಿಗೂ ರಜೆ ನೀಡಬೇಕುʼʼ ಎಂದು ಆಗ್ರಹಿಸಿದ್ದಾರೆ. ಲೋಕಸಭಾ ಚುನಾವಣೆ ಕೊನೆಯ ಹಂತದ ಮತದಾನ ಇಂದು (ಶನಿವಾರ) ನಡೆಯುತ್ತಿದ್ದು, ಉಷ್ಣಾಂಶದ ಹೆಚ್ಚಳ ಪರಿಣಾಮ ಬೀರುವ ಸಾಧ್ಯತೆ ಇದೆ.

ಇದನ್ನೂ ಓದಿ: Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

ನಾಗ್ಪುರದಲ್ಲಿ 56 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಾಖಲೆಯ 52.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವ ಎರಡು ದಿನಗಳ ನಂತರ ಮಹಾರಾಷ್ಟ್ರದ ನಾಗ್ಪುರದಲ್ಲಿ ತಾಪಮಾನ 50 ಡಿಗ್ರಿ ಸೆಲ್ಸಿಯಸ್ ಮೀರಿದೆ. ಗುರುವಾರ ಇದು 56 ಡಿಗ್ರಿ ಸೆಲ್ಸಿಯಸ್ ತಲುಪಿದೆ. ಇದು ಸಾರ್ವಕಾಲಿಕ ದಾಖಲೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ಉತ್ತರ ಅಂಬಾಜಾರಿ ರಸ್ತೆಯ ರಾಮದಾಸ್​ಪೇಟ್​​ನ ಪಿಡಿಕೆವಿಯಲ್ಲಿರುವ 24 ಹೆಕ್ಟೇರ್ ತೆರೆದ ಕೃಷಿ ಕ್ಷೇತ್ರದಲ್ಲಿರುವ ಹವಾಮಾನ ಕೇಂದ್ರದಲ್ಲಿ 56 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಸೋನೆಗಾಂವ್​ನ ಪ್ರಾದೇಶಿಕ ಹವಾಮಾನ ಕೇಂದ್ರದಲ್ಲಿ 54 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಿಸಿದೆ. ವಾರ್ಧಾ ರಸ್ತೆಯ ಖಾಪ್ರಿಯಲ್ಲಿರುವ ಸೆಂಟ್ರಲ್ ಇನ್ಸ್​ಟಿಟ್ಯೂಟ್​ ಆಫ್ ಕಾಟನ್ ರಿಸರ್ಚ್ ಪ್ರದೇಶದ ಹೊಲಗಳಲ್ಲಿನ ಅಂಗನವಾಡಿ ಕೇಂದ್ರವು 44 ಡಿಗ್ರಿ ಸೆಲ್ಸಿಯಸ್ ಮತ್ತು ರಾಮ್ಟೆಕ್ ಎಡಬ್ಲ್ಯೂಎಸ್ 44 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡು ಬಂದಿದೆ.

Continue Reading
Advertisement
IND vs BAN
ಕ್ರೀಡೆ58 seconds ago

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

Exit Poll
Lok Sabha Election 202413 mins ago

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್17 mins ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ20 mins ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ36 mins ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ44 mins ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ44 mins ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ46 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ54 mins ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ60 mins ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌