NMML Renamed: 'ನೆಹರು' ಬದಲಿಗೆ 'ಪಿಎಂ'! ಕಾಂಗ್ರೆಸ್-ಬಿಜೆಪಿ ಮಧ್ಯೆ 'P' ಜಟಾಪಟಿ! - Vistara News

ದೇಶ

NMML Renamed: ‘ನೆಹರು’ ಬದಲಿಗೆ ‘ಪಿಎಂ’! ಕಾಂಗ್ರೆಸ್-ಬಿಜೆಪಿ ಮಧ್ಯೆ ‘P’ ಜಟಾಪಟಿ!

NMML Renamed: ನೆಹರು ಸ್ಮಾರಕ ವಸ್ತುಸಂಗ್ರಾಹಾಲಯ ಮತ್ತು ಗ್ರಂಥಾಲಯ ಹೆಸರನ್ನು ಪಿಎಂ ಸ್ಮಾರಕ ವಸ್ತುಸಂಗ್ರಾಲಯ ಮತ್ತು ಗ್ರಂಥಾಲಯ ಎಂದು ಆಗಸ್ಟ್ 15ರಂದು ಅಧಿಕೃತವಾಗಿ ಮರುನಾಮಕರಣ ಮಾಡಲಾಗಿದೆ.

VISTARANEWS.COM


on

neh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನೆಹರು ಸ್ಮಾರಕ ವಸ್ತುಸಂಗ್ರಾಹಲಯ ಮತ್ತು ಗ್ರಂಥಾಲಯ (Nehru Memorial Museum and Library – NMML)ವನ್ನು ಅಧಿಕೃತವಾಗಿ ಪಿಎಂ ಸ್ಮಾರಕ ವಸ್ತುಸಂಗ್ರಾಹಲಯ ಮತ್ತು ಗ್ರಂಥಾಲಯ ಎಂದು ಮರುನಾಮಕರಣ ಮಾಡಲಾಗಿದೆ. ಈ ಮಧ್ಯೆ, ಕಾಂಗ್ರೆಸ್ (Congress Party) ಮತ್ತು ಬಿಜೆಪಿಗಳೆರಡೂ (Bhartiya Janata Party -BJP) ಈ ಮರುನಾಮಕರಣಕ್ಕೆ ಸಂಬಂಧಿಸಿದಂತೆ ಕೆಸರೆರಚಾಟದಲ್ಲಿ ತೊಡಗಿವೆ. ದೇಶದ ಮೊದಲ ಪ್ರಧಾನಿ ಪಂಡಿತ ಜವಾಹರ್ ಲಾಲ್ ನೆಹರು (Pandit Jawahar Lal Nehru) ಅವರು ಪರಂಪರೆಯನ್ನು ಅಳಿಸುವ ಹಾಕುವ ದುರುದ್ದೇಶ ಈ ಮರುನಾಮಕರಣದ ಹಿಂದೆ ಇದೆ ಎಂದು ಕಾಂಗ್ರೆಸ್ ಉಗ್ರವಾಗಿ ಟೀಕಿಸಿದೆ. ಬಿಜೆಪಿ ಕೂಡ ಪ್ರತಿ ದಾಳಿ ನಡೆಸಿ, ವಂಶಪಾರಂಪರ್ಯಕ್ಕೆ (Parivarvad) ಅವಕಾಶ ಎಂದು ಹೇಳಿದೆ(NMML Renamed).

ಕೇಂದ್ರ ದಿಲ್ಲಿಯ ತೀನ್ ಮೂರ್ತಿ ಮಾರ್ಗದಲ್ಲಿ ನೆಹರು ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ ಇದ್ದು, ಆಗಸ್ಟ್ 15ರಂದು ಅಧಿಕೃತವಾಗಿ ಈ ಸಂಸ್ಥೆಯ ಹೆಸರನ್ನು ಪಿಎಂ ಮೆಮೋರಿಯಲ್ ಮ್ಯೂಸಿಯಂ ಮತ್ತು ಲೈಬ್ರರಿ ಎಂದು ಮರುನಾಮಕರಣ ಮಾಡಲಾಗಿದೆ. ಈ ಕುರಿತು ಕಳೆದ ಜೂನ್‌ ತಿಂಗಳಲ್ಲಿ ಕೇಂದ್ರ ಸರ್ಕಾರ ನಿರ್ಧಾ ಕೈಗೊಂಡಿತ್ತು.

ಬ್ರಿಟಿಷ್ ಆಡಳಿತದ ವೇಳೆ ಫ್ಲ್ಯಾಗ್‌ಸ್ಟಾಫ್ ಹೌಸ್ ಎಂದು ಕರೆಯಲಾಗುತ್ತಿದ್ದ ಈ ಕಟ್ಟಡವನ್ನು ಬ್ರಿಟಿಷ್ ಪಡೆಗಳ ಮುಖ್ಯ ದಂಡನಾಯಕನ ವಾಸಸ್ಥಾನವಾಗಿಯೂ ಬಳಸಲಾಗುತ್ತಿತ್ತು. ಸ್ವತಂತ್ರ ದೊರೆತ ಬಳಿಕ ಮೊದಲ ಪ್ರಧಾನಿ ಪಂಡಿತ ಜವಾಹರ್ ಲಾಲ್ ನೆಹರು ಅವರು ಈ ಕಟ್ಟಡವನ್ನು ತಮ್ಮ ವಾಸಸ್ಥಾನವನ್ನಾಗಿ ಮಾಡಿಕೊಂಡರು. ಅವರ ನಿಧನದ ಬಳಿಕ, ಅವರು ವಾಸವಿದ್ದ ಈ ಕಟ್ಟಡವನ್ನು ಅವರ ಹೆಸರಿನಲ್ಲಿ ಮ್ಯೂಸಿಯಂ ಮತ್ತು ಗ್ರಂಥಾಲಯವನ್ನಾಗಿ ಮಾಡಲಾಯಿತು.

ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗ, ಜವಾಹರಲಾಲ್ ನೆಹರೂ ಅವರಿಂದ ಪ್ರಾರಂಭಿಸಿ ಪ್ರಧಾನಿ ಮೋದಿಯವರವರೆಗಿನ ಎಲ್ಲಾ ಪ್ರಧಾನ ಮಂತ್ರಿಗಳ ದೀರ್ಘಕಾಲೀನ ಸಾಧನೆಗಳಿಗಾಗಿ ಪ್ರಧಾನಮಂತ್ರಿ ಸಂಗ್ರಹಾಲಯವನ್ನು ಆವರಣದಲ್ಲಿ ಸ್ಥಾಪಿಸಲಾಯಿತು. ಈ ವಸ್ತುಸಂಗ್ರಹಾಲಯವನ್ನು ಕಳೆದ ವರ್ಷ ಉದ್ಘಾಟಿಸಲಾಯಿತು.

ಸರ್ಕಾರದ ವಿರುದ್ಧ ಮುಗಿಬಿದ್ದ ಕಾಂಗ್ರೆಸ್

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಬಗ್ಗೆ ಹಾಲಿ ಪ್ರಧಾನಿ ಮೋದಿಗೆ ಅಭದ್ರತೆ ಕಾಡುತ್ತಿದೆ. ಅವರು ನೆಹರು ಮತ್ತು ನೆಹರು ಪರಂಪರೆಯನ್ನು ನಿರಾಕರಿಸುವ, ವಿರೂಪಗೊಳಿಸುವ, ಮಾನಹಾನಿ ಮಾಡುವ ಮತ್ತು ನಾಶಮಾಡುವ ಏಕೈಕ ಅಜೆಂಡಾವನ್ನು ಹೊಂದಿದ್ದಾರೆ. ಅವರು NMML ಹೆಸರಿನಲ್ಲಿ N ತೆಗೆದು ಅದರ ಬದಲಿಗೆ P ಸೇರಿದ್ದಾರೆ. ನಿಜವಾಗಿಯೂ ಆ P ಅವರ ಸಣ್ಣತನ ಮತ್ತು ಅ ಅನ್ನು ಹಾಕಿದ್ದಾರೆ. ಆ P ನಿಜವಾಗಿಯೂ ಮೋದಿಯ ಸಣ್ಣತನ ಕೊರಗನ್ನು ಸೂಚಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಟ್ವೀಟ್ ಮಾಡಿದ್ದಾರೆ.

ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ನೆಹರೂ ಅವರ ದೈತ್ಯ ಕೊಡುಗೆಗಳನ್ನು ಮತ್ತು ಭಾರತೀಯ ರಾಷ್ಟ್ರ-ರಾಜ್ಯದ ಪ್ರಜಾಸತ್ತಾತ್ಮಕ, ಜಾತ್ಯತೀತ, ವೈಜ್ಞಾನಿಕ ಮತ್ತು ಉದಾರವಾದಿ ಅಡಿಪಾಯಗಳನ್ನು ನಿರ್ಮಿಸುವಲ್ಲಿ ಅವರ ಅತ್ಯುನ್ನತ ಸಾಧನೆಗಳನ್ನು ಅವರು(ಮೋದಿ) ಎಂದಿಗೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಈ ಎಲ್ಲ ಸಂಗತಿಗಳನ್ನು ಮೋದಿ ಹಾಗೂ ಅವರ ಹಿಂಬಾಲಕರ ಆಕ್ರಮಣಕ್ಕೆ ಒಳಗಾಗುತ್ತಿವೆ ಎಂದು ಜೈರಾಮ್ ರಮೇಶ್ ಅವರು ಹೇಳಿದ್ದಾರೆ. ಜೈರಾಮ್ ರಮೇಶ್ ಅವರ ಅಭಿಪ್ರಾಯವನ್ನು ಇಂಡಿಯಾ ಕೂಟದ ಎಲ್ಲ ಪಕ್ಷಗಳು ಬೆಂಬಲಿಸಿವೆ.

ಈ ಸುದ್ದಿಯನ್ನೂ ಓದಿ: ಮತ್ತೊಂದು ಸರ್ಕಾರಿ ಸಂಸ್ಥೆಯಿಂದ ‘ನೆಹರು’ ಹೆಸರು ಕೈ ಬಿಟ್ಟ ‘ಮೋದಿ’ ಸರ್ಕಾರ!

ತಿರುಗೇಟು ನೀಡಿದ ಬಿಜೆಪಿ ವಕ್ತಾರ

ಕಾಂಗ್ರೆಸ್ ಪಕ್ಷದ P ಟೀಕೆಗೆ ತಿರುಗೇಟು ನೀಡಿರುವ ಬಿಜೆಪಿ ಪರಿವಾರವಾದದ ಟೀಕೆ ಮಾಡಿದೆ. ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲ್ ಅವರು ಟ್ವಿಟರ್‌ನಲ್ಲಿ ವಿಡಿಯೋ ಸಂದೇಶವೊಂದನ್ನು ಪೋಸ್ಟ್ ಮಾಡಿ, P ಎಂದರೆ ಪರಿವಾರ (ಕುಟುಂಬ) ಮಾತ್ರವೇ ಹೊರತು ಜನರಲ್ಲ ಎಂದು ಹೇಳಿದ್ದಾರೆ.

ಮೊದಲ ಪ್ರಧಾನಿಯಿಂದ ಈಗಿನ ಪ್ರಧಾನಿಯವರೆಗೆ, ಲಾಲ್ ಬಹದ್ದೂರ್ ಶಾಸ್ತ್ರಿಯಿಂದ ಪಿವಿ ನರಸಿಂಹರಾವ್, ಎಚ್‌ಡಿ ದೇವೇಗೌಡರಿಂದ ಇಂದರ್‌ಕುಮಾರ್ ಗುಜ್ರಾಲ್‌ವರೆಗೆ ಈ ದೇಶದ ಎಲ್ಲಾ ಪ್ರಧಾನಿಗಳ ಸಾಧನೆಗಳನ್ನು ಈ ವಸ್ತು ಸಂಗ್ರಾಲಯವು ಪ್ರದರ್ಶಿಸುತ್ತದೆ. ಆದರೆ, ಕಾಂಗ್ರೆಸ್ ಪಕ್ಷವು ವಿರೋಧಿಸುತ್ತಿದೆ. ಒಂದು ಕುಟುಂಬದ ಒಬ್ಬ ಪ್ರಧಾನಿ ಹೆಸರನ್ನು ಮಾತ್ರ ಹೆಸರಿಸಬೇಕೆಂದು ಹೇಳುತ್ತಿದೆ ಎಂದು ಶೆಹಜಾದ್ ಪೂನಾವಾಲ ಹೇಳಿದ್ದಾರೆ.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Bomb Threat: ನಿಲ್ಲುತ್ತಲೇ ಇಲ್ಲ ಹುಸಿಬಾಂಬ್‌ ಕರೆ ಹಾವಳಿ; ಮತ್ತೆ ಬೆದರಿಕೆ-ವಿಮಾನ ತುರ್ತು ಭೂಸ್ಪರ್ಶ

Bomb Threat:ಶುಕ್ರವಾರ ಬೆಳಗ್ಗೆ 12:10ಗೆ ದಿಲ್ಲಿ ವಿಮಾನ ನಿಲ್ದಾಣದಿಂದ ವಿಸ್ತಾರ UK611 ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿತ್ತು. ಈ ಕರೆ ಶ್ರೀನಗರದ ಏರ್‌ ಟ್ರಾಫಿಕ್‌ ಕಂಟ್ರೋಲ್‌(ATC)ಗೆ ಬಂದಿದ್ದ ಹಿನ್ನೆಲೆ ತಕ್ಷಣ ಆ ವಿಮಾನವನ್ನು ಪ್ರತ್ಯೇಕವಾಗಿ ಲ್ಯಾಂಡಿಂಗ್‌ ಮಾಡಿಸಲಾಗಿತ್ತು. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಸಲಾಗಿದ್ದು, ಏರ್‌ಪೋರ್ಟ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬಾಂಬ್‌ ನಿಷ್ಕ್ರೀಯ ದಳವೂ ದೌಡಾಯಿಸಿ ಪರಿಶೀಲನೆ ನಡೆಸಿದೆ. ಯಾವುದೇ ಬಾಂಬ್, ಸ್ಫೋಟಕ ವಸ್ತುಗಳು ಪರಿಶೀಲನೆ ವೇಳೆ ಪತ್ತೆ ಆಗಿಲ್ಲ.

VISTARANEWS.COM


on

Bomb threat
Koo

ನವದೆಹಲಿ: ದೇಶದಲ್ಲಿ ಹುಸಿಬಾಂಬ್‌ ಬೆದರಿಕೆ ಕರೆಗಳು ಆಗಾಗ ಬರುತ್ತಿವೆ. ಶಾಲೆ, ವಿಮಾನಗಳಿಗೆ ಎರಡು ದಿನಕ್ಕೊಂದರಂತೆ ಬಾಂಬ್‌ ಬೆದರಿಕೆ ಕರೆಗಳ(Bomb Threat) ಬರುತ್ತಲೇ ಇವೆ. ಇದೀಗ ಮತ್ತೆ ಅಂತಹ ಕರೆ ಬಂದಿದ್ದು, ದಿಲ್ಲಿಯಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದ ವಿಸ್ತಾರ ವಿಮಾನ(Vistara Flight)ಕ್ಕೆ ಹುಸಿಬಾಂಬ್‌ ಕರೆ ಬಂದ ಹಿನ್ನೆಲೆ ತುರ್ತು ಲ್ಯಾಂಡಿಂಗ್‌(Emergency Landing) ಮಾಡಲಾಗಿದೆ. ಒಂದು ಪುಟ್ಟ ಮಗು ಸೇರಿದಂತೆ ಬರೋಬ್ಬರಿ 177 ಪ್ರಯಾಣಿಕರು ವಿಮಾನದಲ್ಲಿದ್ದರು ಎನ್ನಲಾಗಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ.

ಶುಕ್ರವಾರ ಬೆಳಗ್ಗೆ 12:10ಗೆ ದಿಲ್ಲಿ ವಿಮಾನ ನಿಲ್ದಾಣದಿಂದ ವಿಸ್ತಾರ UK611 ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿತ್ತು. ಈ ಕರೆ ಶ್ರೀನಗರದ ಏರ್‌ ಟ್ರಾಫಿಕ್‌ ಕಂಟ್ರೋಲ್‌(ATC)ಗೆ ಬಂದಿದ್ದ ಹಿನ್ನೆಲೆ ತಕ್ಷಣ ಆ ವಿಮಾನವನ್ನು ಪ್ರತ್ಯೇಕವಾಗಿ ಲ್ಯಾಂಡಿಂಗ್‌ ಮಾಡಿಸಲಾಗಿತ್ತು. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಸಲಾಗಿದ್ದು, ಏರ್‌ಪೋರ್ಟ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬಾಂಬ್‌ ನಿಷ್ಕ್ರೀಯ ದಳವೂ ದೌಡಾಯಿಸಿ ಪರಿಶೀಲನೆ ನಡೆಸಿದೆ. ಯಾವುದೇ ಬಾಂಬ್, ಸ್ಫೋಟಕ ವಸ್ತುಗಳು ಪರಿಶೀಲನೆ ವೇಳೆ ಪತ್ತೆ ಆಗಿಲ್ಲ.

ನಿನ್ನೆಯಷ್ಟೇ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ಬಾಂಬ್‌ ಬೆದರಿಕೆ ಸಂದೇಶ ಬಂದಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅನಾಮಿಕ ವ್ಯಕ್ತಿಯೊಬ್ಬ ಏರ್‌ಪೋರ್ಟ್‌ನ ಬಾತ್ ರೂಮ್‌ನ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆದ ಹಿನ್ನೆಲೆಯಲ್ಲಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಏರ್‌ಪೋರ್ಟ್‌ನ ಅಲ್ಪಾ 2ರ ಆಡಳಿತ ಕಚೇರಿಯ ಬಾತ್ ರೂಮ್‌ನಲ್ಲಿ ಅಪರಿಚಿತ ವ್ಯಕ್ತಿ ಬೆದರಿಕೆ ಸಂದೇಶ ಬರೆದಿದ್ದ. ತಕ್ಷಣ ಶ್ವಾನದಳ, ಬಾಂಬ್ ಸ್ಕ್ವಾಡ್‌ನೊಂದಿಗೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಹೀಗಾಗಿ ಇದು ಹುಸಿ ಸಂದೇಶ ಅಂತ ಗೊತ್ತಾಗಿ ಅಧಿಕಾರಿಗಳು ನಿಟ್ಟುಸಿರು ಬಿಟ್ಟಿದ್ದಾರೆ.

ಇತ್ತೀಚೆಗೆ ಪದೇಪದೆ ಕೆಲ ಕಿಡಿಗೇಡಿಗಳು ಬೆದರಿಕೆ ಸಂದೇಶ ಕಳುಹಿಸುತ್ತಿರುವುದು ಹೆಚ್ಚಾಗುತ್ತಿದೆ. ಇಂತಹ ಪ್ರಕರಣಗಳನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ದಿಲ್ಲಿಯಿಂದ ವಾರಣಾಸಿಗೆ ಪ್ರಯಾಣಿಸಬೇಕಾಗಿದ್ದ ಇಂಡಿಗೋ ಏರ್‌ಲೈನ್ಸ್‌ನ 6E2211 ವಿಮಾನಕ್ಕೆ ಮಂಗಳವಾರ ಬೆಳಗ್ಗೆ ಬಾಂಬ್‌ ಬೆದರಿಕೆ ಕರೆ ಬಂದಿತ್ತು. ಇನ್ನೇನು ಟೇಕ್‌ ಆಫ್‌ ಆಗಬೇಕಾಗಿದ್ದ ವಿಮಾನವನ್ನು ಪ್ರತ್ಯೇಕ ರನ್‌ ವೇ ಒಯ್ದು ಭದ್ರತಾ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಎಲ್ಲ ಪ್ರಯಾಣಿಕರನ್ನು ಎಮರ್ಜೆನ್ಸಿ ಎಕ್ಸಿಟ್‌ ಬಾಗಿಲಿನಿಂದ ಸುರಕ್ಷಿತವಾಗಿ ಹೊರಗೆ ಕರೆದೊಯ್ಯಲಾಗಿದೆ. ಇನ್ನು ಬೆಳಗ್ಗೆ 5:35ಕ್ಕೆ ಹೊರಡಬೇಕಾಗಿದ್ದ ವಿಮಾನ ಇದಾಗಿತ್ತು ಎನ್ನಲಾಗಿದೆ.

ಮುಂಬೈನ ಮುಂಬೈನಲ್ಲಿರುವ ತಾಜ್‌ ಹೋಟೆಲ್‌ ಹಾಗೂ ಛತ್ರಪತಿ ಶಿವಾಜಿ ಮಹಾರಾಜ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣವನ್ನು ಸ್ಫೋಟಿಸುವ ಕುರಿತು ಮುಂಬೈ ಪೊಲೀಸರಿಗೆ ಕೆಲವು ದಿನಗಳ ಹಿಂದೆ ಬೆದರಿಕೆ ಕರೆ ಬಂದಿತ್ತು. ಹಾಗಾಗಿ, ಮುಂಬೈ ತಾಜ್‌ ಹೋಟೆಲ್‌ ಹಾಗೂ ವಿಮಾನ ನಿಲ್ದಾಣದ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:Contractor Self Harming: ಕಂಟ್ರಾಕ್ಟರ್‌ ಆತ್ಮಹತ್ಯೆ ಇಲಾಖಾ ತನಿಖೆಗೆ ಸಚಿವ ಪ್ರಿಯಾಂಕ್‌ ಖರ್ಗೆ ಆದೇಶ

Continue Reading

ದೇಶ

Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

Heat Wave: ಬಿಸಿ ಗಾಳಿ ಶಾಖಕ್ಕೆ ಬಸವಳಿದು ಬೆಂಡಾಗಿರುವ ರಾಜಸ್ಥಾನದಲ್ಲಿ ಜನರ ಸ್ಥಿತಿ ಅಯೋಮಯವಾಗಿದೆ. ಇದೇ ಕಾರಣದಿಂದಾಗಿ ದೇಶಾದ್ಯಂತ ತುರ್ತುಪರಿಸ್ಥಿತಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್‌ ಒತ್ತಾಯಿಸಿದೆ. ಜನರನ್ನು ಬಿಸಿಲ ಬೇಗೆಯಿಂದ ಕಾಪಾಡಲು ಸರ್ಕಾರ ಸೂಕ್ತ ಕ್ರಮ ಜರುಗಿಸುವಲ್ಲಿ ವಿಫಲವಾಗಿದೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ.

VISTARANEWS.COM


on

Heat Wave
Koo

ನವದೆಹಲಿ: ಉತ್ತರಭಾರತದ ವಿವಿಧ ಭಾಗದಲ್ಲಿ ಬಿಸಿಗಾಳಿ(Heat Wave) ಸಮಸ್ಯೆ ಮುಂದುವರೆದಿದ್ದು, ಸುಮಾರು 54 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ದೆಹಲಿ, ಪಂಜಾಬ್‌ ಮತ್ತು ಒಡಿಶಾದಲ್ಲಿ ಕಳೆದ ಕೆಲವು ದಿನಗಳಲ್ಲಿ ವಾತಾವರಣದ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ ಆಗಿದೆ. ಒಡಿಶಾದಲ್ಲಿ ಕಳೆದ 24 ಗಂಟೆಗಳಲ್ಲಿ 12 ಜನ ಬಲಿಯಾಗಿದ್ದರೆ, ರಾಜಸ್ಥಾನದಲ್ಲಿ ತುರ್ತುಪರಿಸ್ಥಿತಿ(Emergency) ಘೋಷಿಸಲು ಕೇಂದ್ರ ಸರ್ಕಾರ(Central Government)ಕ್ಕೆ ಹೈಕೋರ್ಟ್‌ ಆಗ್ರಹಿಸಿದೆ.

ಜಾರ್ಖಂಡ್‌ನ ಪಲಮು ಜಿಲ್ಲೆಯಲ್ಲಿ 47.4 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಮಹಿಳೆ ಸೇರಿದಂತೆ ನಾಲ್ಕು ಜನರು ಬಿಸಿಗಾಳಿ ಬಲಿಯಾಗಿದ್ದಾರೆ. ಇದರ ನಡುವೆ ನೀರಿನ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆ ದಿಲ್ಲಿ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದು, ನೆರೆ ರಾಜ್ಯ ಹರ್ಯಾಣದಿಂದ ಒಂದು ತಿಂಗಳ ಮಟ್ಟಿ ಹೆಚ್ಚುವರಿ ನೀರು ಬಿಡಲು ಆದೇಶಿಸುವಂತೆ ಆಗ್ರಹಿಸಿದೆ

ತುರ್ತು ಪರಿಸ್ಥಿತಿ ಘೋಷಣೆಗೆ ಒತ್ತಾಯ

ಬಿಸಿ ಗಾಳಿ ಶಾಖಕ್ಕೆ ಬಸವಳಿದು ಬೆಂಡಾಗಿರುವ ರಾಜಸ್ಥಾನದಲ್ಲಿ ಜನರ ಸ್ಥಿತಿ ಅಯೋಮಯವಾಗಿದೆ. ಇದೇ ಕಾರಣದಿಂದಾಗಿ ದೇಶಾದ್ಯಂತ ತುರ್ತುಪರಿಸ್ಥಿತಿ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್‌ ಒತ್ತಾಯಿಸಿದೆ. ಜನರನ್ನು ಬಿಸಿಲ ಬೇಗೆಯಿಂದ ಕಾಪಾಡಲು ಸರ್ಕಾರ ಸೂಕ್ತ ಕ್ರಮ ಜರುಗಿಸುವಲ್ಲಿ ವಿಫಲವಾಗಿದೆ ಎಂದು ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಮ್ಮಲ್ಲಿ ಪ್ಲ್ಯಾನ್‌ ಬಿ ಕೂಡ ಇಲ್ಲ. ಈಗಲೇ ಸೂಕ್ತ ಕ್ರಮ ಜರುಗಿಸದೇ ಇದ್ದಲ್ಲಿ ನಾವು ಮುಂದಿನ ದಿನಗಳಲ್ಲಿ ಇದಕ್ಕಿಂತಲೂ ಭೀಕರವಾದ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೋರ್ಟ್‌ ಹೇಳಿದೆ. ಅಲ್ಲದೇ ಸಂತ್ರಸ್ತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಆದೇಶಿಸಿದೆ.

ಹವಾಮಾನ ಇಲಾಖೆ ಹೇಳೋದೇನು?

ಭಾರತೀಯ ಹವಾಮಾನ ಇಲಾಖೆ(IMD) ಉತ್ತರ ಭಾರತದಲ್ಲಿ ಉಷ್ಣಾಂಶ ಏರಿಕೆ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ಕಳೆದ 24 ಗಂಟೆಗಳಲ್ಲಿ ಬಿಹಾರ, ಜಾರ್ಖಂಡ್, ಒಡಿಶಾದಲ್ಲಿ ಸಾಕಷ್ಟು ಸಾವು ನೋವುಗಳು ಸಂಭವಿಸಿವೆ. ನಾಳೆಯಿಂದ ಈ ಇಡೀ ಪ್ರದೇಶದಿಂದ ಕ್ರಮೇಣ ಶಾಖದ ಅಲೆಗಳು ಕಡಿಮೆಯಾಗುತ್ತವೆ ಎಂದು ನಾವು ನಿರೀಕ್ಷಿಸುತ್ತೇವೆ. ಇದರ ಆಧಾರದ ಮೇಲೆ, ಈ ಎಲ್ಲಾ ರಾಜ್ಯಗಳಲ್ಲಿ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಬಿಹಾರ ಮತ್ತು ಜಾರ್ಖಂಡ್ ಈ ಎಲ್ಲಾ ರಾಜ್ಯಗಳಲ್ಲಿ ನಾವು ಇಂದು ಉಷ್ಣ ಅಲೆಗಳ ಬಗ್ಗೆ ಆರೆಂಜ್ ಅಲರ್ಟ್ ನೀಡಿದ್ದೇವೆ ಎಂದು ಐಎಂಡಿ ವಿಜ್ಞಾನಿ ಸೋಮಾ ಸೇನ್‌ ಹೇಳಿದ್ದಾರೆ.

Continue Reading

ದೇಶ

Aadhaar-PAN Link: ಇನ್ನೂ ಆಧಾರ್‌, ಪ್ಯಾನ್‌ ಲಿಂಕ್‌ ಆಗಿಲ್ಲವೆ? ಇಂದೇ ಕೊನೆಯ ದಿನ; ಲಿಂಕ್‌ ಮಾಡುವ ವಿಧಾನ ಇಲ್ಲಿದೆ

Aadhaar-PAN Link: ನಿಮ್ಮ ಪ್ಯಾನ್‌ ನಂಬರ್‌ ಅನ್ನು ಆಧಾರ್‌ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈಗಲೇ ಮಾಡಿ. ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

VISTARANEWS.COM


on

Aadhaar-PAN Link
Koo

ಬೆಂಗಳೂರು: ನಿಮ್ಮ ಪ್ಯಾನ್‌ ನಂಬರ್‌ (Permanent Account Number) ಅನ್ನು ಆಧಾರ್‌ (Aadhaar)ನೊಂದಿಗೆ ಇನ್ನೂ ಲಿಂಕ್‌ ಮಾಡಿಲ್ಲವೆ? ಹಾಗಾದರೆ ಈ ಸುದ್ದಿಯನ್ನು ನೀವು ಓದಲೇಬೇಕು (Aadhaar-PAN Link). ಯಾಕೆಂದರೆ ಮೇ 31ರೊಳಗೆ ಪ್ಯಾನ್‌ ನಂಬರ್‌ ಆಧಾರ್‌ನೊಂದಿಗೆ ಲಿಂಕ್‌ ಆಗದಿದ್ದರೆ ಟಿಡಿಎಸ್ ಅನ್ನು ದುಪ್ಪಟ್ಟು ಪ್ರಮಾಣದಲ್ಲಿ ಕಡಿತಗೊಳಿಸಲಾಗುತ್ತದೆ ಎಂದು ಆದಾಯ ತೆರಿಗೆ (Income tax) ತಿಳಿಸಿದೆ. ಹಾಗಾದರೆ ಆನ್‌ಲೈನ್‌, ಆಫ್‌ಲೈನ್‌ನಲ್ಲಿ ಆಧಾರ್‌ ಮತ್ತು ಪ್ಯಾನ್‌ ಲಿಂಕ್‌ ಮಾಡುವುದು ಹೇಗೆ ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಹೀಗೆ ಲಿಂಕ್‌ ಮಾಡಿ

ಪ್ಯಾನ್‌ ಮತ್ತು ಆಧಾರ್‌ ಅನ್ನು ಹಲವು ವಿಧಗಳ ಮೂಲಕ ಲಿಂಕ್‌ ಮಾಡಬಹುದು. ಮೊದಲೇ ಹೇಳಿದಂತೆ ಇದಕ್ಕಾಗಿ ಆನ್‌ಲೈನ್‌ ಮತ್ತು ಆಫ್‌ಲೈನ್‌ ಮಾರ್ಗಗಳನ್ನು ಬಳಸಬಹುದು.

ಇನ್‌ಕಂ ಟ್ಯಾಕ್ಸ್‌ ಡಿಪಾರ್ಟ್‌ಮೆಂಟ್‌ ಪೋರ್ಟಲ್‌ ಮೂಲಕ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳಲಿದ್ದು, ಅಲ್ಲಿ ಪ್ಯಾನ್‌, ಆಧಾರ್‌ ನಂಬರ್‌ ನಮೂದಿಸಿ. ಜತೆಗೆ ಇತರ ಅಗತ್ಯ ಮಾಹಿತಿಯನ್ನು ನೀಡಿ.

ಎಸ್‌ಎಂಎಸ್‌ ಮೂಲಕ

  • UIDPAN 10-ಅಂಕಿಗಳ ಪ್ಯಾನ್‌ ಕಾರ್ಡ್‌ ನಂಬರ್‌, 12-ಅಂಕಿಗಳ ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಒಂದು ಸ್ಪೇಸ್‌ ಕೊಟ್ಟು 567678 ಅಥವಾ 56161ಗೆ ಎಸ್‌ಎಂಎಸ್‌ ಕಳುಹಿಸಿ.
  • ಬಳಿಕ ಪ್ಯಾನ್-ಆಧಾರ್ ಲಿಂಕ್ ಸ್ಥಿತಿಯನ್ನು ಎಸ್ಎಂಎಸ್ ನಿಮಗೆ ತಿಳಿಸಲಾಗುತ್ತದೆ. ಗಮನಿಸಿ ಜನ್ಮ ದಿನಾಂಕವು ಎರಡೂ ದಾಖಲೆಗಳಲ್ಲಿ ಹೊಂದಿಕೆಯಾದರೆ ಮಾತ್ರ ಆಧಾರ್ ಮತ್ತು ಪ್ಯಾನ್ ಅನ್ನು ಲಿಂಕ್ ಮಾಡಲಾಗುತ್ತದೆ.

ಆಧಾರ್-ಪ್ಯಾನ್‌ ಲಿಂಕ್‌ ಆಗಿದ್ಯಾ ಎನ್ನುವುದನ್ನು ಪರಿಶೀಲಿಸುವ ವಿಧಾನ

  • ಅದಾಯ ತೆರಿಗೆ ಇಲಾಖೆಯ ವೆಬ್‌ಸೈಟ್‌ incometaxindiaefiling.gov.inಗೆ ಭೇಟಿ ನೀಡಿ.
  • ಈಗ ತೆರೆದುಕೊಳ್ಳುವ ಪುಟದ ಎಡಭಾಗದಲ್ಲಿ ಕಾಣಿಸುವ ‘Quick Links’ ವಿಭಾಗದ ‘Link Aadhaar Status’ ಆಪ್ಶನ್‌ ಮೇಲೆ ಕ್ಲಿಕ್‌ ಮಾಡಿ.
  • ಈಗ ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ಪ್ಯಾನ್‌ ಮತ್ತು ಆಧಾರ್‌ ನಂಬರ್‌ ನಮೂದಿಸಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ಬಳಿಕ ‘View Link Aadhaar Status’ ಆಪ್ಶನ್‌ ಸೆಲೆಕ್ಟ್‌ ಮಾಡಿ.
  • ಆಗ ಒಂದು ವೇಳೆ ಲಿಂಕ್‌ ಆಗಿದ್ದರೆ ನಿಮ್ಮ ಪ್ಯಾನ್‌ (ಪ್ಯಾನ್‌ ನಂಬರ್‌) ಆಧಾರ್‌ ನಂಬರ್‌ (ಆಧಾರ್‌ ನಂಬರ್‌ನ ಅಂಕಿ)ನೊಂದಿಗೆ ಲಿಂಕ್‌ ಆಗಿದೆ ಎನ್ನುವ ಸಂದೇಶ ಮೂಡುತ್ತದೆ.

ಕಡ್ಡಾಯ ಯಾಕೆ?

ನಕಲಿ ಪ್ಯಾನ್‌ ಕಾರ್ಡ್‌ಗಳನ್ನು ತಡೆಗಟ್ಟಲು, ತೆರಿಗೆ ವ್ಯವಸ್ಥೆಯಲ್ಲಿ ಸುಧಾರಣೆ ಜಾರಿಗೆ ತರುವ ನಿಟ್ಟಿನಲ್ಲಿ ಆದಾಯ ತೆರಿಗೆ ಇಲಾಖೆಯು ಆಧಾರ್‌ ಕಾರ್ಡ್‌ನೊಂದಿಗೆ ಲಿಂಕ್‌ ಮಾಡುವುದನ್ನು ಕಡ್ಡಾಯಗೊಳಿಸಿದೆ. ಹೀಗಾಗಿ ಕೂಡಲೇ ಲಿಂಕ್‌ ಮಾಡಿ.

ಇದನ್ನೂ ಓದಿ: Credit Card Safety Tips: ಕ್ರೆಡಿಟ್‌ ಕಾರ್ಡ್ ವಂಚನೆಯಿಂದ ಪಾರಾಗಲು ಇಲ್ಲಿದೆ 9 ಸಲಹೆ

Continue Reading

ದೇಶ

RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ!

RBI:ಆರ್‌ಬಿಐ ಒಟ್ಟು 822.1 ಟನ್ ಚಿನ್ನವನ್ನು ಹೊಂದಿದ್ದು, ಅದರಲ್ಲಿ 413.8 ಟನ್‌ಗಳಷ್ಟು ಚಿನ್ನವನ್ನು ವಿದೇಶದಲ್ಲಿ ಇರಿಸಲಾಗಿದೆ. ಆರ್‌ಬಿಐ ಕಳೆದ ಕೆಲವು ವರ್ಷಗಳಿಂದ ಚಿನ್ನವನ್ನು ಖರೀದಿಸುತ್ತಿದ್ದು, ಕಳೆದ ಹಣಕಾಸು ವರ್ಷದಲ್ಲಿ 27.5 ಟನ್ ಚಿನ್ನವನ್ನು ಖರೀದಿಸಿತ್ತು. ಆ ಮೂಲಕ ಜಾಗತಿಕ ಮಟ್ಟದಲ್ಲಿ ಆರ್‌ಬಿಐ ಚಿನ್ನ ಸಂಗ್ರಹಣೆಯನ್ನು ಹೆಚ್ಚಿಸಿದೆ.

VISTARANEWS.COM


on

RBI
Koo

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌(RBI) ಇಂಗ್ಲೆಂಡ್‌ನಲ್ಲಿದ್ದ ತನ್ನ 100 ಟನ್‌ಗೂ ಅಧಿಕ ಚಿನ್ನವನ್ನು ದೇಶಿಯ ಖಜಾನೆ(vaults)ಗಳಿಗೆ ರವಾನಿಸಿದೆ. ಕಳೆದ 33ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಚಿನ್ನ ಭಾರತಕ್ಕೆ ಬರುತ್ತಿರುವುದು. ಮುಂದಿನ ದಿನಗಳಲ್ಲಿ ಇಷ್ಟೇ ಮೊತ್ತ ಚಿನ್ನವನ್ನು ಆರ್‌ಬಿಐ ಭಾರತಕ್ಕೆ ತರಲಿದೆ. ಇನ್ನು ಈ ಚಿನ್ನವನ್ನು ಕೆಲವೊಂದು ವ್ಯವಸ್ಥಾಪನಾ ಕಾರಣ ಮತ್ತು ವೈವಿಧ್ಯಮಯ ಸಂಗ್ರಹಣೆ ಉದ್ದೇಶದಿಂದ ದೇಶಿಯ ಖಜಾನೆಗಳಿಗೆ ತರಲಾಗುತ್ತಿದೆ.

ಮಾರ್ಚ್ 2023 ರ ಮಾಹಿತಿಯ ಪ್ರಕಾರ, ಆರ್‌ಬಿಐ ಒಟ್ಟು 822.1 ಟನ್ ಚಿನ್ನವನ್ನು ಹೊಂದಿದ್ದು, ಅದರಲ್ಲಿ 413.8 ಟನ್‌ಗಳಷ್ಟು ಚಿನ್ನವನ್ನು ವಿದೇಶದಲ್ಲಿ ಇರಿಸಲಾಗಿದೆ. ಆರ್‌ಬಿಐ ಕಳೆದ ಕೆಲವು ವರ್ಷಗಳಿಂದ ಚಿನ್ನವನ್ನು ಖರೀದಿಸುತ್ತಿದ್ದು, ಕಳೆದ ಹಣಕಾಸು ವರ್ಷದಲ್ಲಿ 27.5 ಟನ್ ಚಿನ್ನವನ್ನು ಖರೀದಿಸಿತ್ತು. ಆ ಮೂಲಕ ಜಾಗತಿಕ ಮಟ್ಟದಲ್ಲಿ ಆರ್‌ಬಿಐ ಚಿನ್ನ ಸಂಗ್ರಹಣೆಯನ್ನು ಹೆಚ್ಚಿಸಿದೆ.

ಅನೇಕ ದೇಶಗಳ ಸೆಂಟ್ರಲ್ ಬ್ಯಾಂಕ್‌ಗಳು ತಮ್ಮ ಚಿನ್ನವನ್ನು ಬ್ಯಾಂಕ್ ಆಫ್ ಇಂಗ್ಲೆಂಡ್‌ನಲ್ಲಿ ಇರಿಸುತ್ತವೆ. ಇದರಲ್ಲಿ ಭಾರತವೂ ಒಂದು. ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದ ಸಾಕಷ್ಟು ಚಿನ್ನವನ್ನು ಲಂಡನ್‌ನಲ್ಲಿ ಇರಿಸಲಾಗಿದೆ. ‘ಕೆಲವು ವರ್ಷಗಳ ಹಿಂದೆ ಆರ್‌ಬಿಐ ಚಿನ್ನ ಖರೀದಿಸಲು ಆರಂಭಿಸಿತು ಮತ್ತು ಅದನ್ನು ಎಲ್ಲಿ ಸಂಗ್ರಹಿಸಬೇಕು ಎಂದು ನಿರ್ಧರಿಸಿತು. ವಿದೇಶದಲ್ಲಿ ಚಿನ್ನದ ದಾಸ್ತಾನು ಹೆಚ್ಚುತ್ತಿರುವ ಕಾರಣ ಭಾರತಕ್ಕೆ ಸ್ವಲ್ಪ ಚಿನ್ನವನ್ನು ತರಲು ನಿರ್ಧರಿಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬದಲಾಗುತ್ತಿರುವ ರಾಜಕೀಯ ಸಂಗತಿಗಳು ಮತ್ತು ಕರೆನ್ಸಿ ಮೌಲ್ಯ ಏರಿಳಿತದ ಭೀತಿಯಿಂದಾಗಿ ಆರ್‌ಬಿಐ ಈ ಈ ಚಿನ್ನವನ್ನು ಭಾರತಕ್ಕೆ ತರಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಆರ್ಥಿಕ ತಜ್ಞರು ಹೇಳೋದೇನು?

ಇನ್ನು ಒಂದೇ ಬಾರಿ ಇಷ್ಟು ದೊಡ್ಡ ಮಟ್ಟದಲ್ಲಿ ಚಿನ್ನವನ್ನು ಭಾರತಕ್ಕೆ ತರುತ್ತಿರುವ ಬಗ್ಗೆ ಪ್ರಸಿದ್ದ ಆರ್ತಿಕ ತಜ್ಞ ಸಂಜೀವ್‌ ಸನ್ಯಾಲ್‌ ಟ್ವೀಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾರಿಗೂ ತಿಳಿಯದಂತೆ ಆರ್‌ಬಿಐ ತನ್ನ 100 ಟನ್ ಚಿನ್ನದ ನಿಕ್ಷೇಪಗಳನ್ನು ಯುಕೆಯಿಂದ ಭಾರತಕ್ಕೆ ಹಿಂತಿರುಗಿಸಿದೆ. ಹೆಚ್ಚಿನ ದೇಶಗಳು ತಮ್ಮ ಚಿನ್ನವನ್ನು ಬ್ಯಾಂಕ್ ಆಫ್ ಇಂಗ್ಲೆಂಡ್ ಅಥವಾ ಅಂತಹ ಕೆಲವು ಸ್ಥಳಗಳ ಖಜಾನೆಗಳಲ್ಲಿ ಇರಿಸುತ್ತವೆ. ಭಾರತವು ಈಗ ತನ್ನ ಹೆಚ್ಚಿನ ಚಿನ್ನವನ್ನು ತನ್ನದೇ ಆದ ಖಜಾನೆಗಳಲ್ಲಿ ಇಟ್ಟುಕೊಳ್ಳುತ್ತದೆ. 1991 ರಲ್ಲಿ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ಮಧ್ಯೆ ನಾವು ರಾತ್ರೋರಾತ್ರಿ ಚಿನ್ನವನ್ನು ಸಾಗಿಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

1991ರಲ್ಲಿ ಏನಾಗಿತ್ತು?

1991 ರಲ್ಲಿ, ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಚಂದ್ರಶೇಖರ್ ನೇತೃತ್ವದ ಸರ್ಕಾರ ಹಣವನ್ನು ಸಂಗ್ರಹಿಸಲು ಚಿನ್ನವನ್ನು ಒತ್ತೆ ಇಟ್ಟಿತ್ತು. ಜುಲೈ 4 ಮತ್ತು 18 ರ ನಡುವೆ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಜಪಾನ್‌ನಲ್ಲಿ 46.91 ಟನ್ ಚಿನ್ನವನ್ನು ಒತ್ತೆ ಇಟ್ಟು, $400 ಮಿಲಿಯನ್ ಸಾಲ ಪಡೆದುಕೊಂಡಿತ್ತು. ಸುಮಾರು 15 ವರ್ಷಗಳ ಹಿಂದೆ, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ಅಡಿಯಲ್ಲಿ ಆರ್‌ಬಿಐ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) 200 ಟನ್ ಚಿನ್ನವನ್ನು ಖರೀದಿಸಿತು.

Continue Reading
Advertisement
Prajwal Revanna
ಪ್ರಮುಖ ಸುದ್ದಿ6 mins ago

Prajwal Revanna : ಸೆಕ್ಸ್​ ಸ್ಕ್ಯಾಂಡಲ್​ ಆರೋಪಿ ಪ್ರಜ್ವಲ್​ ನೋಡಲು ನೂಕುನುಗ್ಗಲು!

Prajwal Revanna Case
ಕರ್ನಾಟಕ8 mins ago

Prajwal Revanna Case: ಪ್ರಜ್ವಲ್‌ಗೆ ಎಸ್‌ಐಟಿ ಕಸ್ಟಡಿ ಖಚಿತ; ಆರೋಪಿ ಪರ-ವಿರೋಧ ವಾದ ಹೀಗಿತ್ತು

Road Accident
ಕ್ರೈಂ12 mins ago

Road Accident : ಸ್ಕೂಟರ್‌ ಪಲ್ಟಿಯಾಗಿ ದಂಪತಿ ನರಳಾಟ; ನೆರವಿಗೆ ಧಾವಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

Bomb threat
ದೇಶ14 mins ago

Bomb Threat: ನಿಲ್ಲುತ್ತಲೇ ಇಲ್ಲ ಹುಸಿಬಾಂಬ್‌ ಕರೆ ಹಾವಳಿ; ಮತ್ತೆ ಬೆದರಿಕೆ-ವಿಮಾನ ತುರ್ತು ಭೂಸ್ಪರ್ಶ

MS Dhoni's last-ball Heroics
ಕ್ರಿಕೆಟ್28 mins ago

MS Dhoni’s last-ball Heroics: ಧೋನಿ ಮಿಂಚಿನ ವೇಗದ ರನೌಟ್​; ಭಾರತಕ್ಕೆ 1 ರನ್‌ ರೋಚಕ ಜಯ; ಇದು ಮರೆಯಲಾಗದ ನೆನಪು

Bujji and Bhairava Prabhas animated show raises
ಒಟಿಟಿ32 mins ago

Bujji and Bhairava: ಅಮೆಜಾನ್​ಗೆ ಬಂದ ‘ಕಲ್ಕಿ’ಯ ಬುಜ್ಜಿ-ಭೈರವ; ಹೆಚ್ಚಾಯ್ತು ‘ಕಲ್ಕಿ 2898 ಎಡಿ’ ನಿರೀಕ್ಷೆ!

Self harming
ಬೆಂಗಳೂರು37 mins ago

Self Harming : ವೆಗಾ ಸಿಟಿ ಮಾಲ್‌ ಮೇಲಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

Prajwal Revanna Case
ಕರ್ನಾಟಕ38 mins ago

Prajwal Revanna Case: ಅನ್ನ-ಸಾಂಬಾರ್‌ ತಿಂದು ಜಡ್ಜ್‌ ಎದುರು ಕೈಕಟ್ಟಿ ನಿಂತ ಪ್ರಜ್ವಲ್‌ ರೇವಣ್ಣ; ಎಂಥ ಸ್ಥಿತಿ!

Heat Wave
ದೇಶ42 mins ago

Heat Wave: ಬಿಸಿಗಾಳಿ ಶಾಖಕ್ಕೆ ಉತ್ತರ ಭಾರತ ಸಂಪೂರ್ಣ ತತ್ತರ; ಎಮರ್ಜೆನ್ಸಿ ಘೋಷಣೆ ಆಗುತ್ತಾ?

Rooftop collapse in bagalakota
ಬಾಗಲಕೋಟೆ57 mins ago

Rooftop collapse : ಕುಸಿದು ಬಿದ್ದ ಮನೆಯ ಚಾವಣಿ; ಮಣ್ಣಿನಡಿ ಸಿಲುಕಿ ಮಕ್ಕಳಿಬ್ಬರು ಸಾವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ1 day ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು3 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌