ದೇಶ
Gyanvapi Case: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ಬ್ರೇಕ್
Gyanvapi Case: ವಾರಾಣಸಿಯ ಜ್ಞಾನವಾಪಿ ಮಸೀದಿಯ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ಇನ್ನು ಮಸೀದಿ ಸಮಿತಿಗೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ.
ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ (Gyanvapi Case) ಸುಪ್ರೀಂ ಕೋರ್ಟ್ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಜುಲೈ 26ರ ಸಂಜೆ 5 ಗಂಟೆಯವರೆಗೆ ವೈಜ್ಞಾನಿಕ ಸಮೀಕ್ಷೆ ನಡೆಸಬಾರದು ಎಂದು ಆದೇಶ ನೀಡಿದೆ.
ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ನೀಡಿರುವ ಅನುಮತಿಯನ್ನು ರದ್ದುಗೊಳಿಸಬೇಕು ಎಂದು ಮಸೀದಿ ನಿರ್ವಹಣಾ ಸಮಿತಿ ಪರ ವಕೀಲರು ವಾದ ಮಂಡಿಸಿದರು. “ಕಾರ್ಬನ್ ಡೇಟಿಂಗ್‌ಗೆ ತಡೆ ನೀಡಲಾಗಿದೆ. ಅದರಂತೆ, ವೈಜ್ಞಾನಿಕ ಸಮೀಕ್ಷೆಗೂ ಅನುಮತಿ ನೀಡಬಾರದು” ಎಂದರು.
Gyanvapi case | Supreme Court says no ASI survey of Gyanvapi mosque complex till 5 pm, July 26th.
— ANI (@ANI) July 24, 2023
High Court order shall not be enforced till 26th July. In the meantime, the mosque committee shall move High Court. pic.twitter.com/MMm9Xw1W3Q
ಆಗ ನ್ಯಾಯಾಲಯವು, “ವಾರಾಣಸಿ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ. ಜುಲೈ 26ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ನೀಡಿರುವ ಅವಧಿಯೊಳಗೆ ಅಲಹಾಬಾದ್ ಹೈಕೋರ್ಟ್ ಅರ್ಜಿಯ ವಿಚಾರಣೆ ನಡೆಸಬೇಕು. ಹಾಗೆಯೇ, ಜುಲೈ 26ರ ಸಂಜೆ 5 ಗಂಟೆಯವರೆಗೆ ವೈಜ್ಞಾನಿಕ ಸಮೀಕ್ಷೆ ನಿಲ್ಲಿಸಬೇಕು” ಎಂದು ಸೂಚಿಸಿತು.
ಇದನ್ನೂ ಓದಿ: Gyanvapi Case: ಶ್ರಾವಣ ಸೋಮವಾರದಂದೇ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಆರಂಭ; ಬಿಗಿ ಭದ್ರತೆ
ಐಎಸ್‌ಐ ವೈಜ್ಞಾನಿಕ ಸಮೀಕ್ಷೆ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮಾಹಿತಿ ನೀಡಿದರು. “ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಯುತ್ತಿದೆಯೇ ಹೊರತು, ಉತ್ಖನನ ನಡೆಯುತ್ತಿಲ್ಲ. ಮಸೀದಿಯ ಮಾಪನ, ಫೋಟೊಗ್ರಫಿ ಹಾಗೂ ರೆಡಾರ್ ಸಮೀಕ್ಷೆ ನಡೆಸಲಾಗುತ್ತಿದೆ. ಮಸೀದಿಯ ಒಂದೇ ಒಂದು ಇಟ್ಟಿಗೆಗೂ ಹಾನಿಯಾಗುವುದಿಲ್ಲ” ಎಂದು ತಿಳಿಸಿದರು. ಆದರೂ, ನ್ಯಾಯಾಲಯವು ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡಿತು. ವಾರಾಣಸಿ ನ್ಯಾಯಾಲಯವು ವೈಜ್ಞಾನಿಕ ಸಮಿತಿ ಅನುಮತಿ ನೀಡಿದ ಕಾರಣ ಸೋಮವಾರ ಬೆಳಗ್ಗೆ ಬಿಗಿ ಭದ್ರತೆ ಮಧ್ಯೆಯೇ ಸಮೀಕ್ಷೆ ಆರಂಭವಾಗಿತ್ತು.
ದೇಶ
Lawyer Sara Sunny: ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ
Lawyer Sara Sunny: ಕಿವುಡ ನ್ಯಾಯವಾದಿ ಸಾರಾ ಸನ್ನಿ ಅವರು ಸಂಜ್ಞೆ ಭಾಷೆಯ ಮೂಲಕ ವಾದ ಮಂಡಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಇತಿಹಾಸ ಸೃಷ್ಟಿಸಿದರು.
ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ (Supreme Court of India) ಸೋಮವಾರ ವಿಶಿಷ್ಟ ವಕೀಲರ ಕಲಾಪಕ್ಕೆ ಸಾಕ್ಷಿಯಾಯಿತು. ಕಿವುಡ ವಕೀಲೆ ಸಾರಾ ಸನ್ನಿ (Lawyer Sara Sunny) ಇಂಟರ್‌ರ್ಪ್ರಿಟರ್ ಮೂಲಕ ಸಂಜ್ಞೆ ಭಾಷೆ ಬಳಸಿ ವಾದಿಸಿದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮೊದಲ ಬಾರಿಗೆ ಆಲಿಸಿತು.
ವರ್ಚುವಲ್ ಪ್ರೊಸೀಡಿಂಗ್ಸ್ ನಿರ್ವಹಿಸುತ್ತಿದ್ದ ಕಂಟ್ರೋಲ್ ರೂಂ, ಮೊದಲಿಗೆ ಕಿವುಡ ನ್ಯಾಯವಾದಿ ಸಾರಾ ಸನ್ನಿಗೆ ಸ್ಕ್ರೀನ್ ಸ್ಪೇಸ್ ನೀಡಲು ನಿರಾಕರಿಸಿತ್ತು. ಆದರೆ, ಶೀಘ್ರದಲ್ಲೇ ಅವರ ವಿಚಾರಣೆಯ ಸರದಿ ಬಂದಾಗ ಆಕೆಯ ಇಂಟರ್‌ರ್ಪ್ರಿಟರ್ ಸೌರಭ್ ರಾಯ್ ಚೌಧರಿ ಪರದೆಯ ಮೇಲೆ ಕಾಣಿಸಿಕೊಂಡರು. ಚೌಧರಿ ಅವರು, ಸಾರಾ ಸನ್ನಿ ಅವರ ಸಂಕೇತ ಭಾಷೆಯನ್ನು ಅನುವಾದಿಸಿ, ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಮುಂದೆ ತಮ್ಮ ವಾದವನ್ನು ಮಂಡಿಸಿದರು.
ನಂತರ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಸನ್ನಿಗೆ ಸ್ಕ್ರೀನ್ ಸ್ಪೇಸ್ ನೀಡುವಂತೆ ನಿಯಂತ್ರಣ ಕೊಠಡಿ ಮತ್ತು ಇಂಟರ್ಪ್ರಿಟರ್‌ಗೆ ಸೂಚನೆ ನೀಡಿದರು. ಇದಾದ ಬಳಿಕ ಇಬ್ಬರೂ ತೆರೆ ಮೇಲೆ ಕಾಣಿಸಿಕೊಂಡು ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ವಾದ ಮಂಡಿಸಿದರು. ಸನ್ನಿ ಅವರು ಕಲಾಪದಲ್ಲಿ ಪಾಲ್ಗೊಳ್ಳಲು ನ್ಯಾಯವಾದಿ ಸಂಚಿತ್ ಐನ್ ಅವರು ಅರೆಂಜ್ ಮಾಡಿದ್ದರು.
ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಎಲ್ಲರಿಗೂ ಸಮಾನ ನ್ಯಾಯ ದೊರೆಯಬೇಕು ಎಂದು ಪ್ರತಿಪಾದಿಸುತ್ತಾರೆ. ಕಳೆದ ವರ್ಷ, ದೈಹಿಕವಾಗಿ ಅಸಮರ್ಥರಾದವರು ಸುಪ್ರೀಂ ಕೋರ್ಟ್ ಸಂಕೀರ್ಣಕ್ಕೆ ಬಂದಾಗ ಎದುರಿಸುವ ಸಮಸ್ಯೆಗಳು ಹಾಗೂ ಎಲ್ಲರಿಗೂ ನ್ಯಾಯ ವ್ಯವಸ್ಥೆ ದೊರೆಯುವಂತೆ ಮಾಡಲು ಏನೇನು ಕ್ರಮ ಕೈಗೊಳ್ಳಬೇಕು ಎಂಬ ಕುರಿತು ಸೂಚಿಸುವಂತೆ ಸೂಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ವಿಶೇಷ ಎಂದರೆ, ಸಿಜೆಐ ಚಂದ್ರಚೂಡ್ ಅವರೂ ಇಬ್ಬರು ವಿಶೇಷ ಚೇತನ ಮಕ್ಕಳನ್ನು ದತ್ತು ತೆಗೆದುಕೊಂಡು ಸಾಕುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ: Supreme Court : ಪಿಎಂ ಕೇರ್ಸ್ ಎಲ್ಲ ಅನಾಥ ಮಕ್ಕಳಿಗೂ ಮೀಸಲಾಗಲಿ; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಹೇಳಿದ್ಯಾಕೆ?
ಸಂಜ್ಞೆ ಭಾಷೆಯ ಮೂಲಕ ವಾದ ಮಾಡಿದ ಸಂಚಿತಾ ಐನ್ ಅವರು, ಈ ಕ್ಷಣದ ಮಹತ್ವವು ಭಾರತೀಯ ಕಾನೂನು ವ್ಯವಸ್ಥೆಯಲ್ಲಿ ನಿಜವಾದ ಒಳಗೊಳ್ಳುವಿಕೆ ಮತ್ತು ನ್ಯಾಯ ಪ್ರವೇಶದ ಹಾದಿಯಲ್ಲಿ ಉಳಿದಿರುವ ಸವಾಲುಗಳೊಂದಿಗೆ ಸಂಬಂಧ ಹೊಂದಿದೆ ಎಂದು ಮಾಧ್ಯಮಗಳಿಗೆ ತಿಳಿಸಿದರು. ಸಂಜ್ಞೆ ಭಾಷೆಯ ವ್ಯಾಪ್ತಿಯನ್ನು ಹೆಚ್ಚಿಸುವಲ್ಲಿ ಆಡಳಿತ ವ್ಯವಸ್ಥೆಯು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
ಭಾನುವಾರ, ಸುಪ್ರೀಂ ಕೋರ್ಟ್ ಸಹ ಮೊದಲ ಬಾರಿಗೆ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ತನ್ನ ಎರಡು ದಿನಗಳ ರಾಷ್ಟ್ರೀಯ ಮಧ್ಯಸ್ಥಗಾರರ ಸಮಾಲೋಚನೆಯಲ್ಲಿ ಸಂಜ್ಞೆ ಭಾಷಾ ವ್ಯಾಖ್ಯಾನಕಾರರನ್ನು ಬಳಸಿತು.
ದೇಶ
MP Assembly Election: ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್, ಮೂವರು ಕೇಂದ್ರ ಸಚಿವರು, ಹಲವು ಸಂಸದರು ಕಣಕ್ಕೆ!
MP Assembly Election: ವರ್ಷಾಂತ್ಯಕ್ಕೆ ನಡೆಯಲಿರುವ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿಗಳ 2ನೇ ಪಟ್ಟಿ ರಿಲೀಸ್ ಆಗಿದೆ. ಕಳೆದ ಆಗಸ್ಟ್‌ನಲ್ಲಿ ಮೊದಲನೇ ಪಟ್ಟಿ ಬಿಡುಗಡೆಯಾಗಿತ್ತು.
ನವದೆಹಲಿ: ಈ ವರ್ಷಾಂತ್ಯಕ್ಕೆ ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ(MP Assembly Election) ನಡೆಯಲಿದ್ದು, ಭಾರತೀಯ ಜನತಾ ಪಾರ್ಟಿಯು (BJP) ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು (Candidates List) ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಮೂವರು ಕೇಂದ್ರ ಸಚಿವರು (Union Ministers) ಹಾಗೂ ಹಲವು ಸಂಸದರಿಗೆ (Members of Parliament) ವಿಧಾನಸಭೆಗೆ ಸ್ಪರ್ಧಿಸಲು ಟಿಕೆಟ್ ನೀಡಲಾಗಿದೆ. ಚುನಾವಣಾ ವೇಳಾಪಟ್ಟಿ ಇನ್ನೂ ಪ್ರಕಟವಾಗಿಲ್ಲ. ಹಾಗಿದ್ದರೂ ಬಿಜೆಪಿಯು, ಕಳೆದ ಆಗಸ್ಟ್‌ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿ, ಎಲ್ಲ ರಾಜಕೀಯ ಪಕ್ಷಗಳಿಗೆ ಶಾಕ್ ನೀಡಿತ್ತು. ಇದೀಗ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ಆಹಾರ ಸಂಸ್ಕರಣೆ ರಾಜ್ಯ ಸಚಿವ ಪ್ರಹ್ಲಾದ್ ಪಟೇಲ್ ಸೇರಿ ಮೂವರು ಸಚಿವರಿಗೆ ಟಿಕೆಟ್ ನೀಡಿದೆ. ಜತೆಗೆ ಹಲವು ಸಂಸದರಿಗೂ ಸ್ಪರ್ಧಿಸಲು ಸೂಚಿಸಲಾಗಿದೆ. ಸಚಿವ ತೋಮರ್ ಅವರು ದಿಮಾನಿ ಹಾಗೂ ಪಟೇಲ್ ಅವರು ನರಸಿಂಗಪುರ ವಿಧಾನಸಭೆ ಕ್ಷೇತ್ರಗಳಿಂದ ಕಣಕ್ಕಿಳಿಯಲಿದ್ದಾರೆ.
ಕೇಂದ್ರದ ಸಚಿವ ಸಂಪುಟದಲ್ಲಿ ಸಚಿವರಾಗಿರುವ ಹಿರಿಯ ನಾಯಕರನ್ನು ಕಣಕ್ಕಿಳಿಸುವ ನಿರ್ಧಾರವನ್ನು ಪಕ್ಷದ ಹೈಕಮಾಂಡ್ ತೆಗೆದುಕೊಂಡಿದ್ದು, ಇದರಿಂದ ಗೆಲ್ಲುವ ಅವಕಾಶ ಪಕ್ಷಕ್ಕೆ ಹೆಚ್ಚಾಗುತ್ತದೆ ಎಂದು ಪಕ್ಷದ ಪದಾಧಿಕಾರಿಗಳು ಭಾವಿಸಿದ್ದಾರೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯ ರಾಜ್ಯ ಸಚಿವ ಫಗ್ಗನ್ ಸಿಂಕ್ ಕುಲಸ್ತೆ ಅವರು ನಿವಾಸ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇದು ಎಸ್‌ಟಿ ಮೀಸಲು ಕ್ಷೇತ್ರವಾಗಿದೆ.
ಸಂಸದರಾದ ಗಣೇಸ್ ಸಿಂಗ್, ರಾಕೇಶ್ ಸಿಂಗ್, ರಿತಿ ಪಾಠಕ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ಅವರಿಗೂ ಟಿಕೆಟ್ ನೀಡಲಾಗಿದೆ. ಹಾಗೆಯೇ, ಹೋಶಂಗಾಬಾದ್ ಸಂಸದ ಉದಯ ಪ್ರತಾಪ್ ಸಿಂಗ್ ಅವರು ಗದರವಾರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಈ ಸುದ್ದಿಯನ್ನೂ ಓದಿ: MP Election 2023: ಮಧ್ಯಪ್ರದೇಶದಲ್ಲಿ ಸಿಲಿಂಡರ್ ಬೆಲೆ 450 ರೂ.! ಎಲೆಕ್ಷನ್ ಗೆಲ್ಲಲು ಉಚಿತ ಕೊಡುಗೆ
ಎರಡನೇ ಪಟ್ಟಿಯಲ್ಲಿ ಒಟ್ಟು 39 ಅಭ್ಯರ್ಥಿಗಳಿದ್ದು, ಈ ಪೈಕಿ 6 ಮಹಿಳೆಯರಿದ್ದಾರೆ. ಜತೆಗೆ 5 ಕ್ಷೇತ್ರಗಳು ಎಸ್ ಸಿ ಮತ್ತು 10 ಕ್ಷೇತ್ರಗಳು ಎಸ್‌ಟಿ ಮೀಸಲಾಗಿವೆ. ಬಿಜೆಪಿಯು 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕಳೆದ ಆಗಸ್ಟ್ ತಿಂಗಳಲ್ಲಿ ಘೋಷಣೆ ಮಾಡಿತ್ತು. ಮಧ್ಯ ಪ್ರದೇಶ ಮಾತ್ರವಲ್ಲದೇ, ರಾಜಸ್ಥಾನ, ತೇಲಂಗಾಣ, ಛತ್ತೀಸ್‌ಗಢ ಸೇರಿದಂತೆ ಐದು ರಾಜ್ಯಗಳ ವಿಧಾನಸಭೆಗೆ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ.
ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕ
VISTARA TOP 10 NEWS: ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ಎಐಎಡಿಎಂಕೆ-ಬಿಜೆಪಿ ಮೈತ್ರಿಯೂ ಬಂದ್
VISTARA TOP 10 NEWS : ನಾಳೆ ಬೆಂಗಳೂರು ಬಂದ್, ಶುಕ್ರವಾರ ಕರ್ನಾಟಕ ಬಂದ್, ತಮಿಳುನಾಡಿನಲ್ಲಿ ಬಿಜೆಪಿ-ಎಐಎಡಿಎಂಕೆ ಬಂದ್! ಇನ್ನು ಪ್ರಧಾನಿ ಮೋದಿ ಅವರು ಅ. 1ರಂದು ಎಲ್ಲರೂ ಸೇರಿ ಕಸ ಗುಡಿಸೋಣ ಅಂದಿದ್ದಾರೆ. ಹೀಗೆ ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ ಟಾಪ್ 10 ನ್ಯೂಸ್.
1. ಕಾವೇರಿ ಕಿಚ್ಚು: ರಾಜ್ಯಕ್ಕೆ ಡಬಲ್ ಬಂದ್ ಶಾಕ್; ನಾಳೆ ಬೆಂಗಳೂರು, ಸೆ. 29 ಕರ್ನಾಟಕ ಬಂದ್
ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ಕರೆ ನೀಡಲಾಗಿರುವ ಸೆ. 26ರ ಬೆಂಗಳೂರು ಬಂದ್ ಬೆನ್ನಿಗೇ ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಸೆ. 29ರಂದು ಅಖಿಲ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದಾರೆ. ಹೀಗಾಗಿ ವಾರದಲ್ಲಿ ಎರಡು ಬಂದ್ ನಡೆಯಲಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ವರದಿ : ನಾಯಕರ ಪ್ರತಿಷ್ಠೆಯಿಂದ ಬೆಂಗಳೂರಿಗೆ ಡಬಲ್ ಬಂದ್ ಬಿಸಿ, ಬೇಕಿತ್ತಾ ಎರಡೆರಡು ಬಂದ್?
2. ನಾಳೆ ಬೆಂಗಳೂರು ಬಂದ್: ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ; ಏನಿರುತ್ತೆ? ಏನಿರಲ್ಲ?
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ (Cauvery water Dispute) ಮಾಡಬಾರದು ಎಂದು ಆಗ್ರಹಿಸಿ ಜಲ ಸಂರಕ್ಷಣಾ ಸಮಿತಿ ಕರೆ ನೀಡಿರುವ ಸೆ. 26ರ ಬೆಂಗಳೂರು ಬಂದ್ (Bangalore bandh) ಮೊದಲು ಪ್ರಕಟಿಸಿದಂತೆ ಯಥಾವತ್ತಾಗಿ ನಡೆಯಲಿದೆ. ಹಾಗಿದ್ದರೆ ಏನಿರುತ್ತೆ? ಏನಿರಲ್ಲ? ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಪೂರಕ ಸುದ್ದಿ1: ಬಲವಂತದಿಂದ ಬಂದ್ ಮಾಡಿಸುವಂತಿಲ್ಲ; ಮೆರವಣಿಗೆಗೆ ಅವಕಾಶವಿಲ್ಲ ಎಂದ ಕಮಿಷನರ್
ಪೂರಕ ಸುದ್ದಿ2: ಬಂದ್ ಯಶಸ್ವಿ ಆಗಬೇಕು; ಹೋಟೆಲ್ ಓಪನ್ ಮಾಡ್ಬೇಡಿ, ಸಮಸ್ಯೆಗೆ ನೀವೇ ಹೊಣೆ: ಬಿಎಸ್‌ವೈ
ಪೂರಕ ಸುದ್ದಿ3: ಯಾವ ಬಂದ್‌ಗೂ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ಇಲ್ಲ; ನಾರಾಯಣ ಗೌಡ ಘೋಷಣೆ
3 .ಜಲಶಕ್ತಿ ಇಲಾಖೆ ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಲಿ, ಮೋದಿ ಮಧ್ಯಪ್ರವೇಶಿಸಲಿ: ದೇವೇಗೌಡ
ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯ ಎಂದು ಹೇಳಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಈ ಸಂಬಂಧ ಜಲ ಶಕ್ತಿ ಇಲಾಖೆಯಿಂದ ಅರ್ಜಿ ಸಲ್ಲಿಕೆ ಮಾಡಬೇಕು. ಇದಕ್ಕೆ ಪ್ರಧಾನಿ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಕಾವೇರಿ ನೆಪದಲ್ಲಿ ಬಿಜೆಪಿ-ಜೆಡಿಎಸ್‌ನಿಂದ ರಾಜಕೀಯ: ಸಿದ್ದರಾಮಯ್ಯ ಆರೋಪ
4. ಏಕಕಾಲಕ್ಕೆ ರಾಜ್ಯಾದ್ಯಂತ ದಾಖಲೆ ಬರೆದ ಜನತಾ ದರ್ಶನ: ಸಿದ್ದರಾಮಯ್ಯ ಚಿಂತನೆ ಕ್ಲಿಕ್
ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaih) ಅವರ ಸೂಚನೆಯಂತೆ ಇದೇ ಮೊಟ್ಟ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲಾ ಜಿಲ್ಲೆಗಳಲ್ಲಿ ಜನತಾ ದರ್ಶನ (Janata Darshana) ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ಅತ್ಯುತ್ತಮ ಸ್ಪಂದನೆ ಮತ್ತು ಪ್ರಶಂಸೆ ವ್ಯಕ್ತವಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
5. ಏಷ್ಯನ್ ಗೇಮ್ಸ್: ಐತಿಹಾಸಿಕ ಚಿನ್ನ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡ; ಲಂಕಾ ವಿರುದ್ಧ ರೋಚಕ ಜಯ
ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್(Asian Games 2023) ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದ ಭಾರತ ಮಹಿಳಾ ಕ್ರಿಕೆಟ್ ತಂಡ ಮೊದಲ ಪ್ರಯತ್ನದಲ್ಲೇ ಐತಿಹಾಸಿಕ ಚಿನ್ನದ ಪದಕ ಜಯಿಸಿ ಮರೆದಾಡಿದೆ. ಅಲ್ಪ ಮೊತ್ತದ ಪಂದ್ಯದಲ್ಲಿ ಲಂಕಾ ವಿರುದ್ಧ ರೋಚಕ 19 ರನ್ಗಳ ಗೆಲುವು ಸಾಧಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
6. ದೇಶಾದ್ಯಂತ ಅ.1ರಂದು 1 ಗಂಟೆ ಸ್ವಚ್ಛತಾ ಅಭಿಯಾನ: ಎಲ್ಲರೂ ಬನ್ನಿ ಎಂದು ಆಹ್ವಾನಿಸಿದ ಪ್ರಧಾನಿ ಮೋದಿ
ಗಾಂಧಿ ಜಯಂತಿಗೂ ಒಂದು ದಿನ ಮೊದಲು ಅಂದರೆ ಅಕ್ಟೋಬರ್ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಂದು ಒಂದು ಗಂಟೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಈ ಸುದ್ದಿಯನ್ನೂ ಓದಿ: ಎಲ್ಲ ಗ್ಯಾರಂಟಿಗಳಿಗಳ ಜಾರಿಗೂ ಮೋದಿಯೇ ಗ್ಯಾರಂಟಿ; ಪ್ರಧಾನಿ ಅಬ್ಬರದ ಭಾಷಣ
7. ಭಾರತ ವಿಭಜಿಸಿ ಹಲವು ದೇಶ ಸೃಷ್ಟಿಸುವುದು ಖಲಿಸ್ತಾನಿ ಉಗ್ರ ಪನ್ನುನ್ ಗುರಿ; ಷಡ್ಯಂತ್ರ ಬಯಲು
ಕೆನಡಾದಲ್ಲಿ ಕುಳಿತು ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ ಸಂಘಟನೆಯ ಗುರುಪತ್ವಂತ್ ಸಿಂಗ್ ಪನ್ನುನ್ (Gurpatwant Singh Pannun) ಆಸ್ತಿಗಳನ್ನು ಎನ್‌ಐಎ ಜಪ್ತಿ ಮಾಡಿದ ಬೆನ್ನಲ್ಲೇ ಉಗ್ರನ ಕುರಿತು ಸ್ಫೋಟಕ ಮಾಹಿತಿ ಲಭ್ಯವಾಗಿದೆ. “ಭಾರತವನ್ನು ವಿಭಜಿಸಿ, ಹಲವು ದೇಶಗಳನ್ನಾಗಿ ಸೃಷ್ಟಿಸುವುದು ಗುರುಪತ್ವಂತ್ ಸಿಂಗ್ ಪನ್ನುನ್ ಗುರಿಯಾಗಿದೆ” ಎನ್ನುವುದೇ ಆ ಮಾಹಿತಿ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
8. ಬಿಜೆಪಿ ಜತೆ ಮೈತ್ರಿ ಇಲ್ಲ; ಎಐಎಡಿಎಂಕೆ ಅಧಿಕೃತ ಘೋಷಣೆ! ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆ
ತಮ್ಮ ಪಕ್ಷದ ನಾಯಕರನ್ನು ಅವಮಾನಿಸುತ್ತಿರುವ ಬಿಜೆಪಿ ಜತೆಗೆ ಸಖ್ಯವನ್ನು ಕಡಿದುಕೊಂಡಿರುವುದಾಗಿ ಇತ್ತೀಚೆಗಷ್ಟೇ ಎಐಎಡಿಎಂಕೆ ನಾಯಕರೊಬ್ಬರು ಹೇಳಿದ್ದರು. ಇದೀಗ, ಬಿಜೆಪಿ ಜತೆಗಿನ ಮೈತ್ರಿಯನ್ನು ಮುರಿದುಕೊಂಡಿರುವುದಾಗಿ ಎಐಎಡಿಎಂಕೆ ಅಧಿಕೃತವಾಗಿ ಘೋಷಿಸಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
9. 9 ತಿಂಗಳೊಳಗೆ 2000 ಕೋಟಿ ರೂ. ಕೊಳ್ಳೆ ಹೊಡೆದ ಶಾರುಖ್; ಜವಾನ್ ಹೊಸ ದಾಖಲೆ
ಶಾರುಖ್ ಖಾನ್ ಪ್ರಧಾನ ಪಾತ್ರದಲ್ಲಿರುವ ಜವಾನ್, ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 1000 ಕೋಟಿ ರೂ. ಗಳಿಸಿದೆ (Jawan box office collection).ಪಠಾಣ್ ಸಿನಿಮಾವೂ 1000 ಕೋಟಿ ದಾಟಿತ್ತು. ಹೀಗಾಗಿ ಒಂಬತ್ತು ತಿಂಗಳ ಅವಧಿಯಲ್ಲಿ ಶಾರುಖ್ 2000 ಕೋಟಿ ಕೊಳ್ಳೆ ಹೊಡೆದಂತಾಗಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
10. 100 ಫ್ಯಾನ್‌ಗಳಲ್ಲಿ ಅರಳಿದ ಗಣಪ; ಹ್ಯಾವಲ್ಸ್ ಕಂಪನಿಯ ಕ್ರಿಯೆಟಿವಿಟಿಗೆ ನೆಟ್ಟಿಗರ ಮೆಚ್ಚುಗೆ
ದೇಶಾದ್ಯಂತ ಅದ್ಧೂರಿಯಾಗಿ ಆಚರಿಸುವ ಗಣೇಶ ಚತುರ್ಥಿ(Ganesh Chaturthi) ಹಬ್ಬವನ್ನು ಹ್ಯಾವಲ್ಸ್ ಕಂಪೆನಿ(Havells) ಕ್ರಿಯಾತ್ಮಕವಾಗಿ ಬರಮಾಡಿಕೊಂಡಿದೆ. 100 ಫ್ಯಾನ್‌ಗಳನ್ನು ಬಳಸಿಕೊಂಡು ಗಣೇಶನನ್ನು ರಚಿಸಿ ಗಮನ ಸೆಳೆದಿದೆ. ಪೂರ್ಣ ವರದಿಗೆ ಈ ಲಿಂಕ್ ಕ್ಲಿಕ್ ಮಾಡಿ
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ
ದೇಶ
Sanatan Dharma row: ತಮಿಳುನಾಡು ಸಿಎಂ ಪುತ್ರ ಉದಯನಿಧಿ ವಿರುದ್ಧ ದಿಲ್ಲಿಯಲ್ಲಿ ಸಂತರ ಪ್ರತಿಭಟನೆ, ಕ್ರಮಕ್ಕೆ ಆಗ್ರಹ
Sanatan Dharma row: ತಮಿಳುನಾಡು ಸಚಿವರೂ ಆಗಿರುವ, ಮುಖ್ಯಮಂತ್ರಿ ಪುತ್ರ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ, ವಿವಾದಕ್ಕೆ ಕಾರಣರಾಗಿದ್ದಾರೆ.
ನವದೆಹಲಿ: ಸನಾತನ ಧರ್ಮವನ್ನು (Sanatan Dharma row) ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದ ತಮಿಳುನಾಡಿನ ಸಚಿವರೂ ಆಗಿರುವ, ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ (Udhayanidhi Stalin) ವಿರುದ್ಧ ಸೋಮವಾರ ದಿಲ್ಲಿಯ ತಮಿಳುನಾಡು ಭವನದ ಬಳಿ ಸಾಧು, ಸಂತರು ಪ್ರತಿಭಟನೆ ನಡೆಸಿದರು(Hindu Saints protest). ಬಳಿಕ, ಉದಯನಿಧಿ ಸ್ಟಾಲಿನ್ ಸೇರಿದಂತೆ ಇತರ ನಾಯಕರ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶವನ್ನು ಹೊರ ಹಾಕಿದರು.
ದೆಹಲಿ ಸಂತ ಮಹಾಮಂಡಲದ ಬ್ಯಾನರ್ ಅಡಿಯಲ್ಲಿ ಪ್ರತಿಭಟನಾಕಾರರು ಉದಯನಿಧಿ ಸ್ಟಾಲಿನ್ ಮತ್ತು ಇತರ ನಾಯಕರನ್ನು ಖಂಡಿಸುವ ಫಲಕಗಳನ್ನು ಹಿಡಿದು ಸರೋಜಿನಿ ನಗರದ ದೇವಸ್ಥಾನದಿಂದ ತಮಿಳುನಾಡು ಭವನದ ಕಡೆಗೆ ಮೆರವಣಿಗೆ ನಡೆಸಿದರು. ತಮಿಳು ನಾಡು ಭವನದತ್ತ ಹೋಗುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು, ಆಫ್ರಿಕಾ ಅವೆನ್ಯೂದಲ್ಲಿ ತಡೆದರು. ಹಾಗಾಗಿ, ಅದೇ ಪ್ರದೇಶದಲ್ಲಿ ಪ್ರತಿಭಟನಾ ನಿರತ ಸಂದತರು, ತಮಿಳುನಾಡು ಸಚಿವ ಉದಯನಿಧಿ ಮತ್ತು ಇತರರ ಪ್ರತಿಕೃತಿಗಳನ್ನು ಸುಟ್ಟುಹಾಕಿ, ತಮ್ಮ ಆಕ್ರೋಶವನ್ನು ಹೊರ ಹಾಕಿದರು.
ಸನಾತನ ಧರ್ಮದ ವಿರುದ್ಧ ಹೇಳಿಕೆಗಳನ್ನು ನೀಡುವುದರಿಂದ ವಿವಿಧ ರಾಜಕೀಯ ಪಕ್ಷಗಳ ನಾಯಕರು ತಮ್ಮ ಮುಖಂಡರನ್ನು ನಿರ್ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೇ, ಸನಾತನ ಧರ್ಮದ ನಿರ್ಮೂಲನೆ ಅಗತ್ಯ ಎಂದು ಹೇಳಿದ್ದ ಪುತ್ರ ಉದಯನಿಧಿಯ ಪರವಾಗಿ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿಯನ್ನೂ ಓದಿ: Udhayanidhi Stalin: ಸನಾತನ ಧರ್ಮ; ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್, ಎದುರಾಯ್ತು ಸಂಕಷ್ಟ
ಈ ವೇಳೆ ಮಾತನಾಡಿದ ದೆಹಲಿ ಸಂತ ಮಹಾಮಂಡಲ್ ಅಧ್ಯಕ್ಷ ನಾರಾಯಣ ಗಿರಿ ಮಹಾರಾಜ್ ಅವರು ಮಾತನಾಡಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಗಳು ಯಾಕೆ ಮೌನವಾಗಿವೆ ಎಂದು ಪ್ರಶ್ನಿಸಿದರು. ಸನಾತನ ಧರ್ಮದ ವಿರುದ್ಧ ರಾಜಕಾರಣಿಗಳ ದ್ವೇಷದ ಮಾತುಗಳನ್ನು ಸುಪ್ರೀಂ ಕೋರ್ಟ್ ಕೂಡ ಗುರುತಿಸಿದೆ, ಸನಾತನ ಧರ್ಮದ ವಿರುದ್ಧ ರಾಜಕಾರಣಿಗಳು ಬಳಸುತ್ತಿರುವ ಭಾಷೆಯು ಸಮುದಾಯಗಳ ನಡುವೆ ದ್ವೇಷವನ್ನು ಉಂಟುಮಾಡುತ್ತದೆ ಮತ್ತು ಅಂತಹ ರಾಜಕೀಯ ನಾಯಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
-
ವಿದೇಶ19 hours ago
Akshardham : ವಿದೇಶದಲ್ಲಿನ ಅತೀ ದೊಡ್ಡ ದೇವಾಲಯ ಉದ್ಘಾಟನೆಗೆ ಸಜ್ಜು; ಏನಿದರ ವಿಶೇಷ?
-
ಕರ್ನಾಟಕ17 hours ago
PSI Scam : ಪಿಎಸ್ಐ ನೇಮಕಾತಿ ಅಕ್ರಮ; ಕೊನೆಗೂ ಅಮೃತ್ ಪಾಲ್ಗೆ ಜಾಮೀನು
-
ದೇಶ12 hours ago
Swara Bhasker: ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ ಸ್ವರಾ ಭಾಸ್ಕರ್, ಮಗಳ ಹೆಸರು ‘ರಾಬಿಯಾ’
-
ಕರ್ನಾಟಕ13 hours ago
Weather Update: ಭಾರತದಲ್ಲಿ ಮುಗೀತು ಮಳೆಗಾಲ! ಎಷ್ಟು ಮಳೆ ಕೊರತೆ, ಬರಗಾಲ ಪಕ್ಕಾ?
-
South Cinema16 hours ago
Darshan Thoogudeepa: ನಟ ದರ್ಶನ್ ವಿರುದ್ಧ ಮಂಡ್ಯದಲ್ಲಿ ರೈತರ ಆಕ್ರೋಶ; ಕ್ಷಮೆಗೆ ಆಗ್ರಹ
-
ಅಂಕಣ19 hours ago
ವಿಧಾನಸೌಧ ರೌಂಡ್ಸ್: ಜೆಡಿಎಸ್ಗೆ ಸಂಜೀವಿನಿಯಾದ ಬಿಜೆಪಿ ಮೈತ್ರಿ; ಬೆಂಗಳೂರು ದಕ್ಷಿಣದಿಂದ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿ?
-
ದೇಶ17 hours ago
Army Jawan: ಯೋಧನ ಮೇಲೆ ಹಲ್ಲೆ ನಡೆಸಿ, ಬೆನ್ನಿನ ಮೇಲೆ ‘ಪಿಎಫ್ಐ’ ಎಂದು ಬರೆದ ದುರುಳರು!
-
ದೇಶ9 hours ago
Lawyer Sara Sunny: ಸುಪ್ರೀಂ ಕೋರ್ಟ್‌ನಲ್ಲಿ ಮೊದಲ ಬಾರಿಗೆ ಸಂಜ್ಞೆ ಭಾಷೆಯಲ್ಲಿ ವಾದ ಮಂಡನೆ! ಇತಿಹಾಸ ಸೃಷ್ಟಿಸಿದ ಸಾರಾ