Site icon Vistara News

Gyanvapi Case: ಜ್ಞಾನವಾಪಿ ಮಸೀದಿ ಸಮೀಕ್ಷೆಗೆ ಸುಪ್ರೀಂ ಕೋರ್ಟ್‌ ತಾತ್ಕಾಲಿಕ ಬ್ರೇಕ್

Supreme Court On Gyanvapi Case

Gyanvapi Case: Supreme Court allows ASI survey without excavation

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿಯಲ್ಲಿರುವ ಕಾಶಿ ವಿಶ್ವನಾಥ ದೇವಾಲಯಕ್ಕೆ ಹೊಂದಿಕೊಂಡಿರುವ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ‌ (Gyanvapi Case) ಸುಪ್ರೀಂ ಕೋರ್ಟ್‌ ತಾತ್ಕಾಲಿಕವಾಗಿ ತಡೆಯಾಜ್ಞೆ ನೀಡಿದೆ. ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಮಸೀದಿ ಸಮಿತಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಜುಲೈ 26ರ ಸಂಜೆ 5 ಗಂಟೆಯವರೆಗೆ ವೈಜ್ಞಾನಿಕ ಸಮೀಕ್ಷೆ ನಡೆಸಬಾರದು ಎಂದು ಆದೇಶ ನೀಡಿದೆ.

ಜ್ಞಾನವಾಪಿ ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆಗೆ ನೀಡಿರುವ ಅನುಮತಿಯನ್ನು ರದ್ದುಗೊಳಿಸಬೇಕು ಎಂದು ಮಸೀದಿ ನಿರ್ವಹಣಾ ಸಮಿತಿ ಪರ ವಕೀಲರು ವಾದ ಮಂಡಿಸಿದರು. “ಕಾರ್ಬನ್‌ ಡೇಟಿಂಗ್‌ಗೆ ತಡೆ ನೀಡಲಾಗಿದೆ. ಅದರಂತೆ, ವೈಜ್ಞಾನಿಕ ಸಮೀಕ್ಷೆಗೂ ಅನುಮತಿ ನೀಡಬಾರದು” ಎಂದರು.

ಆಗ ನ್ಯಾಯಾಲಯವು, “ವಾರಾಣಸಿ ಜಿಲ್ಲಾ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಅಲಹಾಬಾದ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ. ಜುಲೈ 26ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್‌ ನೀಡಿರುವ ಅವಧಿಯೊಳಗೆ ಅಲಹಾಬಾದ್‌ ಹೈಕೋರ್ಟ್‌ ಅರ್ಜಿಯ ವಿಚಾರಣೆ ನಡೆಸಬೇಕು. ಹಾಗೆಯೇ, ಜುಲೈ 26ರ ಸಂಜೆ 5 ಗಂಟೆಯವರೆಗೆ ವೈಜ್ಞಾನಿಕ ಸಮೀಕ್ಷೆ ನಿಲ್ಲಿಸಬೇಕು” ಎಂದು ಸೂಚಿಸಿತು.

ಇದನ್ನೂ ಓದಿ: Gyanvapi Case: ಶ್ರಾವಣ ಸೋಮವಾರದಂದೇ ಜ್ಞಾನವಾಪಿ ಮಸೀದಿ ವೈಜ್ಞಾನಿಕ ಸಮೀಕ್ಷೆ ಆರಂಭ; ಬಿಗಿ ಭದ್ರತೆ

ಐಎಸ್‌ಐ ವೈಜ್ಞಾನಿಕ ಸಮೀಕ್ಷೆ ಬಗ್ಗೆ ಸುಪ್ರೀಂ ಕೋರ್ಟ್‌ಗೆ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಮಾಹಿತಿ ನೀಡಿದರು. “ಮಸೀದಿಯಲ್ಲಿ ವೈಜ್ಞಾನಿಕ ಸಮೀಕ್ಷೆ ನಡೆಯುತ್ತಿದೆಯೇ ಹೊರತು, ಉತ್ಖನನ ನಡೆಯುತ್ತಿಲ್ಲ. ಮಸೀದಿಯ ಮಾಪನ, ಫೋಟೊಗ್ರಫಿ ಹಾಗೂ ರೆಡಾರ್‌ ಸಮೀಕ್ಷೆ ನಡೆಸಲಾಗುತ್ತಿದೆ. ಮಸೀದಿಯ ಒಂದೇ ಒಂದು ಇಟ್ಟಿಗೆಗೂ ಹಾನಿಯಾಗುವುದಿಲ್ಲ” ಎಂದು ತಿಳಿಸಿದರು. ಆದರೂ, ನ್ಯಾಯಾಲಯವು ವೈಜ್ಞಾನಿಕ ಸಮೀಕ್ಷೆಗೆ ತಡೆ ನೀಡಿತು. ವಾರಾಣಸಿ ನ್ಯಾಯಾಲಯವು ವೈಜ್ಞಾನಿಕ ಸಮಿತಿ ಅನುಮತಿ ನೀಡಿದ ಕಾರಣ ಸೋಮವಾರ ಬೆಳಗ್ಗೆ ಬಿಗಿ ಭದ್ರತೆ ಮಧ್ಯೆಯೇ ಸಮೀಕ್ಷೆ ಆರಂಭವಾಗಿತ್ತು.

Exit mobile version