Site icon Vistara News

Congress: ಐಟಿ ಬೀಸುವ ದೊಣ್ಣೆಯಿಂದ ಜುಲೈ 24ರವರೆಗೆ ತಪ್ಪಿಸಿಕೊಂಡ ಕಾಂಗ್ರೆಸ್!

School Jobs

Supreme Court stays Calcutta HC order cancelling over 25,000 school jobs, slams Bengal govt

ನವದೆಹಲಿ: ಜುಲೈ 24ರವರೆಗೆ ₹ 3500 ಕೋಟಿ ತೆರಿಗೆ ಪಾವತಿ ಬಾಕಿಗೆ (Tax demand) ಸಂಬಂಧಿಸಿದಂತೆ ಕಾಂಗ್ರೆಸ್‌ (Congress) ಪಕ್ಷದ ವಿರುದ್ಧ ಯಾವುದೇ ಬಲವಂತದ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ (Income Tax) ಸೋಮವಾರ ಸುಪ್ರೀಂ ಕೋರ್ಟ್‌ಗೆ (supreme court) ತಿಳಿಸಿದೆ.

ಲೋಕಸಭೆ ಚುನಾವಣೆ (Lok Sabha Election 2024) ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆಯನ್ನು ಬಳಸಿಕೊಂಡು ಪಕ್ಷವನ್ನು ದುರ್ಬಲಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಅದಕ್ಕೆ ಸರ್ಕಾರ ಈ ಮೂಲಕ ಉತ್ತರ ನೀಡಿದೆ. “ಚುನಾವಣೆ ನಡೆಯುತ್ತಿರುವುದರಿಂದ ಯಾವುದೇ ಪಕ್ಷಕ್ಕೆ ಯಾವುದೇ ಸಮಸ್ಯೆ ಉಂಟಾಗುವುದನ್ನು ಇಲಾಖೆ ಬಯಸುವುದಿಲ್ಲ” ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

ತೆರಿಗೆ ಬೇಡಿಕೆಗಳನ್ನು ಹೆಚ್ಚಿಸಲು ಐಟಿ ಇಲಾಖೆಗೆ ಆಧಾರವಾಗಿರುವ 2016ರ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕಾಂಗ್ರೆಸ್ ಪಕ್ಷ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಲಯವು ಹೇಳಿಕೆಯನ್ನು ದಾಖಲಿಸಿದೆ. ಸುಪ್ರೀಂ ಕೋರ್ಟ್ ಈಗ ಜುಲೈ 24ರಂದು ಮುಂದಿನ ವಿಚಾರಣೆ ನಡೆಸಲಿದೆ.

ಕಾಂಗ್ರೆಸ್‌ ಖಾತೆಗಳು ಸೀಜ್

ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಚಾರ ಸೇರಿ ಹಲವು ಕಾರ್ಯ ಚಟುವಟಿಕೆಗಳಿಗಾಗಿ ರೈಲು ಟಿಕೆಟ್‌ ಬುಕ್‌ ಮಾಡಲು ಕೂಡ ದುಡ್ಡಿಲ್ಲ ಎಂದು ಇತ್ತೀಚೆಗೆ ಕಾಂಗ್ರೆಸ್‌ ಬೇಸರ ವ್ಯಕ್ತಪಡಿಸಿತ್ತು. ತೆರಿಗೆ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ ವಿರುದ್ಧ ಆರಂಭಿಸಿರುವ ತೆರಿಗೆ ಮರು ಮೌಲ್ಯಮಾಪನ ಪ್ರಕ್ರಿಯೆಗೆ (Tax Re-Assessment Proceeding) ತಡೆ ನೀಡುವಂತೆ ಕೋರಿದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ (Delhi High Court) ನಿರಾಕರಿಸಿತ್ತು.

ಆದಾಯ ತೆರಿಗೆ ಪಾವತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆಯು ಕಾಂಗ್ರೆಸ್‌ನ ಹಲವು ಖಾತೆಗಳಿಗೆ ತಡೆಹಿಡಿದಿದೆ. ಅಷ್ಟೇ ಅಲ್ಲ, ಕಾಂಗ್ರೆಸ್‌ ಪಕ್ಷದ ಹಲವು ಖಾತೆಗಳಿಂದ ಆದಾಯ ತೆರಿಗೆ ಇಲಾಖೆಯು 65 ಕೋಟಿ ರೂಪಾಯಿ ವಿತ್‌ಡ್ರಾ ಮಾಡಿದೆ. ನವದೆಹಲಿಯ ಬ್ಯಾಂಕ್ ಆಫ್ ಬರೋಡಾ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಿಂದ ಐಟಿ ಇಲಾಖೆಯು ಹಣ ವಿತ್‌ಡ್ರಾ ಮಾಡಿದೆ. ಕಾಂಗ್ರೆಸ್‌ನ ಮೂರು ಬ್ಯಾಂಕ್ ಖಾತೆಗಳಿಂದ 60.25 ಕೋಟಿಯನ್ನು ಡಿಮ್ಯಾಂಡ್ ಡ್ರಾಫ್ಟ್‌ಗಳ ರೂಪದಲ್ಲಿ ತೆಗೆದುಕೊಳ್ಳಲಾಗಿದೆ. ಭಾರತೀಯ ಯುವ ಕಾಂಗ್ರೆಸ್‌ನ ಖಾತೆಯಿಂದ 5 ಕೋಟಿ ರೂ. ಪಡೆಯಲಾಗಿದೆ ಎಂದು ಕಾಂಗ್ರೆಸ್‌ ತಿಳಿಸಿದೆ.

2017-18ರ ಹಣಕಾಸು ವರ್ಷ ಅಂದರೆ 2018-19ರ ಮೌಲ್ಯಮಾಪನ ವರ್ಷದಲ್ಲಿ ಕಾಂಗ್ರೆಸ್ 45 ದಿನಗಳ ತಡವಾಗಿ ತನ್ನ ಬ್ಯಾಂಕ್‌ ಖಾತೆಗಳ ವಿವರಗಳನ್ನು ಸಲ್ಲಿಸಿತ್ತು. ವಿಳಂಬ ತೆರಿಗೆ ಪಾವತಿಯ ಹಿನ್ನೆಲೆಯಲ್ಲಿ ಆದಾಯ ತೆರಿಗೆ, ಕಾಂಗ್ರೆಸ್‌ ಖಾತೆಗಳನ್ನು ಸೀಜ್‌ ಮಾಡಿತ್ತು. ಪಕ್ಷದ ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಿದ ಬೆನ್ನಿಗೆ ನ್ಯಾಯ ಮಂಡಳಿಯ ಮೊರೆ ಹೋದ ಕಾಂಗ್ರೆಸ್‌, ಬ್ಯಾಂಕ್‌ ಖಾತೆಗಳನ್ನು ಚಾಲ್ತಿ ಮಾಡುವಂತೆ ಮನವಿ ಮಾಡಿತ್ತು.

ಇದನ್ನೂ ಓದಿ: Congress: ಕಾಂಗ್ರೆಸ್‌ಗೆ ಐಟಿ ಮತ್ತೊಂದು ಶಾಕ್;‌ 1,700 ಕೋಟಿ ರೂ. ಟ್ಯಾಕ್ಸ್ ನೋಟಿಸ್‌ ಜಾರಿ‌

Exit mobile version