Site icon Vistara News

Uniform Civil Code: ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ: ಕೇಂದ್ರ

Law minister Kiren Rijiju's car meets with minor accident in Jammu Kashmir

ಕಿರಣ್‌ ರಿಜಿಜು

ನವದೆಹಲಿ: ಸದ್ಯದ ಮಟ್ಟಿಗೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ (Uniform Civil Code) ಜಾರಿಗೊಳಿಸುವ ಸಂಬಂಧ ಯಾವುದೇ ನಿರ್ಧಾರವನ್ನು ಸರ್ಕಾರವು ಕೈಗೊಂಡಿಲ್ಲ ಎಂದು ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು (Kiren Rijiju) ಅವರು ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. ಲಿಖಿತ ಉತ್ತರವನ್ನು ಒದಗಿಸಿರುವ ರಿಜಿಜು ಅವರು, ”ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳನ್ನು ಪರಿಶೀಲಿಸಲು ಮತ್ತು ಶಿಫಾರಸುಗಳನ್ನು ಮಾಡಲು ಸರ್ಕಾರವು 21ನೇ ಕಾನೂನು ಆಯೋಗಕ್ಕೆ ಮನವಿ ಮಾಡಿತ್ತು,” ಎಂದು ಹೇಳಿದ್ದಾರೆ.

21ನೇ ಕಾನೂನು ಆಯೋಗದ ಅವಧಿಯು 2018 ಆಗಸ್ಟ್ 31ಕ್ಕೆ ಮುಕ್ತಾಯವಾಗಿತ್ತು. ಕಾನೂನು ಆಯೋಗ ಒದಗಿಸಿರುವ ಮಾಹಿತಿಯ ಪ್ರಕಾರ, ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ನಿರ್ಧಾರವನ್ನು 22ನೇ ಕಾನೂನು ಆಯೋಗಕ್ಕೆ ಬಿಡಲಾಗಿದೆ ಎಂಬುದನ್ನು ರಾಜ್ಯಸಭೆ ಗಮನಕ್ಕೆ ತಂದರು. ಹಾಗಾಗಿ, ಸದ್ಯದ ಮಟ್ಟಿಗೆ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸಂಬಂಧ ಸರ್ಕಾರ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Mood of The Nation | ಏಕರೂಪ ನಾಗರಿಕ ಸಂಹಿತೆಗೆ ಜನ ಬೆಂಬಲ; ಸಮೀಕ್ಷೆಯಲ್ಲಿ ಬಹಿರಂಗ

ಏಕರೂಪ ನಾಗರಿಕ ಸಂಹಿತೆ ಜಾರಿಯೂ ಬಿಜೆಪಿ ಪ್ರಣಾಳಿಕೆಯ ಪ್ರಮುಖ ಅಂಶವಾಗಿದೆ. 2014 ಮತ್ತು 2019ರ ಲೋಕಸಭೆ ಚುನಾವಣಾ ಪ್ರಣಾಳಿಕೆಯಲ್ಲೂ ಏಕರೂಪ ನಾಗರಿಕ ಸಂಹಿತೆ ಜಾರಿಯ ಕುರಿತು ಭರವಸೆ ನೀಡಲಾಗಿದೆ. ಮುಂದಿನ ವರ್ಷ ಲೋಕಸಭೆಗೆ ಮತ್ತೆ ಚುನಾವಣೆ ನಡೆಯಲಿದೆ.

Exit mobile version