ನವದೆಹಲಿ: ಕಾಂಗ್ರೆಸ್‌ನ ಉನ್ನತ ನಿರ್ಧಾರ ಕೈಗೊಳ್ಳುವ ಸಮಿತಿಯ ಸದಸ್ಯರನ್ನು ಚುನಾವಣೆ ಮೂಲಕ ಆಯ್ಕೆ ಮಾಡುವುದಿಲ್ಲ. ಬದಲಿಗೆ ಮಲ್ಲಿಕಾರ್ಜುನ ಖರ್ಗೆ ಅವರು ನಾಮನಿರ್ದೇಶನ ಮಾಡಲಿದ್ದಾರೆಂದು ಎಂದು ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ(Congress Plenary Session).
ಕಾಂಗ್ರೆಸ್‌ನ ಕಾರ್ಯಕಾರಿ ಸಮಿತಿಯ ಸದಸ್ಯರನ್ನು ನಾಮ ನಿರ್ದೇಶನ ಮಾಡುವ ಅಧಿಕಾರವನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ನೀಡಲು ಕಾಂಗ್ರೆಸ್ ಉಸ್ತುವಾರಿ ಸಮಿತಿಯು ಸರ್ವಾನುಮತದಿಂದ ನಿರ್ಧಾರ ಕೈಗೊಂಡಿದೆ ಎಂದು ಪಕ್ಷದ ಸಂವಹನ ವಿಭಾಗವನ್ನು ಮುನ್ನಡೆಸುತ್ತಿರುವ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಹೇಳಿದ್ದಾರೆ.
ಹೀಗಿದ್ದೂ, ಈ ನಿರ್ಧಾರವು ಏಕಪಕ್ಷೀಯವಾಗಿರಲಿಲ್ಲ. ಅಜಯ್ ಮಾಕೆನ್, ಅಭಿಷೇಕ್ ಮನು ಸಿಂಘ್ವಿ ಮತ್ತು ದಿಗ್ವಿಜಯ್ ಸಿಂಗ್‌ನಂಥ ನಾಯಕರು ಚುನಾವಣೆಯನ್ನು ನಡೆಸುವುದು ಉತ್ತಮ ಎಂದು ವಾದಿಸಿದರು. ಸಿಂಘ್ವಿ ಅವರಂತೂ, ಈ ಚುನಾವಣೆಯಲ್ಲಿ 2024ರ ಸಾರ್ವತ್ರಿಕ ಚುನಾವಣೆಯ ಬಳಿಕವೂ ಮಾಡಬಹುದಾಗಿದೆ ಎಂದು ವಾದಿಸಿದರು.
ಇದನ್ನೂ ಓದಿ: Congress Plenary Session: ಕಾಂಗ್ರೆಸ್ ಮಹಾಧಿವೇಶನದ ಮೊದಲ ದಿನ ಸೋನಿಯಾ, ರಾಹುಲ್, ಪ್ರಿಯಾಂಕಾ ಗೈರು
ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ. ಖರ್ಗೆ ಅವರ ಕೈ ಬಲಪಡಿಸಿದರೆ ಅವರು ಕಾಂಗ್ರೆಸ್ ಬಲಪಡಿಸಲು ಸಾಧ್ಯವಾಗುತ್ತದೆ ಎಂದು ಕರ್ನಾಟಕದ ನಾಯಕ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅಲ್ಲದೇ, ಮಲ್ಲಿಕಾರ್ಜುನ ಖರ್ಗೆ ಅವರ ಪರವಾಗಿ ಬ್ಯಾಟ್ ಮಾಡಿದ್ದಾರೆ.