ಅಯೋಧ್ಯೆ: ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರದ (Ram Mandir) ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಅದರಲ್ಲೂ, ಜನವರಿಯಲ್ಲಿ ರಾಮಮಂದಿರಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಣೆ ಮಾಡಿದ ಬಳಿಕವಂತೂ ನಿರ್ಮಾಣಕ್ಕೆ ವೇಗ ನೀಡಲಾಗಿದೆ. ರಾಮಮಂದಿರ ನಿರ್ಮಾಣದ ಕುರಿತು ಈಗ ಹೊಸ ಮಾಹಿತಿ ಲಭ್ಯವಾಗಿದ್ದು, ಗರ್ಭಗುಡಿಯ ಬಾಗಿಲಿಗೆ ಸ್ಟೀಲಿನದ್ದಲ್ಲ, ಬಂಗಾರದ ಲೇಪನ ಇರಲಿದೆ ಎಂದು ತಿಳಿದುಬಂದಿದೆ.
ರಾಮಮಂದಿರವನ್ನು ಮೂರು ಮಹಡಿಗಳಲ್ಲಿ ಭವ್ಯವಾಗಿ ನಿರ್ಮಿಸಲಾಗುತ್ತಿದೆ. ಮೊದಲ ಹಂತದಲ್ಲಿ ಈಗಾಗಲೇ ನೆಲಮಹಡಿ ನಿರ್ಮಾಣದ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಅಕ್ಟೋಬರ್ ವೇಳೆಗೆ ನೆಲಮಹಡಿ ನಿರ್ಮಾಣದ ಕಾರ್ಯ ಮುಗಿಯಲಿದೆ. ಇದಾದ ಬಳಿಕ ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ಮಾಡಿ, ಜನವರಿಯಲ್ಲಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಚಾಲನೆ ನೀಡಲಿದ್ದಾರೆ ಎಂದು ರಾಮಮಂದಿರ ಟ್ರಸ್ಟ್ ಮೂಲಗಳು ತಿಳಿಸಿವೆ. ಹಾಗಾಗಿ, ಮಂದಿರ ನಿರ್ಮಾಣದ ಅಂತಿಮ ಹಂತದ ಸಿದ್ಧತೆಗಳು ಚುರುಕಾಗಿವೆ ಎಂದೂ ತಿಳಿದುಬಂದಿದೆ.
ಗರ್ಭಗುಡಿಯ ಹೊರನೋಟ
श्री राम जन्मभूमि मंदिर के गृभगृह की दीवार।
— Champat Rai (@ChampatRaiVHP) May 17, 2023
अद्भुत, अलौकिक…भव्य रूप ले रहा मंदिर। pic.twitter.com/XiBtzocDb4
ಮೈಸೂರಿನಿಂದ ಎರಡು ಶಿಲೆ ರವಾನೆ
ಶ್ರೀ ರಾಮಮಂದಿರ ಸಂಕೀರ್ಣ ನಿರ್ಮಾಣಕ್ಕಾಗಿ ದೇಶದ ವಿವಿಧ ಭಾಗಗಳಿಂದ ಕಲ್ಲುಗಳನ್ನು ಅಯೋಧ್ಯೆಗೆ ತರಿಸಿ, ಕರಸೇವಕಪುರಂ ಕಾರ್ಯಾಗಾರದಲ್ಲಿ ಸಂಗ್ರಹಿಸಿ ಇಡಲಾಗಿದೆ. ಅದಾದ ಮೇಲೆ ಕೂಡ ನೇಪಾಳ, ಮೈಸೂರಿನಿಂದ ತಲಾ ಎರಡು ಶಿಲೆಗಳನ್ನು ತರಿಸಲಾಗಿದೆ. ಇನ್ನೂ 10 ಕಲ್ಲುಗಳನ್ನು ಇಲ್ಲಿಗೆ ತರುವುದು ಬಾಕಿಯಿದ್ದು, ತಂದಾದ ಮೇಲೆ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಲಾಗುವುದು ಎಂದು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕೆಲ ತಿಂಗಳ ಹಿಂದೆ ಮಾಹಿತಿ ನೀಡಿದೆ. ಮೈಸೂರಿನಿಂದ ಇನ್ನೂ ಹಲವು ಶಿಲೆಗಳನ್ನು ಅಯೋಧ್ಯೆಗೆ ಕಳುಹಿಸಲಾಗುತ್ತದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Ayodhya Ram Mandir: ಶ್ರೀರಾಮಮಂದಿರಲ್ಲಿ 3600 ವಿವಿಧ ಪ್ರತಿಮೆಗಳ ಕೆತ್ತನೆ; ಫೋಟೋ ಶೇರ್ ಮಾಡಿದ ಟ್ರಸ್ಟ್
ಸಾವಿರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುತ್ತಿದೆ. ಸುಮಾರು 1,800 ಕೋಟಿ ರೂ. ವ್ಯಯವಾಗಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ನಿರ್ಮಾಣ ಕಾರ್ಯವು ಬಹುತೇಕ ಪೂರ್ಣಗೊಂಡಿದೆ. ಜನವರಿಯಲ್ಲಿಯೇ ರಾಮಮಂದಿರಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಈಗಾಗಲೇ ಘೋಷಣೆ ಮಾಡಿದ್ದಾರೆ.
ದೇಶದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ