Deepfake: ಗರ್ಬಾ ನೃತ್ಯ ಡೀಪ್‌ಫೇಕ್‌ ಅಲ್ಲ, ಅದು ನಾನೇ; ಅಚ್ಚರಿಯ ಸ್ಪಷ್ಟನೆ! - Vistara News

ದೇಶ

Deepfake: ಗರ್ಬಾ ನೃತ್ಯ ಡೀಪ್‌ಫೇಕ್‌ ಅಲ್ಲ, ಅದು ನಾನೇ; ಅಚ್ಚರಿಯ ಸ್ಪಷ್ಟನೆ!

Deepfake: ಡೀಪ್‌ಫೇಕ್‌ ತಂತ್ರಜ್ಞಾನದ ಮೂಲಕ ನಟಿಯರ ತಿರುಚಿದ, ಅಶ್ಲೀಲವಾಗಿ ಎಡಿಟ್‌ ಮಾಡಿದ ವಿಡಿಯೊಗಳ ಕುರಿತು ಮೋದಿ ಆತಂಕ ವ್ಯಕ್ತಪಡಿಸಿದ್ದರು. ಅಲ್ಲದೆ, ನಾನು ನೃತ್ಯ ಮಾಡಿದ ರೀತಿ ಡೀಪ್‌ಫೇಕ್‌ ಮಾಡಿದ ವಿಡಿಯೊವನ್ನು ನಾನೇ ನೋಡಿದ್ದೆ ಎಂದಿದ್ದರು.

VISTARANEWS.COM


on

Deepfake Row
ನರೇಂದ್ರ ಮೋದಿ ಅವರನ್ನೇ ಹೋಲುವ ವಿಕಾಸ್‌ ಮಹಾಂತೆ.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನಟಿ ರಶ್ಮಿಕಾ ಮಂದಣ್ಣ (Rashmika Mandanna) ಸೇರಿ ಬಾಲಿವುಡ್‌ನ ಹಲವು ನಟಿಯರ ಡೀಪ್‌ಫೇಕ್‌ ವಿಡಿಯೊಗಳು ವೈರಲ್‌ ಆಗಿ ಸಂಚಲನ ಮೂಡಿಸಿವೆ. ಡೀಪ್‌ಫೇಕ್‌ ವಿಡಿಯೊಗಳ (Deepfake Videos) ಕುರಿತು ಆತಂಕ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ (Narendra Modi), ಇಂತಹ ವಿಡಿಯೊಗಳನ್ನು ಗುರುತಿಸಿ, ಕ್ರಮ ತೆಗೆದುಕೊಳ್ಳಿ ಎಂದು ಚಾಟ್‌ಜಿಪಿಟಿಗೆ ಸೂಚಿಸಿದ್ದರು. ಅಲ್ಲದೆ, “ನಾನು ಗರ್ಬಾ ನೃತ್ಯ ಮಾಡುವ ರೀತಿ ಬಿಂಬಿಸಿದ್ದ ಡೀಪ್‌ಫೇಕ್‌ (Deepfake) ವಿಡಿಯೊವನ್ನು ನಾನೇ ನೋಡಿದ್ದೆ” ಎಂದಿದ್ದರು. ಆದರೆ, ನರೇಂದ್ರ ಮೋದಿ ಅವರನ್ನೇ ಹೋಲುವ ವಿಕಾಸ್‌ ಮಹಾಂತೆ (Vikas Mahante) ಅವರು ಈ ಕುರಿತು ಸ್ಪಷ್ಟಪಡಿಸಿದ್ದಾರೆ. “ಗರ್ಬಾ ನೃತ್ಯದಲ್ಲಿ ಕಾಣಿಸಿಕೊಂಡಿರುವುದು ನಾನೇ. ಅದು ಡೀಪ್‌ ಫೇಕ್‌ ವಿಡಿಯೊ ಅಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ವಿಕಾಸ್ ಮಹಾಂತೆ ಹೇಳಿದ್ದೇನು?‌

ಮಹಾರಾಷ್ಟ್ರದ ಮಲಾಡ್‌ನಲ್ಲಿ ಉದ್ಯಮಿಯಾಗಿರುವ ವಿಕಾಸ್‌ ಮಹಾಂತೆ ಅವರು ನರೇಂದ್ರ ಮೋದಿ ಅವರನ್ನೇ ಹೋಲುತ್ತಾರೆ. ಇದೇ ಕಾರಣಕ್ಕೆ ಇವರು ಖ್ಯಾತಿ ಪಡೆದಿದ್ದು, ಹಲವು ಬಾರಿ ಬಿಜೆಪಿ ಪರ ಪ್ರಚಾರವನ್ನೂ ಮಾಡಿದ್ದಾರೆ. ಇವರು ಈಗ ಮೋದಿ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. “ನರೇಂದ್ರ ಮೋದಿ ಅವರಂತೆ ಕಾಣುವ ಕಾರಣದಿಂದಾಗಿ ದೇಶ-ವಿದೇಶಗಳಿಂದ ನನಗೆ ಆಹ್ವಾನ ಇರುತ್ತದೆ. ಆದರೆ, ಒಂದು ವಿಷಯ ಸ್ಪಷ್ಟಪಡಿಸುವುದು ಏನೆಂದರೆ, ಗರ್ಬಾ ನೃತ್ಯ ಮಾಡಿದ್ದು ನಾನೇ. ಅದು ಡೀಪ್‌ಫೇಕ್‌ ವಿಡಿಯೊ ಅಲ್ಲ” ಎಂದಿದ್ದಾರೆ.

ವೈರಲ್‌ ಆಗಿದ್ದ ಗರ್ಬಾ ನೃತ್ಯದ ವಿಡಿಯೊ

ನರೇಂದ್ರ ಮೋದಿ ಹೇಳಿದ್ದಿಷ್ಟು

ಕೆಲ ದಿನಗಳ ಹಿಂದಷ್ಟೇ ಡೀಪ್‌ಫೇಕ್‌ ಕುರಿತು ಮೋದಿ ಅವರು ಆತಂಕ ವ್ಯಕ್ತಪಡಿಸಿದ್ದರು. ಡೀಪ್‌ಫೇಕ್‌ ವಿಡಿಯೊ ಅವಾಂತರದ ಅನುಭವವನ್ನು ಅವರೇ ಖುದ್ದು ಹಂಚಿಕೊಂಡಿದ್ದರು. “ಡೀಪ್‌ಫೇಕ್‌ ವಿಡಿಯೊ ಅಪಾಯಕಾರಿಯಾಗಿದೆ. ನಾನೇ ಗರ್ಬಾ ನೃತ್ಯವನ್ನು ಮಾಡಿದ ಡೀಪ್‌ಫೇಕ್‌ ವಿಡಿಯೊ ವೈರಲ್‌ ಆಗಿತ್ತು. ಆ ವಿಡಿಯೊವನ್ನು ನಾನೇ ನೋಡಿದೆ. ಇಂತಹ ಡೀಪ್‌ಫೇಕ್‌ ವಿಡಿಯೊಗಳು ದೇಶದ ವ್ಯವಸ್ಥೆಯನ್ನೇ ಹಾಳು ಮಾಡುತ್ತಿವೆ” ಎಂದು ಹೇಳಿದ್ದರು.

ಇದನ್ನೂ ಓದಿ: Actress Kajol: ರಶ್ಮಿಕಾ, ಕತ್ರಿನಾ ಆಯ್ತು, ಈಗ ಕಾಜೋಲ್ ಡೀಪ್‌ಫೇಕ್ ವಿಡಿಯೊ ವೈರಲ್‌!

ಕನ್ನಡದ ನಟಿ ರಶ್ಮಿಕಾ ಮಂದಣ್ಣ, ಬಾಲಿವುಡ್‌ ನಟಿಯರಾದ ಕತ್ರಿನಾ ಕೈಫ್‌ ಹಾಗೂ ಕಾಜೋಲ್‌ ಅವರ ಡೀಪ್‌ಫೇಕ್‌ ವಿಡಿಯೊಗಳು ವೈರಲ್‌ ಆಗಿರುವುದು ದೇಶಾದ್ಯಂತ ಸಂಚಲನ ಮೂಡಿಸಿದೆ. ಮೊದಲಿಗೆ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‌ಫೇಕ್‌ ವಿಡಿಯೊ ವೈರಲ್‌ ಆಗಿದ್ದು ಆತಂಕ ಸೃಷ್ಟಿಸಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಾಣಿಜ್ಯ

Sensex Jump: ಷೇರುಪೇಟೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಸೆನ್ಸೆಕ್ಸ್, 24,000 ಮೀರಿದ ನಿಫ್ಟಿ

Sensex Jump: ಬೆಳಗ್ಗೆ ಸೆನ್ಸೆಕ್ಸ್ ಸುಮಾರು 200 ಅಂಕಗಳ ಕುಸಿತದೊಂದಿಗೆ ಪ್ರಾರಂಭವಾಯಿತು. ಬಳಿಕ 326 ಅಂಕಗಳ ಕುಸಿತ ಕಂಡಿತು. ಆದರೆ ಈ ಹಂತದಲ್ಲಿ, ಬ್ಯಾಂಕಿಂಗ್, ಐಟಿ ಮತ್ತು ಎಫ್‌ಎಂಸಿಜಿ ಷೇರುಗಳಲ್ಲಿನ ಖರೀದಿಯ ಹೆಚ್ಚಾಗುತ್ತಿದ್ದಂತೆ ಸೆನ್ಸೆಕ್ಸ್ 813 ಪಾಯಿಂಟ್‌ಗಳಿಂದ ಚೇತರಿಸಿಕೊಂಡಿತು ಮತ್ತು ಸೆನ್ಸೆಕ್ಸ್ 81,203 ಪಾಯಿಂಟ್‌ಗಳ ಗರಿಷ್ಠ ಮಟ್ಟವನ್ನು ತಲುಪಿತು.

VISTARANEWS.COM


on

Sensex Jump
Koo

ಮುಂಬೈ: ಇಂದಿನ ವಹಿವಾಟಿನಲ್ಲಿ ಬಿಎಸ್‌ಇ(BSE) ಸೆನ್ಸೆಕ್ಸ್ ಮತ್ತೆ ಇತಿಹಾಸ ಸೃಷ್ಟಿಸಿದೆ(Sensex Jump). ಸೆನ್ಸೆಕ್ಸ್ ಮೊದಲ ಬಾರಿಗೆ 81,000 ಮಟ್ಟವನ್ನು ದಾಟುವಲ್ಲಿ ಯಶಸ್ವಿಯಾಗಿದೆ. ಬೆಳಿಗ್ಗೆ ಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡುಬಂದಿತ್ತು. ಆದರೆ ಹೂಡಿಕೆದಾರರ ಕೆಳಹಂತದಿಂದ ಖರೀದಿ ಮರಳಿದ ನಂತರ ಸೆನ್ಸೆಕ್ಸ್ 810 ಪಾಯಿಂಟ್ಸ್ ಏರಿಕೆ ಕಂಡು 81,203 ಪಾಯಿಂಟ್ಸ್‌ಗಳಲ್ಲಿ ಗರಿಷ್ಠ ಮಟ್ಟ ತಲುಪಿತು. ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ(Nifty) ಕೂಡ ಮೊದಲ ಬಾರಿಗೆ 24,838 ಅಂಕಗಳ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ನಿಫ್ಟಿಯಲ್ಲಿ 234 ಅಂಕಗಳ ಅದ್ಭುತ ಚೇತರಿಕೆ ಕಂಡುಬಂದಿದೆ.

ಬೆಳಗ್ಗೆ ಸೆನ್ಸೆಕ್ಸ್ ಸುಮಾರು 200 ಅಂಕಗಳ ಕುಸಿತದೊಂದಿಗೆ ಪ್ರಾರಂಭವಾಯಿತು. ಬಳಿಕ 326 ಅಂಕಗಳ ಕುಸಿತ ಕಂಡಿತು. ಆದರೆ ಈ ಹಂತದಲ್ಲಿ, ಬ್ಯಾಂಕಿಂಗ್, ಐಟಿ ಮತ್ತು ಎಫ್‌ಎಂಸಿಜಿ ಷೇರುಗಳಲ್ಲಿನ ಖರೀದಿಯ ಹೆಚ್ಚಾಗುತ್ತಿದ್ದಂತೆ ಸೆನ್ಸೆಕ್ಸ್ 813 ಪಾಯಿಂಟ್‌ಗಳಿಂದ ಚೇತರಿಸಿಕೊಂಡಿತು ಮತ್ತು ಸೆನ್ಸೆಕ್ಸ್ 81,203 ಪಾಯಿಂಟ್‌ಗಳ ಗರಿಷ್ಠ ಮಟ್ಟವನ್ನು ತಲುಪಿತು. ಸೆನ್ಸೆಕ್ಸ್ 81,000 ಗಡಿ ದಾಟುವಲ್ಲಿ ಯಶಸ್ವಿಯಾಗಿರುವುದು ಇದೇ ಮೊದಲು. ಇನ್ನು ನಿಫ್ಟಿ ಕೂಡ ನಿನ್ನೆ 110 ಪಾಯಿಂಟ್‌ಗಳಷ್ಟು ಕುಸಿದಿತ್ತು. ಆದರೆ ಕಡಿಮೆ ಮಟ್ಟದಿಂದ, ನಿಫ್ಟಿ 243 ಪಾಯಿಂಟ್‌ಗಳಿಂದ ಚೇತರಿಸಿಕೊಂಡಿತು, ನಂತರ ಸೂಚ್ಯಂಕವು ಗರಿಷ್ಠ 24,746.80 ಪಾಯಿಂಟ್‌ಗಳನ್ನು ತಲುಪಿತು.

ಬಜೆಟ್‌ಗೂ ಮುನ್ನವೇ ಸೆನ್ಸೆಕ್ಸ್‌ ದಾಖಲೆ

ಭಾರತೀಯ ಷೇರು ಮಾರುಕಟ್ಟೆಯಲ್ಲಿನ ಈ ಅದ್ಭುತ ಏರಿಕೆಗೆ ಪ್ರಮುಖ ಕಾರಣ ಮುಂಬರು ದಿನಗಳಲ್ಲಿ ನಡೆಯಲಿರುವ ಕೇಂದ್ರ ಬಜೆಟ್‌ನಿಂದ ಎಂದು ಅಂದಾಜಿಸಲಾಗಿದೆ. ಬಜೆಟ್‌ನಲ್ಲಿ ಸರ್ಕಾರವು ಬಂಡವಾಳ ವೆಚ್ಚಕ್ಕಾಗಿ ಹೆಚ್ಚಿನ ಹಣವನ್ನು ಒದಗಿಸಬಹುದು ಮತ್ತು ರೈಲ್ವೆ, ರಕ್ಷಣೆ ಮತ್ತು ವಿದ್ಯುತ್ ಕ್ಷೇತ್ರಗಳಿಗೆ ದೊಡ್ಡ ಘೋಷಣೆಗಳು ಸಾಧ್ಯ ಎಂದು ನಿರೀಕ್ಷಿಸಲಾಗಿದೆ. ಅಲ್ಲದೆ, ಗ್ರಾಮೀಣ ಪ್ರದೇಶದಲ್ಲಿ ಬಳಕೆ ಹೆಚ್ಚಿಸಲು, ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಬಜೆಟ್‌ನಲ್ಲಿ ಉಡುಗೊರೆಗಳನ್ನು ನೀಡಬಹುದು, ಅದಕ್ಕಾಗಿಯೇ ಬಜೆಟ್ ಮಂಡನೆ ಮೊದಲು ಈ ವಹಿವಾಟಿನಲ್ಲಿ ಈ ಹೆಚ್ಚಳ ಕಂಡುಬಂದಿದೆ.

ಏಷ್ಯಾದ ಮಾರುಕಟ್ಟೆಗಳಲ್ಲಿ ಮಿಶ್ರ ವ್ಯಾಪಾರ

ಜಪಾನ್‌ನ ನಿಕ್ಕಿ ಸೂಚ್ಯಂಕ 1.99% ಮತ್ತು ಚೀನಾದ ಶಾಂಘೈ ಕಾಂಪೋಸಿಟ್ 0.41% ನಷ್ಟು ಕುಸಿದಿದೆ. ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ 0.05% ಹೆಚ್ಚಾಗಿದೆ. ಇನ್ನು ಅಮೆರಿಕದ ಮಾರುಕಟ್ಟೆಯಲ್ಲಿ ಬುಧವಾರ ಏರಿಕೆ ಕಂಡುಬಂದಿದೆ. ಡೌ ಜೋನ್ಸ್ ಇಂಡಸ್ಟ್ರಿಯಲ್ ಸರಾಸರಿ 243 ಪಾಯಿಂಟ್‌ಗಳು (0.59%) ಏರಿಕೆಯಾಗಿ 41,198 ಕ್ಕೆ ತಲುಪಿದೆ. ಆದರೆ NASDAQ 512 (2.77%) ಪಾಯಿಂಟ್‌ಗಳಿಂದ ಹೆಚ್ಚಾಯಿತು ಮತ್ತು 17,996 ನಲ್ಲಿ ಕೊನೆಗೊಂಡಿತು.
ಎಚ್‌ಡಿಎಫ್‌ಸಿ ಬ್ಯಾಂಕ್, ರಿಲಯನ್ಸ್, ಏಷ್ಯನ್ ಪೇಂಟ್ಸ್, ಹಿಂದೂಸ್ತಾನ್ ಯೂನಿಲಿವರ್, ಐಸಿಐಸಿಐ ಬ್ಯಾಂಕ್ ಮತ್ತು ಬಜಾಜ್ ಫೈನಾನ್ಸ್ ಮಾರುಕಟ್ಟೆ ನಿಧಾನವಾಗಿ ಏರಿಕೆ ಕಾಣುತ್ತಿವೆ. ಇನ್ನು ಇನ್ಫೋಸಿಸ್, ಟಿಸಿಎಸ್, ಆಕ್ಸಿಸ್ ಬ್ಯಾಂಕ್, ಸನ್ ಫಾರ್ಮಾ ಮತ್ತು ಎಸ್‌ಬಿಐ ಮಾರುಕಟ್ಟೆಗಳಲ್ಲೂ ಚೇತರಿಕೆ ಕಂಡು ಬಂದಿದೆ.

ಇದನ್ನೂ ಓದಿ:Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

Continue Reading

Latest

Bajaj Freedom 125 CNG Bike: ಬಜಾಜ್ ಸಿಎನ್‌ಜಿ ಬೈಕ್ ಬುಕ್‌ ಮಾಡಿದರೆ 3 ತಿಂಗಳು ಕಾಯಬೇಕು!

ಬಜಾಜ್ ಫ್ರೀಡಂ 125 ಸಿಎನ್ ಜಿ ಬೈಕ್ (Bajaj Freedom 125 CNG Bike) ಅನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಸಿಎನ್ ಜಿ ಮತ್ತು ಪೆಟ್ರೋಲ್ ಬದಲಾವಣೆ ನಡೆಸಬಹುದಾದ ಆಯ್ಕೆಯನ್ನು ನೀಡುತ್ತದೆ. ಅತ್ಯಾಧುನಿಕ ವಿನ್ಯಾಸ, ನವೀನ ತಂತ್ರಜ್ಞಾನದೊಂದಿಗೆ ಟೆಕ್ ಪ್ಯಾಕಿಂಗ್ ಮತ್ತು ಆರಾಮದಾಯಕ ಸವಾರಿಗಾಗಿ ವಿಸ್ತೃತ ಆಸನವನ್ನು ಒಳಗೊಂಡಿರುವ ಈಗಾಗಲೇ ಇದಕ್ಕೆ ಬುಕ್ಕಿಂಗ್ ಪ್ರಾರಂಭವಾಗಿದೆ.

VISTARANEWS.COM


on

By

Bajaj Freedom 125 CNG Bike
Koo

ಸಿಎನ್‌ಜಿ (CNG) ಮತ್ತು ಪೆಟ್ರೋಲ್ (petrol) ಬದಲಾವಣೆ ನಡೆಸಬಹುದಾದ ಆಯ್ಕೆಯನ್ನು ನೀಡುವ ಬಜಾಜ್ ಫ್ರೀಡಂ 125 ಸಿಎನ್‌ಜಿ ಬೈಕ್ (Bajaj Freedom 125 CNG Bike) ಈಗಾಗಲೇ ಬಿಡುಗಡೆಯಾಗಿದೆ. ಅತ್ಯಾಧುನಿಕ ವಿನ್ಯಾಸ, ನವೀನ ತಂತ್ರಜ್ಞಾನದೊಂದಿಗೆ ಟೆಕ್ ಪ್ಯಾಕಿಂಗ್ ಮತ್ತು ಆರಾಮದಾಯಕ ಸವಾರಿಗಾಗಿ ವಿಸ್ತೃತ ಆಸನವನ್ನು ಇದು ಒಳಗೊಂಡಿದ್ದು, ಸವಾರರ ಗಮನ ಸೆಳೆದಿದೆ. 125 ಸಿಎನ್‌ಜಿ ಮೋಟಾರ್‌ ಸೈಕಲ್ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಆಗಿದೆ. ಈಗಾಗಲೇ ಇದಕ್ಕೆ ಬುಕ್ಕಿಂಗ್ ಪ್ರಾರಂಭವಾಗಿದ್ದು, ಬಜಾಜ್‌ನ ಹೊಸ ಸಿಎನ್‌ಜಿ ಬೈಕ್‌ ಪಡೆಯಲು ಕಾಯುವ ಅವಧಿಯನ್ನು ಈಗ ಮೂರು ತಿಂಗಳಿಗೆ ವಿಸ್ತರಿಸಲಾಗಿದೆ.

Bajaj Freedom 125 CNG Bike


ಬೆಲೆ ಎಷ್ಟು?

ಬಜಾಜ್ ಫ್ರೀಡಂ 125 ಮೂರು ಆವೃತ್ತಿಗಳಲ್ಲಿ ಬಂದಿದೆ. ಫ್ರೀಡಮ್ 125 ಎನ್ ಜಿ04 ಡಿಸ್ಕ್ ಎಲ್ ಇಡಿ, ಫ್ರೀಡಮ್ 125 ಎನ್ ಜಿ04 ಡ್ರಮ್ ಎಲ್ ಇಡಿ ಮತ್ತು ಫ್ರೀಡಮ್ 125 ಎನ್ ಜಿ04 ಡ್ರಮ್.

ಬಜಾಜ್ ದ್ವಿ-ಇಂಧನ ಬೈಕ್‌ನ ಆರಂಭಿಕ ಬೆಲೆ 95,000 ರೂ.ನಿಂದ ಪರಿಚಯಿಸಲಾಗಿದೆ. ಹ್ಯಾಲೊಜೆನ್ ದೀಪಗಳನ್ನು ಒಳಗೊಂಡಿರುವ ಎನ್ ಜಿ 04 ಡ್ರಮ್ ರೂಪಾಂತರ, ಫ್ರೀಡಂ 125 ಎನ್ ಜಿ 04 ಡ್ರಮ್ ಎಲ್ ಇಡಿ ರೂಪಾಂತರ 1.05 ಮತ್ತು 1.10 ಲಕ್ಷ ರೂ. ಆರಂಭಿಕ ಬೆಲೆಯನ್ನು ಹೊಂದಿದೆ.

ಕಾಯುವ ಅವಧಿ ಎಷ್ಟು?

ಬಜಾಜ್ ಸಿಎನ್‌ಜಿ ಬೈಕ್ ಬುಕ್ಕಿಂಗ್ ಮುಂಬಯಿ, ಪುಣೆ ಮತ್ತು ಗುಜರಾತ್‌ನ ಆಯ್ದ ನಗರಗಳಲ್ಲಿ ಪ್ರಾರಂಭಿಸಲಾಗಿದೆ. 1,000 ರೂ. ಟೋಕನ್ ಮೊತ್ತ ನೀಡಿ ಬೈಕ್ ಬುಕ್ಕಿಂಗ್ ನಡೆಸಬಹುದು. ಬೇಡಿಕೆ ಹೆಚ್ಚಾದರೆ ಪ್ರತಿ ಪ್ರದೇಶದ ಕಾಯುವ ಅವಧಿಯು ಬದಲಾಗುತ್ತದೆ ಎನ್ನಲಾಗಿದೆ.

ಆಟೋ ಎಕ್ಸ್ ನೀಡಿರುವ ಮಾಹಿತಿ ಪ್ರಕಾರ ಮುಂಬಯಿನಲ್ಲಿ ಬಜಾಜ್ ಫ್ರೀಡಂ ಸಿಎನ್‌ಜಿ ಮೋಟಾರ್‌ ಸೈಕಲ್ 20- 30 ದಿನಗಳ ಕಾಯುವ ಅವಧಿಯನ್ನು ಹೊಂದಿತ್ತು. ಪುಣೆಯಲ್ಲಿ ಕಾಯುವ ಅವಧಿಯು ಸುಮಾರು 30- 45 ದಿನಗಳಾಗಿದ್ದು, ಗುಜರಾತ್‌ನಲ್ಲಿ ಬಜಾಜ್ ಸಿಎನ್‌ಜಿ ಬೈಕ್‌ನ ಕಾಯುವ ಅವಧಿಯು ಕನಿಷ್ಠ 45 ದಿನಗಳಿಗೆ ವಿಸ್ತರಿಸಲಾಗಿದೆ. ಒಟ್ಟಿನಲ್ಲಿ ಗರಿಷ್ಠ ಮೂರು ತಿಂಗಳ ಕಾಯುವ ಅವಧಿಯನ್ನು ನೀಡಲಾಗಿದೆ.

ಇದನ್ನೂ ಓದಿ: Bajaj CNG Bike: ಬಜಾಜ್‌‌ನ ವಿಶ್ವದ ಮೊದಲ ಸಿಎನ್‌‌ಜಿ ಬೈಕ್ ಬೆಲೆ ‌ಕಡಿತ ಸಾಧ್ಯತೆ; ನಿತೀನ್ ಗಡ್ಕರಿ ಸೂಚನೆ

Bajaj Freedom 125 CNG Bike

ವಿಶೇಷತೆಗಳು ಏನೇನು?

ಬಜಾಜ್ ಫ್ರೀಡಂ 125 ಸಿಎನ್‌ಜಿ ಬೈಕ್ 125 ಸಿಸಿ ಸಿಂಗಲ್- ಸಿಲಿಂಡರ್ ಏರ್ ಕೂಲ್ಡ್ ಎಂಜಿನ್, 2- ಲೀಟರ್ ಟ್ಯಾಂಕ್ ಮತ್ತು 2- ಕೆಜಿ ಸಿಎನ್‌ಜಿ ಸಿಲಿಂಡರ್‌ನೊಂದಿಗೆ ವಿಶ್ವದ ಮೊದಲ ಸಿಎನ್ ಜಿ ಬೈಕ್ ಇದಾಗಿದೆ.
9.4ಬಿಹೆಚ್ ಪಿ ಪವರ್ ಮತ್ತು 9.7ಎನ್ ಪಿ ಗರಿಷ್ಠ ಟಾರ್ಕ್ ಅನ್ನು ಒದಗಿಸುತ್ತದೆ. ಎಂಜಿನ್ ಮತ್ತು ಸಿಎನ್‌ಜಿ ಸಾಮರ್ಥ್ಯವನ್ನು ಇದು ಹೊಂದಿದೆ. ಫ್ರೀಡಂ 125 ಸಿಎನ್‌ಜಿ ಬೈಕ್ 300 ಕಿ.ಮೀ. ಹಾಗೂ ಪೆಟ್ರೋಲ್ ಮೇಲೆ ಪ್ರತಿ ಲೀಟರ್‌ಗೆ 65 ಕಿ.ಮೀ. ಮೈಲೇಜ್ ನೀಡುತ್ತದೆ.

Continue Reading

ದೇಶ

NEET UG 2024: “ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದೇ ನೀಟ್‌ ಫಲಿತಾಂಶ ಪ್ರಕಟಿಸಿ”-NTAಗೆ ಸುಪ್ರೀಂ ಸೂಚನೆ; ವಿಚಾರಣೆ ಮುಂದೂಡಿಕೆ

NEET UG 2024: ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ವಿವಾದಾತ್ಮಕ ನೀಟ್-ಯುಜಿ 2024ಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಗುರುವಾರ ನಡೆಸಿತು. ನೀವು ಡಮ್ಮಿ ರೋಲ್ ಸಂಖ್ಯೆಗಳ ಮೂಲಕ ಫಲಿತಾಂಶ ಪ್ರಕಟಿಸಬಹುದು.

VISTARANEWS.COM


on

NEET-UG 2024
Koo

ನವದೆಹಲಿ: ನೀಟ್-ಯುಜಿ 2024 (NEET UG 2024) ಅಕ್ರಮಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ (Supreme Court) ನೀಟ್‌ ಪರೀಕ್ಷೆಗಳ ಫಲಿತಾಂಶ ಪ್ರಕಟಿಸುವಂತೆ ರಾಷ್ಟ್ರೀಯ ಪರೀಕ್ಷಾ ಮಂಡಳಿ(NTA)ಗೆ ಸೂಚಿಸಿದೆ. ಆದರೆ ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದಂತೆ ಖಡಕ್‌ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಯನ್ನು ಸೋಮವಾರಕ್ಕೆ ಅಂದರೆ ಜು.22ಕ್ಕೆ ಮುಂದೂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ.ಪರ್ದಿವ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ವಿವಾದಾತ್ಮಕ ನೀಟ್-ಯುಜಿ 2024ಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಗುರುವಾರ ನಡೆಸಿತು. ನೀವು ಡಮ್ಮಿ ರೋಲ್ ಸಂಖ್ಯೆಗಳ ಮೂಲಕ ಫಲಿತಾಂಶ ಪ್ರಕಟಿಸಬಹುದು. ಇದರಿಂದ ಯಾವುದೇ ವಿದ್ಯಾರ್ಥಿಯ ಗುರುತನ್ನು ಬಹಿರಂಗವಾಗುವುದಿಲ್ಲ. ಪ್ರತಿ ಕೇಂದ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ಫಲಿತಾಂಶವನ್ನು ಪ್ರಕಟಿಸಬೇಕು. ಶುಕ್ರವಾರ ಸಂಜೆ 5 ಗಂಟೆಯೊಳಗೆ ಬಿಡುಗಡೆ ಮಾಡಲಿ. ಅಲ್ಲದೇ ಕೇಂದ್ರವಾರು ಮತ್ತು ನಗರವಾರು ಫಲಿತಾಂಶ ಪ್ರಕಟಿಸುವಂತೆ ಸೂಚಿಸಲಾಗುತ್ತಿದೆ ಎಂದು ಸಿಜೆಐ ಹೇಳಿದರು.

ಇನ್ನು ಈ ಪ್ರಕರಣ ಎನ್‌ಟಿಎಗೆ ಚ್ಯುತಿ ತರುವ ಉದ್ದೇಶದಿಂದ ಮಾಡಿರುವುದಲ್ಲ. ಬದಲಾಗಿ ಇದು ಹಣಕ್ಕಾಗಿ ಮಾಡಿರುವ ಹಗರಣ ಎಂದು ಸಿಜೆಐ ಹೇಳಿದ್ದಾರೆ. ಇನ್ನು ಮರು ಪರೀಕ್ಷೆ ಬಗ್ಗೆ ಪ್ರಸ್ತಾಪಿಸಿದ ಕೋರ್ಟ್‌ ಅಕ್ರಮ ಇಡೀ ಪರೀಕ್ಷೆಯ ಮೇಲೆ ಪರಿಣಾಮ ಬೀರಿದೆ ಎಂದು ದೃಢಪಟ್ಟರೆ ಮಾತ್ರ ಮರು ಪರೀಕ್ಷೆ (Re-NEET) ಮಾಡಬಹುದು ಎಂದು ಹೇಳಿದೆ.

“ಇಡೀ ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ದೃಢವಾದರೆ ಮಾತ್ರ ಮರುಪರೀಕ್ಷೆ ನಡೆಸಬಹುದು ಎಂದು ಡಿ.ವೈ.ಚಂದ್ರಚೂಡ್ ತಿಳಿಸಿದರು. ನಡೆಯುತ್ತಿರುವ ತನಿಖೆಯ ವಿಷಯದ ಬಗ್ಗೆ ನ್ಯಾಯಪೀಠ ವಿವಾದ ಬಗ್ಗೆ ಸಿಬಿಐ ತನಿಖೆ ನಡೆಯುತ್ತಿದೆ. ಸಿಬಿಐ ನಮಗೆ ಹೇಳಿದ್ದನ್ನೆಲ್ಲ ಬಹಿರಂಗಪಡಿಸಿದರೆ, ಅದು ತನಿಖೆಯ ಮೇಲೆ ಪರಿಣಾಮ ಬೀರುತ್ತದೆ” ಎಂದು ಅವರು ಹೇಳಿದರು.

“ಪ್ರಶ್ನೆ ಪತ್ರಿಕೆ ಸೋರಿಕೆಯು ತುಂಬಾ ವ್ಯವಸ್ಥಿತವಾಗಿದೆ ಮತ್ತು ಪರೀಕ್ಷೆಯನ್ನು ರದ್ದುಗೊಳಿಸಬೇಕಾದ ರೀತಿಯಲ್ಲಿ ದೇಶಾದ್ಯಂತ ಪರೀಕ್ಷೆಯ ಮೇಲೆ ಪರಿಣಾಮ ಬೀರಿದೆ ಎನ್ನುವುದನ್ನು ಸಾಬೀತುಪಡಿಸಿ. ಒಂದುವೇಳೆ ನಾವು ಮರು ಪರೀಕ್ಷೆಗೆ ಒಪ್ಪದಿದ್ದರೆ ಬೇರೆ ಯಾವ ತನಿಖೆಯ ಅಗತ್ಯವಿದೆ ಎಂದು ತಿಳಿಯಲು ಬಯಸುತ್ತೇವೆ” ಎಂದು ನ್ಯಾಯಪೀಠ ತಿಳಿಸಿದೆ.

ಒಂದು ಲಕ್ಷ ವಿದ್ಯಾರ್ಥಿಗಳು ಮರುಪರೀಕ್ಷೆ ಬಯಸುತ್ತಾರೆ ಅಥವಾ ಪ್ರವೇಶ ಪಡೆದಿಲ್ಲ ಎಂಬ ಕಾರಣಕ್ಕೆ ಮರು ಪರೀಕ್ಷೆಗೆ ಆದೇಶಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ ಸಿಜೆಐ ಡಿ.ವೈ.ಚಂದ್ರಚೂಡ್, ಪರೀಕ್ಷೆಯ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಮಾತ್ರ ಇದು ಸಾಧ್ಯ ಎಂದು ಹೇಳಿದರು.

ಏತನ್ಮಧ್ಯೆ ನೀಟ್‌ಗಾಗಿ ಡೇಟಾ ವಿಶ್ಲೇಷಣೆ ಮಾಡಿದ ಮತ್ತು ಪರೀಕ್ಷೆಗೆ ಕ್ಲೀನ್ ಚಿಟ್ ನೀಡಿದ ಐಐಟಿ ಮದ್ರಾಸ್‌ನ ನಿರ್ದೇಶಕರು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ಆಡಳಿತ ಮಂಡಳಿಯಲ್ಲಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದರು. ಆದರೆ ಸರ್ಕಾರ ಇದನ್ನು ನಿರಾಕರಿಸಿದೆ. ವರದಿಯನ್ನು ಸಿದ್ಧಪಡಿಸಿದವರು ಎಂದಿಗೂ ಎನ್‌ಟಿಎಎಯ ಭಾಗವಾಗಿರಲಿಲ್ಲ ಎಂದು ತಿಳಿಸಿದೆ. ಕಳೆದ ವಾರ ಕೇಂದ್ರವು ಮರು ಪರೀಕ್ಷೆಯನ್ನು ವಿರೋಧಿಸಿದ ಅಫಿಡವಿಟ್‌ ಸಲ್ಲಿಸಿ, ಐಐಟಿ ಮದ್ರಾಸ್‌ನ ದತ್ತಾಂಶ ವಿಶ್ಲೇಷಣೆಯು ನೀಟ್‌ ಯುಜಿಯಲ್ಲಿ ಸಾಮೂಹಿಕ ದುಷ್ಕೃತ್ಯ ನಡೆದಿಲ್ಲ ಎಂದು ಉಲ್ಲೇಖಿಸಿದೆ ಎಂದು ಹೇಳಿತ್ತು.

ದೇಶಾದ್ಯಂತ 571 ನಗರಗಳಲ್ಲಿ ಹಾಗೂ ಹೊರಗಿನ 14 ನಗರಗಳು ಸೇರಿದಂತೆ 4750 ವಿವಿಧ ಕೇಂದ್ರಗಳಲ್ಲಿ 2024ರ ಮೇ 5ರಂದು ನೀಟ್‌ ಯುಜಿ ಪರೀಕ್ಷೆಯನ್ನು ನಡೆಸಲಾಗಿತ್ತು. ನೀಟ್‌ ಪರೀಕ್ಷೆಯಲ್ಲಿ ರ‍್ಯಾಂಕ್‌ ಪಡೆದ 67 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಗ್ರೇಸ್‌ ಮಾರ್ಕ್ಸ್‌ ಆಧಾರದ ಮೇಲೆ ಟಾಪರ್‌ಗಳಾಗಿದ್ದರು. ಇನ್ನು, ಹರಿಯಾಣದಲ್ಲಿ ಒಂದೇ ಕೇಂದ್ರದಲ್ಲಿ ಪರೀಕ್ಷೆ ಬರೆದ ಆರು ವಿದ್ಯಾರ್ಥಿಗಳು ಜಂಟಿಯಾಗಿ ಟಾಪ್‌ ಸ್ಥಾನ ಪಡೆದಿದ್ದಾರೆ. ಇದರಿಂದಾಗಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ, ಪ್ರಶ್ನೆಪತ್ರಿಕೆ ಸೋರಿಕೆ ಮಾಡಲಾಗಿದೆ ಎಂಬುದಾಗಿ ಕೆಲವು ಪೋಷಕರು ಆರೋಪ ಮಾಡಿದ್ದಾರೆ. ಗ್ರೇಸ್‌ ಮಾರ್ಕ್ಸ್‌ ಪಡೆದ 1,500 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನೂ ನಡೆಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಮಾಸ್ಟರ್‌ ಮೈಂಡ್‌ ಅಮಿತ್‌ ಆನಂದ್‌ ಸೇರಿ ಹಲವರನ್ನು ಬಂಧಿಸಲಾಗಿದ್ದು, ಕ್ಷಿಪ್ರವಾಗಿ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: NEET UG 2024: ನೀಟ್‌ ಅಕ್ರಮ; ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಮತ್ತಿಬ್ಬರು ಆರೋಪಿಗಳು ಅರೆಸ್ಟ್‌

Continue Reading

ಪ್ರಮುಖ ಸುದ್ದಿ

Train Accident : ಎಕ್ಸ್​ಪ್ರೆಸ್​ ರೈಲು ಅಪಘಾತ; ನಾಲ್ವರ ಸಾವು, ಹಲವರಿಗೆ ಗಾಯ

Train Accident : ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Train Accident
Koo

ನವದೆಹಲಿ: ಉತ್ತರ ಪ್ರದೇಶದ ಗೊಂಡಾದಲ್ಲಿ ಚಂಡೀಗಢ-ದಿಬ್ರುಗಢ ಎಕ್ಸ್​​ಪ್ರೆಸ್​​ ರೈಲು ಅಪಘಾತಕ್ಕೆ ಒಳಗಾಗಿ ನಾಲ್ಕು ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಎಕ್ಸ್​ಪ್ರೆಸ್​​ ರೈಲಿನ ಹಲವಾರು ಬೋಗಿಗಳು ಹಳಿ ತಪ್ಪಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಉತ್ತರ ಪ್ರದೇಶದ ಗೊಂಡಾ ಮತ್ತು ಜಿಲಾಹಿ ನಡುವೆ ಇರುವ ಪಿಕೌರಾ ಪ್ರದೇಶದಲ್ಲಿ ರೈಲು ಅವಘಡ ಸಂಭವಿಸಿದೆ.

ರೈಲು ಅವಘಡ ನಡೆದ ಸ್ಥಳಕ್ಕೆ ಪರಿಹಾರ ಕಾರ್ಯಾಚರಣೆಗಾಗಿ ರಕ್ಷಣಾ ತಂಡವನ್ನು ಕಳುಹಿಸಲಾಗಿದೆ. ಕೆಲವು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಮತ್ತು ಪ್ರಯಾಣಿಕರು ತಮ್ಮ ಸರಂಜಾಮುಗಳನ್ನು ಹಿಡಿದುಕೊಂಡು ಹಳಿಯ ಬದಿಗಳಲ್ಲಿ ನಿಂತಿರುವುದು ದೃಶ್ಯಗಳಲ್ಲಿ ಕಂಡು ಬಂದಿದೆ. ರೈಲು ಸಂಖ್ಯೆ 15904 ಚಂಡೀಗಢದಿಂದ ಅಸ್ಸಾಂನ ದಿಬ್ರುಗಢಕ್ಕೆ ತೆರಳುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಟ್ಟು 12 ಬೋಗಿಗಳೊಂದಿಗೆ ರೈಲು ಸಂಚರಿಸುತ್ತಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅದರ ಪೈಕಿ ನಾಲ್ಕು ಬೋಗಿಗಳು ಜುಲಾಹಿ ರೈಲ್ವೆ ನಿಲ್ದಾಣದ ಕೆಲವು ಕಿಲೋಮೀಟರ್ ಮೊದಲು ಹಳಿ ತಪ್ಪಿವೆ.

ನಾನು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದೇವೆ. ಅದಕ್ಕಾಗಿ ನಾನು ಸಂತೋಷಪಡುತ್ತೇನೆ ಎಂದು ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಹೇಳಿದರು. ಅಪಘಾತದ ಸ್ಥಳದಿಂದ ವೀಡಿಯೊಗಳು ಹಳಿ ತಪ್ಪಿದ ಬೋಗಿಗಳಿಂದ ಜನರು ತಮ್ಮ ಸಾಮಾನುಗಳನ್ನು ಹೊರತೆಗೆಯುತ್ತಿರುವುದನ್ನು ಕಂಡು ಬಂದಿದೆ. ಒಂದು ಬೋಗಿ ತಿರುಗಿ ಎಡ ಭಾಗಕ್ಕೆ ನಿಂತಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಇದನ್ನೂ ಓದಿ: Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲಿಗೆ ಇತ್ತು ಆ 6 ಪ್ರಮುಖ ಕಾರಣಗಳು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅಪಘಾತದ ಮಾತನಾಡಿದ್ದಾರೆ. ಸ್ಥಳಕ್ಕೆ ತೆರೆಳಿರುವ ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಪಘಾತದ ಸ್ಥಳಕ್ಕೆ ತಕ್ಷಣ ತಲುಪುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಗಾಯಾಳುಗಳಿಗೆ ಸಕಾಲದಲ್ಲಿ ಚಿಕಿತ್ಸೆ ನೀಡುವಂತೆ ಸಿಎಂ ಹೇಳಿದ್ದಾರೆ. ರೈಲ್ವೆ ವೈದ್ಯಕೀಯ ಕ್ಯಾನ್ ಸ್ಥಳಕ್ಕೆ ತಲುಪಿದೆ ಮತ್ತು ಈಶಾನ್ಯ ರೈಲ್ವೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ.

Continue Reading
Advertisement
CT Ravi
ಪ್ರಮುಖ ಸುದ್ದಿ9 mins ago

Karnataka Job Reservation : ಹಗರಣಗಳನ್ನು ಮುಚ್ಚಿಡಲು ಕನ್ನಡಿಗರಿಗೆ ಮೀಸಲು ವಿಚಾರ ಮುನ್ನೆಲೆಗೆ ತಂದ ಸರ್ಕಾರ; ಸಿಟಿ ರವಿ ಆರೋಪ

World's Largest Tribe
ವಿದೇಶ11 mins ago

Mashco Piro Tribe: ಮೊದಲ ಬಾರಿ ಹೊರ ಜಗತ್ತಿಗೆ ಕಾಣಿಸಿಕೊಂಡ ಮಾಶ್ಕೊ ಪಿರೋ ಬುಡಕಟ್ಟು ಸಮುದಾಯ!

Sensex Jump
ವಾಣಿಜ್ಯ14 mins ago

Sensex Jump: ಷೇರುಪೇಟೆಯಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಸೆನ್ಸೆಕ್ಸ್, 24,000 ಮೀರಿದ ನಿಫ್ಟಿ

Student death
ಹುಬ್ಬಳ್ಳಿ15 mins ago

Student Death : ಎಕ್ಸಾಂನಲ್ಲಿ ಫೇಲ್‌ ಆಗಿದ್ದಕ್ಕೆ ಮನನೊಂದು ಕಾಲೇಜು ವಿದ್ಯಾರ್ಥಿನಿ ಸೂಸೈಡ್‌

Bajaj Freedom 125 CNG Bike
Latest26 mins ago

Bajaj Freedom 125 CNG Bike: ಬಜಾಜ್ ಸಿಎನ್‌ಜಿ ಬೈಕ್ ಬುಕ್‌ ಮಾಡಿದರೆ 3 ತಿಂಗಳು ಕಾಯಬೇಕು!

Karnataka Rain
ಮಳೆ36 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Virat Kohli
ಕ್ರೀಡೆ38 mins ago

Virat Kohli: ಮೊದಲ ಬಾರಿಗೆ ಮಗ ಅಕಾಯ್ ಜತೆ ಕಾಣಿಸಿಕೊಂಡ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Golden Designer Fashion Wears Trendy Golden Designer Wedding Fashion
ಫ್ಯಾಷನ್42 mins ago

Golden Designer Fashion Wears: ವೆಡ್ಡಿಂಗ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಶೈಲಿಯ ಗೋಲ್ಡನ್‌ ಡಿಸೈನರ್‌ವೇರ್ಸ್!

NEET-UG 2024
ದೇಶ46 mins ago

NEET UG 2024: “ವಿದ್ಯಾರ್ಥಿಗಳ ಗುರುತು ಬಹಿರಂಗ ಪಡಿಸದೇ ನೀಟ್‌ ಫಲಿತಾಂಶ ಪ್ರಕಟಿಸಿ”-NTAಗೆ ಸುಪ್ರೀಂ ಸೂಚನೆ; ವಿಚಾರಣೆ ಮುಂದೂಡಿಕೆ

Money Guide
ಮನಿ-ಗೈಡ್52 mins ago

Money Guide: ಇಎಂಐ ಮೂಲಕ ಮೊಬೈಲ್‌ ಖರೀದಿಸುವ ಯೋಚನೆಯಲ್ಲಿದ್ದೀರಾ? ಈ ಅಂಶ ನಿಮಗೆ ತಿಳಿದಿರಲೇ ಬೇಕು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ36 mins ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ2 hours ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ2 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ3 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ3 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ3 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ4 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ4 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ4 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

ಟ್ರೆಂಡಿಂಗ್‌