NTA Website: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಎನ್‌ಟಿಎ ವೆಬ್‌ಸೈಟ್‌ ಹ್ಯಾಕ್‌? ಸಂಸ್ಥೆ ಹೇಳೋದಿಷ್ಟು - Vistara News

ದೇಶ

NTA Website: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಮಾಡಲು ಎನ್‌ಟಿಎ ವೆಬ್‌ಸೈಟ್‌ ಹ್ಯಾಕ್‌? ಸಂಸ್ಥೆ ಹೇಳೋದಿಷ್ಟು

NTA Website: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೇಂದ್ರ ಸರ್ಕಾರವು ಸಿಬಿಐಗೆ ವಹಿಸಿದೆ. ಇದರ ಬೆನ್ನಲ್ಲೇ, ಸಿಬಿಐ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಇದರ ಮಧ್ಯೆಯೇ ಎನ್‌ಟಿಎ ವೆಬ್‌ಸೈಟ್‌ ಹ್ಯಾಕ್‌ ಮಾಡಲಾಗಿದೆ ಎಂಬ ಸುದ್ದಿಗಳು ಹರಡಿದ್ದು, ಇದನ್ನು ಎನ್‌ಟಿಎ ಅಧಿಕಾರಿಗಳು ನಿರಾಕರಿಸಿದ್ದಾರೆ.

VISTARANEWS.COM


on

NTA Website
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದಲ್ಲಿ ನೀಟ್‌ (NEET UG) ಪರೀಕ್ಷಾ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ಭಾರಿ ಸುದ್ದಿಯಾಗಿದ್ದು, ಪರೀಕ್ಷೆಯನ್ನೇ ರದ್ದುಗೊಳಿಸಿರುವ ಕೇಂದ್ರ ಸರ್ಕಾರವು ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಇದರ ಬೆನ್ನಲ್ಲೇ, ಪರೀಕ್ಷಾ ಅಕ್ರಮಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ವೆಬ್‌ಸೈಟ್‌ಅನ್ನೇ ಹ್ಯಾಕ್‌ ಮಾಡಲಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಎನ್‌ಟಿಎ ಸ್ಪಷ್ಟನೆ ನೀಡಿದ್ದು, “ವೆಬ್‌ಸೈಟ್‌ (NTA Website) ಹ್ಯಾಕ್‌ ಮಾಡಿಲ್ಲ. ವೆಬ್‌ಸೈಟ್‌ ಸುರಕ್ಷಿತವಾಗಿದೆ” ಎಂದು ತಿಳಿಸಿದೆ.

ಎನ್‌ಟಿಎ ವೆಬ್‌ಸೈಟ್‌ ಹ್ಯಾಕ್‌ ಆಗಿಲ್ಲ. ಎಲ್ಲ ಪೋರ್ಟಲ್‌ಗಳು ಸೇಫ್‌ ಆಗಿವೆ. ಎನ್‌ಟಿಎ ವೆಬ್‌ಸೈಟ್‌ ಹ್ಯಾಕ್‌ ಮಾಡಲಾಗಿದೆ ಎಂಬ ವರದಿಗಳು ಕೇಳಿಬಂದಿದ್ದು, ಇವು ಸತ್ಯಕ್ಕೆ ದೂರವಾಗಿವೆ. ಜನರ ದಾರಿ ತಪ್ಪಿಸುವ ದಿಸೆಯಲ್ಲಿ ಇಂತಹ ವದಂತಿಗಳನ್ನು ಹರಡಲಾಗುತ್ತಿದೆ” ಎಂದು ಎನ್‌ಟಿಎ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಎನ್‌ಟಿಎ ದೇಶದಲ್ಲಿ ನೀಟ್‌, ನೆಟ್‌ ಸೇರಿ ಹಲವು ಪರೀಕ್ಷೆಗಳನ್ನು ನಡೆಸುತ್ತಿದೆ. ಎನ್‌ಟಿಎ ಅಧಿಕಾರಿಗಳು ಶಾಮೀಲಾದ ಕಾರಣವೇ ನೀಟ್‌ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಇದೇ ಕಾರಣಕ್ಕಾಗಿ ಎನ್‌ಟಿಎದಲ್ಲಿ ಕೆಲ ಸುಧಾರಣೆ ತರಲು ಕೇಂದ್ರ ಶಿಕ್ಷಣ ಸಚಿವಾಲಯವು ತಜ್ಞರ ಸಮಿತಿ ಕೂಡ ರಚಿಸಿದೆ.

ನೀಟ್‌ ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮದ ಕುರಿತು ತನಿಖೆ ಆರಂಭಿಸಿರುವ ಸಿಬಿಐ, ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಎಫ್‌ಐಆರ್‌ ದಾಖಲಿಸಿಕೊಂಡಿದೆ. ಹಾಗೆಯೇ, ಇನ್ನೂ ಹಲವು ರಾಜ್ಯಗಳಲ್ಲಿ ಎಫ್‌ಐಆರ್‌ ದಾಖಲಿಸಿಕೊಳ್ಳಲಿದೆ ಎಂದು ತಿಳಿದುಬಂದಿದೆ. ಇದರ ಜತೆಗೆ, ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತಂಡಗಳು ಬಿಹಾರ ಹಾಗೂ ಗುಜರಾತ್‌ಗೆ ತೆರಳಲಿವೆ ಎಂದು ಹೇಳಲಾಗುತ್ತಿದೆ. ಇನ್ನು, ನೀಟ್‌ ಪಿಜಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಯುಜಿಸಿ ನೆಟ್‌ ಪರೀಕ್ಷೆಯನ್ನೂ ರದ್ದುಗೊಳಿಸಲಾಗಿದೆ.

ನೀಟ್‌ ಸೇರಿ ಹಲವು ಪರೀಕ್ಷೆಗಳನ್ನು ನಡೆಸಿದ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಹಾ ನಿರ್ದೇಶಕ ಸುಬೋಧ್‌ ಕುಮಾರ್‌ ಸಿಂಗ್‌ ಅವರನ್ನು ಕೇಂದ್ರ ಸರ್ಕಾರವು ಹುದ್ದೆಯಿಂದ ಕೆಳಗಿಳಿಸಿದೆ. ಅವರ ಜಾಗಕ್ಕೆ ಪ್ರದೀಪ್‌ ಸಿಂಗ್‌ ಖರೋಲಾ ಅವರನ್ನು ನೇಮಿಸಿದೆ. ಶನಿವಾರ (ಜೂನ್‌ 22) ಸಿಬಿಐ ತನಿಖೆಗೆ ವಹಿಸಿದ ಕೇಂದ್ರ ಸರ್ಕಾರವು, “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ ಮತ್ತು ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ” ಎಂದು ತಿಳಿಸಿತ್ತು.

ಇದನ್ನೂ ಓದಿ: NEET UG: ನೀಟ್‌ ಅಕ್ರಮ; ಎಫ್‌ಐಆರ್‌ ದಾಖಲಿಸಿದ ಸಿಬಿಐ, ತನಿಖೆ ಮತ್ತಷ್ಟು ಚುರುಕು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

Paris Olympics 2024: ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

VISTARANEWS.COM


on

Paris Olympics 2024
Koo

ನವದೆಹಲಿ: ಜುಲೈ 26ರಿಂದ ಆರಂಭಗೊಳ್ಳಲಿರುವ ಪ್ಯಾರಿಸ್​ ಒಲಿಂಪಿಕ್ಸ್(Paris Olympics)​ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ಎಲ್ಲ ಭಾರತೀಯ ಆ್ಯತ್ಲೀಟ್‌ಗಳಿಗೆ(athletes) ರಾಷ್ಟ್ರಪತಿ ದ್ರೌಪದಿ ಮುರ್ಮು(President Droupadi Murmu) ಅವರು ಶುಭಾಶಯ ಕೋರಿದ್ದಾರೆ. ಪದಕ ಗೆದ್ದು ದೇಶದ ಕೀರ್ತಿ ಹೆಚ್ಚಿಸುವಂತಾಗಲಿ ಎಂದು ಹಾರೈಸಿದ್ದಾರೆ. 21 ಶೂಟರ್‌ಗಳು ಸೇರಿದಂತೆ 100ಕ್ಕೂ ಹೆಚ್ಚು ಕ್ರೀಡಾಪಟುಗಳು ಪ್ಯಾರಿಸ್ ಕ್ರೀಡಾಕೂಟಕ್ಕೆ ಅರ್ಹತೆ ಪಡೆದಿದ್ದಾರೆ.

ಗುರುವಾರ ನಡೆದ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ವೇಳೆ ಅವರು ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಸುವ ಜತೆಗೆ 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸುವ ದೇಶದ ಧೈರ್ಯಶಾಲಿ ಪ್ರಯತ್ನವನ್ನು ಬೆಂಬಲಿಸಿದರು.

‘ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸುವ ಪ್ರತಿಯೊಬ್ಬ ಕ್ರೀಡಾಪಟುವಿಗೆ ನನ್ನ ಶುಭ ಹಾರೈಕೆಗಳು. ಈ ಸಾಧನೆಗಳನ್ನು ಮತ್ತಷ್ಟು ಮುಂದುವರಿಸಲು, ಭಾರತ ಒಲಿಂಪಿಕ್ ಅಸೋಸಿಯೇಷನ್ (ಐಒಎ) 2036ರ ಒಲಿಂಪಿಕ್ ಕೂಟದ ಆತಿಥ್ಯ ವಹಿಸಲು ಸಿದ್ಧತೆ ನಡೆಸುತ್ತಿದೆ’ ಎಂದು ಹೇಳಿದರು.

ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

ಇದನ್ನೂ ಓದಿ Paris Olympics 2024 : ರಿಲಯನ್ಸ್ ಫೌಂಡೇಷನ್ ಸಹಯೋಗದಲ್ಲಿ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ “ಇಂಡಿಯಾ ಹೌಸ್”

ಐಒಸಿ ಮುಖ್ಯಸ್ಥ ಥಾಮಸ್ ಬಾಚ್ ಅವರ ಪ್ರೋತ್ಸಾಹದಿಂದ ಭಾರತವು 2036ರ ಕ್ರೀಡಾಕೂಟದ ಆತಿಥ್ಯಕ್ಕೆ ಬಿಡ್ ಸಲ್ಲಿಸಲಿದೆ. ಆದರೆ, ಸೌದಿ ಅರೇಬಿಯಾ, ಇಂಡೊನೇಷ್ಯಾ ಮತ್ತು ಕತಾರ್ ನಂತಹ ಪ್ರಬಲ ದೇಶಗಳಿಂದ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

ಈ ಬಾರಿಯ ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್‌ ಸಂಸ್ಥೆ “ಇಂಡಿಯಾ ಹೌಸ್​”(India House)​ ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.

ಇಂಡಿಯಾ ಹೌಸ್​ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್​ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್​ನಲ್ಲಿ ಕ್ರಿಕೆಟ್​ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.

Continue Reading

ದೇಶ

Delhi Rain: ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್‌ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ; ಕಾರುಗಳು ನಜ್ಜುಗುಜ್ಜು

Delhi Rain: ಅಧಿಕೃತ ಮೂಲಗಳ ಪ್ರಕಾರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಛಾವಣಿ ಶೀಟ್‌ ಮತ್ತು ಬೀಮ್‌ ಕುಸಿದು ಬಿದ್ದಿದ್ದು, ಪಾರ್ಕಿಂಗ್‌ ಏರಿಯಾದಲ್ಲಿದ್ದ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Delhi Rain
Koo

ಹೊಸದಿಲ್ಲಿ: ಇಷ್ಟು ದಿನ ಬಿಸಿಲ ಬೇಗೆ, ಉಷ್ಣ ಗಾಳಿಯ ತಾಪಕ್ಕೆ ಬೇಸತ್ತಿದ್ದ ರಾಷ್ಟ್ರ ರಾಜಧಾನಿ ದೆಹಲಿ(New Delhi)ಯಲ್ಲಿ ವರಣನ ಅಬ್ಬರ(Delhi Rain) ಜೋರಾಗಿದೆ. ನಿನ್ನೆ ತಡರಾತ್ರಿ ಸುರಿದ ಭಾರೀ ಮಳೆಗೆ ದಿಲ್ಲಿ ವಿಮಾನ ನಿಲ್ದಾಣದ ಟರ್ಮಿನಲ್‌ 1ರ ಮೇಲ್ಛಾವಣಿ ಕಾರುಗಳ ಮೇಲೆ ಕುಸಿದು ಬಿದ್ದಿದ್ದು, ಒಬ್ಬ ದುರ್ಮರಣಕ್ಕೀಡಾಗಿದ್ದಾನೆ. ಘಟನೆಯಲ್ಲಿ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಟರ್ಮಿನಲ್‌ 1ರ ಎಲ್ಲಾ ವಿಮಾನ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ. ಅದೂ ಅಲ್ಲದೇ ಮುಂಜಾಗೃತಾ ಕ್ರಮವಾಗಿ ದಿಲ್ಲಿ ವಿಮಾನ ನಿಲ್ದಾಣ(Delhi International Airport)ದ ಎಲ್ಲಾ ಚೆಕ್-ಇನ್‌ ಕೌಂಟರ್‌ಗಳನ್ನು ಮುಚ್ಚಲಾಗಿದೆ.

ಅಧಿಕೃತ ಮೂಲಗಳ ಪ್ರಕಾರ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಛಾವಣಿ ಶೀಟ್‌ ಮತ್ತು ಬೀಮ್‌ ಕುಸಿದು ಬಿದ್ದಿದ್ದು, ಪಾರ್ಕಿಂಗ್‌ ಏರಿಯಾದಲ್ಲಿದ್ದ ಕಾರುಗಳು ಸಂಪೂರ್ಣವಾಗಿ ಜಖಂಗೊಂಡಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಘಟನೆ ಬಗ್ಗೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್‌ ಮೋಹನ್‌ ನಾಯ್ಡು ಪ್ರತಿಕ್ರಿಯಿಸಿದ್ದು, ದಿಲ್ಲಿ ವಿಮಾನ ನಿಲ್ದಾಣದಲ್ಲಿ ನಡೆದಿರುವ ಘಟನೆ ಖುದ್ದು ಪರಿಶೀಲನೆ ನಡೆಸಲಾಗುತ್ತಿದೆ. ಗಾಯಾಳುಗಳನ್ನು ದಿಲಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಟ್ವೀಟ್‌ ಮಾಡಿದ್ದಾರೆ.

ರಣಭೀಕರ ಮಳೆಗೆ ದಿಲ್ಲಿ ತತ್ತರ

ಎರಡನೇ ದಿನವೂ ದಿಲ್ಲಿಯ್ಲಿ ಭಾರೀ ಮಳೆಯಾಗುತ್ತಿದೆ. ರಸ್ತೆ, ಮನೆಗಳಿಗೆ ನೀರು ನುಗ್ಗಿದ್ದು, ಜನ ಸಂಚಾರ ಅಸ್ತವ್ಯಸ್ತಗೊಂಡಿದೆ. ದಿಲ್ಲಿಯ ವಿವಿಧ ರಸ್ತೆಗಳಲ್ಲಿ ಟ್ರಾಫಿಕ್‌ ಸಮಸ್ಯೆ ಉಂಟಾಗಿತ್ತು.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 ಎಡಿ’ಗೆ ವೀಕ್ಷಕರಿಂದ ಬಹುಪರಾಕ್ ; ಹರಿದ ಚಪ್ಪಲಿ ಫೋಟೊ ಹಂಚಿಕೊಂಡ ನಿರ್ದೇಶಕ !

Continue Reading

ದೇಶ

Asaduddin Owaisi: ಜೈ ಪ್ಯಾಲೆಸ್ತೀನ್ ಘೋಷಣೆ ಕೂಗಿದ್ದ ಓವೈಸಿ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

Asaduddin Owaisi: ಘಟನೆ ಬಗ್ಗೆ ಸ್ವತಃ ಓವೈಸಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಕೆಲವು ದುಷ್ಕರ್ಮಿಗಳು ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಅದೂ ಅಲ್ಲದೇ ಮನೆಯ ಗೋಡೆಗಳಿಗೆ ಕಪ್ಪು ಮಸಿ ಬಳಿದಿದ್ದಾರೆ. ಒಬ್ಬ ಸಂಸದನಿಗೇ ರಕ್ಷಣೆ ಇಲ್ಲದಿದ್ದರೆ ಸಾಮಾನ್ಯ ಜನರ ಪರಿಸ್ಥಿತಿ ಹೇಗೆ? ಘಟನೆ ಬಗ್ಗೆ ದಿಲ್ಲಿ ಪೊಲೀಸರನ್ನು ಕೇಳಿದರೆ ಅವರು ಅಸಾಯಕರಂತೆ ನಿಲ್ಲುತ್ತಿದ್ದಾರೆ. ಅಮಿತ್‌ ಶಾ ಅವರೇ ನಿಮ್ಮ ಮೂಗಿನ ಕೆಳಗೇ ಹೀಗೆಲ್ಲಾ ನಡೆಯುತ್ತಿದೆ ಸ್ಪೀಕರ್‌ ಓಂ ಬಿರ್ಲಾ ಅವರೇ ಸಂಸದನಿಗೆ ರಕ್ಷಣೆ ಇದೆಯೋ ಇಲ್ಲವೋ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

VISTARANEWS.COM


on

Asaduddin Owaisi
Koo

ನವದೆಹಲಿ: 18ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ “ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗಿದ್ದ ಎಐಎಂಐಎಂ(AIMIM) ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ (Asaduddin Owaisi) ಅವರ ದಿಲ್ಲಿಯಲ್ಲಿರುವ ನಿವಾಸದ ಮೇಲೆ ತಡರಾತ್ರಿ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ಕುರಿತು(AIMIM) ಎಕ್ಸ್‌ನಲ್ಲಿ ಈ ವಿಡಿಯೋವನ್ನು ಶೇರ್‌ ಮಾಡಿದೆ.

ಇನ್ನು ಘಟನೆ ಬಗ್ಗೆ ಸ್ವತಃ ಓವೈಸಿ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದು, ಕೆಲವು ದುಷ್ಕರ್ಮಿಗಳು ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾರೆ. ಅದೂ ಅಲ್ಲದೇ ಮನೆಯ ಗೋಡೆಗಳಿಗೆ ಕಪ್ಪು ಮಸಿ ಬಳಿದಿದ್ದಾರೆ. ಒಬ್ಬ ಸಂಸದನಿಗೇ ರಕ್ಷಣೆ ಇಲ್ಲದಿದ್ದರೆ ಸಾಮಾನ್ಯ ಜನರ ಪರಿಸ್ಥಿತಿ ಹೇಗೆ? ಘಟನೆ ಬಗ್ಗೆ ದಿಲ್ಲಿ ಪೊಲೀಸರನ್ನು ಕೇಳಿದರೆ ಅವರು ಅಸಾಯಕರಂತೆ ನಿಲ್ಲುತ್ತಿದ್ದಾರೆ. ಅಮಿತ್‌ ಶಾ ಅವರೇ ನಿಮ್ಮ ಮೂಗಿನ ಕೆಳಗೇ ಹೀಗೆಲ್ಲಾ ನಡೆಯುತ್ತಿದೆ ಸ್ಪೀಕರ್‌ ಓಂ ಬಿರ್ಲಾ ಅವರೇ ಸಂಸದನಿಗೆ ರಕ್ಷಣೆ ಇದೆಯೋ ಇಲ್ಲವೋ ಎಂದು ಕಟುವಾಗಿ ಪ್ರಶ್ನಿಸಿದ್ದಾರೆ.

ಸಾವರ್ಕರ್‌ ಮಾದರಿಯ ಹೇಡಿತನ ನಿಲ್ಲಿಸಿ

ಈ ‘ಸಾವರ್ಕರ್ ಮಾದರಿಯ ಹೇಡಿತನದ ವರ್ತನೆ’ ನಾನು ಹೆದರುವುದಿಲ್ಲ ಎಂದೂ ಓವೈಸಿ ಹೇಳಿದ್ದಾರೆ. “ನನ್ನ ಮನೆಯನ್ನು ಗುರಿಯಾಗಿಸುವ ಗೂಂಡಾಗಳ ಬಗ್ಗೆ ಹೆದರಿಕೆಯಿಲ್ಲ. ಈ ಸಾವರ್ಕರ್ ಮಾದರಿಯ ಹೇಡಿತನದ ನಡವಳಿಕೆಯನ್ನು ನಿಲ್ಲಿಸಿ. ಸ್ವಲ್ಪ ಮಸಿ ಎಸೆದ ನಂತರ ಅಥವಾ ಕೆಲವು ಕಲ್ಲುಗಳನ್ನು ಹೊಡೆದು ನಂತರ ಓಡಿ ಹೋಗುವಂತಹ ಹೇಡಿತನ ಬೇಡ ಎಂದು ಅವರು ಹೇಳಿದರು. ಸೇರಿಸಲಾಗಿದೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕಿಡಿಗೇಡಿಗಳು ಓವೈಸಿ ನಿವಾಸದ ಎದುರು ಅಳವಡಿಸಿದ್ದ ನೇಮ್‌ಪ್ಲೇಟ್‌ ಮೇಲೆ ಕಪ್ಪು ಮಸಿ ಬಳಿದು ಓದಿ ಹೋಗಿದ್ದಾರೆ. ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಸಾದುದ್ದೀನ್ ಓವೈಸಿ ಪ್ರಮಾಣ ವಚನ ಸ್ವೀಕರಿಸಲು ತೆರಳುತ್ತಿದ್ದಂತೆ ಬಿಜೆಪಿ ಸಂಸದರು ಜೈ ಶ್ರೀರಾಮ್ ಘೋಷಣೆ ಕೂಗಲು ಆರಂಭಿಸಿದ್ದರು. ಉರ್ದುವಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಓವೈಸಿ, ‘ಜೈ ಭೀಮ್, ಜೈ ಮೀಮ್, ಜೈ ತೆಲಂಗಾಣ, ಜೈ ಪ್ಯಾಲೆಸ್ತೀನ್​’ ಎಂದು ಘೋಷಣೆ ಕೂಗುವ ಮೂಲಕ ಮುಕ್ತಾಯಗೊಳಿಸಿದರು. 2019 ರಲ್ಲಿ, ಓವೈಸಿ ತಮ್ಮ ಪ್ರಮಾಣವಚನವನ್ನು “ಜೈ ಭೀಮ್, ಅಲ್ಲಾ-ಒ-ಅಕ್ಬರ್ ಮತ್ತು ಜೈ ಹಿಂದ್” ಎಂಬ ಪದಗಳೊಂದಿಗೆ ಮುಕ್ತಾಯಗೊಳಿಸಿದ್ದರು. 2024 ರ ಲೋಕಸಭಾ ಚುನಾವಣೆಯಲ್ಲಿ ಓವೈಸಿ ಹೈದರಾಬಾದ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಹಿಂದೂ ಫೈರ್ ಬ್ರಾಂಡ್​ ಮಾಧವಿ ಲತಾ ವಿರುದ್ಧ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ:Abhyas Trial: ದೇಶದ ಕ್ಷಿಪಣಿ ವ್ಯವಸ್ಥೆಗೆ ಬಲ ತುಂಬುವ ‘ಅಭ್ಯಾಸ್’‌ ಪ್ರಯೋಗಾರ್ಥ ಪರೀಕ್ಷೆ ಯಶಸ್ವಿ

Continue Reading

ಪ್ರಮುಖ ಸುದ್ದಿ

CM Siddaramaiah: ವಿನಾಕಾರಣ ಕೇಂದ್ರವನ್ನು ದೂರಬೇಡಿ: ರಾಜ್ಯ ಸಂಸದರ ಸಭೆಯಲ್ಲಿ ಸಿಎಂಗೆ ಎನ್‌ಡಿಎ ಪಾಠ

CM Siddaramaiah: ನಿನ್ನೆ ಹೊಸದಿಲ್ಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ರಾಜ್ಯದಿಂದ ನೂತನವಾಗಿ ಆಯ್ಕೆಯಾದ ಲೋಕಸಭೆ ಹಾಗೂ ರಾಜ್ಯಸಭೆ ಸಂಸದರ ಸಭೆ ನಡೆಸಲಾಯಿತು.

VISTARANEWS.COM


on

mp meet cm siddaramaiah
Koo

ಹೊಸದಿಲ್ಲಿ: ʼಕೇಂದ್ರ ಸರ್ಕಾರ (Central Govt) ರಾಜ್ಯಕ್ಕೆ ಏನೂ ಮಾಡಿಲ್ಲ, ಬಿಜೆಪಿ (BJP) ನಮಗೆ ಸಹಾಯ ಮಾಡ್ತಿಲ್ಲ, ರಾಜ್ಯದ ಬಗ್ಗೆ ನಮ್ಮ ರಾಜ್ಯದ ಬಿಜೆಪಿ ಸಂಸದರಿಗೇ ಕಾಳಜಿ ಇಲ್ಲ ಅನ್ನುವ ಮಾತುಗಳನ್ನು ಪದೇ ಪದೆ ಆಡುವುದನ್ನು ಬಿಡಿʼ ಎಂದು ಎನ್‌ಡಿಎ (NDA) ಸಂಸದರು ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪಾಠ ಹೇಳಿದ್ದಾರೆ.

ನಿನ್ನೆ ಹೊಸದಿಲ್ಲಿಯಲ್ಲಿ ಸಿಎಂ ನೇತೃತ್ವದಲ್ಲಿ ನಡೆದ, ರಾಜ್ಯದ ನೂತನ ಸಂಸದರ ಸಭೆಯಲ್ಲಿ ಈ ಕುರಿತು ಮಾತುಗಳು ವಿನಿಮಯಗೊಂಡವು. ರಾಜ್ಯದ ಅಭಿವೃದ್ಧಿಗೆ ನಾವು ಬದ್ದರಿದ್ದೇವೆ. ರಾಜ್ಯದ ಸರ್ವತೋಮುಖ ಬೆಳವಣಿಗೆಗೆ ನಾವು ಸಹ ಸಹಕಾರ ನೀಡ್ತೇವೆ. ಹಾಗಂತ ಎಲ್ಲಾ ವಿಚಾರಗಳಿಗೂ ಸಹ ಕೇಂದ್ರ ಸರ್ಕಾರದ ತಪ್ಪು ಎನ್ನುವುದು ಸರಿ ಅಲ್ಲ. ಒಂದು ಯೋಜನೆ ಯಶಸ್ವಿಯಾಗಿ ಜಾರಿ ಆಗ್ಬೇಕು ಅಂದ್ರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಬ್ಬರೂ ಸಹಕರಿಸಬೇಕು. ನೀವು ಏನೂ ಮಾಡದೆ, ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಎಷ್ಟರ ಮಟ್ಟಿಗೆ ಸರಿ? ಎಂದು NDA ಸಂಸದರು ಕಾಂಗ್ರೆಸ್‌ಗೆ ಚಾಟಿ ಬೀಸಿದರು.

ರೈಲ್ವೆ ಯೋಜನೆ ಬಾಕಿ ಇದೆ, ರಾಷ್ಟ್ರೀಯ ಹೆದ್ದಾರಿಗಳು ಆಗಿಲ್ಲ ಅಂತ ಹೇಳುವ ಮೊದಲು ಅದಕ್ಕೆ ಬೇಕಾದ ಸಹಕಾರ ರಾಜ್ಯ ಸರ್ಕಾರ ಎಷ್ಟರ ಮಟ್ಟಿಗೆ ನೀಡಿದೆ ಎಂಬುದನ್ನು ಹೇಳಿ. ಸುಖಾ ಸುಮ್ಮನೆ ಕೇಂದ್ರ ಸರ್ಕಾರದ ಮೇಲೆ ಇಲ್ಲಾ ಸಲ್ಲದ ಆರೋಪ ಮಾಡಬೇಡಿ. ಬದಲಾಗಿ, ರಾಜ್ಯಕ್ಕೆ ಬೇಕಾದ ಅನುದಾನದ ಬಗ್ಗೆ ಫಾಲೋ ಅಪ್ ಮಾಡುವ ಕೆಲಸ ಮಾಡಿ. ನಾವು ನಿಮ್ಮೊಂದಿಗೇ ಇದ್ದೇವೆ, ರಾಜ್ಯದ ಹಿತಾಸಕ್ತಿಗೇ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ಸಂಸದರು ಹಾಗೂ ಸಚಿವರು ಹೇಳಿದ್ದಾರೆ.

ಯಾವುದೇ ಬಾಕಿ ಉಳಿಸಿಲ್ಲ: ನಿರ್ಮಲಾ

ಕೇಂದ್ರ ಸರಕಾರ ಬಾಕಿ ಹಣ ನೀಡಿಲ್ಲ ಎಂಬ ಸಿಎಂ ಆರೋಪಕ್ಕೆ ಸಿಎಂ ನೇತೃತ್ವದ ಸಭೆಯಲ್ಲೇ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ವಿವರಣೆ ನೀಡಿದರು. ಕೇಂದ್ರ ಸರ್ಕಾರ ನಮಗೆ ಅನ್ಯಾಯ ಮಾಡಿದೆ, ನಮ್ಮ ಹಣ ನಮಗೆ ನೀಡಿಲ್ಲ, GST ದುಡ್ಡು ನಮಗೆ ಸೇರಿಲ್ಲ ಅಂತ ಎಲ್ಲರೂ ಹೇಳಿದ್ದೀರಿ. ಬರ ಪರಿಹಾರದ ಹಣ ನೀಡಿಲ್ಲ ಅಂತ ಮಾಧ್ಯಮದ ಮುಂದೆ ದಿನಂಪ್ರತಿ ಹೇಳಿದ್ದೀರಿ. ಆದರೆ ನಾವು ಯಾವುದೇ ಹಣ ಬಾಕಿ ಉಳಿಸಿಲ್ಲ. ರಾಜ್ಯಕ್ಕೆ ಪೂರಕವಾಗಿ ಹಣ ಬಿಡುಗಡೆ ಮಾಡಿದ್ದೇವೆ ಎಂದು ನಿರ್ಮಲಾ ಹೇಳಿದರು.

ಬರ ಪರಿಹಾರ ಅಂತ 18 ಸಾವಿರ ಕೋಟಿ ಕೇಳಿದಾಗಲೂ ಸಹ ನಾವು ಅಗತ್ಯ ಹಣ ಬಿಡುಗಡೆ ಮಾಡಿದ್ದೇವೆ. GST ಹಣ ಸಹಿತ ನಾವು ನೀಡಿದ್ದೇವೆ. ನಿಮಗೆ ಪಕ್ಕಾ ಅಂಕಿ ಅಂಶ ಬೇಕಾದರೆ, ನಮ್ಮ ಜೊತೆ ಚರ್ಚೆಗೆ ಬನ್ನಿ. ಎಲ್ಲಾ ಅಂಕಿ ಅಂಶ ಸಮೇತ ನಾನು ನೀಡಬಲ್ಲೆ. ಅನವಶ್ಯಕವಾಗಿ ಕೇಂದ್ರದ ಮೇಲೆ ವಾಗ್ದಾಳಿ ಮಾಡಬೇಡಿ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಾಜ್ಯದ ಸಹಕಾರವೇ ಪ್ರಮುಖ: ಜೋಶಿ

ಕೇಂದ್ರ ಸರ್ಕಾರದಿಂದ ನಮಗೆ ಬರಬೇಕಾದದ್ದು ಬಹಳಷ್ಟಿದೆ ಅಂತ ಯಾವಾಗಲೂ ಹೇಳೋದು ಸರಿಯಲ್ಲ. ರೈಲ್ವೆ ಯೋಜನೆ ಬಾಕಿ ಇದೆ ಅಂತ ಆರೋಪ ಮಾಡೋದು ಒಳ್ಳೇದಲ್ಲ. ಅದಕ್ಕೆ ಬೇಕಾದ ಸೌಕರ್ಯ ಒದಗಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಈ ವರ್ಷದ ಬಜೆಟ್‌ನಲ್ಲಿ 7524 ಕೋಟಿ ರೂ.ಗಳನ್ನ ರಾಜ್ಯದ ರೈಲ್ವೆ ಅಭಿವೃದ್ಧಿಗೆ ಮೀಸಲು ಇಡಲಾಗಿದೆ. ಹುಬ್ಬಳ್ಳಿ -ಅಂಕೋಲಾ , ತುಮಕೂರು – ಚಿತ್ರದುರ್ಗ, ಧಾರವಾಡ- ಬೆಳಗಾವಿ ಸೇರಿದಂತೆ ಹಲವು ಯೋಜನೆ ಬಾಕಿ ಇದೆ. ಈ ಯೋಜನೆಗಳು ಬಾಕಿ ಉಳಿಯುವುದಕ್ಕೆ ಕೇವಲ ಕೇಂದ್ರ ಸರ್ಕಾರ ಮಾತ್ರ ಕಾರಣ ಅಲ್ಲ ಎಂದು ಸಂಸದ ಪ್ರಹ್ಲಾದ್‌ ಜೋಶಿ (Prahlad Joshi) ಗುಡುಗಿದರು.

ರೈಲ್ವೆ ಯೋಜನೆಯಲ್ಲಿ ರಾಜ್ಯ ಸರ್ಕಾರದ ಪಾತ್ರ ಸಹ ಪ್ರಮುಖವಾಗಿರಲಿದೆ. ರಾಜ್ಯ ಸರ್ಕಾರ ಫಾರೆಸ್ಟ್ ಕ್ಲಿಯರೆನ್ಸ್, ಲ್ಯಾಂಡ್ ಅಕ್ವಿಸಿಶನ್ ನೀಡಿದ್ರೆ ಮಾತ್ರ ಇವೆಲ್ಲಾ ಸಾಧ್ಯ. ಆದ್ರೆ ರಾಜ್ಯ ಸರ್ಕಾರ ಈ ಬಗ್ಗೆ ಪ್ರಸ್ತಾಪ ಮಾಡುವುದೇ ಇಲ್ಲ. ರೈಲ್ವೆ ಯೋಜನೆ ಬಂದಿಲ್ಲ, ಹೈವೇ ಆಗಿಲ್ಲ ಅಂತ ಹೇಳುವ ಕೆಲಸ ಮಾಡ್ತಿದೆ. ಈ ಎಲ್ಲಾ ಯೋಜನೆ ಸಂಪೂರ್ಣವಾಗಿ ರಾಜ್ಯಕ್ಕೆ ದೊರೆಯಬೇಕು ಅಂದ್ರೆ ನಿಮ್ಮ ಸಹಕಾರ ಸಹ ಅಗತ್ಯ. ನೀವು ನಮ್ಮೊಂದಿಗೆ ಕೆಲಸ ಮಾಡಿದರೆ, ಖಂಡಿತವಾಗಿಯೂ ರಾಜ್ಯದ ಹಿತಾಸಕ್ತಿ ನಾವು ಕಾಪಾಡಬಹುದು ಎಂದು ಪ್ರಹ್ಲಾದ್ ಜೋಶಿ ನುಡಿದಿದ್ದಾರೆ.

ಇದನ್ನೂ ಓದಿ: Kempegowda Jayanti: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತರಾದವರಲ್ಲ; ಸಿದ್ದರಾಮಯ್ಯ

Continue Reading
Advertisement
Actor Darshan special appeal to the fans
ಸ್ಯಾಂಡಲ್ ವುಡ್2 mins ago

Actor Darshan: ಪರಪ್ಪನ ಅಗ್ರಹಾರದಿಂದಲೇ ಅಭಿಮಾನಿಗಳ ಬಳಿ ದರ್ಶನ್‌ ವಿಶೇಷ ಮನವಿ; ಏನದು?

D. K. Shivakumar
ಕ್ರೀಡೆ6 mins ago

D. K. Shivakumar: ಫೈನಲ್​ ಪ್ರವೇಶಿಸಿದ ಭಾರತ ತಂಡಕ್ಕೆ ಶುಭ ಹಾರೈಸಿದ ಡಿಸಿಎಂ ಶಿವಕುಮಾರ್‌

Self Harming
ಕ್ರೈಂ8 mins ago

Self Harming : ಸಾಲಗಾರರ ಕಾಟ; ಇಲಿ ಪಾಷಣ ಸೇವಿಸಿ ಜೀವ ಬಿಟ್ಟ ಮೆಕ್ಯಾನಿಕ್

Gold Rate Today
ವಾಣಿಜ್ಯ17 mins ago

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ; ಬೆಂಗಳೂರಿನಲ್ಲಿ ಎಷ್ಟಿದೆ ದರ?

Sonu Srinivas Gowda harassed by darshan fans
ಸ್ಯಾಂಡಲ್ ವುಡ್21 mins ago

Sonu Srinivas Gowda: ದರ್ಶನ್‌ ಬಗ್ಗೆ ಮಾತನಾಡಿಲ್ಲ ಎಂದು ಸೋನು ಶ್ರೀನಿವಾಸ್ ಗೌಡಗೆ ಕಿರುಕುಳ ಕೊಟ್ಟ ದಚ್ಚು ಫ್ಯಾನ್ಸ್‌!

Paris Olympics 2024
ಕ್ರೀಡೆ41 mins ago

Paris Olympics 2024: ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುವ ಆ್ಯತ್ಲೀಟ್‌ಗಳಿಗೆ ಶುಭ ಕೋರಿದ ರಾಷ್ಟ್ರಪತಿ ಮುರ್ಮು

haveri accident tt
ಪ್ರಮುಖ ಸುದ್ದಿ1 hour ago

Haveri Accident: ಪೂಜೆ ಮಾಡಿಸಿಕೊಂಡು ಬಂದ ಹೊಸ ವಾಹನ 13 ಜನರ ಬಲಿ ಪಡೆಯಿತು!

Rohit Sharma
ಕ್ರೀಡೆ1 hour ago

Rohit Sharma: ಕೊಹ್ಲಿ, ಧೋನಿ ಬಳಿಕ ನಾಯಕನಾಗಿ ವಿಶೇಷ ದಾಖಲೆ ಬರೆದ ರೋಹಿತ್​

Payal Ghosh says she did not had physical relationship with anyone in past 9 years
ಬಾಲಿವುಡ್2 hours ago

Payal Ghosh: 9 ವರ್ಷ ಆಯ್ತು ಯಾರ ಜತೆಗೂ ಮಲಗಿಲ್ಲ, ಇರ್ಫಾನ್‌ ಪಠಾಣ್‌ನೇ ಕೊನೆ ಎಂದ ನಟಿ ಪಾಯಲ್‌ ಘೋಷ್‌ !

Delhi Rain
ದೇಶ2 hours ago

Delhi Rain: ಕುಸಿದು ಬಿದ್ದ ದಿಲ್ಲಿ ಏರ್‌ಪೋರ್ಟ್‌ ಛಾವಣಿ- ಒಬ್ಬ ಬಲಿ, 5 ಮಂದಿಗೆ ಗಂಭೀರ ಗಾಯ; ಕಾರುಗಳು ನಜ್ಜುಗುಜ್ಜು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು19 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ23 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು2 weeks ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌