Site icon Vistara News

Nuh Violence: ಕೋಮುಗಲಭೆ, ಹಿಂಸೆಗೆ ಪ್ರಚೋದನೆ; ಮುಸ್ಲಿಮರನ್ನು ಬಹಿಷ್ಕರಿಸಿದ 14 ಗ್ರಾಮಗಳು

Nuh Violence

Nuh Violence: 14 Haryana panchayats decide to boycott Muslims after clashes

ಚಂಡೀಗಢ: ಹರಿಯಾಣದ ನುಹ್‌ ಜಿಲ್ಲೆಯಲ್ಲಿ ವಿಶ್ವ ಹಿಂದು ಪರಿಷತ್‌ ಕೈಗೊಂಡಿದ್ದ ಧಾರ್ಮಿಕ ಮೆರವಣಿಗೆ ವೇಳೆ ನಡೆದ ಹಿಂಸಾಚಾರ (Nuh Violence) ದೇಶಾದ್ಯಂತ ಸುದ್ದಿಯಾದ ಬೆನ್ನಲ್ಲೇ, ಹರಿಯಾಣದ 14 ಗ್ರಾಮಗಳು ಮುಸ್ಲಿಮರನ್ನು ಬಹಿಷ್ಕರಿಸಿವೆ. ರಾಜ್ಯದ ಮೂರು ಜಿಲ್ಲೆಗಳ 14 ಗ್ರಾಮಗಳು ಮುಸ್ಲಿಮರನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದು, ಈ ಕುರಿತು ಆಯಾ ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಪತ್ರ ಬರೆಯಲಾಗಿದೆ.

ನುಹ್‌ ಜಿಲ್ಲೆಯಲ್ಲಿ ಜುಲೈ 31ರಂದು ನಡೆದ ಹಿಂಸಾಚಾರವು ಬೇರೆ ಜಿಲ್ಲೆಗಳಿಗೂ ಹರಡಿದೆ. ಹಿಂಸಾಚಾರದಿಂದಾಗಿ ಆರು ಜನ ಮೃತಪಟ್ಟಿದ್ದಾರೆ. ಇದರಿಂದ ಬೇಸತ್ತ ಮಹೇಂದ್ರಗಢ, ಝಜ್ಜರ್‌ ಹಾಗೂ ರೆವಾರಿ ಜಿಲ್ಲೆಯ 14 ಗ್ರಾಮಗಳ ಜನರು ಮುಸ್ಲಿಮರನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ. ಕೋಮುಗಲಭೆಗೆ ಕಾರಣರಾಗುವ ಇವರ ಜತೆ ವ್ಯಾಪಾರ-ವಹಿವಾಟು ಬೇಡ ಎಂಬ ನಿರ್ಧಾರಕ್ಕೆ ಗ್ರಾಮಸ್ಥರು ಬಂದಿದ್ದಾರೆ ಎಂದು ತಿಳಿದುಬಂದಿದೆ. ಇದು ಈಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

“ಗ್ರಾಮಗಳಲ್ಲಿ ನಾವು ಮುಸ್ಲಿಂ ಸಮುದಾಯದವರ ಮನೆಗಳಿಗೆ ಪ್ರವೇಶಿಸುವುದಿಲ್ಲ. ಹಿಂದುಗಳು ಮುಸ್ಲಿಮರ ಅಂಗಡಿಗಳಲ್ಲಿ ಯಾವುದೇ ವಸ್ತುಗಳನ್ನು ಕೊಳ್ಳುವುದಿಲ್ಲ. ಮುಸ್ಲಿಮರ ಜತೆ ಯಾವುದೇ ವ್ಯಾಪಾರ ಇಟ್ಟುಕೊಳ್ಳುವುದಿಲ್ಲ. ಹಾಗೆಯೇ, ಯಾರು ಇವರ ಜತೆ ಸಂಪರ್ಕ ಇಟ್ಟುಕೊಳ್ಳುತ್ತಾರೋ, ಅವರ ಮೇಲೆ ನಿಗಾ ಇಡಲಾಗುವುದು. ಗ್ರಾಮಗಳಿಗೆ ಬರುವ ಯಾವುದೇ ವ್ಯಾಪಾರಿಗಳ ಗುರುತಿನ ಚೀಟಿಗಳನ್ನು ಪರಿಶೀಲಿಸಲಾಗುವುದು” ಎಂಬುದಾಗಿ ಗ್ರಾಮಸ್ಥರು ಬರೆದ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: Nuh Violence: ಹರಿಯಾಣದಲ್ಲಿ ಮತ್ತೆ ಬುಲ್ಡೋಜರ್‌ ಸದ್ದು; ಹಿಂಸೆಯಲ್ಲಿ ಭಾಗಿಯಾದವರ 45 ಅಂಗಡಿಗಳ ಧ್ವಂಸ

ಜುಲೈ 31ರಂದು ಹಿಂದುಗಳು ಮೆರವಣಿಗೆ ಮಾಡುವಾಗ ಕಲ್ಲು ತೂರಾಟ ನಡೆಸಲಾಗಿದೆ. ಇದರಿಂದ ಭುಗಿಲೆದ್ದ ಹಿಂಸಾಚಾರವು ಬೃಹತ್‌ ಗಲಭೆಯಾಗಿ ಮಾರ್ಪಟ್ಟು ಬೇರೆ ಜಿಲ್ಲೆಗಳಲ್ಲೂ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಲ್ಲಿ ಭಾಗಿಯಾದ 300ಕ್ಕೂ ಅಧಿಕ ಜನರ ಮನೆಗಳನ್ನು ಅಕ್ರಮವಾಗಿ ನಿರ್ಮಿಸಿದ ಆರೋಪದಲ್ಲಿ ನೆಲಸಮಗೊಳಿಸಲಾಗಿದೆ. ಹಾಗೆಯೇ, 25 ರೋಹಿಂಗ್ಯಾಗಳನ್ನೂ ಬಂಧಿಸಲಾಗಿದೆ. ಹಲವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Exit mobile version