ಲಾಸ್ ಏಂಜಲೀಸ್, ಅಮೆರಿಕ: ಆಸ್ಕರ್ 2023 (Oscars 2023) ಘೋಷಣೆಯಾಗಿದೆ. ಬೆಸ್ಟ್ ಒರಿಜಿನಲ್ ಕೆಟಗರಿಯಲ್ಲಿ ಸ್ಪರ್ಧಿಸಿದ್ದ ಭಾರತದ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು…(Naatu Naatu…) ಗೀತೆಯು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಈ ಮೂಲಕ ಎಸ್ ಎಸ್ ರಾಜಮೌಳಿ ನಿರ್ದೇಶನ ಹಾಗೂ ರಾಮ ಚರಣ್ ಮತ್ತು ಜೂ. ಎನ್‌ಟಿಆರ್ ಚಿತ್ರವು ಇತಿಹಾಸವನ್ನು ಸೃಷ್ಟಿಸಿದೆ. ಆಸ್ಕರ್ ಪ್ರಶಸ್ತಿ ಗೆದ್ದ ಸಂಪೂರ್ಣವಾದ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ಆರ್‌ಆರ್‌ಆರ್(RRR) ಚಿತ್ರವು ಪಾತ್ರವಾಗಿದೆ. ಬೆಸ್ಟ್ ಡ್ಯಾಕುಮೆಂಟರಿ ಶಾರ್ಟ್ ಫಿಲಮ್ ಕೆಟಗರಿಯಲ್ಲಿ ದಿ ಎಲಿಫೆಂಟ್ ವಿಸ್ಪರ್ಸ್(the elephant whisperers) ಆಸ್ಕರ್ ಗೆದ್ದಿದೆ.
ಬೆಸ್ಟ್ ನಿರ್ದೇಶಕ ಕೆಟಗರಿಯಲ್ಲಿ Ever ything Everywhere All at Once ಚಿತ್ರದ ನಿರ್ದೇಶಕರಾದ ಡೇನಿಯಲ್ ಕ್ವಾನ್ ಮತ್ತು ಡೇನಿಯಲ್ ಶಿನೆರ್ಟ್ ಅವರಿಗೆ ಆಸ್ಕರ್ ಪ್ರಶಸ್ತಿ ಸಂದಿದೆ.
ಆಸ್ಕರ್ 2023 (Oscars 2023) ಘೋಷಣೆಯಾಗಿದೆ. ಬೆಸ್ಟ್ ಒರಿಜಿನಲ್ ಕೆಟಗರಿಯಲ್ಲಿ ಸ್ಪರ್ಧಿಸಿದ್ದ ಭಾರತದ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು…(Naatu Naatu…) ಗೀತೆಯು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಈ ಮೂಲಕ ಎಸ್ ಎಸ್ ರಾಜಮೌಳಿ ನಿರ್ದೇಶನ ಹಾಗೂ ರಾಮ ಚರಣ್ ಮತ್ತು ಜೂ. ಎನ್‌ಟಿಆರ್ ಚಿತ್ರವು ಇತಿಹಾಸವನ್ನು ಸೃಷ್ಟಿಸಿದೆ. ಆಸ್ಕರ್ ಪ್ರಶಸ್ತಿ ಗೆದ್ದ ಸಂಪೂರ್ಣವಾದ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ಆರ್‌ಆರ್‌ಆರ್(RRR) ಚಿತ್ರವು ಪಾತ್ರವಾಗಿದೆ.
ಎಸ್ ಎಸ್ ರಾಜಮೌಳಿ ನಿರ್ದೇಶನದ ತೆಲುಗು ಚಿತ್ರ ಆರ್ ಆರ್ ಆರ್ ಸಿನಿಮಾದ ನಾಟು ನಾಟು ಹಾಡು ಬೆಸ್ಟ್ ಒರಿಜಿನ್ ಸಾಂಗ್ ಕೆಟಗರಿಯಲ್ಲಿ 2023ರ ಸಾಲಿನ ಆಸ್ಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಇದರೊಂದಿಗೆ ಹೊಸ ಇತಿಹಾಸ ಸೃಷ್ಟಿಯಾಗಿದೆ.
ಬೆಸ್ಟ್ ಸೌಂಡ್ ಕೆಟಗರಿಯಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದ TOP GUN: MAVERICK ಸಿನಿಮಾ. ಮಾರ್ಕ್ ವೀನ್‌ಗಾರ್ಟನ್, ಜೇಮ್ಸ್ ಎಚ್. ಮಾಥರ್, ಅಲ್ ನೆಲ್ಸನ್, ಕ್ರಿಸ್ ಬರ್ಡನ್ ಮತ್ತು ಮಾರ್ಕ್ ಟೇಲರ್ ಅವರು ಟಾಪ್ ಗನ್: ಮಾವರಿಕ್ ಚಿತ್ರದ ಸೌಂಡ್ ಡಿಸೈನ್ ಮಾಡಿದ್ದಾರೆ.
ಬೆಸ್ಟ್ ಅಡಾಪ್ಟೆಟೆಡ್ ಸ್ಕ್ರೀನ್ ಪ್ಲೇ ಕೆಟಗರಿಯಲ್ಲಿ WOMEN TALKING ಚಿತ್ರವು ಆಸ್ಕರ್ ಗೆದ್ದಿದೆ. ಅಡಾಪ್ಟೆಡ್ ಚಿತ್ರಕತೆ ಬರೆದ ಸಾರಾ ಪಾಲಿ ಅವರ ಮುಡಿಗೆ ಆಸ್ಕರ್ ಸಂದಿದೆ.