ಲಾಸ್ ಏಂಜಲೀಸ್, ಅಮೆರಿಕ: ಆಸ್ಕರ್ 2023 (Oscars 2023) ಘೋಷಣೆಯಾಗಿದೆ. ಬೆಸ್ಟ್ ಒರಿಜಿನಲ್ ಕೆಟಗರಿಯಲ್ಲಿ ಸ್ಪರ್ಧಿಸಿದ್ದ ಭಾರತದ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು…(Naatu Naatu…) ಗೀತೆಯು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಈ ಮೂಲಕ ಎಸ್ ಎಸ್ ರಾಜಮೌಳಿ ನಿರ್ದೇಶನ ಹಾಗೂ ರಾಮ ಚರಣ್ ಮತ್ತು ಜೂ. ಎನ್‌ಟಿಆರ್ ಚಿತ್ರವು ಇತಿಹಾಸವನ್ನು ಸೃಷ್ಟಿಸಿದೆ. ಆಸ್ಕರ್ ಪ್ರಶಸ್ತಿ ಗೆದ್ದ ಸಂಪೂರ್ಣವಾದ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ಆರ್‌ಆರ್‌ಆರ್(RRR) ಚಿತ್ರವು ಪಾತ್ರವಾಗಿದೆ. ಬೆಸ್ಟ್ ಡ್ಯಾಕುಮೆಂಟರಿ ಶಾರ್ಟ್ ಫಿಲಮ್ ಕೆಟಗರಿಯಲ್ಲಿ ದಿ ಎಲಿಫೆಂಟ್ ವಿಸ್ಪರ್ಸ್(the elephant whisperers) ಆಸ್ಕರ್ ಗೆದ್ದಿದೆ.
ಸ್ಲಮ್ ಡಾಗ್ ಮಿಲೇನಿಯರ್ ಚಿತ್ರಕ್ಕೆ ಸಂಗೀತ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್ ಅವರಿಗೆ ಎರಡು ಆಸ್ಕರ್ ಅವಾರ್ಡ್ಸ್ ದೊರೆತಿದ್ದವು(2009). ಈ ಸಿನಿಮಾ ಒಟ್ಟು ಹತ್ತು ಕೆಟಗರಿಗಳಲ್ಲಿ ನಾಮಿನೇಟ್ ಆಗಿ, 8 ಕೆಟಗರಿಗಳಲ್ಲಿ ಆಸ್ಕರ್ ಗೆದ್ದುಕೊಂಡಿತ್ತು. ಈ ಸಿನಿಮಾದಲ್ಲಿ ಅನಿಲ್ ಕಪೂರ್, ಇರ್ಫಾನ್ ಪಠಾಣ್ ಅವರು ಪ್ರಮುಖ ಪಾತ್ರ ನಿರ್ವಹಿಸಿದ್ದರು.
ಸಿನಿ ತಾರೆಗಳ ಆಗಮನ
ಆಸ್ಕರ್ ಅವಾರ್ಡ್ಸ್ ಘೋಷಣೆಯಾಗಲಿರುವ ಲಾಸ್‌ಏಜಲೀಸ್‌ನ ಡಾಲ್ಭಿ ಥಿಯೇಟರ್‌ಗೆ ಸಿನಿ ತಾರೆಗಳು ಆಗಮಿಸುತ್ತಿದ್ದಾರೆ, ರೆಡ್ ಕಾರ್ಪೆಟ್‌ನಲ್ಲಿ ಸ್ಟಾರ್‌ಗಳ ಸಮಾಗಮವಾಗುತ್ತಿದೆ.
ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಚಿತ್ರ ಗೆಲ್ಲುತ್ತಾ?
ಜೂ.ಎನ್‌ಟಿಆರ್, ರಾಮ ಚರಣ್ ಅಭಿನಯದ ಹಾಗೂ ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು ಸಾಂಗ್ ಬೆಸ್ಟ್ ಒರಿಜಿನಲ್ ಸಾಂಗ್ ಕೆಟಗರಿಯಲ್ಲಿ ಸ್ಪರ್ಧಿಸಿದೆ. ಎಂ ಎಂ ಕೀರವಾಣಿ ಅವರು ಹಾಡಿನ ಸಂಗೀತ ನಿರ್ದೇಶಕರು.
ಆರ್‌ಆರ್‌ಆರ್ ಜತೆಗೆ ಭಾರತದ ಸಾಕ್ಷ್ಯ ಮತ್ತು ಕಿರು ಚಿತ್ರಗಳು ಸ್ಪ್ರಧೆಯಲ್ಲಿ
ಎಸ್ ಎಸ್ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್(RRR) ಸಿನಿಮಾದ 'ನಾಟು ನಾಟು …' ಒರಿಜಿನಲ್ ಬೆಸ್ಟ್ ಹಾಡು ಕೆಟಗರಿ, ಅತ್ಯುತ್ತಮ ಸಾಕ್ಷ್ಯಚಿತ್ರ ಕೆಟಗರಿಯಲ್ಲಿ ಆಲ್ ದಿ ಬ್ರೆತ್ಸ್ , ಅತ್ಯುತ್ತಮ ಕಿರು ಚಿತ್ರ ವಿಭಾಗದಲ್ಲಿ ದಿ ಎಲಿಫೆಂಟ್ ವಿಸ್ಪರರ್ಸ್ ನಾಮಿನೇಟ್ ಆಗಿವೆ.
ಎಲ್ಲಿ ಕಾರ್ಯಕ್ರಮ ನಡೆಯಲಿದೆ?
ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭವು ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯಲಿದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮವನ್ನು ಜಿಮ್ಮಿ ಕಿಮ್ಮೆಲ್ ಅವರು ನಡೆಸಿಕೊಡಲಿದ್ದಾರೆ. ಅವರು ಈ ಹಿಂದೆ 2017 ಮತ್ತು 2019ರಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದರು.