ಲಾಸ್ ಏಂಜಲೀಸ್, ಅಮೆರಿಕ: ಆಸ್ಕರ್ 2023 (Oscars 2023) ಘೋಷಣೆಯಾಗಿದೆ. ಬೆಸ್ಟ್ ಒರಿಜಿನಲ್ ಕೆಟಗರಿಯಲ್ಲಿ ಸ್ಪರ್ಧಿಸಿದ್ದ ಭಾರತದ ಆರ್‌ಆರ್‌ಆರ್ ಸಿನಿಮಾದ ನಾಟು ನಾಟು…(Naatu Naatu…) ಗೀತೆಯು ಆಸ್ಕರ್ ಪ್ರಶಸ್ತಿ ಗೆದ್ದುಕೊಂಡಿದೆ. ಈ ಮೂಲಕ ಎಸ್ ಎಸ್ ರಾಜಮೌಳಿ ನಿರ್ದೇಶನ ಹಾಗೂ ರಾಮ ಚರಣ್ ಮತ್ತು ಜೂ. ಎನ್‌ಟಿಆರ್ ಚಿತ್ರವು ಇತಿಹಾಸವನ್ನು ಸೃಷ್ಟಿಸಿದೆ. ಆಸ್ಕರ್ ಪ್ರಶಸ್ತಿ ಗೆದ್ದ ಸಂಪೂರ್ಣವಾದ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ಆರ್‌ಆರ್‌ಆರ್(RRR) ಚಿತ್ರವು ಪಾತ್ರವಾಗಿದೆ. ಬೆಸ್ಟ್ ಡ್ಯಾಕುಮೆಂಟರಿ ಶಾರ್ಟ್ ಫಿಲಮ್ ಕೆಟಗರಿಯಲ್ಲಿ ದಿ ಎಲಿಫೆಂಟ್ ವಿಸ್ಪರ್ಸ್(the elephant whisperers) ಆಸ್ಕರ್ ಗೆದ್ದಿದೆ.
ಕಾರ್ಯಕ್ರಮವನ್ನು ವೀಕ್ಷಿಸುವುದು ಹೇಗೆ?
ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ನಡೆಯುವ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಡಿಸ್ನಿ ಹಾಟ್‌ಸ್ಟಾರ್‌ನಲ್ಲಿ(disney+ hotstar) ಲೈವ್ ಸ್ಟ್ರೀಮ್ ನೋಡಬಹುದು. ಅಲ್ಲದೇ, ಎಬಿಸಿ ಟಿವಿಯಲ್ಲಿ ಈ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ.
ಆಸ್ಕರ್ ಯಾವಾಗ ಘೋಷಣೆ?
ಆಸ್ಕರ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಭಾನುವಾರ ಅಂದರೆ ಮಾರ್ಚ್ 12ರಂದು ನಡೆಯಲಿದೆ. ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಈ ಕಾರ್ಯಕ್ರಮ ಜರುಗಲಿದೆ. ಭಾರತದ ಸಮಯದ ಪ್ರಕಾರ ಮಾರ್ಚ್ 13ರಂದು ಬೆಳಗ್ಗೆ 5.30ರಿಂದ ಕಾರ್ಯಕ್ರಮ ನಡೆಯಲಿದೆ.