Oscars 2023: ಆಸ್ಕರ್‌ ಪ್ರಶಸ್ತಿಗೆ ಆರ್‌ಆರ್‌ಆರ್ ಜತೆಗೆ ಮತ್ತ್ಯಾವ ಚಿತ್ರಗಳು ನಾಮನಿರ್ದೇಶನ? ಇಲ್ಲಿದೆ ವಿಸ್ತೃತ ಮಾಹಿತಿ Vistara News
Connect with us

ದೇಶ

Oscars 2023: ಆಸ್ಕರ್‌ ಪ್ರಶಸ್ತಿಗೆ ಆರ್‌ಆರ್‌ಆರ್ ಜತೆಗೆ ಮತ್ತ್ಯಾವ ಚಿತ್ರಗಳು ನಾಮನಿರ್ದೇಶನ? ಇಲ್ಲಿದೆ ವಿಸ್ತೃತ ಮಾಹಿತಿ

Oscars 2023: ಭಾರತೀಯ ಕಾಲಮಾನ ಪ್ರಕಾರ ಮಾರ್ಚ್ 13ರ ನಸುಕಿನಲ್ಲಿ ಆಸ್ಕರ್ ಪ್ರಶಸ್ತಿಗಳು ಘೋಷಣೆಯಾಗಲಿವೆ. ಭಾರತದ ಆರ್ ಆರ್ ಆರ್ ಸೇರಿ ಹಲವು ಚಿತ್ರಗಳು ಪ್ರಶಸ್ತಿ ಸುತ್ತಿನಲ್ಲಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

Avatar The Way of Water
Koo

ಲಾಸ್‌ ಏಂಜಲೀಸ್‌: ಭಾರತದ ಮೂರು ಸಿನಿಮಾಗಳು ಆಸ್ಕರ್‌ ಪ್ರಶಸ್ತಿಯ (Oscars 2023 Nominations) ಅಂತಿಮ ಸುತ್ತಿಗೆ ನಾಮನಿರ್ದೇಶನದಲ್ಲಿವೆ. ಆರ್‌ಆರ್‌ಆರ್‌ ಸಿನಿಮಾದ ನಾಟು ನಾಟು ಹಾಡು ಒರಿಜಿನಲ್‌ ಬೆಸ್ಟ್‌ ಹಾಡು ಕೆಟಗರಿ, ಅತ್ಯುತ್ತಮ ಸಾಕ್ಷ್ಯಚಿತ್ರ ಕೆಟಗರಿಯಲ್ಲಿ ಆಲ್‌ ದಿ ಬ್ರೆತ್ಸ್‌ , ಅತ್ಯುತ್ತಮ ಕಿರು ಚಿತ್ರ ವಿಭಾಗದಲ್ಲಿ ದಿ ಎಲಿಫೆಂಟ್‌ ವಿಸ್ಪರರ್ಸ್ ನಾಮಿನೇಟ್‌ ಆಗಿವೆ. ಇವುಗಳ ಜತೆಗೆ ಜತೆಗೆ ಜಗತ್ತಿನಾದ್ಯಂತ ಉತ್ತಮ ಪ್ರದರ್ಶನ ಕಂಡ ಅವತಾರ್‌ 2 (Avatar: The Way Of Water), ಟಾಪ್‌ ಗನ್‌: ಮಾವೆರಿಕ್‌ (Top Gun: Maverick) ಸೇರಿ ಹಲವು ಜಾಗತಿಕ ಸಿನಿಮಾಗಳು ಕೂಡ ಆಸ್ಕರ್‌ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿವೆ. ಭಾರತೀಯ ಕಾಲಮಾನ ಮಾರ್ಚ್ 13ರಂದು ಆಸ್ಕರ್ ಪ್ರಶಸ್ತಿ ಘೋಷಣೆಯಾಗಲಿದ್ದು, ಕುತೂಹಲ ಹೆಚ್ಚಾಗತೊಡಗಿದೆ.

ಅವತಾರ್‌ 2 ನಾಲ್ಕು ಹಾಗೂ ಟಾಪ್‌ ಗನ್‌: ಮಾವೆರಿಕ್‌ ಆರು ವಿಭಾಗಗಳಲ್ಲಿ ನಾಮನಿರ್ದೇಶನಗೊಂಡಿವೆ. ಅತ್ಯುತ್ತಮ ಶಬ್ದ, ಅತ್ಯುತ್ತಮ ಪಿಕ್ಚರ್‌, ಬೆಸ್ಟ್‌ ಪ್ರೊಡಕ್ಷನ್‌ ಡಿಸೈನ್, ಬೆಸ್ಟ್‌ ವಿಷ್ಯುವಲ್‌ ಎಫೆಕ್ಟ್ಸ್‌ ವಿಭಾಗದಲ್ಲಿ ಅವತಾರ್‌ 2 ನಾಮಿನೇಟ್‌ ಆಗಿದೆ. ಹಾಗಾಗಿ, ಈ ಸಿನಿಮಾ ಮೇಲೆ ಹೆಚ್ಚಿನ ನಿರೀಕ್ಷೆ ಇದೆ.

ಇನ್ನು ಬೆಸ್ಟ್‌ ಸೌಂಡ್‌, ಬೆಸ್ಟ್‌ ಅಡಾಪ್ಟಡ್‌ ಸ್ಕ್ರೀನ್‌ಪ್ಲೇ, ಬೆಸ್ಟ್‌ ಫಿಲಂ ಎಡಿಟಿಂಗ್‌, ಬೆಸ್ಟ್‌ ವಿಷ್ಯುವಲ್‌ ಎಫೆಕ್ಟ್ಸ್‌, ಬೆಸ್ಟ್‌ ಒರಿಜಿನಲ್‌ ಸಾಂಗ್‌ ಹಾಗೂ ಬೆಸ್ಟ್‌ ಪಿಕ್ಚರ್‌ ವಿಭಾಗದಲ್ಲಿ ಟಾಪ್‌ ಗನ್‌: ಮಾವೆರಿಕ್‌ ನಾಮನಿರ್ದೇಶನಗೊಂಡಿದೆ.

ಹಾಗೆಯೇ, ಎಲ್ವಿಸ್‌ (ಬೆಸ್ಟ್‌ ಸಿನಿಮಾಟೋಗ್ರಫಿ, ಬೆಸ್ಟ್‌ ಫಿಲಂ ಎಡಿಟಿಂಗ್),‌ ದಿ ಬ್ಯಾಟ್‌ಮನ್‌ (ಬೆಸ್ಟ್‌ ವಿಷ್ಯುವಲ್‌ ಎಫೆಕ್ಟ್ಸ್‌) ವಿಭಾಗದಲ್ಲಿ ಆಯ್ಕೆಯಾಗಿವೆ. ಇನ್ನು ದಿ ಫ್ಯಾಬೆಲ್‌ಮನ್ಸ್‌ ಸಿನಿಮಾ ನಿರ್ದೇಶನಕ್ಕಾಗಿ ಸ್ಟೀವನ್‌ ಸ್ಪೀಲ್‌ಬರ್ಗ್‌ ಅವರು ಬೆಸ್ಟ್‌ ಡೈರೆಕ್ಟರ್‌ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದ್ದಾರೆ.

ಇದನ್ನೂ ಓದಿ | Oscars 2023 Nominations: ಆರ್‌ಆರ್‌ಆರ್‌ ಚಿತ್ರದ ನಾಟು ನಾಟು ಹಾಡು ಆಸ್ಕರ್‌ಗೆ ನಾಮನಿರ್ದೇಶನ, ಮಹತ್ವದ ಮನ್ನಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cauvery Dispute:‌ ಕಾವೇರಿ ಕಿಚ್ಚು; ಸತ್ತ ಇಲಿಯನ್ನು ಬಾಯಿ ಬಳಿ ಇಟ್ಟು ಪ್ರತಿಭಟನೆ ನಡೆಸಿದ ರೈತರು

Cauvery Water Dispute: ಕಾವೇರಿ ನದಿ ನೀರು ಹಂಚಿಕೆ (Cauvery Water Dispute) ಗಲಾಟೆ ಹೆಚ್ಚಾಗುತ್ತಿದೆ. ಈ ಮಧ್ಯೆ ತಮಿಳುನಾಡಿನ ರೈತರು ಕೈಯಲ್ಲಿ ಸತ್ತ ಇಲಿಯನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

VISTARANEWS.COM


on

Edited by

tamil nadu
Koo

ಚೆನ್ನೈ: ಕಾವೇರಿ ನದಿ ನೀರು ಹಂಚಿಕೆ(Cauvery Dispute) ಗಲಾಟೆ ದಿನ ಕಳೆದಂತೆ ಕಾವೇರುತ್ತಿದೆ. ಈ ವಿಚಾರ ಕರ್ನಾಟಕ ಮತ್ತು ತಮಿಳುನಾಡಿನ ಮಧ್ಯೆ ಒಡಕು ಮೂಡುವಂತೆ ಮಾಡಿದೆ. ಇತ್ತ ಕರ್ನಾಟಕದ ರೈತರು ನೀರು ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರೆ ಅತ್ತ ತಮಿಳುನಾಡಿನ ಕೃಷಿಕರು ಸತ್ತ ಇಲಿಯನ್ನು ತಮ್ಮ ಬಾಯಿಯ ಬಳಿ ಇಟ್ಟುಕೊಂಡು ವಿಚಿತ್ರ ರೀತಿಯಲ್ಲಿ ಹೋರಾಟಕ್ಕೆ ಇಳಿದಿದ್ದಾರೆ.

ತಮಿಳಿನಾಡಿನ ತಿರುಚಿರಪಳ್ಳಿಯಲ್ಲಿ ರೈತರು ಈ ರೀತಿಯ ವಿಚಿತ್ರ ಪ್ರತಿಭಟನೆಗೆ ಇಳಿದು ರಾಜ್ಯಕ್ಕೆ ಸಾಕಷ್ಟು ಪ್ರಮಾಣದಲ್ಲಿ ಕಾವೇರಿ ನೀರು ಒದಗಿಸಬೇಕೆಂದು ಕರ್ನಾಟಕ ಮತ್ತು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಸದ್ಯ ಈ ವಿಡಿಯೊ ವೈರಲ್‌ ಆಗಿದೆ. ಕರ್ನಾಟಕವು ಕಾವೇರಿ ನೀರನ್ನು ತಡೆಹಿಡಿಯುವುದನ್ನು ಮುಂದುವರಿಸಿದರೆ, ಭತ್ತದ ಕೃಷಿಗೆ ನೀರಿನ ಕೊರತೆ ಕಾಡಲಿದೆ. ಇದರಿಂದ ರೈತರು ಬದುಕುಳಿಯಲು ಇಲಿ ಮಾಂಸವನ್ನು ಸೇವಿಸುವುದನ್ನು ಬಿಟ್ಟು ಬೇರೆ ದಾರಿಯಿಲ್ಲ ಎನ್ನುವುದನ್ನು ಸಂಕೇತಿಸುವಂತೆ ಇಲಿಯ ಮೃತದೇಹವನ್ನು ಕೈಯಲ್ಲಿಟ್ಟು ಪ್ರತಿಭಟನೆ ನಡೆಸಲಾಗಿದೆ.

ಇದೇ ಮೊದಲ ಸಲ ಅಲ್ಲ

ವಿಶೇಷವೆಂದರೆ ರೈತರು ಈ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿರುವುದು ಇದು ಮೊದಲ ಸಲವೇನಲ್ಲ. 2017ರಲ್ಲಿ 65 ವರ್ಷದ ಚಿನ್ನಗೊಡಂಗಿ ಪಳನಿಸ್ವಾಮಿ ಎನ್ನುವ ರೈತರೊಬ್ಬರು ಜೀವಂತ ಇಲಿಯೊಂದನ್ನು ಹಲ್ಲಿನ ನಡುವೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದ್ದರು. ಆ ಮೂಲಕ ತಮಿಳುನಾಡಿನ ರೈತರ ಸಮಸ್ಯೆಯನ್ನು ಸರ್ಕಾರದ ಗಮನ ಸೆಳೆಯಲು ಯತ್ನಿಸಿದ್ದರು.

“ಪರಿಸ್ಥಿತಿ ಸುಧಾರಿಸದಿದ್ದರೆ ನಾವು ಇಲಿಗಳನ್ನು ಸೇವಿಸ ಬೇಕಾದ ಪರಿಸ್ಥಿತಿ ಎದುರಾಗಬಹುದು ಎಂಬ ಸಂದೇಶವನ್ನು ನಾನು ನನ್ನ ಸಹವರ್ತಿಗಳೊಂದಿಗೆ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದೆ” ಎಂದು ಚಿನ್ನಗೊಡಂಗಿ ಪಳನಿಸ್ವಾಮಿ ತಿಳಿಸಿದ್ದರು.

ಅದಕ್ಕೂ ಮೊದಲು 2016ರಲ್ಲಿ, ತಮಿಳುನಾಡಿನ ತಿರುಚ್ಚಿಯಲ್ಲಿ ಸುಮಾರು 30 ರೈತರ ಗುಂಪು ಸತ್ತ ಇಲಿಗಳನ್ನು ಬಾಯಿ ಬಳಿ ಹಿಡಿದುಕೊಂಡು ಪ್ರತಿಭಟನೆ ನಡೆಸಿತ್ತು. ನೀರಿನ ಬಿಕ್ಕಟ್ಟು ಭತ್ತದ ಕೃಷಿಯ ಮೇಲೆ ತೀವ್ರ ಪರಿಣಾಮ ಬೀರಿದೆ ಮತ್ತು ಸರ್ಕಾರ ಕೂಡಲೇ ಕಾರ್ಯ ಪ್ರವೃತ್ತವಾಗದಿದ್ದರೆ ಪರಿಸ್ಥಿತಿ ಇನ್ನಷ್ಟು ಹದಗೆಡಲಿದೆ. ಆರ್ಥಿಕ ಸಂಕಷ್ಟದ ಪರಿಣಾಮವಾಗಿ ಇಲಿ ಮಾಂಸವನ್ನೂ ರೈತರು ಸೇವಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಬಹುದು ಎಂಬುದನ್ನು ಆ ಗುಂಪು ವಿವರಿಸಿತ್ತು.

ಇದನ್ನೂ ಓದಿ: Cauvery Dispute : 3000 ಕ್ಯೂಸೆಕ್‌ ನೀರು ಬಿಡುಗಡೆ ಆದೇಶವನ್ನೂ ಪಾಲಿಸುತ್ತಾ ಸರ್ಕಾರ?; ಸಿಎಂ ಹೇಳಿದ್ದೇನು?

ರಾಜ್ಯಕ್ಕೆ ಹೊಡೆತ

ಕಾವೇರಿ ನೀರು ನಿಯಂತ್ರಣ ಸಮಿತಿ (Cauvery Water Regulation Committee) ಮಂಗಳವಾರ ನಡೆಸಿದ ಮಹತ್ವದ ಸಭೆಯಲ್ಲಿ ಕರ್ನಾಟಕಕ್ಕೆ ಇನ್ನೊಂದು ಹೊಡೆತ ಬಿದ್ದಿದೆ. ಸೆ. 28ರಿಂದ ಅಕ್ಟೋಬರ್‌ 15ರವರೆಗೆ ಪ್ರತಿದಿನ 3,000 ಕ್ಯೂಸೆಕ್‌ ನೀರು ಬಿಡುವಂತೆ ಆದೇಶ ನೀಡಿದೆ. ಸೆಪ್ಟೆಂಬರ್‌ 13ರಂದು ಕಾವೇರಿ ನೀರು ನಿಯಂತ್ರಣ ಸಮಿತಿ 15 ದಿನಗಳವರೆಗೆ ಪ್ರತಿದಿನ 5,000 ಕ್ಯೂಸೆಕ್‌ ನೀರು ಬಿಡುವಂತೆ ಸೂಚಿಸಿತ್ತು. ಸೆ. 18ರಂದು ನಡೆದ ಪ್ರಾಧಿಕಾರದ ಸಭೆ ಅದನ್ನು ಅನುಮೋದಿಸಿತ್ತು. ಸೆಪ್ಟೆಂಬರ್‌ 21ರಂದು ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯ ವೇಳೆ ಈ ಆದೇಶವನ್ನು ಎತ್ತಿ ಹಿಡಿಯಲಾಗಿತ್ತು. ಇದೀಗ ಮಂಗಳವಾರ (ಸೆ. 26) ನಡೆದ ಸಭೆಯಲ್ಲಿ ಕರ್ನಾಟಕದ ಮಂಡಿಸಿದ ವಾದವನ್ನು ಪರಿಗಣಿಸಿದ ಸಮಿತಿ ನೀರೇ ಬಿಡುವುದಿಲ್ಲ ಎಂಬ ಮನವಿಯನ್ನು ಒಪ್ಪಲಿಲ್ಲ. ಐದು ಸಾವಿರ ಕ್ಯೂಸೆಕ್‌ ಬದಲಿಗೆ ಮೂರು ಸಾವಿರ ಕ್ಯೂಸೆಕ್‌ಗೆ ಇಳಿಸಿ ಎಂದು ಸೂಚನೆ ನೀಡಿದೆ.

ಇನ್ನಷ್ಟು ದೇಶದ ಸುದ್ದಿಗಳಿಗೆ ಇಲ್ಲಿ ಕ್ಲಿಕ್‌ ಮಾಡಿ

Continue Reading

ದೇಶ

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Mulayam Singh Yadav: ಉತ್ತರ ಪ್ರದೇಶದ ಹರ್ದೋಯಿ ಜಿಲ್ಲೆಯಲ್ಲಿ ಅನುಮತಿ ಇಲ್ಲದೆ ಪ್ರತಿಷ್ಠಾಪನೆ ಮಾಡಿದ ಕಾರಣ ಮುಲಾಯಂ ಸಿಂಗ್‌ ಯಾದವ್‌ ಮೂರ್ತಿಯನ್ನು ತೆರವುಗೊಳಿಸಲಾಗಿದೆ.

VISTARANEWS.COM


on

Edited by

Mulayam Singh Yadav Statue
Koo

ಲಖನೌ: ಯೋಗಿ ಆದಿತ್ಯನಾಥ್‌ ಆಡಳಿತದ ಉತ್ತರ ಪ್ರದೇಶದಲ್ಲಿ (Uttar Pradesh) ಕಾನೂನು ಪಾಲನೆ ಹಾಗೂ ಕಾನೂನು ಸುವ್ಯವಸ್ಥೆಗೆ (Law And Order) ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಅಕ್ರಮವಾಗಿ ನಿರ್ಮಿಸಿದ ಕಟ್ಟಡಗಳ ತೆರವು, ಅಪರಾಧಿಗಳನ್ನು ಮಟ್ಟಹಾಕುವುದು ಸೇರಿ ಹಲವು ದಿಸೆಯಲ್ಲಿ ಯೋಗಿ ಆದಿತ್ಯನಾಥ್‌ ಕ್ರಮ ತೆಗೆದುಕೊಂಡಿದ್ದಾರೆ. ಇದರ ಬೆನ್ನಲ್ಲೇ, ಅನುಮತಿ ಇಲ್ಲದೆ ಮೂರ್ತಿ ಸ್ಥಾಪನೆ ಮಾಡಿದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್‌ ಯಾದವ್‌ ಮೂರ್ತಿಯನ್ನು (Mulayam Singh Yadav) ತೆರವುಗೊಳಿಸಲಾಗಿದೆ.

ಉತ್ತರ ಪ್ರದೇಶದ ಹರ್ದೋಯಿಯಲ್ಲಿ ಸಮಾಜವಾದಿ ಪಕ್ಷದ ಕಚೇರಿಯನ್ನು ನಿರ್ಮಿಸಲಾಗಿದೆ. ಆ ಕಚೇರಿಯ ಬಳಿ ಮುಲಾಯಂ ಸಿಂಗ್‌ ಯಾದವ್‌ ಅವರ ಮೂರ್ತಿ ಪ್ರತಿಷ್ಠಾಪಿಸಲಾಗಿದೆ. ಆದರೆ, ಅನುಮತಿ ಇಲ್ಲದೆ ಆರು ಅಡಿ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ನಗರ ಪಾಲಿಕೆ ಪರಿಷತ್‌ ಅಧಿಕಾರಿಗಳು ಮೂರ್ತಿಯನ್ನು ತೆರವುಗೊಳಿಸಿದ್ದಾರೆ. ಆದರೆ, ಮೂರ್ತಿ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಲು ಸಮಾಜವಾದಿ ಪಕ್ಷದ ಹರ್ದೋಯಿ ಜಿಲ್ಲಾ ಘಟಕವು ನಿರಾಕರಿಸಿದೆ.

ನೋಟಿಸ್‌ ನೀಡಿದರೂ ಡೋಂಟ್‌ ಕೇರ್

“ನಗರ ಪಾಲಿಕೆ ಪರಿಷತ್‌ನಿಂದ ಹರ್ದೋಯಿಯಲ್ಲಿ ಎಂಟು ಅಂಗಡಿಗಳನ್ನು ವ್ಯಾಪಾರಿಗಳಿಗೆ ನೀಡಲಾಗಿದೆ. ಇವುಗಳ ಬಳಿಯೇ ಸಮಾಜವಾದಿ ಪಕ್ಷದ ಕಚೇರಿ ನಿರ್ಮಿಸಲಾಗಿದೆ. ಆದರೆ, ಅನುಮತಿ ಇಲ್ಲದೆಯೇ ನಗರ ಪಾಲಿಕೆ ಪರಿಷತ್‌ ಕಚೇರಿ ಬಳಿಯೇ ಮುಲಾಯಂ ಸಿಂಗ್‌ ಯಾದವ್‌ ಅವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಅನುಮತಿ ಇಲ್ಲದೆ ಮೂರ್ತಿ ಪ್ರತಿಷ್ಠಾಪನೆ ಮಾಡಿದ ಹಿನ್ನೆಲೆಯಲ್ಲಿ ಅದನ್ನು ತೆರವುಗೊಳಿಸಲಾಗಿದೆ” ಎಂದು ನಗರ ಪಾಲಿಕೆ ಪರಿಷತ್‌ ಇ.ಒ ವಿನೋದ್‌ ಕುಮಾರ್‌ ಸೋಲಂಕಿ ಮಾಹಿತಿ ನೀಡಿದ್ದಾರೆ.‌

ಇದನ್ನೂ ಓದಿ: Women’ Reservation bill : ಮಹಿಳಾ ಮೀಸಲಾತಿಗೆ ಸಿದ್ದರಾಮಯ್ಯ ಸ್ವಾಗತ, ಈಗ ಯೋಗಿ ಆದಿತ್ಯನಾಥ್‌ ಏನಂತಾರೆ?

“ಅನುಮತಿ ಇಲ್ಲದೆ ಪ್ರತಿಷ್ಠಾಪನೆ ಮಾಡಿರುವ ಮೂರ್ತಿಯನ್ನು ತೆರವುಗೊಳಿಸಬೇಕು ಎಂದು ಸೆಪ್ಟೆಂಬರ್‌ 23ರಂದು ನೋಟಿಸ್‌ ಜಾರಿಗೊಳಿಸಲಾಗಿತ್ತು. 24 ಗಂಟೆಯಲ್ಲಿ ಮೂರ್ತಿ ತೆರವುಗೊಳಿಸಬೇಕು ಎಂದು ಸೂಚಿಸಲಾಗಿತ್ತು. ಆದರೆ, ಗಡುವು ಮೀರಿದರೂ ಮೂರ್ತಿ ತೆರವು ಮಾಡದ ಕಾರಣ ಅಧಿಕಾರಿಗಳೇ ತೆರವು ಮಾಡಬೇಕಾಯಿತು” ಎಂದು ತಿಳಿಸಿದ್ದಾರೆ. ಸಮಾಜವಾದಿ ಪಕ್ಷದ ಕಚೇರಿ ಹಾಗೂ ಮೂರ್ತಿ ಪ್ರತಿಷ್ಠಾಪನೆಗೆ ಸಮಾಜವಾದಿ ಪಕ್ಷದ ಕಾರ್ಯಕರ್ತರು 10 ಲಕ್ಷ ರೂ. ಸಂಗ್ರಹಿಸಿದ್ದರು ಎಂದು ತಿಳಿದುಬಂದಿದೆ.

Continue Reading

ಕ್ರೈಂ

ಲೈಂಗಿಕ ದೌರ್ಜನ್ಯ; ರಕ್ತಸಿಕ್ತ ಬಾಲಕಿ ಮನೆಮನೆಗೆ ತೆರಳಿ ಗೋಳಾಡಿದರೂ ಸಹಾಯ ಮಾಡದ ನಿರ್ದಯಿಗಳು!

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ 12 ವರ್ಷದ ಬಾಲಕಿಯು ಲೈಂಗಿಕ ದೌರ್ಜನ್ಯಕ್ಕೀಡಾಗಿದ್ದಾಳೆ. ಆಕೆ ಮನೆ ಮನೆಗೆ ತೆರಳಿ ಸಹಾಯಕ್ಕೆ ಅಂಗಲಾಚಿದರೂ ಯಾರೂ ಸಹಾಯ ಮಾಡದಿರುವುದು ಕೂಡ ಅಮಾನವೀಯ ಎನಿಸಿದೆ.

VISTARANEWS.COM


on

Edited by

Madhya Pradesh Rape News
Koo

ಭೋಪಾಲ್:‌ ದೇಶದಲ್ಲಿ ಬಾಲಕಿಯರು ಸೇರಿ ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುವುದು, ಅತ್ಯಾಚಾರ ಮಾಡುವ ಪ್ರಕರಣಗಳು ಹೆಚ್ಚಾಗುತ್ತಿವೆ. ಎಷ್ಟೇ ಕಠಿಣ ಕ್ರಮ ಜಾರಿಗೆ ತಂದರೂ ಕ್ರೂರ ಜನ ಮಹಿಳೆಯರ ಮೇಲೆ ದೌರ್ಜನ್ಯ ಎಸಗುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಧ್ಯಪ್ರದೇಶದಲ್ಲಿ (Madhya Pradesh) 12 ವರ್ಷದ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಲೈಂಗಿಕ ದೌರ್ಜನ್ಯದ ಬಳಿಕ ಬಾಲಕಿಯು ಸಹಾಯಕ್ಕಾಗಿ ಅಂಗಲಾಚಿಕೊಂಡು ಮನೆ ಮನೆಗೆ ಹೋದರೂ ಯಾರೂ ಸಹಾಯ ಮಾಡದಿರುವುದು ಜನರ ಮನಸ್ಥಿತಿಗೂ ಕನ್ನಡಿ ಹಿಡಿದಂತಿದೆ.

ಉಜ್ಜಯಿನಿಯ ಬದ್ನಗರದ ಬಳಿ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಇದಾದ ಬಳಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಬಾಲಕಿಯು ಅರೆಬೆತ್ತಲೆಯಾಗಿ ರಸ್ತೆ ಮೇಲೆ ನಡೆದುಕೊಂಡು ಹೋಗಿದ್ದಾಳೆ. ನನಗೆ ಸಹಾಯ ಮಾಡಿ ಎಂದು ಮನೆ ಮನೆಗೆ ತೆರಳಿ ಅಂಗಲಾಚಿದರೂ ಯಾರೋಬ್ಬರು ಕೂಡ ಬಾಲಕಿಗೆ ಸಹಾಯ ಮಾಡಿಲ್ಲ. ಬಾಲಕಿಯ ದುಸ್ಥಿತಿಯನ್ನು ನೋಡಿಕೊಂಡು ಸುಮ್ಮನಿದ್ದರೇ ಹೊರತು, ಏನಾಯ್ತಮ್ಮ ಎಂದು ಕೇಳಿಲ್ಲ, ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡಿಲ್ಲ. ಇಂತಹ ಭೀಕರ ದೃಶ್ಯಗಳಿರುವ ವಿಡಿಯೊ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ.

ಸಹಾಯಕ್ಕಾಗಿ ಅಂಗಲಾಚಿದ ಬಾಲಕಿ

ಆಸ್ಪತ್ರೆಗೆ ಸಾಗಿಸಿದ ಸಂತ

ಗೋಳಾಡುತ್ತ ಗೋಳಾಡುತ್ತ ಬಾಲಕಿಯು ಆಶ್ರಮವೊಂದನ್ನು ಪ್ರವೇಶಿಸಿದ್ದಾಳೆ. ಅಲ್ಲಿರುವ ಸಂತರೊಬ್ಬರು ಬಾಲಕಿಗೆ ಟವೆಲ್‌ ಹೊದಿಸಿ, ಆಕೆಯನ್ನು ಉಜ್ಜಯಿನಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ನಿಜ ಎಂಬುದು ವೈದ್ಯಕೀಯ ತಪಾಸಣೆ ಬಳಿಕ ಗೊತ್ತಾಗಿದೆ. ರಕ್ತಸ್ರಾವ, ಮೈತುಂಬ ಗಾಯಗಳಾದ ಕಾರಣ ಬಾಲಕಿಯನ್ನು ಇಂದೋರ್‌ ಆಸ್ಪತ್ರೆಗೆ ಸಾಗಿಸಲಾಗಿದೆ. ಆಕೆಯ ಆರೋಗ್ಯ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೂರು ನೀಡಲು ಹೋದ ದಲಿತ ಮಹಿಳೆ ಮೇಲೆಯೇ ಅತ್ಯಾಚಾರ ಎಸಗಿದ ಪಿಎಸ್‌ಐ; ಇದೆಂಥಾ ಅನಾಚಾರ!

ಬಾಲಕಿ ಮೇಲೆ ಯಾರು ಅತ್ಯಾಚಾರ ಎಸಗಿದ್ದಾರೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಬಾಲಕಿಯಂತೂ ಪೊಲೀಸರ ಒಂದು ಪ್ರಶ್ನೆಗೂ ಉತ್ತರಿಸಲು ಆಗದಷ್ಟು ಕುಗ್ಗಿಹೋಗಿದ್ದಾಳೆ. ಅಪರಿಚಿತರ ವಿರುದ್ಧ ಪೊಲೀಸರು ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಗೆಯೇ, ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವೊಂದನ್ನು ರಚಿಸಿದ್ದಾರೆ. ಹಾಗೆಯೇ, ಆರೋಪಿಗಳ ಕುರಿತು ಸುಳಿವು ಸಿಕ್ಕರೆ ಮಾಹಿತಿ ಕೊಡಿ ಎಂಬುದಾಗಿಯೂ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Continue Reading

ದೇಶ

Stadium row: ಕ್ರೀಡಾಂಗಣದಲ್ಲಿ ನಾಯಿ ಜತೆ ವಾಕಿಂಗ್‌ ಮಾಡಿದ್ದ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ!

Stadium Row: ದೆಹಲಿಯ ಕ್ರೀಡಾಂಗಣದಲ್ಲಿ (Delhi’s Thyagraj Stadium) ಅಭ್ಯಾಸ ನಡೆಸುತ್ತಿದ್ದ ಕ್ರೀಡಾಳುಗಳನ್ನು ಹೊರಗೆ ಕಳುಹಿಸಿ ಅಲ್ಲಿ ತಮ್ಮ ನಾಯಿ ಜತೆಗೆ ಮಾಕಿಂಗ್‌ ಮಾಡುತ್ತಿದ್ದ ಐಎಎಸ್‌ (IAS) ಅಧಿಕಾರಿ ರಿಂಕು ದುಗ್ಗ ಅವರಿಗೆ ಈಗ ಸರ್ಕಾರ ಕಡ್ಡಾಯ ನಿವೃತ್ತಿಯ ಸೂಚನೆ ನೀಡಿದೆ.

VISTARANEWS.COM


on

Edited by

Koo

ದೆಹಲಿ: ದೆಹಲಿಯ ತ್ಯಾಗರಾಜ ಕ್ರೀಡಾಂಗಣದಿಂದ (Delhi’s Thyagraj Stadium) ಕ್ರೀಡಾಳುಗಳನ್ನು ಹೊರಗಟ್ಟಿ ನಾಯಿಯೊಂದಿಗೆ ವಾಕಿಂಗ್‌ ಮಾಡಿದ್ದ ಐಎಎಸ್‌ (IAS) ಅಧಿಕಾರಿ ರಿಂಕು ದುಗ್ಗ (54) ಅವರನ್ನು ಸರ್ಕಾರ ಕಡ್ಡಾಯ ನಿವೃತ್ತಿಗೊಳಿಸಿದೆ. 1994ರ ಬ್ಯಾಚಿನ ಐಎಎಸ್‌ ಅಧಿಕಾರಿಯಾಗಿರುವ ರಿಂಕು ದುಗ್ಗ ಅರುಣಾಚಲ ಪ್ರದೇಶದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿದ್ದರು.

ರಿಂಕು ದುಗ್ಗ ಅವರ ಪತಿ ಸಂಜೀವ್‌ ಖೈರ್ವಾರ್‌ ಕೂಡ 1994ರ ಬ್ಯಾಚ್‌ನ ಐಎಎಸ್‌ ಅಧಿಕಾರಿ. ಅವರನ್ನು ಕಳೆದ ವರ್ಷ ದೆಹಲಿಯಿಂದ ಲಡಾಕ್‌ಗೆ ವರ್ಗಾಯಿಸಲಾಗಿತ್ತು. ಇವರು ತಮ್ಮ ನಾಯಿಯ ಜತೆ ವಾಕಿಂಗ್‌ಗೆ ಹೋಗಲೆಂದು ದೆಹಲಿಯ ತ್ಯಾಗರಾಜ ಸ್ಟೇಡಿಯಂಅನ್ನು ಸಂಜೆ ಏಳು ಗಂಟೆಗೇ ಖಾಲಿ ಮಾಡಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಇಬ್ಬರನ್ನೂ ದೆಹಲಿಯಿಂದ ವರ್ಗಾಯಿಸಿ ಕಳೆದ ವರ್ಷ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿತ್ತು.

ರಿಂಕು ದುಗ್ಗ ಅವರ ಕೆಲಸದ ದಾಖಲೆಗಳನ್ನು ಪರಿಶೀಲಿಸಿ ಕಡ್ಡಾಯ ನಿವೃತ್ತಿಗೆ ಸೂಚಿಸಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಸೆಂಟ್ರಲ್‌ ಸಿವಿಲ್‌ ಸರ್ವಿಸಸ್‌ (‌CCS) ಪೆನ್ಶನ್ ರೂಲ್ಸ್‌, 1972ರ ಫಂಡಮೆಂಟಲ್‌ ರೂಲ್ಸ್ (‌FR) 56(j), ರೂಲ್‌ 48 ಪ್ರಕಾರ ಈ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರ ಒಮ್ಮತದ ಅಭಿಪ್ರಾಯ ಇದ್ದರೆ ಯಾವುದೇ ಸರ್ಕಾರಿ ಉದ್ಯೋಗಿಗೆ ಕಡ್ಡಾಯ ನಿವೃತ್ತಿ ಸೂಚಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ಮೂಲಗಳು ತಿಳಿಸಿವೆ. ಸದ್ಯ ರಿಂಕು ದುಗ್ಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ವಿವಾದವೇನು?

ದೆಹಲಿಯ ಕಂದಾಯ ವಿಭಾಗದ ಪ್ರಿನ್ರಿಪಾಲ್‌ ಸೆಕ್ರೆಟರಿ ಅಗಿದ್ದ ಖೈರ್ವಾರ್‌ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತ್ಯಾಗರಾಜ ಸ್ಟೇಡಿಯಂನಿಂದ ಎಲ್ಲ ಕ್ರೀಡಾಳುಗಳನ್ನು ಏಳು ಗಂಟೆಗೆ ಹೊರ ಹೋಗುವಂತೆ ನೋಡಿಕೊಂಡು ಬಳಿಕ ಅವರು ತಮ್ಮ ಪತ್ನಿ ರಿಂಕು ದುಗ್ಗ ಮತ್ತು ನಾಯಿ ಜತೆ ಅಲ್ಲಿ ವಾಕಿಂಗ್‌ ಮಾಡುತ್ತಿದ್ದರು! ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ಕೇಳಿ ಬಂದಿತ್ತು.

ಇದನ್ನೂ ಓದಿ: UNGA Speech: ಪ್ರಾದೇಶಿಕ ಸಮಗ್ರತೆಯನ್ನು ಗೌರವಿಸಿ, ವಿಶ್ವ ಸಂಸ್ಥೆಯಲ್ಲಿ ಭಾರತೀಯ ವಿದೇಶಾಂಗ ಸಚಿವ ಜೈಶಂಕರ್ ಪಾಠ!

ವಿವಾದದ ಬಳಿಕ 1994ರ ಬ್ಯಾಚ್‌ನ ಎಜಿಎಂಯುಟಿ ಕೇಡರ್‌ಗೆ ಸೇರಿದ ರಿಂಕು ದುಗ್ಗ ಅವರನ್ನು 2022ರ ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶಕ್ಕೆ ನಿಯೋಜಿಸಲಾಗಿತ್ತು. ಅವರನ್ನು ಈಶಾನ್ಯ ರಾಜ್ಯದ ಸ್ಥಳೀಯ ವ್ಯವಹಾರಗಳ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು.

ಇನ್ನಷ್ಟು ದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

Continue Reading
Advertisement
tamil nadu
ಕರ್ನಾಟಕ1 min ago

Cauvery Dispute:‌ ಕಾವೇರಿ ಕಿಚ್ಚು; ಸತ್ತ ಇಲಿಯನ್ನು ಬಾಯಿ ಬಳಿ ಇಟ್ಟು ಪ್ರತಿಭಟನೆ ನಡೆಸಿದ ರೈತರು

Virat kohli
ಕ್ರಿಕೆಟ್10 mins ago

ind vs Aus : ಆಸೀಸ್​ ವಿರುದ್ಧ ಆರಂಭಿಕರಾಗಿ ಆಡಲಿದ್ದಾರೆ ರೋಹಿತ್​- ವಿರಾಟ್​ ಜೋಡಿ

Election officers attacked in Ramanagara
ಕರ್ನಾಟಕ29 mins ago

Rowdism in Ramanagara : ರೋಡಲ್ಲೇ ರೌಡಿಸಂ; ಚುನಾವಣಾಧಿಕಾರಿಗಳ ಮೇಲೆ ಕಾರು ಹಾಯಿಸಿ ಬ್ಯಾಲೆಟ್‌ ಪೇಪರ್‌ ಲೂಟಿ

Kolara MP Muniswamy complaint to governor of Karnataka
ಕರ್ನಾಟಕ44 mins ago

MP Muniswamy : ಸಚಿವ ಬೈರತಿ, ಶಾಸಕ ನಾರಾಯಣಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು ಕೊಟ್ಟ ಸಂಸದ ಮುನಿಸ್ವಾಮಿ

Nepal Team
ಕ್ರಿಕೆಟ್55 mins ago

Asian Games 2023 : ಏಷ್ಯನ್ ಗೇಮ್ಸ್​ನಲ್ಲಿ ನೇಪಾಳ ತಂಡ ಸೃಷ್ಟಿಸಿದ ಮಾಡಿದ ದಾಖಲೆಗಳ ವಿವರ ಇಲ್ಲಿದೆ

Malayalam Film 2018
South Cinema1 hour ago

Oscars 2024: ‘ಆಸ್ಕರ್‌’ಗೆ ಪ್ರವೇಶ ಪಡೆದ ಮಲಯಾಳಂ ಸಿನಿಮಾ; ನೀವೂ ಇದನ್ನು ನೋಡಿರುತ್ತೀರಿ!

Mulayam Singh Yadav Statue
ದೇಶ1 hour ago

Mulayam Singh Yadav: ಮುಲಾಯಂ ಸಿಂಗ್‌ ಮೂರ್ತಿ ತೆರವು; ಯೋಗಿ ನಾಡಲ್ಲಿ ರೂಲ್ಸ್‌ ಎಂದರೆ ರೂಲ್ಸ್!

Parineeti Chopra with Raghav
ಬಾಲಿವುಡ್1 hour ago

Parineeti Chopra: ‘ಓ ಪ್ರಿಯಾ’; ಪತಿಗಾಗಿ ವಿಶೇಷ ಹಾಡು ರೆಕಾರ್ಡ್‌ ಮಾಡಿದ ಪರಿಣಿತಿ ಚೋಪ್ರಾ!

demat account
ಮನಿ ಗೈಡ್1 hour ago

Demat Account: ಡಿಮ್ಯಾಟ್ ಖಾತೆದಾರರಿಗೆ ಗುಡ್‌ ನ್ಯೂಸ್:‌ ನಾಮಿನಿ ಘೋಷಣೆಗೆ ಸಮಯ ವಿಸ್ತರಣೆ

HD Kumaraswamy Press meet vs congress government
ಕರ್ನಾಟಕ1 hour ago

BJP JDS alliance : ಸೆಕ್ಯುಲರಿಸಂ ಅನ್ನು ನಾಶ ಮಾಡಿದ್ದೇ ಕಾಂಗ್ರೆಸ್‌: ಎಚ್.ಡಿ. ಕುಮಾರಸ್ವಾಮಿ ಕಿಡಿ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

bangalore bandh
ಕರ್ನಾಟಕ1 day ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

dina bhavishya
ಪ್ರಮುಖ ಸುದ್ದಿ10 hours ago

Dina Bhavishya : ನಿಮಗೆ ಆಗದವರು ಪಿತೂರಿ ಮಾಡ್ಬಹುದು ಎಚ್ಚರ!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ

At the Janata Darshan event MP S Muniswamy MLA SN Narayanaswamy is fighting
ಕರ್ನಾಟಕ2 days ago

Janata Darshan : ವೇದಿಕೆಯಲ್ಲಿ ಭೂ ಗಲಾಟೆ; ಹೊಡೆದಾಟಕ್ಕೆ ಮುಂದಾದ ಶಾಸಕ-ಸಂಸದ

Davanagere bandh
ಕರ್ನಾಟಕ2 days ago

Davanagere bandh : ಭದ್ರಾ ನೀರಿಗಾಗಿ ಬೀದಿಗಿಳಿಯಲಿಲ್ಲ ಭತ್ತ ಬೆಳೆಗಾರರು!

HD Devegowda Press meet
ಕರ್ನಾಟಕ2 days ago

Cauvery water dispute : ಜಲ ಶಕ್ತಿ ಇಲಾಖೆಯಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಲಿ, ಮೋದಿ ಮಧ್ಯ ಪ್ರವೇಶಿಸಲಿ: ಎಚ್.ಡಿ. ದೇವೇಗೌಡ

Farmers protest Mundargi bandh
ಕರ್ನಾಟಕ2 days ago

Mundargi Bandh : ಬರ ಪೀಡಿತ ತಾಲೂಕು ಘೋಷಣೆಗೆ ಒತ್ತಾಯಿಸಿ ಮುಂಡರಗಿ ಬಂದ್!

Dina bhavishya
ಪ್ರಮುಖ ಸುದ್ದಿ2 days ago

Dina Bhavishya : ಈ ರಾಶಿಯವರಿಗೆ ಇಂದು ಹೂಡಿಕೆ ಬೇಡ! ಕೆಲ ವಿಷಯದಲ್ಲಿ ಇರಲಿ ಗೌಪ್ಯತೆ

Actor padhmini Kirk
ಕರ್ನಾಟಕ3 days ago

Viral News : ಕಿರುತೆರೆ ನಟಿ ಕಿರಿಕ್‌; ಕೆಲಸ ಕಳೆದುಕೊಂಡ ಓಲಾ ಆಟೋ ಡ್ರೈವರ್‌!

dina bhavishya
ಪ್ರಮುಖ ಸುದ್ದಿ3 days ago

Dina Bhavishya : ಈ ರಾಶಿಯವರಿಗೆ ಕೋಪವೇ ಮುಳುವು!

Dina bhavishya
ಪ್ರಮುಖ ಸುದ್ದಿ4 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

ಟ್ರೆಂಡಿಂಗ್‌