Site icon Vistara News

ಕನ್ನಡ ಚಿತ್ರಗಳನ್ನು ನಿರಾಕರಿಸುತ್ತಿರುವ ಒಟಿಟಿ ವೇದಿಕೆಗಳು: ರಿಷಬ್ ಶೆಟ್ಟಿ ಆರೋಪ

OTT are not open to Kannada Films Says Actor Rishab Shetty

ಪಣಜಿ, ಗೋವಾ: ಒಟಿಟಿ ವೇದಿಕೆಗಳು (OTT Platforms) ಕನ್ನಡ ಚಿತ್ರರಂಗಕ್ಕೆ (Kannada Film Industry) ಮುುಕ್ತವಾಗಿಲ್ಲ ಎಂದು ‘ಕಾಂತಾರ’ ಚಿತ್ರದ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ (Actor Rishab Shetty) ಅವರು ಆರೋಪಿಸಿದ್ದಾರೆ. ಗೋವಾದಲ್ಲಿ (Goa State) ಆಯೋಜಿಸಲಾಗಿರುವ 54ನೇ ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ (IFFI) ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಿಷಬ್ ಶೆಟ್ಟಿ ಅವರು, ಒಟಿಟಿಗಳ ತಾರತಮ್ಯ ನೀತಿಯನ್ನು ಖಂಡಿಸಿದರು.

ಒಟಿಟಿ ವೇದಿಕೆಗಳು ಕನ್ನಡ ಚಿತ್ರರಂಗಕ್ಕೆ ಮುಕ್ತವಾಗಿಲ್ಲ(Kannada Cinema). ಇದೊಂದು ತುಂಬ ಕೆಟ್ಟ ಸಂಕೇತವಾಗಿದೆ. ಕನ್ನಡದಲ್ಲಿ ಚಂದಾದಾರರು ಇಲ್ಲ. ಈ ಕುರಿತು ನೋಡುತ್ತೇವೆ ಎನ್ನುತ್ತಿವೆ. ಕೊರೊನಾ ಸಾಂಕ್ರಾಮಿಕ ಸಮಯದಲ್ಲೂ ಕನ್ನಡದಲ್ಲಿ ಎರಡು ನಿರ್ಮಾಣ ಸಂಸ್ಥೆಗಳು ಸಕ್ರಿಯವಾಗಿದ್ದವು. ರಕ್ಷಿತ್ ಶೆಟ್ಟಿ ಅವರ ಪರಮವಾಹ ಸ್ಟುಡಿಯೋ ಮತ್ತು ನನ್ನ ರಿಷಬ್ ಶೆಟ್ಟಿ ಫಿಲ್ಮ್ ನಿರಂತರಾಗಿ ಕೆಲಸ ಮಾಡುತ್ತಿದ್ದವು. ಇವುಗಳ ಹೊರತಾಗಿಯೂ ಕೆಲವು ನಿರ್ಮಾಣ ಸಂಸ್ಥೆಗಳು ಚಿತ್ರಗಳನ್ನು ತಯಾರಿಸುತ್ತಿದ್ದವು. ನಾವು ನಿರಂತರವಾಗಿ ಫಿಲ್ಮ್ ಫೆಸ್ಟಿವಲ್ ಮಾಡುತ್ತಿದ್ದೇವೆ. ಆದರೂ, ಒಟಿಟಿ ವೇದಿಕೆಗಳು ಕನ್ನಡ ಚಿತ್ರಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ರಿಷಬ್ ಶೆಟ್ಟಿ ಆರೋಪಿಸಿದರು.

ಇದೇ ವೇಳೆ, ಐಎಫ್‌ಎಫ್ಐ ಮತ್ತು ಅದರ ಪ್ರಾಯೋಜಕರಿಗೆ ಮನವಿ ಮಾಡಿಕೊಂಡು ರಿಷಬ್ ಶೆಟ್ಟಿ ಅವರು ಕನ್ನಡ ಚಿತ್ರಗಳಿಗೆ ಮನ್ನಣೆ ನೀಡಿ ಎಂದು ಹೇಳಿದರು.

ಒಟಿಟಿಗಳ ತಾರತಮ್ಯ ನೀತಿಯಲ್ಲಿ ಹಿನ್ನೆಲೆಯಲ್ಲಿ ನಾನು ಐಎಫ್ಎಫ್ಐ ಮತ್ತು ಅದರ ಪ್ರಾಯೋಜಕರಿಗೆ ನಮ್ಮ ಚಲನಚಿತ್ರಗಳಿಗೆ ಮನ್ನಣೆ ನೀಡುವಂತೆ ವಿನಂತಿಸಲು ಬಯಸುತ್ತೇನೆ. ಥಿಯೇಟರ್‌ಗಳಲ್ಲಿ ಕಡಿಮೆ ಮಾನ್ಯತೆ ಹೊಂದಿರುವ ಚಲನಚಿತ್ರಗಳು ಸಹ ಸ್ವಲ್ಪ ಮನ್ನಣೆಯನ್ನು ಪಡೆಯಬೇಕು ಮತ್ತು ಅವುಗಳನ್ನು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ತೆಗೆದುಕೊಳ್ಳಬೇಕು ಎಂದು ರಿಷಬ್ ಶೆಟ್ಟಿ ಅವರು ಹೇಳಿದರು.

ಕಾಂತಾರ; ಚಾಪ್ಟರ್‌ 1 ಫಸ್ಟ್ ಲುಕ್‌ನಲ್ಲಿ ರಿಷಬ್ ಶೆಟ್ಟಿ ರೌದ್ರಾವತಾರ

ಕಾಂತಾರʼ ರಿಷಬ್ ಶೆಟ್ಟಿ (Rishab Shetty) ನಿರ್ದೇಶಿಸಿ ಹಾಗೂ ನಟಿಸಿದ್ದ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ನಿರ್ಮಿಸಿತ್ತು. ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಯಾವಾಗ ಎಂಬುದು ಅಭಿಮಾನಿಗಳು ಕಾತುರದಿಂದ ಕಾದಿದ್ದರು. ಇದೀಗ ಡಿವೈನ್ಸ್‌ ಸ್ಟಾರ್‌ ತಮ್ಮ ರೌದ್ರಾವತಾರವನ್ನು ತೋರಿಸಿದ್ದಾರೆ. ಇಂಗ್ಲಿಷ್‌ನಲ್ಲಿಯೇ ಕಾಂತಾರ ಚಾಪ್ಟರ್‌ -1 ಲುಕ್ ಔಟ್ ಆಗಿದೆ. ಪ್ರತಿಕ್ಷಣವು ದೈವಿಕ ಸ್ಪರ್ಶ ನೀಡುವಂತಹ ಹಿನ್ನೆಲೆ ಧ್ವನಿಯಲ್ಲಿ ತಮ್ಮ ಅವತಾರವನ್ನು ಬಹಿರಂಗೊಳಿಸಿದ್ದಾರೆ.

ಕೆಜಿಎಫ್ ಚಾಪ್ಟರ್ 2 (KGF Chapter 2) ಪ್ಯಾನ್-ಇಂಡಿಯಾ ಮಟ್ಟದಲ್ಲಿ ಹೇಗೆ ಖ್ಯಾತಿ ಗಳಿಸಿತೋ ಅದೇ ರೀತಿ ಕಾಂತಾರ 2 ಕೂಡ ಅಷ್ಟೇ ಎತ್ತರದ ನಿರೀಕ್ಷೆಯನ್ನು ಹೊತ್ತುಕೊಂಡಿದೆ. ಕಾಂತಾರ-2 ಸಿನಿಮಾ ಅಪ್‌ಡೇಟ್‌ಗಾಗಿ ಸಿನಿರಸಿಕರು ಹಲವು ದಿನಗಳಿಂದ ಕಾದು ಕುಳಿತ್ತಿದ್ದರು. ಇದೀಗ ಸಿನಿಮಾದ ಫಸ್ಟ್‌ ಲುಕ್‌ ರಿವೀಲ್‌ ಆಗಿದೆ.

ಇತಿಹಾಸದ ನಿಗೂಢ ಸತ್ಯ ಹೇಳುವುದಕ್ಕೆ ರಿಷಬ್ ಶೆಟ್ಟಿ ತಯಾರಿ ಮಾಡಿಕೊಂಡಿದ್ದಾರೆ. ವಿಶ್ವಾದ್ಯಂತ ಸಿನಿಮಾ ಏಳು ಭಾಷೆಗಳಲ್ಲಿ ರಿಲೀಸ್‌ ಆಗುತ್ತಿದೆ. ಕಾಡುಬೆಟ್ಟು ಶಿವನ ತಂದೆಯ ರಹಸ್ಯ ರಿವೀಲ್ ಮಾಡಲು ಹೊರಟ್ಟಿದ್ದಾರೆ ರಿಷಬ್‌. 2024ಕ್ಕೆ ‘ಕಾಂತಾರ-1’ ಚಿತ್ರಮಂದಿರಗಳಿಗೆ ಬರಲಿದೆ.

ಕಾಂತಾರʼವನ್ನು ಕೇವಲ 16 ಕೋಟಿ ರೂ. ಬಜೆಟ್‌ನಲ್ಲಿ ನಿರ್ಮಾಣ ಮಾಡಿ ವಿಶ್ವಾದ್ಯಂತ 400 ಕೋಟಿ ರೂ.ಗಳನ್ನು ಗಳಿಸಿತು. ಕಾಂತಾರ ಸಿನಿಮಾ ಸಾರ್ವಕಾಲಿಕವಾಗಿ ಕನ್ನಡದ ಎರಡನೇ ಅತಿ ಹೆಚ್ಚು ಗಳಿಕೆಯ ಚಿತ್ರವಾಗಿ ಹೊರಹೊಮ್ಮಿತು. ಈಗಾಗಲೇ ಕಾಂತಾರ 2 ಸಿನಿಮಾ ಕೆಲಸಗಳು ಭರದಿಂದ ಸಾಗಿದೆ. ವರದಿಗಳ ಪ್ರಕಾರ ಕಾಂತಾರ 2 ಸಿನಿಮಾ ಬರೋಬ್ಬರಿ 125 ಕೋಟಿ ರೂ. ಬಜೆಟ್‌ನಲ್ಲಿ (budget of 125 crores) ನಿರ್ಮಾಣವಾಗುತ್ತಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ಈ ಸುದ್ದಿಯನ್ನೂ ಓದಿ: Rishab Shetty: ಕನ್ನಡಿಗ ಕಲಾವಿದರೇ ಮೊದಲ ಆದ್ಯತೆ ಎಂದ ರಿಷಬ್‌; ಹೇಗಿರಲಿದೆ ಕಾಂತಾರ ಚಾಪ್ಟರ್‌ 1?

Exit mobile version