Site icon Vistara News

Rahul Gandhi: 2024ರ ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ; ರಾಹುಲ್ ಗಾಂಧಿ ಭವಿಷ್ಯ

Rahul Gandhi At National Press Club

ವಾಷಿಂಗ್ಟನ್, ಅಮೆರಿಕ: ಭಾರತದಲ್ಲಿ ಮುಂದಿನ ವರ್ಷ ಸಾರ್ವತ್ರಿಕ ಚುನಾವಣೆ (2024 Lok Sabha Election) ನಡೆಯಲಿದೆ. ಸದ್ಯದ ಲೆಕ್ಕಾಚಾರಗಳ ಪ್ರಕಾರ, ನರೇಂದ್ರ ಮೋದಿ (Narendra Modi) ನಾಯಕತ್ವದ ಬಿಜೆಪಿ ಮೂರನೇ ಬಾರಿಗೆ ಕೇಂದ್ರದಲ್ಲಿ ಅಧಿಕಾರಕ್ಕೇರುವ ಎಲ್ಲ ಸಾಧ್ಯತೆಗಳಿವೆ. ಆದರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress Leader Rahul Gandhi) ಅವರು 2024ರ ಲೋಕಸಭೆ ಚುನಾವಣೆ ಫಲಿತಾಂಶವು ಅಚ್ಚರಿದಾಯಕವಾಗಿರಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಗ ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟು ಪ್ರದರ್ಶಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಆಯೋಜಿಸಲಾಗಿದ್ದ ಸಂವಾದದಲ್ಲಿ ಪಾಲ್ಗೊಂಡ ಅವರು, 2024ರ ಚುನಾವಣೆಯ ಫಲಿತಾಂಶವು ಅಚ್ಚರಿದಾಯಕವಾಗಿರಲಿದೆ ಎಂದು ಭವಿಷ್ಯ ನೀಡಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು 6 ದಿನಗಳ ಕಾಲ ಅಮೆರಿಕ ಪ್ರವಾಸಕೈಗೊಂಡಿದ್ದಾರ.

ಮುಂದಿನ ಎರಡು ವರ್ಷದಲ್ಲಿ ಕಾಂಗ್ರೆಸ್ ಪಕ್ಷವು ಮಹತ್ವದ ಪಾತ್ರ ನಿರ್ವಹಿಸಲಿದೆ ಮತ್ತು ಅತ್ಯುತ್ತಮ ಪ್ರದರ್ಶನ ತೋರಲಿದೆ ಎಂದು ರಾಹುಲ್ ಗಾಂಧಿ ಅವರು ಅಭಿಪ್ರಾಯಪಟ್ಟರು. ಯಾರಿಗೂ ಕಾಣದಂತೆ ಅಂಡರ್‌ಕರೆಂಟ್ ಇದ್ದು, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಜನರು ಆಕ್ರೋಶ ಮಡುಗಟ್ಟಿದೆ. ನಾವು ನಮ್ಮ ಲೆಕ್ಕಾಚಾರವನ್ನು ಸರಿ ಮಾಡಿಕೊಳ್ಳಬೇಕಷ್ಟೇ. ಒಗ್ಗೂಡಿದ ಪ್ರತಿಪಕ್ಷವು ಪ್ರಧಾನಿ ಮೋದಿಯನ್ನು ಸೋಲಿಸಬಹುದು ಎಂದು ರಾಹುಲ್ ಗಾಂಧಿ ಅವರು ಹೇಳಿದರು.

ಇದನ್ನೂ ಓದಿ: Rahul Gandhi: ಕೊನೆಗೂ ಪ್ರಧಾನಿ ಮೋದಿಯನ್ನು ಮೆಚ್ಚಿಕೊಂಡ ರಾಹುಲ್ ಗಾಂಧಿ!

ಕರ್ನಾಟಕದಲ್ಲಿ 224 ಸ್ಥಾನಗಳ ಪೈಕಿ 135 ಸ್ಥಾನ ಗೆದ್ದಿರುವ ಕಾಂಗ್ರೆಸ್ ಪ್ರದರ್ಶನವನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ಭಾರತದಲ್ಲಿ ರಾಜಕೀಯ ಸಮೀಕರಣವು ಬದಲಾಗುತ್ತಿದೆ ಎಂದು ಅಭಿಪ್ರಾಯಪಟ್ಟರು. ಮುಂಬರುವ ರಾಜಸ್ಥಾನ, ಛತ್ತೀಸ್ ಗಢ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿವೆ. ಈ ಎರಡ ಸ್ಟೇಟ್‌ಗಲ್ಲಿ ಮುಂದಿನ ವರ್ಷ ಚುನಾವಣೆ ನಡೆಯಲಿದೆ.

Exit mobile version