Site icon Vistara News

ಪ್ರಧಾನಿ ನರೇಂದ್ರ ಮೋದಿ ಇಂದು ಹೈದರಾಬಾದ್‌ಗೆ ಭೇಟಿ, 7,000 ಪೊಲೀಸರಿಂದ ಬಿಗಿ ಬಂದೋಬಸ್ತ್

ಹೈದರಾಬಾದ್:‌ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಭಾಗವಹಿಸುವ ಸಲುವಾಗಿ ಹೈದರಾಬಾದ್‌ಗೆ ಇಂದು ಸಂಜೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಉಳಿದುಕೊಳ್ಳುವ ನೋವೊಟೆಲ್ ಹೋಟೆಲಿನ ಸಂಪೂರ್ಣ ನಿಯಂತ್ರಣವನ್ನು ವಿಶೇಷ ರಕ್ಷಣಾ ಪಡೆ (ಎಸ್‌ಪಿಜಿ) ವಹಿಸಿಕೊಂಡಿದೆ. ಹೈದರಾಬಾದ್‌ನ ಪರೇಡ್‌ ಗ್ರೌಂಡ್‌ನಲ್ಲಿ ಭಾನುವಾರ ನಡೆಯಲಿರುವ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮೋದಿ ಹಾಗೂ ಇತರ ನಾಯಕರು ಭಾಗವಹಿಸಲಿದ್ದಾರೆ. ಲಕ್ಷಾಂತರ ಮಂದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಇದೆ.

ಹೈದರಾಬಾದ್‌ ಪೊಲೀಸರ ಜತೆಗೆ ಇತರ ಜಿಲ್ಲೆಗಳ ಪೊಲೀಸರೂ ಬಂದೋಬಸ್ತ್‌ನಲ್ಲಿ ಕೈಜೋಡಿಸಲಿದ್ದಾರೆ. ಭಾನುವಾರ ಸಂಜೆ ೭.೩೦ ತನಕ ಸಾರ್ವಜನಿಕ ಸಭೆ ನಡೆಯುವ ನಿರೀಕ್ಷೆ ಇದ್ದು, ರಾತ್ರಿ ರಾಜ್‌ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಳಿದುಕೊಳ್ಳಲಿದ್ದಾರೆ.

ಪ್ರಧಾನಿ ಮೋದಿಯವರಿಗೆ ಇತ್ತೀಚೆಗೆ ನಾನಾ ಮೂಲಗಳಿಂದ ಭದ್ರತೆ ಕುರಿತ ಬೆದರಿಕೆ ಇರುವುದರಿಂದ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

Exit mobile version