ವಾಷಿಂಗ್ಟನ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಅಭಿಮಾನಿಗಳಿದ್ದಾರೆ, ಅವರ ನಾಯಕತ್ವವನ್ನು ಮುಕ್ತ ಕಂಠದಿಂದ ಹೊಗಳುವವರಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಪಾಕಿಸ್ತಾನ ಮೂಲದ, ಅಮೆರಿಕದಲ್ಲಿ ನೆಲೆಸಿರುವ ಉದ್ಯಮಿ ಸಾಜಿದ್ ತರಾರ್ (Sajid Tarar) ಅವರು ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ. “ನರೇಂದ್ರ ಮೋದಿ ಬಲಿಷ್ಠ ನಾಯಕರಾಗಿದ್ದಾರೆ. ಅವರು ಹುಟ್ಟಿನಿಂದಲೇ ನಾಯಕತ್ವ ಗುಣಗಳನ್ನು ಹೊಂದಿದ್ದಾರೆ” ಎಂದು ಉದ್ಯಮಿ ಹೇಳಿದ್ದಾರೆ.
“ನರೇಂದ್ರ ಮೋದಿ ಅದ್ಭುತ ನಾಯಕರಾಗಿರುವ ಕಾರಣದಿಂದಾಗಿಯೇ ಭಾರತ ಅಷ್ಟೊಂದು ಉತ್ತಮವಾಗಿ ಏಳಿಗೆ ಹೊಂದಿದೆ. ಅವರಲ್ಲಿ ಹುಟ್ಟಿನಿಂದಲೇ ನಾಯಕತ್ವದ ಗುಣಗಳಿವೆ. ಅವರು ರಾಜಕೀಯ ಹಿತಾಸಕ್ತಿ ನೋಡದೆ, ಅತಿ ಕೆಟ್ಟ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. ಮುಂದಿನ ದಿನಗಳಲ್ಲಿ, ಮೋದಿ ಅವರು ಪಾಕಿಸ್ತಾನದ ಜತೆ ಮಾತುಕತೆ ನಡೆಸಿ, ಮತ್ತೆ ವ್ಯಾಪಾರ ಶುರು ಮಾಡಲಿದ್ದಾರೆ ಎಂಬ ನಂಬಿಕೆ ಇದೆ” ಎಂದು ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅವರು ಹೇಳಿದ್ದಾರೆ.
"PM Modi is a remarkable leader. He is a natural born leader. There's no doubt that Modiji will be the next PM"
— BALA (@erbmjha) May 15, 2024
Pakistani American businessman Sajid Tarar praises Modi govt. Everyone is assured about Modi 3.0 except I.N.D.I Alliance 😂 pic.twitter.com/BHp7CvclFw
“ನರೇಂದ್ರ ಮೋದಿ ಅವರ ನಾಯಕತ್ವವು ಭಾರತಕ್ಕೆ ಮಾತ್ರವಲ್ಲ, ವಿಶ್ವಕ್ಕೇ ಪ್ರಮುಖವಾಗಿದೆ. ಇದೇ ಕಾರಣಕ್ಕಾಗಿಯೇ ಅವರು ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತವಾಗಿದೆ. ಅವರು ಮತ್ತೆ ಪ್ರಧಾನಿಯಾಗುತ್ತಾರೆ ಎಂಬುದು ಜಗತ್ತಿಗೇ ಗೊತ್ತಿದೆ. ಪಾಕಿಸ್ತಾನದಿಂದ ಭಾರತಕ್ಕೂ ಅನುಕೂಲವಿದೆ. ಪಾಕಿಸ್ತಾನಕ್ಕೂ ಭಾರತದಿಂದ ಅನುಕೂಲವಿದೆ. ಮುಂದಿನ ದಿನಗಳಲ್ಲಿ ಎರಡೂ ದೇಶಗಳ ನಡುವಿ ಸಂಬಂಧ ಸುಧಾರಿಸುವ ವಿಶ್ವಾಸವಿದೆ” ಎಂದು ಹೇಳಿದರು. ಪಾಕಿಸ್ತಾನದವರಾದ ಸಾಜಿದ್ ತರಾರ್, 1990ರ ದಶಕದಲ್ಲಿ ಅಮೆರಿಕಕ್ಕೆ ತೆರಳಿ, ಅಲ್ಲಿಯೇ ನೆಲೆಸಿದ್ದಾರೆ.
ಅಂತಾರಾಷ್ಟ್ರಿಯ ಖ್ಯಾತಿಯ ಆಫ್ರಿಕನ್-ಅಮೆರಿಕನ್ ಗಾಯಕಿ ಮೇರಿ ಮಿಲ್ಬೆನ್ ಅವರು ಕೂಡ ನರೇಂದ್ರ ಮೋದಿ ಅವರ ಅಭಿಮಾನಿಯಾಗಿದ್ದಾರೆ. ಆಗಾಗ ಅವರು ಮೋದಿ ಅವರನ್ನು ಹೊಗಳುತ್ತಲೇ ಇರುತ್ತಾರೆ. ಭಾರತ ತನ್ನ ದೇಶದ ನಾಯಕನ ಮೇಲೆ ಆತ್ಮವಿಶ್ವಾಸ ಹೊಂದಿದೆ. ಮಣಿಪುರದ ಮಾತೆಯರು, ಪುತ್ರಿಯರು ಹಾಗೂ ಮಹಿಳೆಯರಿಗೆ ನ್ಯಾಯ ಸಿಗುತ್ತದೆ. ನಿಮ್ಮ ಸ್ವಾತಂತ್ರ್ಯಕ್ಕಾಗಿ ನರೇಂದ್ರ ಮೋದಿ ಅವರು ಎಂದಿಗೂ ಹೋರಾಡುತ್ತಾರೆ. ನರೇಂದ್ರ ಮೋದಿ ಅವರೇ ನಿಮ್ಮ ಮೇಲೆ ವಿಶ್ವಾಸ ಇದೆ. ನಿಮಗಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಕೆಲ ತಿಂಗಳ ಹಿಂದಷ್ಟೇ ಮೇರಿ ಮಿಲ್ಬೆನ್ ಹೇಳಿದ್ದರು.
ಇದನ್ನೂ ಓದಿ: Narendra Modi: ಹತ್ತು ವರ್ಷ ಪ್ರಧಾನಿಯಾಗಿರುವ ನರೇಂದ್ರ ಮೋದಿ ಆಸ್ತಿ ಎಷ್ಟಿದೆ? ಪ್ರಮಾಣಪತ್ರದಲ್ಲಿದೆ ಮಾಹಿತಿ