ನವದೆಹಲಿ: ಭಯೋತ್ಪಾದನೆಯನ್ನು ನಿಗ್ರಹಿಸುವ ಬದಲು, ಉಗ್ರರಿಗೆ ಆಶ್ರಯ ನೀಡದ ಪಾಕಿಸ್ತಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ವಿಜಯ ದಿವಸದಂದೇ (Kargil Vijay Diwas 2024) ಎಚ್ಚರಿಕೆ ನೀಡಿದ ಬೆನ್ನಲ್ಲೇ ನೆರೆ ರಾಷ್ಟ್ರವು ಥಂಡಾ ಹೊಡೆದಿದೆ. ನರೇಂದ್ರ ಮೋದಿ ಅವರು ಎಚ್ಚರಿಕೆ ನೀಡಿದ ಬಳಿಕ ಪಾಕಿಸ್ತಾನ ಸೇನೆಯು ಗಲಿಬಿಲಿಗೊಂಡಿದ್ದು, ಗಡಿಯಲ್ಲಿ ಹೆಚ್ಚುವರಿಯಾಗಿ ಸೈನಿಕರನ್ನು ನಿಯೋಜಿಸಿದೆ.
ಹೌದು, ಮೋದಿ ಎಚ್ಚರಿಕೆ ಬೆನ್ನಲ್ಲೇ ಪಾಕಿಸ್ತಾನವು ಗಡಿಯಲ್ಲಿ ಎರಡು ಹೆಚ್ಚುವರಿ ಬ್ರಿಗೇಡ್‌ಗಳು, 3 ಪಿಒಕೆ ಬ್ರಿಗೇಡ್ ಹಾಗೂ 2 ಹೆಚ್ಚುವರಿ ಪಿಒಕೆ ಬ್ರಿಗೇಡ್‌ಗಳನ್ನು ಹೆಚ್ಚುವರಿಯಾಗಿ ನಿಯೋಜಿಸಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಪಾಕಿಸ್ತಾನ ಸೈನಿಕರು ಭಾರತದೊಳಗೆ ಉಗ್ರರನ್ನು ನುಸುಳಿಸಲು ಮಾರ್ಗದರ್ಶನ, ನೆರವು ನೀಡುತ್ತಿದೆ ಎಂಬ ಚಿತ್ರಗಳು ಲಭ್ಯವಾದ ಬೆನ್ನಲ್ಲೇ ಮೋದಿ ಎಚ್ಚರಿಕೆ ನೀಡಿದ್ದರು. ಇದಾದ ಕೆಲ ಹೊತ್ತಿನಲ್ಲೇ ಪಾಕಿಸ್ತಾನ ಸೈನಿಕರು ಗಡಿಯಲ್ಲಿ ನಿಯೋಜನೆಗೊಂಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
#WATCH | Ladakh: PM Narendra Modi says, "Pakistan has failed in all its nefarious attempts in the past. But Pakistan has not learned anything from its history. It is trying to keep itself relevant with the help of terrorism and proxy war. Today I am speaking from a place where… pic.twitter.com/HQbzjcVKVq
— ANI (@ANI) July 26, 2024
ಮೋದಿ ಎಚ್ಚರಿಕೆ ಏನಾಗಿತ್ತು?
ಕಾರ್ಗಿಲ್ ವಿಜಯ ದಿವಸ(Kargil Vijay Diwas 2024)ಕ್ಕೆ ಜುಲೈ 26ಕ್ಕೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಡ್ರಾಸ್‌ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಳೆದ ಯುದ್ಧಗಳಲ್ಲಿ ಸೋಲುಂಡಿದ್ದರೂ ಬುದ್ದಿ ಬಾರದ ಪಾಕಿಸ್ತಾನ ಭಯೋತ್ಪಾದನೆಗೆ ಉತ್ತೇಜನ ನೀಡುತ್ತಿದೆ. ಇದುವರೆಗೆ ಪಾಕಿಸ್ತಾನ ತನ್ನ ತಪ್ಪಿನ ಪಾಠ ಕಲಿತಿಲ್ಲ ಎಂದು ಗುಡುಗಿದ್ದರು.
ಭಯೋತ್ಪಾದನೆ ಮೂಲಕ ಭಾರತವನ್ನು ಗೆಲ್ಲುವ ಪಾಕಿಸ್ತಾನದ ಉದ್ದೇಶ ಎಂದಿಗೂ ಯಶಸ್ವಿ ಆಗುವುದಿಲ್ಲ ಎಂದು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇನ್ನು ಇದೇ ವೇಳ ಅಗ್ನಿಪಥ್ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ್ದು, ಸೇನೆಯ ಈ ಸುಧಾರಣೆಯಲ್ಲೂ ಕೆಲವರು ತಮ್ಮ ವೈಯಕ್ತಿಕ ಲಾಭಕ್ಕಾಗಿ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಭಾರತದ ವಿರುದ್ಧ ಪಾಕಿಸ್ತಾನವು ಇದುವರೆಗೆ ನಾಲ್ಕು ಯುದ್ಧಗಳಲ್ಲಿ ಹೀನಾಯವಾಗಿ ಸೋಲನುಭವಿಸಿದೆ. ಅದರಲ್ಲೂ, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಉರಿ ದಾಳಿಗೆ ಪ್ರತಿಯಾಗಿ ಸರ್ಜಿಕಲ್ ಸ್ಟ್ರೈಕ್, ಪುಲ್ವಾಮಾ ಉಗ್ರರ ದಾಳಿಗೆ ಪ್ರತಿಯಾಗಿ ಬಾಲಾಕೋಟ್ ದಾಳಿ ನಡೆಸಿದೆ. ಹಾಗೆಯೇ, ಪಾಕಿಸ್ತಾನವು ಉಗ್ರ ಪೋಷಣೆಯ ರಾಷ್ಟ್ರವಾಗಿದೆ ಎಂಬುದಾಗಿ ಜಾಗತಿಕ ವೇದಿಕೆಯಲ್ಲಿ ಭಾರತವು ಪ್ರತಿಪಾದಿಸಿದೆ.
ಇದನ್ನೂ ಓದಿ: Kargil Vijay Diwas 2024: ಕಾರ್ಗಿಲ್ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್