ಜೈಪುರ: ಅನಾರೋಗ್ಯಪೀಡಿತರಾಗಿದ್ದ ಶ್ರೀ ಪಂಚಖಂಡ ಪೀಠಾಧೀಶ್ವರ ಆಚಾರ್ಯ ಸ್ವಾಮಿ ಧರ್ಮೇಂದ್ರ ಮಹಾರಾಜ ಅವರು ಸೋಮವಾರ ನಿಧನರಾದರು. ಅವರಿಗೆ ಇಲ್ಲಿನ ಎಸ್ಎಂಎಸ್ ಹಾಸ್ಪಿಟಲ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ನಿಧನದ ಸುದ್ದಿಯನ್ನು ಖಚಿತಪಡಿಸಿರುವ ಆಸ್ಪತ್ರೆಯ ಮೂಲಗಳು, ಆಗಸ್ಟ್ 28ರಿಂದ ಆಚಾರ್ಯ ಅವರು ಸವಾಯಿ ಮಾನ್ ಸಿಂಗ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರು ತೀವ್ರ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಂತೆ ವೆಂಟಿಲೇಟರ್ ಸಪೋರ್ಟ್ ನೀಡಲಾಗಿತ್ತು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸೋಮವಾರ ಬೆಳಗ್ಗೆ ನಿಧನರಾದರು.
ರಾಜಸ್ಥಾನದ ರಾಜ್ಯಪಾಲ ಕಲರಾಜ್ ಮಿಶ್ರಾ ಮತ್ತು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಸೇರಿದಂತೆ ಅನೇಕ ಸಚಿವರು, ಗಣ್ಯರು ಆಚಾರ್ಯ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.