Parbati Baruah: ಆನೆಗಳ ಒಡನಾಡಿಯನ್ನು ಅರಸಿ ಬಂತು ಪದ್ಮಶ್ರೀ ಪ್ರಶಸ್ತಿ; ಇಲ್ಲಿದೆ ಮೊದಲ ಮಹಿಳಾ ಮಾವುತರ ಸಾಹಸಗಾಥೆ - Vistara News

ದೇಶ

Parbati Baruah: ಆನೆಗಳ ಒಡನಾಡಿಯನ್ನು ಅರಸಿ ಬಂತು ಪದ್ಮಶ್ರೀ ಪ್ರಶಸ್ತಿ; ಇಲ್ಲಿದೆ ಮೊದಲ ಮಹಿಳಾ ಮಾವುತರ ಸಾಹಸಗಾಥೆ

Parbati Baruah: ಅಸ್ಸಾಂನ ಪಾರ್ವತಿ ಬರುವಾ ಅವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ಘೋಷಿಸಲಾಗಿದೆ. ಭಾರತದ ಮೊದಲ ಮಹಿಳಾ ಆನೆ ಮಾವುತರಾದ ಅವರ ಸಾಹಸಗಾಥೆ ಇಲ್ಲಿದೆ.

VISTARANEWS.COM


on

parvathi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ಈ ಬಾರಿಯ ಪದ್ಮ ಪ್ರಶಸ್ತಿಗಳನ್ನು (Padma award) ಘೋಷಿಸಲಾಗಿದೆ. 110 ಪದ್ಮಶ್ರೀ ಪ್ರಶಸ್ತಿಗಳನ್ನು ವಿವಿಧ ಕ್ಷೇತ್ರಗಳಲ್ಲಿ ಛಾಪು ಮೂಡಿಸಿದ ಸಾಧಕರಿಗೆ, ಅಪೂರ್ವ ಪ್ರತಿಭೆಗಳಿಗೆ ನೀಡಲಾಗಿದೆ. ಈ ಪೈಕಿ ಭಾರತದ ಮೊದಲ ಮಹಿಳಾ ಆನೆ ಮಾವುತ (India’s First Female Elephant Mahout) ಎಂದೇ ಕರೆಯಲ್ಪಡುವ ಪಾರ್ವತಿ ಬರುವಾ (Parbati Baruah) ಅವರಿಗೂ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಅವರು ತಮ್ಮ 14 ವರ್ಷದಲ್ಲೇ ಮಾವುತರಾಗಿ ಗುರುತಿಸಿಕೊಂಡಿದ್ದು, ಸುಮಾರು 4 ದಶಕಗಳಿಂದ ಆನೆಯ ಒಡನಾಡಿಯಾಗಿದ್ದಾರೆ. ಪ್ರಸ್ತುವ ಅವರಿಗೆ 67 ವರ್ಷ.

ಹಸ್ತೀರ್ ಕನ್ಯಾ

ಪಾರ್ವತಿ ಅವರನ್ನು ‘ಹಸ್ತೀರ್ ಕನ್ಯಾ’ ಎಂದು ಕರೆಯಲಾಗುತ್ತದೆ. ಅಂದರೆ ಆನೆಯ ಪುತ್ರಿ ಎಂದರ್ಥ. ಸಮಾಜ ಕಲ್ಯಾಣ ಕ್ಷೇತ್ರದಲ್ಲಿನ ಗಣನೀಯ ಸೇವೆಗಾಗಿ ಅಸ್ಸಾಂ ಮೂಲದ ಇವರಿಗೆ ಪದ್ಮಶ್ರೀ ಲಭಿಸಿದೆ. ಪಾರ್ವತಿ ಅಸ್ಸಾಂನ ಶ್ರೀಮಂತ ಕುಟುಂಬವೊಂದರಲ್ಲಿ ಜನಿಸಿದರು. ಆಗೆಲ್ಲ ಆನೆಯನ್ನು ಮನೆಯಲ್ಲಿ ಸಾಕುವುದು ಬಹಳ ಪ್ರತಿಷ್ಠೆಯ ವಿಚಾರವಾಗಿತ್ತು. ಇವರ ಕುಟುಂಬವೂ ಆನೆಯನ್ನು ಸಾಕುತ್ತಿತ್ತು. ಇವರ ಬಳಿ ಸುಮಾರು 40 ಆನೆಗಳಿದ್ದವು. ಹೀಗಾಗಿ ಸಹಜವಾಗಿ ಬಾಲ್ಯದಲ್ಲಿಯೇ ಪಾರ್ವತಿ ಆನೆಗಳತ್ತ ಆಸಕ್ತಿ ಬೆಳೆಸಿದ್ದರು.

ಚಿಕ್ಕಂದಿನಿಂದಲೇ ಅವರು ಆನೆಯೊಂದಿಗೆ ಹೆಚ್ಚಿನ ಸಮಯ ಕಳೆಯುತ್ತಿದ್ದರು. ಆನೆಗೆ ತರಬೇತಿ ನೀಡುವುದನ್ನು ಕುತೂಹಲದ ಕಣ್ಣುಗಳಿಂದ ವೀಕ್ಷಿಸುತ್ತಿದ್ದರು. ಅವರ ಆಸಕ್ತಿಯನ್ನು ಗಮನಿಸಿ 14ನೇ ವಯಸ್ಸಿನಲ್ಲಿ ಅವರ ತಂದೆ ದಿ.ಪ್ರಾಕೃತೇಶ್ ಚಂದ್ರ ಬರುವಾ ಆನೆಗಳ ಪ್ರಪಂಚಕ್ಕೆ ಕರೆ ತಂದರು. ಅಲ್ಲಿಂದ ಅವರು ಮತ್ತೆ ಹಿಂದಿರುಗಿ ನೋಡಲೇ ಇಲ್ಲ.

ಆನೆಗಳ ಸೇವೆಗಾಗಿ ಜೀವವೇ ಮುಡಿಪು

ಪಾರ್ವತಿ ಆನೆಗಳಿಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದಾರೆ ಎಂದರೆ ಅದು ಖಂಡಿತಾ ಅತಿಶಯೋಕ್ತಿಯಲ್ಲ. ಗಜ ಪಡೆಗಳ ಜೀವನ ಮಟ್ಟ ಸುಧಾರಣೆಗೆ ಅವರು ಹಲವು ರೀತಿಯ ಕ್ರಮ ಕೈಗೊಂಡಿದ್ದಾರೆ. ಅವರು ತಮ್ಮ 14ನೇ ವಯಸ್ಸಿನಲ್ಲಿ ಅಸ್ಸಾಂನ ಕೊಚುಗಾಂವ್ ಅರಣ್ಯದಲ್ಲಿ (Kochugaon forest) ಮೊದಲ ಬಾರಿಗೆ ಆನೆಯನ್ನು ಸಾಕಿದರು. ಅವರು ಅಸ್ಸಾಂ (ದರ್ರಾಂಗ್ ಮತ್ತು ಕೊಚುಗಾಂವ್) ಮತ್ತು ಉತ್ತರ ಬಂಗಾಳದ (ಜಲ್ಪೈಗುರಿ ಮತ್ತು ಡಾರ್ಜಿಲಿಂಗ್) ಕಾಡುಗಳಲ್ಲಿ 14 ಆನೆಗಳನ್ನು ಸ್ವತಂತ್ರವಾಗಿ ಪಳಗಿಸಿದರು. ಹೊಸದಾಗಿ ಪಳಗಿಸಿದ ಆನೆಗಳ ಚಿಕಿತ್ಸೆ ಮತ್ತು ಶುಶ್ರೂಷೆಯಲ್ಲಿ ಅವರು ಅರಣ್ಯ ಅಧಿಕಾರಿಗಳಿಗೆ ಸಹಾಯ ಮಾಡಿದರು. 2000ರಲ್ಲಿ ಪಶ್ಚಿಮ ಬಂಗಾಳ ಅರಣ್ಯ ಇಲಾಖೆ ಆಯೋಜಿಸಿದ್ದ ಆನೆ ಗಣತಿಗಾಗಿ ಕೆಲಸ ಮಾಡುವ ಮಾವುತರು ಮತ್ತು ಕ್ಷೇತ್ರ ಸಿಬ್ಬಂದಿಗೆ ತರಬೇತಿಯನ್ನು ಆಯೋಜಿಸಲು ಅಗತ್ಯ ಮಾರ್ಗದರ್ಶನ ನೀಡಿದರು.

ಚೀಫ್‌ ಎಲಿಫೆಂಟ್‌ ವಾರ್ಡನ್‌

ಆನೆಗಳ ಕಲ್ಯಾಣಕ್ಕಾಗಿ ಕಾರ್ಯ ನಿರ್ವಹಿಸುವ ಪಾರ್ವತಿ ಅವರಿಗೆ 1989ರಲ್ಲಿ ವಿಶ್ವಸಂಸ್ಥೆಯ ʼಗ್ಲೋಬಲ್ 500- ರೋಲ್ ಆಫ್ ಹಾನರ್ʼ (Global 500 – Roll of Honour) ಪ್ರಶಸ್ತಿ ಲಭಿಸಿತು. ಅಲ್ಲದೆ 2003ರ ಜನವರಿ 11ರಂದು ಅಸ್ಸಾಂ ಸರ್ಕಾರವು ಅವರನ್ನು ʼHonorary Chief Elephant Warden of Assamʼ ಎಂದು ಗೌರವಿಸಿತು.

ಬಹುಮುಖ ಪ್ರತಿಭೆ

ಪಾರ್ವತಿ ಅವರು ಆನೆಯ ಬಗ್ಗೆ, ಅವುಗಳ ಜೀವನ ವಿಧಾನಗಳ ಬಗ್ಗೆ ಹಲವು ಲೇಖನಗಳನ್ನು ಇಂಗ್ಲಿಷ್‌, ಬಂಗಾಳಿ ಮತ್ತು ಅಸ್ಸಾಮಿಯಲ್ಲಿ ಬರೆದಿದ್ದಾರೆ. ಅಲ್ಲದೆ ಅವರು ಗೋಲ್ಪಾರನ್ ಜಾನಪದ ನೃತ್ಯದಲ್ಲಿ ಪರಿಣಿತಿ ಹೊಂದಿದ್ದಾರೆ. ದೇಶದ ವಿವಿಧ ಭಾಗಗಳಲ್ಲಿ ಪ್ರದರ್ಶನವನ್ನೂ ನೀಡಿದ್ದಾರೆ. ಮಾನವರನ್ನು ಕೊಂದ ಆನೆಗಳಿಗೆ ಯಶಸ್ವಿಯಾಗಿ ತರಬೇತಿ ನೀಡಿದ ಏಕೈಕ ಮಹಿಳಾ ಮಾವುತ ಎನ್ನುವ ಹೆಗ್ಗಳಿಕೆಗೂ ಪಾರ್ವತಿ ಪಾತ್ರರಾಗಿದ್ದಾರೆ. ಅವರು ವಿಶ್ವಸಂಸ್ಥೆಯ ಏಷ್ಯನ್ ಎಲಿಫೆಂಟ್ ಸ್ಪೆಷಲಿಸ್ಟ್ ಗ್ರೂಪ್ ಮತ್ತು ಅಸ್ಸಾಂ ಸರ್ಕಾರದ ʼಮಾನವ-ಆನೆ ಸಂಘರ್ಷʼ (Man- Elephant Conflict) ಕಾರ್ಯಪಡೆಯ ಸದಸ್ಯರೂ ಹೌದು.

ಇದನ್ನೂ ಓದಿ: Padma Awards: ರೋಹನ್ ಬೋಪಣ್ಣ, ಅನುಪಮಾ ಹೊಸಕೆರೆ, ಸಿ.ಆರ್ ಚಂದ್ರಶೇಖರ್ ಸೇರಿ 8 ಕನ್ನಡಿಗರಿಗೆ ಪದ್ಮಶ್ರೀ

ಆನೆಗಳ ರಾಣಿ

ಬಿಬಿಸಿ ಹೊರ ತಂದ ʼಕ್ವೀನ್‌ ಆಫ್‌ ಎಲಿಫೆಂಟ್‌ʼ ಎಂಬ ಸಾಕ್ಷ್ಯ ಚಿತ್ರದ ಬಳಿಕ ಪಾರ್ವತಿ ಹೆಸರು ಇನ್ನಷ್ಟು ಜನಪ್ರಿಯವಾಯಿತು. ಈ ಡಾಕ್ಯುಮೆಂಟ್ರಿ ಅವರ ಜೀವನದ ಮೇಲೆ ಬೆಳಕು ಚೆಲ್ಲಿತ್ತು. ಆನೆಗಳೊಂದಿಗೆ ಅವರ ಒಡನಾಟ, ನಿಸ್ವಾರ್ಥ ಸೇವೆಯನ್ನು ʼಕ್ವೀನ್‌ ಆಫ್‌ ಎಲಿಫೆಂಟ್‌ʼ ಎಳೆ ಎಳೆಯಾಗಿ ಬಿಚ್ಚಿಟ್ಟಿತ್ತು. ಇದೀಗ ಪದ್ಮಶ್ರೀ ಪ್ರಶಸ್ತಿ ಅವರನ್ನು ಅರಸಿಕೊಂಡು ಬಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಪ್ರದಗ್ರಹಣ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರು ಪ್ರಮಾಣ ವಚನ ಬೋಧಿಸಿದರು. ತಿರುವನಂತಪುರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ನಡೆದ ಸಮಾರಂಭದಲ್ಲಿ ವಿ.ಡಿ. ಸತೀಶನ್‌ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

10 ವರ್ಷಗಳ ನಂತರ ಯುಡಿಎಫ್‌ ಸರ್ಕಾರ ಅಧಿಕಾರ ಸ್ವೀಕಾರದೊಂದಿಗೆ ಕೇರಳ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

Continue Reading

Latest

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

VISTARANEWS.COM


on

ತಿರುವನಂತಪುರಂ: ಕೇರಳಂ ಕಾಂಗ್ರೆಸ್‌ನ ಹಿರಿಯ ನಾಯಕ ವಿ.ಡಿ. ಸತೀಶನ್‌ ಅವರು ನಾಳೆ ಕೇರಳಂನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ತಿರುವನಂತಪುರಂನ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ.

ನಾಳೆ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲರು, ಸತೀಶನ್ ಅವರಿಗೆ ಪ್ರಮಾಣ ವಚನ ಭೋದಿಸಲಿದ್ದಾರೆ. ಇದೇ ವೇಳೆ ಹೊಸ ಸಚಿವ ಸಂಪುಟದ ಸದಸ್ಯರೂ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಈ ಬಾರಿ 21 ಸದಸ್ಯರ ಸಚಿವ ಸಂಪುಟ ರಚನೆಗೆ ಯುಡಿಎಫ್‌ ಸಿದ್ಧತೆ ನಡೆಸಿದೆ. ಈಗಾಗಲೇ ಈ ಕುರಿತು ಮಿತ್ರ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿರುವ ಕಾಂಗ್ರೆಸ್‌, ಕ್ಯಾಬಿನೆಟ್‌ ರಚನೆಯ ಕಸರತ್ತು ನಡೆಸುತ್ತಿದೆ. ಸದ್ಯದ ಮಾಹಿತಿಯ ಪ್ರಕಾರ ಕ್ಯಾಬಿನೆಟ್‌ನಲ್ಲಿ ಮುಸ್ಲಿಂ ಲೀಗ್‌ಗೆ ಐದು ಸ್ಥಾನಗಳು ಲಭಿಸಬಹುದು ಎನ್ನಲಾಗಿದೆ.

ಪ್ರಮಾಣವಚನ ಸಮಾರಂಭಕ್ಕೆ ರಾಜಕೀಯ ನಾಯಕರು, ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗಿಯಾಗುವ ನಿರೀಕ್ಷೆಯಿದೆ.

Continue Reading

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading
Advertisement
galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌