ನವ ದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಪ್ರಾರಂಭದ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಡಿದ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ (Pm Modi)ಯವರು ಇಂದು ರಾಜ್ಯಸಭೆಯಲ್ಲಿ ಉತ್ತರ ನೀಡಲಿದ್ದಾರೆ. ನರೇಂದ್ರ ಮೋದಿಯವರು ಫೆ.8ರಂದು ಲೋಕಸಭೆಯಲ್ಲಿ ಮಾತನಾಡಿದ್ದರು. ಹಲವು ವಿಷಯಗಳನ್ನು ಮಾತನಾಡಿದ್ದ ಪ್ರಧಾನಿ ಮೋದಿ, ತಮ್ಮದೇ ಶೈಲಿಯಲ್ಲಿ ಪ್ರತಿಪಕ್ಷಗಳನ್ನು ಗೇಲಿ ಮಾಡಿದ್ದರು. ಇಂದು ರಾಜ್ಯಸಭೆಯಲ್ಲಿ ಅವರು ಮಾತನಾಡಲಿದ್ದು, ಅದರ ಸಮಗ್ರ ವಿವರ ಇಲ್ಲಿದೆ..
ಬುಧವಾರ ಮುಕ್ತಾಯವಾದ ಚರ್ಚೆ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಮೇಲಿನ ನಿರ್ಣಯದ ಚರ್ಚೆ ರಾಜ್ಯಸಭೆಯಲ್ಲಿ ಬುಧವಾರವಷ್ಟೇ ಮುಕ್ತಾಯವಾಗಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅದಕ್ಕೆ ಉತ್ತರ ನೀಡಲಿದ್ದಾರೆ.