Parliament Budget session: ರಾಹುಲ್, ಅದಾನಿ ಗಲಾಟೆ, ಸಂಸತ್ ಕಲಾಪ ಮತ್ತೆ ಮುಂದೂಡಿಕೆ - Vistara News

ದೇಶ

Parliament Budget session: ರಾಹುಲ್, ಅದಾನಿ ಗಲಾಟೆ, ಸಂಸತ್ ಕಲಾಪ ಮತ್ತೆ ಮುಂದೂಡಿಕೆ

ರಾಹುಲ್ ಗಾಂಧಿ(Rahul Gandhi) ಕ್ಷಮೆಗೆ ಬಿಜೆಪಿ ಆಗ್ರಹಿಸುತ್ತಿದ್ದರೆ, ಪ್ರತಿಪಕ್ಷಗಳು ಅದಾನಿ(Adani Row) ಕುರಿತು ಜೆಪಿಸಿ ತನಿಖೆಗೆ ಪಟ್ಟು ಹಿಡಿದಿವೆ. ಹೀಗಾಗಿ, ನಾಲ್ಕು ದಿನಗಳಿಂದ ಸಂಸತ್ ಅಧಿವೇಶನ ಕಲಾಪ ನಡೆಯುತ್ತಿಲ್ಲ(Parliament Budget session).

VISTARANEWS.COM


on

Indian Parliament
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಕ್ಷಮೆಗೆ ಆಡಳಿತ ಪಕ್ಷ ಬಿಜೆಪಿ ಪಟ್ಟು ಹಿಡಿದರೆ, ಅದಾನಿ(Adani Row) ಗ್ರೂಪ್ ಷೇರ್ ವ್ಯವಹಾರ ತನಿಖೆಗೆ ಜೆಪಿಸಿಗೆ ಒತ್ತಾಯಿಸಿ ಪ್ರತಿಪಕ್ಷಗಳು ಬಿಗಿಪಟ್ಟು ಹಾಕಿವೆ. ಪರಿಣಾಮ ಗುರುವಾರವೂ ಸಂಸತ್ತಿನ ಎರಡೂ ಸದನಗಳಲ್ಲಿ ಮಧ್ಯಾಹ್ನದವರೆಗೂ ಕಲಾಪ ನಡೆದಿಲ್ಲ. ಬಹುಶಃ ನಾಲ್ಕನೇ ದಿನವೂ ಕಲಾಪ ಸಂಪೂರ್ಣವಾಗಿ ವ್ಯರ್ಥವಾಗುವ ಸಾಧ್ಯತೆಗಳಿವೆ. ಗುರುವಾರ ಬೆಳಗ್ಗೆ ಕಲಾಪ ಶುರುವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳು ಗಲಾಟೆ ಶುರು ಮಾಡುತ್ತಿದ್ದಂತೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು(Parliament Budget session).

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾ ಅಧಿವೇಶನದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಭಾರತದಲ್ಲಿ ಪ್ರಜಾಪ್ರಭುತ್ವದ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿ ಲಂಡನ್‌ನಲ್ಲಿ ಅವರು ಮಾತನಾಡಿದ ಹೇಳಿಕೆಗಳ ಕುರಿತು ಸ್ಪಷ್ಟಿಕರಣ ನೀಡುವ ಸಾಧ್ಯತೆ ಇದೆ. ಆದರೆ, ಕ್ಷಮೆಯಾಚಿಸಬೇಕೆಂಬ ಬಿಜೆಪಿ ಬೇಡಿಕೆಯನ್ನು ಕಾಂಗ್ರೆಸ್ ಸಂಪೂರ್ಣವಾಗಿ ತಳ್ಳಿಹಾಕಿದೆ.

ಭಾರತವನ್ನು ಅವಮಾನಿಸಿದ ರಾಹಲ್ ಗಾಂಧಿ: ಕಿರೆನ್ ರಿಜಿಜು

ಈ ವೇಳೆ ಮಾತನಾಡಿದ ಬಿಜೆಪಿಯ ನಾಯಕ ಹಾಗೂ ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಸುಳ್ಳುಗಳನ್ನು ಮಾತನಾಡುತ್ತಿದ್ದಾರೆ. ರಾಷ್ಟ್ರವನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Budget Session: ರಾಹುಲ್​ ಗಾಂಧಿ ಲಂಡನ್​ ಹೇಳಿಕೆ ಗಲಾಟೆ; ರಾಜ್ಯಸಭೆ, ಲೋಕಸಭೆ ಕಲಾಪ ಮುಂದೂಡಿಕೆ

ಈ ದೇಶದಲ್ಲಿ ಹೆಚ್ಚು ಮಾತನಾಡುವ ಮತ್ತು ಹಗಲು ರಾತ್ರಿ ಸರ್ಕಾರವನ್ನು ಗುರಿಯಾಗಿಸುವ ವ್ಯಕ್ತಿ, ಭಾರತದಲ್ಲಿ ಮಾತನಾಡಲು ಸ್ವಾತಂತ್ರ್ಯವಿಲ್ಲ ಎಂದು ವಿದೇಶದಲ್ಲಿ ಹೇಳುತ್ತಾರೆ. ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಮುಳುಗಿಸುತ್ತಾರೆ. ನಮಗೇನೂ ಅದರ ಬಗ್ಗೆ ಆತಂಕವಿಲ್ಲ. ಒಂದು ವೇಳೆ ಅವರು ರಾಷ್ಟ್ರಕ್ಕೆ ಅಪಾಯ ಮಾಡಿದರೆ, ಅವಮಾನ ಮಾಡಿರೆ, ನಾವು ನಾಗರಿಕರು ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ಈ ದೇಶವು ಕಾಂಗ್ರೆಸ್ ನಾಯಕತ್ವವನ್ನು ತಿರಸ್ಕರಿಸಿದೆ ಎಂಬ ಮಾತ್ರಕ್ಕೆ ವಿದೇಶದಲ್ಲಿ ಅವರು ದೇಶವನ್ನು ಅವಮಾನ ಮಾಡುವುದಲ್ಲ ಎಂದು ರಿಜಿಜು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರವಾಸ

Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

Summer Tour: ಬೇಸಿಗೆ ರಜೆಯನ್ನು ಬೆಟ್ಟಗುಡ್ಡಗಳ ನಡುವೆ ಪ್ರಶಾಂತವಾದ ಸ್ಥಳದಲ್ಲಿ ಕಳೆಯುವ ಆಸೆ ಇದೆಯೇ ಹಾಗಿದ್ದರೆ ಇಲ್ಲಿ ಹೇಳಿರುವ ಐದು ಪ್ರದೇಶಗಳಿಗೆ ಪ್ರವಾಸ ಹೊರಡುವ ಪ್ಲಾನ್ ಈಗಲೇ ಮಾಡಿಕೊಳ್ಳಿ.

VISTARANEWS.COM


on

By

Summer Tour
Koo

ಭಾರತದಲ್ಲಿ (india) ಹಲವಾರು ಸುಂದರ, ಮನೋಹರ ತಾಣಗಳಿರುವಂತೆ ರುದ್ರರಮಣೀಯ ಸ್ಥಳಗಳೂ ಇವೆ. ಬೇಸಿಗೆಯ ರಜೆಯನ್ನು (Summer Tour) ಬೆಟ್ಟ ಗುಡ್ಡಗಳ ನಡುವೆ ಕಳೆಯಬೇಕು, ನಗರದ ಜಂಜಾಟದಿಂದ ದೂರವಾಗಿ ಮನಸ್ಸಿಗೆ ಶಾಂತಿ ಸೀಗುವ ಸ್ಥಳದಲ್ಲಿ ಕೆಲಕಾಲ ಇದ್ದು ಬರಬೇಕು ಎನ್ನುವ ಯೋಚನೆ ಇದ್ದರೆ ಭಾರತದ ಈ ಐದು ಗಿರಿಧಾಮಗಳಿಗೊಮ್ಮೆಯಾದರೂ (Hill Stations) ಭೇಟಿ ನೀಡಬಹುದು.

ಭಾರತದಲ್ಲಿ ಅನೇಕ ಪ್ರವಾಸಿ ತಾಣಗಳಿವೆ. ಅದರಲ್ಲಿ ಕೆಲವು ಜೀವನದಲ್ಲಿ ರೋಮಾಂಚಕಾರಿ ಅನುಭವವನ್ನು ನೀಡುತ್ತದೆ. ನಾವು ರಜೆಯ ಬಗ್ಗೆ ಯೋಚಿಸಿದಾಗ ನಮಗೆ ಬೇಕಾಗಿರುವುದು ಜನಸಂದಣಿಯಿಲ್ಲದ ಸ್ಥಳ, ರುಚಿಕರವಾದ ಆಹಾರ, ಸಮ್ಮೋಹನಗೊಳಿಸುವ ನೋಟಗಳು ಮತ್ತು ಶಾಂತ ವಾತಾವರಣ.

29 ರಾಜ್ಯಗಳು ಮತ್ತು 7 ಕೇಂದ್ರಾಡಳಿತ ಪ್ರದೇಶಗಳಿರುವ ಭಾರತದಲ್ಲಿ ಸುಂದರವಾದ ವಿಹಾರ ತಾಣಗಳು ಹಲವಾರು ಇವೆ. ಅವುಗಳಲ್ಲಿ ಜೀವಿತಾವಧಿಯಲ್ಲಿ ಒಮ್ಮೆಯಾದರೂ ಭೇಟಿ ನೀಡಲೇಬೇಕಾದ ಐದು ಗಿರಿಧಾಮಗಳು ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Haridwara Travel: ಹರಿದ್ವಾರಕ್ಕೆ ಭೇಟಿ ನೀಡಿದಾಗ ಈ ಸ‍್ಥಳಗಳನ್ನು ಮಿಸ್ ಮಾಡದೇ ನೋಡಿ!


ಮಾವ್ಲಿನ್ನಾಂಗ್ (Mawlynnong)

‘ಏಷ್ಯಾದ ಸ್ವಚ್ಛ ಗ್ರಾಮ’ ಎಂದು ಕರೆಯಲ್ಪಡುವ ಮೇಘಾಲಯದ ಮಾವ್ಲಿನ್ನಾಂಗ್ ಪರಿಸರ ಸ್ನೇಹಿ ಜೀವನ ಹೊಂದಿದೆ. ನಿತ್ಯಹರಿದ್ವರ್ಣ ಪರಿಸರ, ಧುಮ್ಮಿಕ್ಕುವ ತೊರೆಗಳು, ಹಣ್ಣಿನ ತೋಟಗಳು ಮತ್ತು ತೂಗಾಡುವ ತಾಳೆ ಮರಗಳು ಮೇಘಾಲಯದ ಹೃದಯಭಾಗದಲ್ಲಿ ರಜೆಯ ಸುಂದರ ಅನುಭವವನ್ನು ನೀಡುತ್ತವೆ. ನೋಹ್ವೆಟ್ ಲಿವಿಂಗ್ ರೂಟ್ ಬ್ರಿಡ್ಜ್ ಕೂಡ ಈ ಸ್ಥಳದಲ್ಲಿದೆ. ಇಲ್ಲಿನ ತ್ಯಾಜ್ಯವನ್ನು ಬಿದಿರಿನ ಡಸ್ಟ್‌ಬಿನ್‌ಗಳಲ್ಲಿ ಸಂಗ್ರಹಿಸಿ ಅನಂತರ ಗೊಬ್ಬರವಾಗಿ ಬಳಸುವುದರಿಂದ ಮಾವ್ಲಿನ್ನಾಂಗ್ ಸ್ವಚ್ಛತೆಗೆ ಹೆಸರುವಾಸಿಯಾಗಿದೆ.

ನೊಹ್ವೆಟ್‌ನ ಲಿವಿಂಗ್ ರೂಟ್ ಬ್ರಿಡ್ಜ್ ಇಲ್ಲಿಯ ಪ್ರಮುಖ ಆಕರ್ಷಣೆ ಮಾತ್ರವಲ್ಲ ಮಾವ್ಲಿನ್ನಾಂಗ್‌ನಲ್ಲಿರುವ ಎಪಿಫ್ಯಾನಿ ಚರ್ಚ್ ಒಂದು ಶತಮಾನಕ್ಕೂ ಹೆಚ್ಚು ಹಳೆಯದಾಗಿದೆ. ಈ ಸೊಂಪಾದ ಮತ್ತು ಹಸಿರು ಉಷ್ಣವಲಯದ ಸ್ವರ್ಗದ ಮಧ್ಯದಲ್ಲಿ ಐರೋಪ್ಯ ವಾಸ್ತುಶಿಲ್ಪದ ಒಂದು ಸುಂದರ ಭಾಗವಾಗಿದೆ. ಚರ್ಚ್‌ಗೆ ಹತ್ತಿರವಿರುವ ಮರದ ಮನೆಗಳನ್ನು ಏರಿ ದೂರದವರೆಗೂ ಬಯಲು ಪ್ರದೇಶಗಳನ್ನು ಕಾಣಬಹುದು.


ಹಳೇಬೀಡು (Halebidu)

ಹಳೇಬೀಡು ಕರ್ನಾಟಕದ ಹಾಸನ ಜಿಲ್ಲೆಯಲ್ಲಿದೆ. ರಮಣೀಯ ಸೌಂದರ್ಯಕ್ಕೆ ಹೆಸರುವಾಸಿಯಾಗಿದೆ. ಇದು ಹಾಸನದ ಒಂದು ಸಣ್ಣ ಪಟ್ಟಣವಾಗಿದ್ದು, ಹೊಯ್ಸಳ ಸಾಮ್ರಾಜ್ಯದ ರಾಜರಾಜಧಾನಿಯಾಗಿತ್ತು. ಈ ಸ್ಥಳವು ತನ್ನ ಭವ್ಯವಾದ ದೇವಾಲಯಗಳಿಗೆ ಹೆಸರುವಾಸಿಯಾಗಿರುವುದರಿಂದ ಪ್ರತಿವರ್ಷ ಸಾವಿರಾರು ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಬೇಲೂರಿನಿಂದ ಕೇವಲ 17 ಕಿ.ಮೀ. ದೂರದಲ್ಲಿರುವ ಹೊಯ್ಸಳರ ಪ್ರಾಚೀನ ರಾಜಧಾನಿ ಹಳೇಬೀಡು. ಕ್ರಿ.ಶ 1121 ರಲ್ಲಿ ನಿರ್ಮಿಸಲಾದ ಹೊಯ್ಸಳೇಶ್ವರ ಮತ್ತು ಕೇದಾರೇಶ್ವರದ ಸುಂದರವಾದ ಹೊಯ್ಸಳ ದೇವಾಲಯಗಳಿಗೆ ಇದು ಹೆಸರುವಾಸಿಯಾಗಿದೆ. ಲೋಹದಂತಹ ಹೊಳಪು ಹೊಂದಿರುವ ಸೂಕ್ಷ್ಮ ಮತ್ತು ಸಂಕೀರ್ಣವಾದ ಕೆತ್ತನೆಗಳು ಪ್ರವಾಸಿಗರನ್ನು ಮಂತ್ರಮುಗ್ಧರಾಗುವಂತೆ ಮಾಡುತ್ತದೆ.


ಕುದುರೆಮುಖ (Kudremukh)

ಕರ್ನಾಟಕದ ಕುದುರೆಮುಖ ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಒಂದು ಪರ್ವತ ಶ್ರೇಣಿ. ಇದು ಮಲಬಾರ್ ಟ್ರೋಗನ್, ಮಲಬಾರ್ ಶಿಳ್ಳೆ ಥ್ರಷ್ ಮತ್ತು ಸಾಮ್ರಾಜ್ಯಶಾಹಿ ಪಾರಿವಾಳದಂತಹ ವಿವಿಧ ಪಕ್ಷಿಗಳಿಗೆ ನೆಲೆಯಾಗಿದೆ. ಉಷ್ಣವಲಯದ ಜೈವಿಕ ಶ್ರೀಮಂತಿಕೆಯಿಂದಾಗಿ ಈ ಸ್ಥಳವನ್ನು ವಿಶ್ವದ 34 ಜೈವಿಕ ಹಾಟ್‌ಸ್ಪಾಟ್‌ಗಳಲ್ಲಿ ಒಂದೆಂದು ಘೋಷಿಸಲಾಗಿದೆ.

ಪರ್ವತದ ಬದಿಯು ಕುದುರೆಯ ಮುಖದ ಆಕಾರವನ್ನು ಹೋಲುವುದರಿಂದ ಇಲ್ಲಿಗೆ ಕುದುರೆಮುಖ ಎಂದು ಹೆಸರಾಗಿದೆ. ಈ ಶಿಖರವು ಸಂಸೆಗೆ ಹತ್ತಿರವಾಗಿರುವುದರಿಂದ ಐತಿಹಾಸಿಕ ಪುಟಗಳಲ್ಲಿ ‘ಸಂಸೆಪರ್ವತ’ ಎಂದೂ ಕರೆಯಲಾಗಿದೆ.


ಖಜ್ಜಿಯಾರ್ (Khajjiar)

ಖಜ್ಜಿಯಾರ್ ಹಿಮಾಚಲ ಪ್ರದೇಶದಲ್ಲಿ ಒಂದು ಗುಪ್ತ ರತ್ನವಾಗಿದೆ. ಇದು ಚಂಬಾ ಕಣಿವೆಯಲ್ಲಿರುವ ದೇವದಾರು-ಹೊದಿಕೆಯ ತಟ್ಟೆ-ಆಕಾರದ ಹಿಮಾಲಯನ್ ಪಟ್ಟಣವಾಗಿದೆ. ಸುಂದರ ಪರಿಸರಗಳು, ದಟ್ಟಣೆಯ ಹಸಿರು ಮತ್ತು ಸಾಹಸಗಳಿಗಾಗಿ ಜನಪ್ರಿಯ ಸ್ಥಳ ಇದಾಗಿದೆ.

ಖಜ್ಜಿಯಾರ್ ಅನ್ನು ಭಾರತದ ಮಿನಿ ಸ್ವಿಟ್ಜರ್ಲೆಂಡ್ ಎಂದು ಕರೆಯಲಾಗುತ್ತದೆ. ದಟ್ಟವಾದ ಪೈನ್ ಕಾಡುಗಳು, ಸೊಂಪಾದ ಹುಲ್ಲುಗಾವಲುಗಳು ಮತ್ತು ಹಿಮದಿಂದ ಆವೃತವಾದ ಪರ್ವತಗಳಿಂದ ಆವೃತವಾಗಿರುವ ಖಜ್ಜಿಯಾರ್ ಪ್ರತಿಯೊಬ್ಬ ಪ್ರವಾಸಿಗನು ಇಷ್ಟಪಡುವಂತಿದೆ.


ತವಾಂಗ್ (Tawang)

ತವಾಂಗ್ ಅರುಣಾಚಲ ಪ್ರದೇಶದ ಪಶ್ಚಿಮ ಭಾಗದಲ್ಲಿದ್ದು ಟಿಬೆಟ್‌ನ ಲಾಸಾದ ಹೊರಗೆ ವಿಶ್ವದ ಅತಿದೊಡ್ಡ ಬೌದ್ಧ ಮಠ ಎಂದು ಕರೆಯಲಾಗುತ್ತದೆ. 10,000 ಅಡಿ ಎತ್ತರದಲ್ಲಿರುವ ತವಾಂಗ್ 400 ವರ್ಷಗಳಷ್ಟು ಹಳೆಯದಾದ ಬೌದ್ಧ ಮಠಕ್ಕೆ ವಿಶ್ವ ಪ್ರಸಿದ್ಧವಾಗಿದೆ. ಐದನೇ ದಲೈ ಲಾಮಾ ಅವರ ಸಮಕಾಲೀನರಾದ ಸನ್ಯಾಸಿ ಮೇರಾ ಲಾಮಾ ಅವರು ಇಲ್ಲಿ ಮಠವನ್ನು ಸ್ಥಾಪಿಸಿದರು. ಆರನೇ ದಲೈ ಲಾಮಾ ಇಲ್ಲಿ ಜನಿಸಿದ್ದರು. ಪಟ್ಟಣದ ಹೃದಯಭಾಗದಿಂದ ಸುಮಾರು 2 ಕಿ.ಮೀ. ದೂರದಲ್ಲಿ ಇದು ನೆಲೆಯಾಗಿದೆ.

Continue Reading

ದೇಶ

Nitin Gadkari: ಚುನಾವಣೆ ಪ್ರಚಾರದ ವೇಳೆ ದಿಢೀರ್ ಕುಸಿದು ಬಿದ್ದ ನಿತಿನ್‌ ಗಡ್ಕರಿ; ತುರ್ತು ಚಿಕಿತ್ಸೆ

Nitin Gadkari: ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಅವರು ಮಹಾರಾಷ್ಟ್ರದ ಯಾವತ್ಮಾಲ್‌-ವಶೀಂ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ಮಾಡುತ್ತಿದ್ದರು. ಇದೇ ವೇಳೆ ಅವರು ವೇದಿಕೆ ಮೇಲೆಯೇ ಕುಸಿದುಬಿದ್ದಿದ್ದಾರೆ.

VISTARANEWS.COM


on

Nitin Gadkari
Koo

ಮುಂಬೈ: ಮಹಾರಾಷ್ಟ್ರದ ಯಾವತ್ಮಾಲ್-ವಶೀಂ (Yavatmal-Washim) ಲೋಕಸಭೆ ಕ್ಷೇತ್ರದಲ್ಲಿ (Lok Sabha Election 2024) ಚುನಾವಣೆ ಪ್ರಚಾರ ಮಾಡುತ್ತಿದ್ದಾಗಲೇ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರು ಕುಸಿದು ಬಿದ್ದಿದ್ದಾರೆ. ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ನಿತಿನ್‌ ಗಡ್ಕರಿ ಅವರು ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸದ್ಯ ಯಾವುದೇ ಅಪಾಯವಿಲ್ಲ ಎಂದು ಮೂಲಗಳಿಂದ ತಿಳಿದುಬಂದಿದೆ.

ನಿತಿನ್‌ ಗಡ್ಕರಿ ಅವರು ಯಾವತ್ಮಾಲ್‌-ವಶೀಂ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಅವರ ಶಿವಸೇನೆ ಅಭ್ಯರ್ಥಿ ರಾಜಶ್ರೀ ಪಾಟೀಲ್ ಅವರ ಪರವಾಗಿ ಪ್ರಚಾರ ಮಾಡಲು ಹೋಗಿದ್ದರು. ಅವರು ವೇದಿಕೆ ಮೇಲೆ ಇದ್ದಾಗಲೇ ಕುಸಿದಿದ್ದಾರೆ. ಅತಿಯಾದ ಬಿಸಿಲು, ಅಬ್ಬರದ ಪ್ರಚಾರದಿಂದಾಗಿ ಸುಸ್ತಾಗಿದ್ದ ಅವರು ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಆದಾಗ್ಯೂ, ಅವರ ಆರೋಗ್ಯದ ಕುರಿತು ಇನ್ನಷ್ಟು ಮಾಹಿತಿ ಬರಬೇಕಿದೆ.

ನಾಗ್ಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ನಿತಿನ್‌ ಗಡ್ಕರಿ ಅವರು ತಮ್ಮ ಕ್ಷೇತ್ರಕ್ಕಾಗಿಯೇ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ್ದಾರೆ. ಮರು ಆಯ್ಕೆಯಾದರೆ ಮುಂದಿನ ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವುದಾಗಿ ಭರವಸೆ ನೀಡಿದ್ದಾರೆ. ಗಡ್ಕರಿ ಅವರ ‘ವಚನನಾಮಾ’ ಅಥವಾ ಚುನಾವಣಾ ಪ್ರಣಾಳಿಕೆಯಲ್ಲಿ ಸ್ಥಳೀಯವಾಗಿ ಹಲವು ಭರವಸೆಗಳನ್ನು ನೀಡಲಾಗಿದೆ. ಗಡ್ಕರಿ ಅವರು ತಮ್ಮ ಮೂರನೇ ಅವಧಿಯಲ್ಲಿ ನಾಗ್ಪುರವನ್ನು ‘ಸುಂದರ ಮತ್ತು ಸ್ವಚ್ಛ’ (ಸುಂದರ ಮತ್ತು ಸ್ವಚ್ಛ) ಮಾಡುವುದಾಗಿ ಭರವಸೆ ಕೊಟ್ಟಿದ್ದಾರೆ. ಅಭಿವೃದ್ಧಿ, ನೈರ್ಮಲ್ಯ ಮತ್ತು ನೈರ್ಮಲ್ಯದ ವಿಷಯದಲ್ಲಿ ದೇಶದ ಅಗ್ರ ಐದು ನಗರಗಳಲ್ಲಿ ಸೇರಿಸಲು ಕೆಲಸ ಮಾಡುವುದಾಗಿ ಒತ್ತಿ ಹೇಳಿದರು.

ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಾಯದಿಂದ ಅನಧಿಕೃತ ಕೊಳೆಗೇರಿಗಳ ನಿವಾಸಿಗಳಿಗೆ ಮಾಲೀಕತ್ವದ ಹಕ್ಕುಗಳನ್ನು ನೀಡಲು ಮತ್ತು ಹೊಸ ಮನೆಗಳನ್ನು ನಿರ್ಮಿಸಲು ಸಹಾಯ ಮಾಡಲು ಸಹಾಯ ಮಾಡುತ್ತೇನೆ ಎಂದು ಮಾಜಿ ಬಿಜೆಪಿ ಅಧ್ಯಕ್ಷರು ಹೇಳಿದರು. ಕೇಂದ್ರ ಸಚಿವರು ಈಗಾಗಲೇ ನಗರದ ಕೊಳೆಗೇರಿ ಪ್ರದೇಶಗಳಲ್ಲಿ ಒಂದರಲ್ಲಿ ಕೆಲಸವನ್ನು ಪ್ರಾರಂಭಿಸಿದ್ದಾರೆ ಮತ್ತು 500 ರಿಂದ 600 ಮನೆಗಳ ಮಾಲೀಕತ್ವದ ಹಕ್ಕುಗಳನ್ನು ನೀಡಿದ್ದಾರೆ ಎಂದು ಹೇಳಿದರು.

ನಗರದ ವಿವಿಧ ಭಾಗಗಳಲ್ಲಿ 100 ಉದ್ಯಾನಗಳು ಬರಲಿವೆ ಮತ್ತು ಇವುಗಳಲ್ಲಿ ಅಸ್ತಿತ್ವದಲ್ಲಿರುವವುಗಳನ್ನು ನವೀಕರಿಸಲಾಗುವುದು ಎಂದು ಗಡ್ಕರಿ ಹೇಳಿದರು. ಬೀದಿ ಬದಿ ವ್ಯಾಪಾರಿಗಳು, ರೈತರು, ಧಾನ್ಯ ಸಗಟು ವ್ಯಾಪಾರಿಗಳು ಮತ್ತು ತೈಲ ವ್ಯಾಪಾರಿಗಳಿಗೆ ನಗರದ ಮೀಸಲಾದ ಸ್ಥಳಗಳಲ್ಲಿ ಆಧುನಿಕ ಮಾರುಕಟ್ಟೆಗಳು ಬರಲಿವೆ/ ಇದು ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Lok Sabha Election 2024: ಅನಾರೋಗ್ಯ ಹಿನ್ನೆಲೆ; ಮಧ್ಯಪ್ರದೇಶ, ಜಾರ್ಖಂಡ್‌ ರ‍್ಯಾಲಿಗೆ ರಾಹುಲ್‌ ಗಾಂಧಿ ಗೈರು

Continue Reading

ಉದ್ಯೋಗ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ದ್ವಿತೀಯ ಪಿಯು ಪಾಸಾದವರು ಅಪ್ಲೈ ಮಾಡಿ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ. ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 7 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಲೋವರ್‌ ಡಿವಿಷನ್‌ ಕ್ಲರ್ಕ್‌ (LDC) / ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಎರಡು ಹಂತದ ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌ / ಟೈಪಿಂಗ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮೊದಲ ಹಂತದ ಪರೀಕ್ಷೆ ಜುಲೈ 1,2,3,4,5,8,9,10,11,12ರಂದು ನಡೆಯಲಿದೆ. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ವೈಯಕ್ತಿಕ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮಗೆ ಬಂದಿರುವ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಾಣಿಸುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಸೂಚಿಸಿರುವ ಅಳತೆಯಲ್ಲಿ ದಾಖಲೆಗಳನ್ನು ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ಬಳಿಕ ಈ ಬಗ್ಗೆ ಇಮೇಲ್‌, ಎಸ್‌ಎಂಎಸ್‌ ಮೂಲಕ ಸಂದೇಶ ಬರಲಿದೆ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

Continue Reading

ದೇಶ

Railway Ticket: ಎಲ್ಲರಿಗೂ ರೈಲ್ವೆ ಟಿಕೆಟ್‌, ವೇಟಿಂಗ್‌ ಮಾತೇ ಇಲ್ಲ; ಕೇಂದ್ರ ಮಹತ್ವದ ಘೋಷಣೆ!

Railway Ticket: ಮುಂದಿನ ಐದು ವರ್ಷಗಳಲ್ಲಿ ರೈಲ್ವೆ ಇಲಾಖೆಯಲ್ಲಿ ಮತ್ತಷ್ಟು ಕ್ರಾಂತಿಕಾರಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂಬುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ. ಅದರಲ್ಲೂ, ರೈಲುಗಳ ಸಂಖ್ಯೆಯನ್ನು ಹೆಚ್ಚಿಸಿ, ಪ್ರತಿಯೊಬ್ಬರಿಗೂ ಕನ್ಫರ್ಮ್ಡ್‌ ಟಿಕೆಟ್‌ ನೀಡಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

VISTARANEWS.COM


on

Railway Ticket
Koo

ನವದೆಹಲಿ: ದೇಶದ ರೈಲ್ವೆ ವ್ಯವಸ್ಥೆಯನ್ನು ಆಧುನೀಕರಣಗೊಳಿಸಲಾಗಿದೆ. ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ವಂದೇ ಭಾರತ್‌ನಂತಹ ಅತ್ಯಾಧುನಿಕ ರೈಲುಗಳನ್ನು ಪರಿಚಯಿಸಲಾಗಿದೆ. ಇದರ ಬೆನ್ನಲ್ಲೇ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ (Ashwini Vaishnaw) ಅವರು ಮಹತ್ವದ ಘೋಷಣೆ ಮಾಡಿದ್ದಾರೆ. “ಮುಂದಿನ 5 ವರ್ಷಗಳಲ್ಲಿ ದೇಶದ ಪ್ರತಿಯೊಬ್ಬ ಪ್ರಯಾಣಿಕರಿಗೂ (Railway Ticket) ಕನ್ಫರ್ಮ್ಡ್‌ ಟಿಕೆಟ್‌ (Confirmed Tickets) ಸಿಗಲಿವೆ. ಇದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗ್ಯಾರಂಟಿಯಾಗಿದೆ” ಎಂಬುದಾಗಿ ತಿಳಿಸಿದ್ದಾರೆ.

“ಕಳೆದ 10 ವರ್ಷಗಳಲ್ಲಿ ಭಾರತದ ರೈಲ್ವೆಯನ್ನು ನರೇಂದ್ರ ಮೋದಿ ಅವರು ರೂಪಾಂತರಗೊಳಿಸಿದ್ದಾರೆ. ಮುಂದಿನ 5 ವರ್ಷಗಳಲ್ಲಿ ದೇಶದ ರೈಲ್ವೆಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವುದು ನರೇಂದ್ರ ಮೋದಿ ಅವರ ಗ್ಯಾರಂಟಿಯಾಗಿದೆ. ದೇಶಾದ್ಯಂತ ರೈಲುಗಳನ್ನು ಹೆಚ್ಚಿಸಿ, ಪ್ರತಿಯೊಬ್ಬ ಪ್ರಯಾಣಿಕರಿಗೆ ಕನ್ಫರ್ಮ್ಡ್‌ ಟಿಕೆಟ್‌ ಸಿಗುವಂತೆ ಮಾಡಲಾಗುತ್ತದೆ. ಇದರಿಂದ ಪ್ರಯಾಣಿಕರು ವೇಟಿಂಗ್‌ ಲಿಸ್ಟ್‌ ನೋಡುತ್ತ ಕಾಯುವುದು ತಪ್ಪುತ್ತದೆ. ಎಲ್ಲರಿಗೂ ಸುಲಭವಾಗಿ ರೈಲು ಟಿಕೆಟ್‌ ಕೊಡುವಂತೆ ಮಾಡುವುದು ನಮ್ಮ ಆದ್ಯತೆಯಾಗಿದೆ” ಎಂದು ಐಎಎನ್‌ಎಸ್‌ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದ ವೇಳೆ ಅಶ್ವಿನಿ ವೈಷ್ಣವ್‌ ಮಾಹಿತಿ ನೀಡಿದ್ದಾರೆ.

“ಮುಂದಿನ ಐದು ವರ್ಷಗಳಲ್ಲಿ ಭಾರತದ ಆರ್ಥಿಕ ವ್ಯವಸ್ಥೆಯು ಮತ್ತಷ್ಟು ಬಲಿಷ್ಠವಾಗಲಿದೆ. ಇದು ದೇಶಾದ್ಯಂತ ರೈಲ್ವೆ ಪ್ರಯಾಣಿಕರಿಗೆ ಹೊಸ ಸೌಲಭ್ಯ, ಮೂಲ ಸೌಕರ್ಯಗಳನ್ನು ಒದಗಿಸಲು ನೆರವಾಗಲಿದೆ. ಅದೇ ರೀತಿ, ಪ್ರಯಾಣಿಕರು ಸುಲಭವಾಗಿ ಹಾಗೂ ಕ್ಷಿಪ್ರವಾಗಿ ರೈಲು ಟಿಕೆಟ್‌ಗಳನ್ನು ಪಡೆಯುವಂತೆ ಮಾಡುವುದು ಮೊದಲ ಆದ್ಯತೆಯಾಗಿದೆ. ಇದಕ್ಕಾಗಿ, ಇನ್ನಷ್ಟು ರೈಲುಗಳ ಓಡಾಟ, ದೇಶಾದ್ಯಂತ ರೈಲು ವಿಸ್ತರಣೆ ಮಾಡುವುದು, ರೈಲ್ವೆ ಲೇನ್‌ಗಳನ್ನು ವಿಸ್ತರಿಸುವುದು ಕೇಂದ್ರ ಸರ್ಕಾರದ ಗುರಿಯಾಗಿದೆ” ಎಂದು ತಿಳಿಸಿದ್ದಾರೆ.

“2014ರಿಂದ 2024ರ ಅವಧಿಯಲ್ಲಿ ದೇಶಾದ್ಯಂತ 31 ಸಾವಿರ ಹೊಸ ಟ್ರ್ಯಾಕ್‌ಗಳನ್ನು ಅಳವಡಿಸಲಾಗಿದೆ. 2004ರಿಂದ 2014ರ ಅವಧಿಯಲ್ಲಿ 5 ಸಾವಿರ ಕಿಲೋಮೀಟರ್‌ ರೈಲು ಮಾರ್ಗವು ವಿದ್ಯುದ್ದೀಕರಣವಾಗಿತ್ತು. ಆದರೆ, ಕಳೆದ 10 ವರ್ಷದಲ್ಲಿ ರೈಲ್ವೆ ಮಾರ್ಗದ ವಿದ್ಯುದ್ದೀಕರಣದ ಪ್ರಮಾಣವು 44 ಸಾವಿರ ಕಿಲೋಮೀಟರ್‌ಗೆ ಏರಿಕೆಯಾಗಿದೆ. ಯುಪಿಎ 1 ಹಾಗೂ 2 ಆಡಳಿತದ ಅವಧಿಯಲ್ಲಿ 32 ಸಾವಿರ ಬೋಗಿಗಳನ್ನು ಉತ್ಪಾದಿಸಲಾಗಿತ್ತು. ಆದರೆ, ಕಳೆದ 10 ವರ್ಷದಲ್ಲಿ 54 ಸಾವಿರ ಬೋಗಿಗಳನ್ನು ತಯಾರಿಸಲಾಗಿದೆ” ಎಂದು ವಿವರಿಸಿದರು.

ಇದನ್ನೂ ಓದಿ: Train Ticket Cancellation: ರೈಲು ಪ್ರಯಾಣಿಕರಿಗೆ ಗುಡ್‌ನ್ಯೂಸ್‌; ಆರ್‌ಎಸಿ ಟಿಕೆಟ್‌ ರದ್ದು ಪಡಿಸಿದರೆ ಇನ್ನು ಮುಂದೆ ಕೇವಲ 60 ರೂ. ಕಡಿತ

Continue Reading
Advertisement
Lok Sabha Election 2024 DK Shivakumar IT raids on Suresh close aides and Congress protests
Lok Sabha Election 202412 mins ago

Lok Sabha Election 2024: ಡಿ.ಕೆ. ಸುರೇಶ್‌ ಆಪ್ತರ ಮನೆ ಮೇಲೆ ಐಟಿ ರೇಡ್;‌ ಕಾಂಗ್ರೆಸ್‌ ಪ್ರತಿಭಟನೆ, ವಾಗ್ವಾದ

RCB vs SRH
ಕ್ರೀಡೆ15 mins ago

RCB vs SRH: 300 ರನ್​ ಹೊಡೆಸಿಕೊಳ್ಳದಿರಲಿ ಆರ್​ಸಿಬಿ; ನಾಳೆ ಸನ್​ರೈಸರ್ಸ್ ವಿರುದ್ಧ ಕಣಕ್ಕೆ

Mens Neck Chains Fashion
ಫ್ಯಾಷನ್16 mins ago

Mens Neck Chains Fashion: ಹುಡುಗರ ಕ್ರೇಜಿ ಫ್ಯಾಷನ್‌ಗೆ ಬಂತು ಫಂಕಿ ನೆಕ್‌ ಚೈನ್ಸ್‌

Summer Tour
ಪ್ರವಾಸ20 mins ago

Summer Tour: ಬೇಸಿಗೆ ಪ್ರವಾಸಕ್ಕೆ ಸೂಕ್ತ ಈ 5 ಅದ್ಭುತ ಗಿರಿಧಾಮಗಳು!

Congress leader Rahul Gandhi election campaign on April 26 in Ballari
ಬಳ್ಳಾರಿ24 mins ago

Lok Sabha Election 2024: ಏ.26ರಂದು ರಾಹುಲ್‌ ಗಾಂಧಿ ಬಳ್ಳಾರಿಗೆ; ಕಾಂಗ್ರೆಸ್‌ ಅಭ್ಯರ್ಥಿ ತುಕಾರಾಂ ಪರ ಪ್ರಚಾರ

on April 26 Namma Metro Service extended till late night
Lok Sabha Election 202437 mins ago

Namma Metro: ಏಪ್ರಿಲ್‌ 26ರಂದು ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌; ತಡರಾತ್ರಿವರೆಗೂ ಸೇವೆ ವಿಸ್ತರಣೆ

Davanagere Lok Sabha constituency BJP candidate Gayatri Siddeshwar election campaign
ದಾವಣಗೆರೆ38 mins ago

Lok Sabha Election 2024: ಹರಿಹರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Lok sabha election 2024
ಕರ್ನಾಟಕ43 mins ago

Lok Sabha Election 2024: ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ ರಾಜ್ಯ ಒಕ್ಕಲಿಗ ಸಂಘ; ಡಿಕೆಶಿಯನ್ನು ಸಿಎಂ ಮಾಡುವುದಾಗಿ ಶಪಥ

Top 10 Puddings
ಆಹಾರ/ಅಡುಗೆ46 mins ago

Top 10 Puddings: ಭಾರತದ ಫಿರ್ನಿ, ಖೀರು, ಸಿಹಿ ಪೊಂಗಲ್‌ಗೆ ವಿಶ್ವದ ಟಾಪ್‌ 10 ತಿಂಡಿ ಪಟ್ಟಿಯಲ್ಲಿ ಸ್ಥಾನ!

Nitin Gadkari
ದೇಶ54 mins ago

Nitin Gadkari: ಚುನಾವಣೆ ಪ್ರಚಾರದ ವೇಳೆ ದಿಢೀರ್ ಕುಸಿದು ಬಿದ್ದ ನಿತಿನ್‌ ಗಡ್ಕರಿ; ತುರ್ತು ಚಿಕಿತ್ಸೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ13 hours ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು2 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ2 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು2 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು2 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ4 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20244 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌