ಹೊಸದಿಲ್ಲಿ: ಕೇಂದ್ರ ಬಜೆಟ್ ಮಂಡನೆ(Union Budget 2024) ಆಗುತ್ತಿದ್ದಂತೆ ಈ ಬಗ್ಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಗದ್ದಲ(Parliament Session) ಶುರುವಾಗಿದೆ. ಇಂದು ರಾಜ್ಯಸಭೆಯಲ್ಲಿ ಬಜೆಟ್ ವಿಚಾರವಾಗಿ ಭಾರೀ ಕೋಲಾಹಲ ಸೃಷ್ಟಿಯಾಗಿದ್ದು, ಈ ಬಜೆಟ್ ಕೇವಲ ಮಿತ್ರ ಪಕ್ಷಗಳ ಓಲೈಕೆಗಾಗಿ ಮಂಡನೆ ಮಾಡಿರುವುದು ಎಂದು ಪ್ರತಿಪಕ್ಷಗಳು ಆರೋಪಿಸಿದರೆ, ಈ ಆರೋಪ ಸಂಪೂರ್ಣ ನಿರಾಧಾರ ಎಂದು ಸರ್ಕಾರ ಹೇಳಿದೆ.
ರಾಜ್ಯಸಭೆಯಲ್ಲಿ ಮಾತನಾಡಿದ ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikarjun Kharge), ಸರ್ಕಾರ ಉಳಿಸಿಕೊಳ್ಳಲು ಮತ್ತು ಕೆಲವೇ ಕೆಲವು ಜನರನ್ನು ಸಂತೋಷವಾಗಿರಿಸಲು ಸರ್ಕಾರ ಬಜೆಟ್ ತಯಾರಿಸಿದೆ. ಕೇವಲ ಎರಡು ರಾಜ್ಯಗಳಿಗೆ ಅನುದಾನ ನೀಡಿ ಉಳಿದ ರಾಜ್ಯಗಳ ಬಗ್ಗೆ ತಾರತಮ್ಯ ತೋರಲಾಗಿದೆ. ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಇದು. ಇದನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.
ಬಿಜೆಪಿ ಹೊರತುಪಡಿಸಿ ಪ್ರತಿಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳನ್ನು ಕೇಂದ್ರ ಸರಕಾರ ನಿರ್ಲಕ್ಷಿಸಿದೆ. ಎಲ್ಲಾ ರಾಜ್ಯಗಳನ್ನು ಸಮತೋಲನದಲ್ಲಿ ನಡೆಸಿಕೊಂಡು ಹೋಗದೇ ಇದ್ದರೆ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಖರ್ಗೆ ಪ್ರಶ್ನಿಸಿದ್ದಾರೆ. ಈ ವೇಳೆ ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿದ್ದು, ಪ್ರತಿಪಕ್ಷಗಳು ಸದನದಿಂದ ವಾಕ್‌ಔಟ್ ಮಾಡಿವೆ.
ಇನ್ನು ಪ್ರತಿಪಕ್ಷಗಳ ಆರೋಪಕ್ಕೆ ಉತ್ತರಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಇದು ಸಂಪೂರ್ಣವಾಗಿ ನಿರಾಧಾರವಾದ ಆರೋಪ. ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳನ್ನು ಸಮವಾಗಿ ಕಾಣುತ್ತದೆ. ಭಾಷಣದಲ್ಲಿ ಏನಾಗುತ್ತದೆ, ನಾವು ಪ್ರತಿ ರಾಜ್ಯಕ್ಕೂ ಅವಕಾಶವನ್ನು ಹೆಸರಿಸುವುದಿಲ್ಲ. ಕಾಂಗ್ರೆಸ್ ಅಧಿಕಾರದಲ್ಲಿದೆ ಎಂಬುದು ಅವರಿಗೆ ಗೊತ್ತಿರಬೇಕು. ಉದಾಹರಣೆಗೆ ಮಹಾರಾಷ್ಟ್ರವನ್ನು ಹೆಸರಿಸಲಾಗಿಲ್ಲ. ಆದರೆ ಸಂಪುಟವು ಮಹತ್ವದ ನಿರ್ಧಾರವನ್ನು ಅಂಗೀಕರಿಸಿದೆ, ಮಹಾರಾಷ್ಟ್ರವನ್ನು ಕಡೆಗಣಿಸಲಾಗಿದೆಯೇ … ₹ 75,000 ಕೋಟಿ ನೀಡಲಾಗಿದೆ ಎಂದರು.
ಭಾಷಣವು ಹೆಸರುಗಳನ್ನು ತೆಗೆದುಕೊಳ್ಳದಿದ್ದರೆ ಅದರರ್ಥ ಯೋಜನೆಗಳು ಮತ್ತು ಅನುದಾನ ಆ ರಾಜ್ಯಗಳಿಗೆ ಹೋಗುವುದಿಲ್ಲ ಎಂದರ್ಥವಲ್ಲ. ವಾಡಿಕೆಯಂತೆ ಯಾವ ರಾಜ್ಯಕ್ಕೆ ಎಷ್ಟು ಅನುದಾನ ನೀಡಬೇಕೋ ಅದು ಗಿಯೇ ಹೋಗುತ್ತದೆ. ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ಇದನ್ನು ಮುಚ್ಚಿಟ್ಟು, ಜನರನ್ನು ದಾರಿ ತಪ್ಪಿಸುವ ಪ್ರಯತ್ನ ನಡೆಸುತ್ತಿವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ವಾಡಿಕೆಯಂತೆ ಹೋಗುತ್ತಾರೆ, ಇಲಾಖೆವಾರು ಹಂಚಿಕೆ, ಐಟಂವಾರು ಅದನ್ನು ಉಲ್ಲೇಖಿಸುತ್ತದೆ. ಇದು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ಉದ್ದೇಶಪೂರ್ವಕ ಪ್ರಯತ್ನವಾಗಿದ್ದು, ಏನನ್ನೂ ನೀಡಿಲ್ಲ ಎಂಬ ಭಾವನೆ ಮೂಡಿಸಲು,
ಈ ಬಜೆಟ್ ಆಂಧ್ರಪ್ರದೇಶ ಹಾಗೂ ಬಿಹಾರ ಹೊರತುಪಡಿಸಿ ಬೇರೆ ರಾಜ್ಯಗಳಿಗೆ ಬಜೆಟ್‌ನಿಂದ ಯಾವುದೇ ಅನುಕೂಲ ಆಗಿಲ್ಲ ಎಂದು ಆರೋಪಿಸಿರುವ ವಿರೋಧ ಪಕ್ಷದ ಇಂಡಿಯಾ(INDIA) ಒಕ್ಕೂಟ ಇಂದು ಸಂಸತ್ತಿನ ಎದುರು ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಕಾಂಗ್ರೆಸ್, ಟಿಎಂಸಿ, ಸಮಾಜವಾದಿ ಪಕ್ಷ, ಡಿಎಂಕೆ ಮತ್ತು ಎಡಪಕ್ಷಗಳ ನಾಯಕರು ಸಂಸತ್‌ನ ಮಕರ ದ್ವಾರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಇದನ್ನೂ ಓದಿ: Union Budget 2024: “ಮಿತ್ರಪಕ್ಷಗಳ ಓಲೈಕೆಗಾಗಿ ಬಜೆಟ್”- ಕೇಂದ್ರದ ವಿರುದ್ಧ ಪ್ರತಿಪಕ್ಷಗಳು ಕಿಡಿ, ಭಾರೀ ಪ್ರತಿಭಟನೆ