Site icon Vistara News

Parliament Session: ಅಗ್ನಿಪಥ್‌ ಯೋಜನೆ ಬಗ್ಗೆ ರಾಹುಲ್‌ ನಿಗಿ ನಿಗಿ ಕೆಂಡ; ರಾಜನಾಥ್‌ ಸಿಂಗ್‌ ಸಖತ್‌ ಟಾಂಗ್‌

Parliament session

ನವದೆಹಲಿ: ಕಾಂಗ್ರೆಸ್‌ ನಾಯಕ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi v/s Rajnath Singh) ಅವರು ಲೋಕಸಭೆ(Parliament Session)ಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅದರಲ್ಲೂ, ಮಹಾಭಾರತದ ಚಕ್ರವ್ಯೂಹವನ್ನು ಉಲ್ಲೇಖಿಸಿದ ರಾಹುಲ್‌ ಗಾಂಧಿ ಅವರು ನರೇಂದ್ರ ಮೋದಿ (Narendra Modi) ಹಾಗೂ ಬಿಜೆಪಿ ವಿರುದ್ಧ ವಾಗ್ಬಾಣ ಪ್ರಯೋಗಿಸಿದ್ದಾರೆ. ಇದೇ ವೇಳೆ ಪ್ರತಿಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿರುವ ಅಗ್ನಿಪಥ್ ಯೋಜನೆ ಇಂದು ಲೋಕಸಭೆಯಲ್ಲಿ ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಕೇಂದ್ರ ಸಚಿವ ರಾಜನಾಥ್ ಸಿಂಗ್ ನಡುವೆ ವಾದ ಪ್ರತಿವಾದಕ್ಕೆ ವೇದಿಕೆ ಕಲ್ಪಿಸಿತ್ತು.

ಸದನದಲ್ಲಿ ಮಾತನಾಡಿದ ರಾಹುಲ್‌ ಗಾಂಧಿ, ಸೇನೆಯ ಸೈನಿಕರನ್ನು ಅಗ್ನಿವೀರ್ ಹೆಸರಿನ ಚಕ್ರವ್ಯೂಹದಲ್ಲಿ ಸಿಲುಕಿಸಲಾಯ್ತು. ಈ ಬಜೆಟ್‌ನಲ್ಲಿ ಅಗ್ನಿವೀರರ ಪಿಂಚಣಿಗಾಗಿ ಒಂದು ರೂಪಾಯಿಯನ್ನು ತೆಗೆದಿರಿಸಿಲ್ಲ. ನಿಮ್ಮನ್ನು ದೇಶಭಕ್ತರೆಂದು ಕರೆದುಕೊಳ್ಳುವ ನೀವು ಅಗ್ನಿವೀರರ ಪಿಂಚಣಿಗಾಗಿ ಅನುದಾನ ಘೋಷಣೆ ಮಾಡಿಲ್ಲ. ನಿಮ್ಮ ಚಕ್ರವ್ಯೂಹದಿಂದ ಹೊರಬರಲು ರೈತರು ಎಂಎಸ್‌ಪಿ ಲೀಗಲ್ ಗ್ಯಾರಂಟಿಯನ್ನು ಕೇಳಿದ್ದರು. ಆದ್ರೆ ನೀವು ರೈತರ ಜೊತೆ ಮಾತನಾಡಲು ಸಿದ್ಧವಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಇದಕ್ಕೆ ಟಾಂಗ್‌ ಕೊಡಲು ಮುಂದಾದ ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅಗ್ನಿಪಥ್ ಯೋಜನೆಯ ವಿಚಾರದಲ್ಲಿ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು ಅಲ್ಲದೇ ಸದನದಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡುವುದಾಗಿ ತಿಳಿಸಿದರು. ರಾಷ್ಟ್ರೀಯ ಭದ್ರತೆಯ ವಿಷಯವು ಸೂಕ್ಷ್ಮವಾಗಿದೆ. ಅಗ್ನಿವೀರ್ ಸೈನಿಕರ ಬಗ್ಗೆ ದೇಶವಾಸಿಗಳನ್ನು ದಾರಿ ತಪ್ಪಿಸುವ ಪ್ರಯತ್ನಗಳು ನಡೆಯುತ್ತಿವೆ. ನೀವು ಕೇಳಿದಾಗ ಸದನದ ಮುಂದೆ ಅಗ್ನಿವೀರ್ ಸೈನಿಕರ ವಿಷಯದ ಬಗ್ಗೆ ನನ್ನ ಹೇಳಿಕೆ ನೀಡಲು ನಾನು ಸಿದ್ಧ” ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಅಗ್ನಿಪಥ್ ಯೋಜನೆಯು ದೇಶದ ಸೈನಿಕರು ಮತ್ತು ಅವರ ಕುಟುಂಬಗಳ ಆರ್ಥಿಕ ಭದ್ರತೆ ಮತ್ತು ಗೌರವವನ್ನು ಕಸಿದುಕೊಂಡಿದೆ ಎಂದು ಪ್ರತಿಪಾದಿಸಿದ್ದರು. ಈ ಯೋಜನೆಯು ಸರ್ಕಾರದ ಯುವಕರ ವಿರೋಧಿ ಮತ್ತು ರೈತ ವಿರೋಧಿ” ಧೋರಣೆಯನ್ನು ಬಹಿರಂಗಪಡಿಸುತ್ತದೆ ಎಂದು ಅವರು ಆರೋಪಿಸಿದ್ದರು. ತಮ್ಮ ಭಾಷಣದಲ್ಲಿ ರಾಹುಲ್ ಗಾಂಧಿ ಅಗ್ನಿವೀರ್ ಯೋಜನೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಷ್ಟೇ ಅಲ್ಲದೆ, “ದೇಶದಲ್ಲಿ ಭಯದ ವಾತಾವರಣವಿದೆ. ಬಿಜೆಪಿ ಸಂಸದರು ಸಹ ಭಯಭೀತರಾಗಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿಯ ಚಿಹ್ನೆಯನ್ನು ಉಲ್ಲೇಖಿಸಿ ದೇಶ ಈಗ ಕಮಲದ ಚಕ್ರವ್ಯೂಹದಲ್ಲಿ ಸಿಕ್ಕಿಹಾಕಿಕೊಂಡಿದೆ ಎಂದು ಟೀಕಿಸಿದ್ದಾರೆ. 21ನೇ ಶತಮಾನದಲ್ಲಿ ಹೊಸ ಚಕ್ರವ್ಯೂಹವನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Rahul Gandhi: ರಾಹುಲ್‌ ಮಾತಿಗೆ ಹಣೆ ಚಚ್ಚಿಕೊಂಡು, ಮುಖ ಮುಚ್ಚಿಕೊಂಡ ಸಚಿವೆ ನಿರ್ಮಲಾ: ಭಾರೀ ವೈರಲಾಗ್ತಿದೆ ಈ ವಿಡಿಯೋ

Exit mobile version