Site icon Vistara News

Parliament Sessions: ಅಧಿವೇಶನದ ವೇಳೆ ತಲೆಸುತ್ತಿ ಬಿದ್ದ ಸಂಸದೆ; ವಿಡಿಯೋ ಇದೆ

Parliament Sessions

ಹೊಸದಿಲ್ಲಿ: ಸಂಸತ್‌ ಅಧಿವೇಶನ(Parliament Sessions)ದಲ್ಲಿ ಇಂದು ನೀಟ್‌ ಪರೀಕ್ಷೆ ಅಕ್ರಮ(NEET Exam) ವಿಚಾರ ಕೋಲಾಹಲ ಎಬ್ಬಿಸಿತ್ತು. ರಾಜ್ಯಸಭೆಯಲ್ಲಿ ಈ ವಿಚಾರವನ್ನೇ ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯೆ ಫೂಲೋ ದೇವಿ ನೇತಾಂ ಪ್ರಜ್ಞೆ ತಪ್ಪಿ ಬಿದ್ದ ಘಟನೆ ನಡೆಯಿತು. ತಕ್ಷಣ ಅವರನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು.

ನೀಟ್‌ ಪರೀಕ್ಷೆ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಪಕ್ಷ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ಸುಸ್ತಾಗಿ ತಲೆ ಸುತ್ತಿ ಬಿದ್ದ ಫೂಲೋ ದೇವಿಯವರನ್ನು ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಯಿತು. ಇನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ಭೇಟಿ ಕೊಟ್ಟು ಅವರ ಆರೋಗ್ಯ ವಿಚಾರಿಸಿದ್ದಾರೆ. ಫೂಲೋ ದೇವಿಯ ಸಿಟಿ ಸ್ಕ್ಯಾನ್‌ ಮಾಡಿಸಲು ವೈದ್ಯರು ಸೂಚಿಸಿದ್ದಾರೆ. ಶೀಘ್ರವೇ ಅವರು ಚೇತರಿಸಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ಚರ್ಚೆಗೆ ಪ್ರತಿಪಕ್ಷಗಳು ಒತ್ತಾಯಿಸಿದ್ದರಿಂದ ಲೋಕಸಭೆಯ ಕಲಾಪವನ್ನು ಶುಕ್ರವಾರ ದಿನದ ಮಟ್ಟಿಗೆ ಮುಂದೂಡಲಾಯಿತು. ಮಧ್ಯಾಹ್ನ 12 ಗಂಟೆಗೆ ಸದನ ಮತ್ತೆ ಸೇರಿದಾಗ, ವಿರೋಧ ಪಕ್ಷದ ಸದಸ್ಯರು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET) ಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆಗೆ ತಮ್ಮ ಬೇಡಿಕೆಯನ್ನು ಮುಂದುವರೆಸಿದರು. ಸ್ಪೀಕರ್ ಓಂ ಬಿರ್ಲಾ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ಸಂದರ್ಭದಲ್ಲಿ ಈ ವಿಷಯವನ್ನು ಚರ್ಚಿಸಬಹುದು ಎಂದು ವಿರೋಧ ಪಕ್ಷದ ಸದಸ್ಯರಿಗೆ ತಿಳಿಸಿದರು.

ಇದನ್ನೂ ಓದಿ: Vikram Misri: ವಿದೇಶಾಂಗ ಕಾರ್ಯದರ್ಶಿಯಾಗಿ ವಿಕ್ರಮ್‌ ಮಿಸ್ರಿ ಆಯ್ಕೆ; ಚೀನಾ ವಿಷಯದಲ್ಲಿ ಇವರು ಎಕ್ಸ್‌ಪರ್ಟ್!

Exit mobile version