Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ - Vistara News

ದೇಶ

Parliament Sessions: ಸಂಸತ್‌ ಅಧಿವೇಶನದಲ್ಲಿ ಇಂದು ರಾಷ್ಟ್ರಪತಿ ಭಾಷಣ; Live ನೋಡಿ

Parliament Sessions: 18ನೇ ಲೋಕಸಭೆಯ ಮೊದಲ ಅಧಿವೇಶನದ ನಾಲ್ಕನೇ ದಿನವಾದ ಇಂದು ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.

VISTARANEWS.COM


on

Parliament Sessions
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ (Parliament Sessions)ದ ನಾಲ್ಕನೇ ದಿನವಾದ ಇಂದು (ಜೂನ್‌ 27) ಲೋಕಸಭೆ ಮತ್ತು ರಾಜ್ಯಸಭೆಗಳ ಜಂಟಿ ಸದನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಭಾಷಣ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಅಧಿಕಾರಕ್ಕೆ ಬಂದ ಬಳಿಕ ನಡೆಯುತ್ತಿರುವ ಈ ಮೊದಲ ಅಧಿವೇಶನ ಜೂನ್‌ 24ರಂದು ಆರಂಭವಾಗಿದ್ದು, ಜು. 3ರವರೆಗೆ ನಡೆಯಲಿದೆ. ರಾಜ್ಯಸಭೆಯ ಅಧಿವೇಶನ ಜೂ. 27ರಿಂದ ಜು. 3ರವರೆಗೆ ನಡೆಯಲಿದೆ.

ಭಾರತೀಯ ಸಂವಿಧಾನದ 87ನೇ ವಿಧಿಯ ಪ್ರಕಾರ ರಾಷ್ಟ್ರಪತಿ ಪ್ರತಿ ಲೋಕಸಭಾ ಚುನಾವಣೆಯ ನಂತರದ ಮೊದಲ ಅಧಿವೇಶನದ ಆರಂಭದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡುತ್ತಾರೆ. ದ್ರೌಪದಿ ಮುರ್ಮು ಅವರು ತಮ್ಮ ಭಾಷಣದ ಮೂಲಕ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳನ್ನು ವಿವರಿಸಲಿದ್ದಾರೆ. ಅಧಿವೇಶನದ ಮೊದಲ ಎರಡು ದಿನ ಸಂಸದರು ಪ್ರಮಾಣ ವಚನ ಸ್ವೀಕರಿಸಿದರೆ ಮೂರನೇ ದಿನ ಸ್ಪೀಕರ್‌ ಆಯ್ಕೆ ನಡೆಯಿತು.

ಲೋಕಸಭಾ ಸ್ಪೀಕರ್‌ ಆಗಿ ಓಂ ಬಿರ್ಲಾ ನೇಮಕ

ಇನ್ನು ಬುಧವಾರ ನಡೆದ ಲೋಕಸಭಾ ಸ್ಪೀಕರ್‌ ಆಯ್ಕೆಯ ಚುನುವಾಣೆಯಲ್ಲಿ ಬಿಜೆಪಿಯ ಓಂ ಬಿರ್ಲಾ ನೇಮಕಗೊಂಡಿದ್ದಾರೆ. ಸಾಮಾನ್ಯವಾಗಿ ಅವಿರೋಧವಾಗಿ ಸ್ಪೀಕರ್‌ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಈ ಬಾರಿ ಆಡಳಿತ ರೂಢ ಎನ್‌ಡಿಎ ಮತ್ತು ಪ್ರತಿಪಕ್ಷಗಳ ಇಂಡಿ ಬಣದ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಹಲವು ದಶಕಗಳ ಬಳಿಕ ಚುನಾವಣೆ ನಡೆಸಲಾಯಿತು. ಇಂಡಿ ಬಣದಿಂದ ಕಾಂಗ್ರೆಸ್‌ ಸಂಸದ ಕೊಂಡಿಕುನಾಲ್ ಸುರೇಶ್ (Kondikunal Suresh) ಕಣಕ್ಕಿಳಿದಿದ್ದರು. ಭಾರೀ ಕುತೂಹಲ ಮೂಡಿಸಿದ್ದ ಈ ಐತಿಹಾಸಿಕ ಚುನಾವಣೆಯಲ್ಲಿ ಇದೀಗ ಓಂ ಬಿರ್ಲಾ ಗೆಲುವಿನ ನಗೆ ಬೀರಿದರು.

ಆರಂಭದಲ್ಲಿ ಎನ್‌ಡಿಎ ಪ್ರತಿಪಕ್ಷಗಳ ಮನವೊಲಿಸಲು ಯತ್ನಿಸಿತ್ತು. ಓಂ ಬಿರ್ಲಾ ಅವರನ್ನು ಬೆಂಬಲಿಸಲು ಒಪ್ಪಿಗೆ ಸೂಚಿಸಿದ್ದ ಇಂಡಿ ಬಣ ಡೆಪ್ಯುಟಿ ಸ್ಪೀಕರ್ ತಮಗೆ ಸಿಗಬೇಕೆಂಬ ಷರತ್ತು ವಿಧಿಸಿತ್ತು. ಆದರೆ ಇದಕ್ಕೆ ಎನ್‌ಡಿಎ ಒಪ್ಪಿಗೆ ಸೂಚಿಸದ ಹಿನ್ನೆಲೆಯಲ್ಲಿ ಮಾತುಕತೆ ಮುರಿದು ಬಿದ್ದು ಕೊನೆಯ ಕ್ಷಣದಲ್ಲಿ ಕೊಂಡಿಕುನಾಲ್ ಸುರೇಶ್ ಮಂಗಳವಾರ ನಾಮಪತ್ರ ಸಲ್ಲಿಸಿದ್ದರು. ಹಂಗಾಮಿ ಸ್ಪೀಕರ್‌ ಭಾರ್ತೃಹರಿ ಮಹತಾಬ್‌ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು.

ಇನ್ನು ಎರಡನೇ ಬಾರಿ ಲೋಕಸಭೆ ಸ್ಪೀಕರ್‌ ಆಗಿ ಆಯ್ಕೆ ಆಗಿರುವ ಓಂ ಬಿರ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಪಕ್ಷಾತೀತ ಅಭಿನಂದನೆ ಸಲ್ಲಿಸಿದರು.

ಮೋದಿ ಮಾತನಾಡಿ, ʼʼಸದನದ ಪರವಾಗಿ ನಾನು ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆ. ಅಮೃತ ಕಾಲದ ಸಮಯದಲ್ಲಿ ನೀವು ಎರಡನೇ ಬಾರಿಗೆ ಈ ಜವಾಬ್ದಾರಿಯುತ ಹುದ್ದೆ ಅಲಂಕರಿಸಿರುವುದು ಬಹಳ ಸಂತಸ ತಂದಿದೆ. ನಿಮ್ಮ ಅನುಭವದೊಂದಿಗೆ, ಮುಂದಿನ 5 ವರ್ಷಗಳವರೆಗೆ ನೀವು ನಮಗೆ ಮಾರ್ಗದರ್ಶನ ನೀಡುತ್ತೀರಿ ಎಂದು ನಾವು ಭಾವಿಸುತ್ತೇವೆ. ನಿಮ್ಮ ಮುಖದ ಮೇಲಿನ ಸಿಹಿಯಾದ ನಗು ಇಡೀ ಸದನವನ್ನು ಸಂತೋಷವನ್ನಾಗಿರಿಸುತ್ತದೆʼʼ ಎಂದು ಹೇಳಿದರು.

ಇನ್ನು ರಾಹುಲ್‌ ಗಾಂಧಿ ಮಾತನಾಡಿ, “ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡಿ ಭಾರತದ ಜನರನ್ನು ಪ್ರತಿನಿಧಿಸಲು ಅವಕಾಶ ನೀಡುವ ಮೂಲಕ, ನೀವು ಭಾರತದ ಸಂವಿಧಾನವನ್ನು ರಕ್ಷಿಸುವ ನಿಮ್ಮ ಕರ್ತವ್ಯವನ್ನು ನೀವು ಸರಿಯಾಗಿ ನಿರ್ವಹಿಸುತ್ತೀರಿ ಎಂಬ ಬಗ್ಗೆ ನಮಗೆ ವಿಶ್ವಾಸವಿದೆ. ನಾನು ಮತ್ತೊಮ್ಮೆ ನಿಮ್ಮನ್ನು ಅಭಿನಂದಿಸಲು ಬಯಸುತ್ತೇನೆʼʼ ಎಂದು ನುಡಿದರು. ಈ ಬಾರಿ ಪ್ರತಿಪಕ್ಷ ಪ್ರಬಲವಾಗಿರುವುದರಿಂದ ಅಧಿವೇಶನ ಯಾವ ರೋತಿ ನಡೆಯಲಿದೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: Asaduddin Owais: ಪ್ರಮಾಣ ವಚನ ಸ್ವೀಕರಿಸಿ ‘ಜೈ ಪ್ಯಾಲೆಸ್ತೀನ್​’ ಘೋಷಣೆ ಕೂಗಿದ ಓವೈಸಿ ಸದಸ್ಯತ್ವ ರದ್ದು? ಕಾನೂನು ಏನು ಹೇಳುತ್ತದೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading
Advertisement
Latest15 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest20 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest20 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest2 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest2 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ2 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest2 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest2 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest2 days ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest3 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌