Site icon Vistara News

Parliament Sessions: ಹಿಂದೂ ಹಿಂಸಾವಾದಿ ಹೇಳಿಕೆ; ಸಂಸತ್‌ನಲ್ಲಿ ರಾಹುಲ್‌-ಮೋದಿ ಜಟಾಪಟಿ

Parliament Sessions

Parliament Sessions

ಹೊಸದಿಲ್ಲಿ: ದಿನದ 24 ಗಂಟೆ ಹಿಂದೂಗಳೆಂದು ಹೇಳಿಕೊಂಡು ತಿರುಗುವವರು ಹಿಂಸಾಚಾರದಲ್ಲಿ ತೊಡಗಿದ್ದಾರೆ ಎಂದು ಸಂಸತ್‌ ಅಧಿವೇಶನ(Parliament Sessions)ದಲ್ಲಿ ವಿಪಕ್ಷ ನಾಯಕ ರಾಹುಲ್‌ ಗಾಂಧಿ(Rahul Gandhi) ಹೇಳಿಕೆ ನೀಡಿದ್ದು, ಈ ವಿಚಾರ ಭಾರೀ ಕೋಲಾಹಲವನ್ನೇ ಸೃಷ್ಟಿಸಿತ್ತು. ರಾಹುಲ್‌ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಸೇರಿದಂತೆ ಆಡಳಿತ ಪಕ್ಷ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ದು, ಮಾತ್ರವಲ್ಲದೇ ತಕ್ಷಣ ರಾಹುಲ್‌ ಕ್ಷಮೆಯಾಚಿಸಬೇಕೆಂದು ಪಟ್ಟು ಹಿಡಿದ ಘಟನೆಗೆ ಇಂದು ಲೋಕಸಭೆ ಸಾಕ್ಷಿಯಾಯ್ತು.

ರಾಹುಲ್‌ ಹೇಳಿದ್ದೇನು?

ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ವಿರುದ್ಧ ವಾಗ್ದಾಳಿ ಆರಂಭಿಸಿದ ರಾಹುಲ್‌, ಹಿಂದೂ ಧರ್ಮ ಹಾಗೂ ನಮ್ಮ ಅನೇಕ ಹಿಂದೂ ಮಹಾಪುರುಷರು ಅಹಿಂಸೆಯನ್ನು ಪ್ರತಿಪಾದಿಸುತ್ತಾರೆ. ಜೀಸಸ್‌ ಕ್ರೈಸ್ಟ್‌ ಕೂಡ ಅಹಿಂಸೆಯನ್ನೇ ಪ್ರತಿಪಾದಿಸುತ್ತಾನೆ. ಸ್ವತಃ ಕೈಯಲ್ಲಿ ತ್ರಿಶೂಲ ಹಿಡಿದಿರುವ ಮಹಾಶಿವನೂ ಅಹಿಂಸೆಯನ್ನೇ ಹೇಳುತ್ತಾನೆ. ಆದರೆ ದಿನದ 24 ಗಂಟೆ ಹಿಂದೂಗಳೆಂದು ಹೇಳುತ್ತಾ ತಿರುಗಾಡುವವರು ಹಿಂಸೆ, ಶತ್ರುತ್ವ, ಅಸತ್ಯವನ್ನೇ ಹೇಳುತ್ತಿದ್ದಾರೆ. ನೀವು ಹಿಂದೂಗಳೇ ಅಲ್ಲ ಎಂದು ಕಿಡಿ ಕಾರಿದರು.

ಪ್ರಧಾನಿ ಮೋದಿ ಆಕ್ಷೇಪ

ಇನ್ನು ರಾಹುಲ್‌ ಮಾತು ಪುರ್ಣಗೊಳ್ಳುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಆಡಳಿತ ಪಕ್ಷ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎಲ್ಲಾ ಹಿಂದೂಗಳನ್ನು ಹಿಂಸಾವಾದಿಗಳು ಹೇಳುತ್ತಿರುವುದು ತಪ್ಪು. ಹಿಂದೂಗ ಸಮುದಾಯವನ್ನು ಹಿಂಸಾವಾದಿಗಳೆಂದು ಕರೆಯುತ್ತಿರುವುದು ಗಂಭೀರವಾದ ಸಂಗತಿ ಎಂದಿದ್ದಾರೆ. ಇದಕ್ಕೆ ವಿರೋದ ವ್ಯಕ್ತಪಡಿಸಿದ ರಾಹುಲ್‌ ಕೇವಲ ಬಿಜೆಪಿ, ಆರ್‌ಎಸ್‌ಎಸ್‌ ನವರನ್ನು “ನಾನು ಉಲ್ಲೇಖಿಸಿ ಹೇಳಿರುವುದೇ ಹೊರತು ಪೂರ್ತಿ ಹಿಂದೂ ಸಮಾಜವನ್ನಲ್ಲ. ಪ್ರಧಾನಿ ಹೇಳಿಕೆಯನ್ನು ತಪ್ಪಾಗಿ ಅರ್ಥೈಸುತ್ತಿದ್ದಾರೆʼʼ ಎಂದು ಹೇಳಿದರು.

ಇನ್ನು ರಾಹುಲ್‌ ಹೇಳಿಕೆಗೆ ಬಿಜೆಪಿ ನಾಯಕರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ತಕ್ಷಣ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Exit mobile version