Site icon Vistara News

Rahul Gandhi: ರಾಹುಲ್‌ ಗಾಂಧಿಗೆ ಮತ್ತೆ ಸಂಕಷ್ಟ! ಸಂಸತ್ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

8 votes cast in Chandigarh mayoral election were Valid Says Supreme Court

ನವದೆಹಲಿ: ಅನರ್ಹಗೊಂಡಿದ್ದ ರಾಹುಲ್ ಗಾಂಧಿ (Congress Leader Rahul Gandhi) ಅವರಿಗೆ ಲೋಕಸಭೆ ಕಾರ್ಯದರ್ಶಿಗಳು (Lok Sabha secretariat) ಮತ್ತೆ ಸಂಸತ್ ಸದಸ್ಯತ್ವವನ್ನು (Member of Parliament) ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ(Supreme Court). ಇದರೊಂದಿಗೆ ಮತ್ತೊಂದು ಸಂಕಟ ರಾಹುಲ್ ಗಾಂಧಿ ಅವರಿಗೆ ಎದುರಾಗಿದೆ.

ಒಮ್ಮೆ ಜನಪ್ರತಿನಿಧಿಗಳು ಕಾನೂನಿನ ಕಾರ್ಯಾಚರಣೆಯಿಂದ ತಮ್ಮ ಸದಸ್ಯತ್ವವನ್ನು ಕಳೆದುಕೊಂಡರೆ, ಅವರು ಆರೋಪಗಳಿಂದ ಮುಕ್ತರಾಗುವವರೆಗೆ ಅವರನ್ನು ಸಂಸದರಾಗಿ ಮರುಸ್ಥಾಪಿಸಲು ಸಾಧ್ಯವಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ. “ಶಿಕ್ಷೆಗೊಳಗಾದ ಶಾಸಕರ ಸದಸ್ಯತ್ವವನ್ನು ಕಳೆದುಕೊಳ್ಳುವ ಕುರಿತು ಅಧಿಸೂಚನೆಯನ್ನು ಸಂಬಂಧಪಟ್ಟ ಸದನದ ಅಧ್ಯಕ್ಷರು/ಸ್ಪೀಕರ್ ಅವರು ಸೂಚಿಸುತ್ತಾರೆಯೇ ಅಥವಾ ಇದು ಭಾರತದ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ್ದಾಗಿಯೇ ಎಂದು ಅರ್ಜಿಯಲ್ಲಿ ಕೇಳಲಾಗಿದೆ.

ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ನ್ಯಾಯಾಲಯವು ರಾಹುಲ್ ಗಾಂಧಿಗೆ ಶಿಕ್ಷೆ ನೀಡಿತ್ತು. ಹಾಗಾಗಿ ಅವರು ಸಂಸದ ಸ್ಥಾನವನ್ನು ಕಳೆದುಕೊಂಡಿದ್ದರು. ಆದರೆ, ರಾಹುಲ್ ಗಾಂಧಿ ಅವರಿಗೆ ನೀಡಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದ್ದ ಹಿನ್ನೆಲೆಯಲ್ಲಿ ಅವರಿಗೆ ಮತ್ತೆ ಸಂಸದ ಸ್ಥಾನವನ್ನು ನೀಡಲಾಗಿತ್ತು.

ಏನಿದು ಪ್ರಕರಣ?

2019ರ ಚುನಾವಣೆ ಪ್ರಚಾರದ ವೇಳೆ ಕರ್ನಾಟಕದ ಕೋಲಾರದಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ ಅವರು ಮೋದಿ ಉಪನಾಮ ಹೊಂದಿದವರೆಲ್ಲರೂ ಕಳ್ಳರು ಏಕೆ ಆಗಿರುತ್ತಾರೆ ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಯ ವಿರುದ್ಧ ಸೂರತ್‌ ಕೋರ್ಟ್‌ನಲ್ಲಿ ಬಿಜೆಪಿಯ ಶಾಸಕ ಪೂರ್ಣೇಶ್ ಮೋದಿ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಈ ಸುದ್ದಿಯನ್ನೂ ಓದಿ: Rahul Gandhi: ಮೋದಿ ಉಪನಾಮ ಹೇಳಿಕೆ ನೀಡಿದ್ದ ಕೋಲಾರದಿಂದಲೇ ರಾಹುಲ್‌ ಗಾಂಧಿ ಪ್ರಚಾರ ಆರಂಭ

ಈ ಮಾನನಷ್ಟ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಕೆಳ ಹಂತದ ನ್ಯಾಯಾಲಯವು ರಾಹುಲ್ ಗಾಂಧಿ ತಪ್ಪಿತಸ್ಥ ಎಂದು ತೀರ್ಪು ನೀಡಿ, 2 ವರ್ಷ ಗರಿಷ್ಠ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಸೂರತ್ ಜಿಲ್ಲಾ ನ್ಯಾಯಾಲಯ ಮತ್ತು ಗುಜರಾತ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ, ಈ ಎರಡೂ ನ್ಯಾಯಾಲಯಗಳು ಶಿಕ್ಷೆಗೆ ತಡೆ ನೀಡಿರಲಿಲ್ಲ. ಅಂತಿಮವಾಗಿ ಸುಪ್ರೀಂ ಕೋರ್ಟ್‌ ರಾಹುಲ್ ಗಾಂಧಿ ವಿರುದ್ಧದ ಶಿಕ್ಷೆಗೆ ತಡೆ ನೀಡಿತ್ತು. ಬಳಿಕ ಅವರು ಮತ್ತೆ ಸಂಸದರಾಗಿ ಲೋಕಭೆಸಭೆಗೆ ಆಗಮಿಸಿದ್ದರು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version