ಹೈದರಾಬಾದ್: ಆಂಧ್ರಪ್ರದೇಶದಲ್ಲಿ ಫಾರ್ಮಾ ಕಂಪನಿಯಲ್ಲಿ (Pharma Company Blast) ಭಾರೀ ಸ್ಫೋಟವೊಂದು ಸಂಭವಿಸಿದ್ದು, 18 ಕ್ಕೂ ಅಧಿಕ ಮಂದಿ ಗಂಭಿರವಾಗಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಅನಕಪಲ್ಲೆ ಜಿಲ್ಲೆಯಲ್ಲಿ ಈ ಸಂಭವಿಸಿದ್ದು, ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಚ್ಚುತ್ತಪುರಂ ವಿಶೇಷ ಆರ್ಥಿಕ ವಲಯ(Achutapuram Special Economic Zone)ದಲ್ಲಿರುವ ಕಂಪನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ವಿಶೇಷ ಆರ್ಥಿಕ ವಲಯದಲ್ಲಿರುವ ಎಸ್ಸೆಂಟಿಯಾ ಕಂಪನಿ, ಫಾರ್ಮಾ ಕಂಪನಿಯ ಘಟಕದಲ್ಲಿ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಎನ್‌ಟಿಆರ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಈ ಸ್ಫೋಟಕ್ಕೆ ಸೂಕ್ತ ಕಾರಣ ಏನೆಂಬುದು ತಿಳಿದಿಲ್ಲ. ಸಾವು ನೋವಿನ ಬಗ್ಗೆ ವರದಿ ಬಂದಿಲ್ಲ. ಊಟದ ವೇಳೆ ಈ ಅವಘಡ ಸಂಭವಿಸಿದ್ದು, ಭಾರೀ ಅನಾಹುತ ತಪ್ಪಿದೆ. ಸ್ಥಳದಿಂದ ಬಂದ ದೃಶ್ಯಗಳು ರಿಯಾಕ್ಟರ್‌ನಿಂದ ಹೊಗೆ ಹೊರ ಬರುತ್ತಿರುವುದು ಮತ್ತು ಸುತ್ತಮುತ್ತಲಿನ ಹಳ್ಳಿಗಳನ್ನು ಆವರಿಸುವುದು ವಿಡಿಯೋದಲ್ಲಿ ಕಾಣಬಹುದಾಗಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ದೌಡಾಯಿಸಿ ಪರಿಸ್ಥಿತಿ ಅವಲೋಕಿಸಿದ್ದಾರೆ. ಇನ್ನು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
BREAKING * 18 Injured In Explosion At Andhra Pradesh Pharma Company
— Shakeel Yasar Ullah (@yasarullah) August 21, 2024
The explosion took place at the Achutapuram Special Economic Zone. pic.twitter.com/vpsXXuhb6A
ಇಂತಹದ್ದೇ ಒಂದು ಘಟನೆ ಕೆಲವು ತಿಂಗಳ ಹಿಂದೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿತ್ತು. ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದರು. ಘಟನೆಯಲ್ಲಿ ಸುಮಾರು 15 ಮಂದಿ ಗಾಯಗೊಂಡಿದ್ದರು. ದೊಂಬಿವಿಲಿ ಬಳಿಯ ಎಂಐಡಿಸಿ ಫೇಸ್ 2ರಲ್ಲಿರುವ ಕಾರ್ಖಾನೆಯಲ್ಲಿ ಕಾರ್ಮಿಕರು ಮೇ 23ರ ಮಧ್ಯಾಹ್ನ ಕೆಲಸ ಮಾಡುವಾಗಲೇ ಬಾಯ್ಲರ್ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದಾದ ಕ್ಷಣಮಾತ್ರದಲ್ಲೇ ಭೀಕರ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಅಮುದನ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿತ್ತು. ಸ್ಫೋಟ ಸಂಭವಿಸಿದ ಕೆಲವೇ ನಿಮಿಗಳಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಅಗ್ನಿ ನಂದಿಸಿತ್ತು.
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿರುವ (Sangareddy District) ರಾಸಾಯನಿಕ ಕಾರ್ಖಾನೆಯೊಂದರಲ್ಲೂ ಏಪ್ರಿಲ್ 3)ಭೀಕರ ಸ್ಫೋಟ ಸಂಭವಿಸಿದ್ದು, ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಸಾಯನಿಕ ಸೋರಿಕೆಯ ಬಳಿಕ ಭೀಕರವಾಗಿ ಸ್ಫೋಟ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಐವರು ಸುಟ್ಟು ಭಸ್ಮವಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: Manipur Bomb Blast: ಮಾಜಿ ಶಾಸಕನ ಮನೆಯಲ್ಲಿ ಬಾಂಬ್ ಬ್ಲಾಸ್ಟ್; ಮಣಿಪುರದಲ್ಲಿ ನಿಲ್ಲದ ಹಿಂಸಾಚಾರ