ನವದೆಹಲಿ: ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಡಾಕ್ಟರ್ ಆಫ್ ಫಿಲಾಸಫಿ(ಪಿಎಚ್ಡಿ) ಕಡ್ಡಾಯವಲ್ಲ (PhD not mandatory) ಎಂದು ವಿಶ್ವವಿದ್ಯಾನಿಲಯ ಅನುದಾನ ಆಯೋಗದ(ಯುಜಿಸಿ) ಅಧ್ಯಕ್ಷರಾಗಿರುವ ಎಂ.ಜಗದೀಶ್ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: Viral News : ಈ ವ್ಯಕ್ತಿಯ ಪಿಎಚ್ಡಿ ಪದವಿಗೆ ತಗುಲಿದ್ದು ಬರೋಬ್ಬರಿ 50 ವರ್ಷ!
ಉಸ್ಮಾನಿಯಾ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಹೊಸದಾಗಿ ನಿರ್ಮಿಸಲಾಗಿರುವದ ಯುಜಿಸಿ-ಎಚ್‌ಆರ್‌ಡಿಸಿ ಕಟ್ಟಡವನ್ನು ಉದ್ಘಾಟಿಸಿದ ಜಗದೀಶ್ ಅವರು ಈ ಮಾಹಿತಿ ನೀಡಿದ್ದಾರೆ. ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ(ನೆಟ್) ಅರ್ಹತೆ ಪಡೆದಿದ್ದರೆ ಸಾಕು ಎಂದು ಅವರು ತಿಳಿಸಿದ್ದಾರೆ.
ಹಾಗೆಯೇ ದೇಶದಲ್ಲಿ ಒಂದು ರಾಷ್ಟ್ರ ಒಂದು ಡೇಟಾ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಈ ಪೋರ್ಟಲ್ ಅಭ್ಯರ್ಥಿಗಳಿಗೆ ಯುಜಿಸಿಯ ಎಲ್ಲ ಮಾರ್ಗಸೂಚಿಗಳನ್ನು ಮತ್ತು ಇತರ ಪ್ರಮುಖ ವಿವರಗಳನ್ನು ನೀಡುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಷ್ಟ್ರೀಯ ಡಿಜಿಟಲ್ ವಿಶ್ವವಿದ್ಯಾಲಯದ ಮೂಲಕ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುವುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: Viral News : 161 ಕಿ.ಮೀ ಟ್ಯಾಕ್ಸಿಯಲ್ಲಿ ಸುತ್ತಾಡಿ ಮತ್ತೆ ವಾಪಸ್ ಮಾಲೀಕರ ಬಳಿಗೇ ಬಂದ ಜಾಣ ನಾಯಿ!
ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳಲು ಪಿಎಚ್‌ಡಿಯನ್ನು ಕನಿಷ್ಠ ಅರ್ಹತೆಯ ಮಾನದಂಡವನ್ನಾಗಿ ಮಾಡಲು ಆಯೋಗದ ನಿಯಮಗಳಿಗೆ ಕೇಂದ್ರ ಸರ್ಕಾರ ಈ ಹಿಂದೆ ತಿದ್ದುಪಡಿ ಮಾಡಿತ್ತು. ಹೊಸ ಮಾರ್ಗಸೂಚಿ 2021ರಲ್ಲಿ ಜಾರಿಗೆ ಬರಬೇಕಿತ್ತು. ಆದರೆ ಕೊರೊನಾ ಸಾಂಕ್ರಾಮಿಕದ ಹಿನ್ನೆಲೆ ಅದನ್ನು ಮುಂದೂಡಲಾಗಿದೆ. ಸದ್ಯ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (UGC NET) ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ.