ಮುಂಬೈ: ಆರು ವಿದ್ಯಾರ್ಥಿನಿಯರಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ತಿಂಗಳುಗಳ ಕಾಲ ಸತತವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ (Physical Abuse ) ಆರೋಪದ ಮೇಲೆ ಸರ್ಕಾರಿ ಶಾಲಾ ಶಿಕ್ಷಕನನ್ನು ಬಂಧಿಸಲಾಗಿದೆ. ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಹೆಣ್ಣು ಮಕ್ಕಳ ಸುರಕ್ಷತೆ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿ ದೇಶವ್ಯಾಪಿ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ ಮತ್ತೊಂದು ಇದೇ ಮಾದರಿಯ ಘಟನೆ ವರದಿಯಾಗಿದೆ.
ಶಿಕ್ಷಕನನ್ನು 47 ವರ್ಷದ ಪ್ರಮೋದ್ ಸರ್ದಾರ್ ಎಂದು ಗುರುತಿಸಲಾಗಿದೆ/ ವಿದ್ಯಾರ್ಥಿನಿಯರು ತಮ್ಮ ಪೋಷಕರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. 8 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಒಬ್ಬಾಕೆ ಮಕ್ಕಳ ಕಲ್ಯಾಣ ಕೇಂದ್ರದ ಟೋಲ್ ಫ್ರೀ ಸಹಾಯವಾಣಿಗೆ ಕರೆ ಮಾಡಿ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಳು. ಅಧಿಕಾರಿಗಳು ಶಾಲೆಗೆ ಹೋಗಿ ತನಿಖೆಯನ್ನು ನಡೆಸಿ ಶಿಕ್ಷಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಅತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಪ್ರಕರಣದ ವಿವರಗಳ ಪ್ರಕಾರ, ಶಿಕ್ಷಕ ಕಳೆದ ನಾಲ್ಕು ತಿಂಗಳಿನಿಂದ ವಿದ್ಯಾರ್ಥಿನಿಯರಿಗೆ ಅಶ್ಲೀಲ ವೀಡಿಯೊಗಳನ್ನು ತೋರಿಸುತ್ತಿದ್ದ. ವಿಡಿಯೊ ತೋರಿಸುತ್ತಾ ಅನುಚಿತವಾಗಿ ಸ್ಪರ್ಶಿಸುತ್ತಿದ್ದ. ಆರು ವಿದ್ಯಾರ್ಥಿನಿಯರು ದೂರು ನೀಡಿದ್ದರು. ಮಕ್ಕಳ ಕಲ್ಯಾಣ ಸಮಿತಿಯ ಸದಸ್ಯರು ಮಂಗಳವಾರ ಬೆಳಿಗ್ಗೆ ಶಾಲೆಗೆ ಭೇಟಿ ನೀಡಿ ಕೆಲವು ಬಾಲಕಿಯರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.
ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಆಶಾ ಮಿರ್ಗೆ ಒತ್ತಾಯಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂ ಓದಿ: Lashkar-e-Taiba : ಎಲ್ಇಟಿ- ಹಮಾಸ್ ಒಂದಾಗುತ್ತಿದೆಯೇ? ಜಾಗತಿಕ ಆತಂಕ ತಂದಿಟ್ಟ ಉಗ್ರಗಾಮಿ ಸಂಘಟನೆಗಳ ಮುಖ್ಯಸ್ಥರ ಭೇಟಿ
ಮುಂಬೈ ಬಳಿಯ ಬದ್ಲಾಪುರ ಪಟ್ಟಣದ ಶಾಲೆಯೊಂದರಲ್ಲಿ ಮೂರು ಮತ್ತು ನಾಲ್ಕು ವರ್ಷದ ಇಬ್ಬರು ಬಾಲಕಿಯರ ಮೇಲೆ ಸ್ವಚ್ಛತಾ ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿರುವ ವಿಚಾರ ದೊಡ್ಡ ಮಟ್ಟದ ಗಲಾಟೆಗೆ ಕಾರಣವಾಗಿದೆ. ಈ ನಡುವೆ ಅದೇ ಮಾದರಿಯ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಷ