ನವದೆಹಲಿ/ವಾಷಿಂಗ್ಟನ್: ಖಲಿಸ್ತಾನಿ ಉಗ್ರ, ಕೆನಡಾ, ಅಮೆರಿಕ, ಬ್ರಿಟನ್ ಸೇರಿ ಹಲವು ದೇಶಗಳಲ್ಲಿ ಭಾರತ ವಿರೋಧಿ ಕೃತ್ಯಗಳಲ್ಲಿ ತೊಡಗಿರುವ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಅಮೆರಿಕದಲ್ಲಿ ಸಂಚು ರೂಪಿಸಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಹರ್ದೀಪ್ ಸಿಂಗ್ ನಿಜ್ಜರ್ ಸೇರಿ ಹಲವು ಖಲಿಸ್ತಾನಿ ಉಗ್ರರು ಹತ್ಯೆಗೀಡಾಗಿದ್ದು, ಇದೇ ರೀತಿ ಗುರುಪತ್ವಂತ್ ಸಿಂಗ್ ಪನ್ನುನ್‌ನನ್ನೂ ಹತ್ಯೆ ಮಾಡಲು, ಅದರಲ್ಲೂ ಅಮೆರಿಕದಲ್ಲಿಯೇ ಆತನನ್ನು ಕೊಲೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಅಮೆರಿಕ ಮಾಹಿತಿ ನೀಡಿದೆ. ಇದರ ಬೆನ್ನಲ್ಲೇ, ಸಂಚು ರೂಪಿಸಿರುವ ಕುರಿತು ತನಿಖೆ ನಡೆಸಲಾಗುವುದು ಎಂದು ಭಾರತ ಪ್ರತಿಕ್ರಿಯಿಸಿದೆ.
“ಅಮೆರಿಕದಲ್ಲಿ ಗುರುಪತ್ವಂತ್ ಸಿಂಗ್ ಪನ್ನುನ್ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬುದಾಗಿ ಅಮೆರಿಕ ಮಾಹಿತಿ ನೀಡಿದೆ. ಇತ್ತೀಚೆಗೆ ನಡೆದ ಭಾರತ-ಅಮೆರಿಕ ಭದ್ರತಾ ಸಹಕಾರ ಸಭೆಯಲ್ಲಿ ಅಮೆರಿಕ ಮಾಹಿತಿ ನೀಡಿದೆ. ಅಪರಾಧಿಗಳು, ಉಗ್ರರು, ಶಾರ್ಪ್‌ಶೂಟರ್‌ಗಳು ಸೇರಿ ಹಲವರ ಮಧ್ಯೆಯೇ ನಡೆದ ಮಾತುಕತೆಯ ಮಾಹಿತಿ ಆಧರಿಸಿ ಅಮೆರಿಕ ಮಾಹಿತಿ ನೀಡಿದೆ. ಗುರುಪತ್ವಂತ್ ಸಿಂಗ್ ಪನ್ನುನ್ ಭಾರತ ಹಾಗೂ ಅಮೆರಿಕಕ್ಕೆ ಬೇಕಾಗಿರುವ ಉಗ್ರನಾಗಿರುವ ಕಾರಣ ಸಂಚಿನ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಮಾಹಿತಿ ನೀಡಿದ್ದಾರೆ. ಗುಪ್ತಚರ ಇಲಾಖೆಯೂ ಈ ಕುರಿತು ಅಲರ್ಟ್ ಆಗಿದೆ ಎಂದು ತಿಳಿದುಬಂದಿದೆ.
ಏರ್ ಇಂಡಿಯಾ ಸ್ಫೋಟಿಸಲು ಬೆದರಿಕೆ
ಕೆಲ ದಿನಗಳ ಹಿಂದಷ್ಟೇ ಏರ್ ಇಂಡಿಯಾ ವಿಮಾನಗಳನ್ನು ಸ್ಫೋಟಿಸುವುದಾಗಿ ಗುರುಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ ಹಾಕಿದ್ದ. ನವೆಂಬರ್ 4ರಂದು ಗುರುಪತ್ವಂತ್ ಸಿಂಗ್ ಪನ್ನುನ್ ವಿಡಿಯೊ ಬಿಟ್ಟಿದ್ದು, “ನವೆಂಬರ್ 19ರಂದು ಸಿಖ್ಖರು ಏರ್ ಇಂಡಿಯಾ ವಿಮಾನಗಳಲ್ಲಿ ಪ್ರಯಾಣಿಸಬಾರದು. ಅಂದು ಏರ್ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು” ಎಂದು ಹೇಳಿದ್ದಾನೆ. ನವೆಂಬರ್ 19 ಇಂದಿರಾ ಗಾಂಧಿ ಜನ್ಮದಿನವಾದ ಕಾರಣ ಅಂದೇ ಏರ್ ಇಂಡಿಯಾ ವಿಮಾನಗಳನ್ನು ಸ್ಫೋಟಿಸಲಾಗುವುದು ಎಂದಿದ್ದ. ಅಮೃತಸರದ ಸ್ವರ್ಣಮಂದಿರ ಹೊಕ್ಕಿದ್ದ ಉಗ್ರರ ವಿರುದ್ಧ ಇಂದಿರಾ ಗಾಂಧಿ ಅವರು ಆಪರೇಷನ್ ಬ್ಲ್ಯೂ ಸ್ಟಾರ್‌ಗೆ ಆದೇಶ ಮಾಡಿದ ಬಳಿಕ ಅವರು 1984ರಲ್ಲಿ ಹತ್ಯೆಗೀಡಾದರು. ಈಗ ಅವರ ಜನ್ಮದಿನದಂದೇ ಏರ್ ಇಂಡಿಯಾ ವಿಮಾನ ಸ್ಫೋಟಿಸಲು ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ.
Bomb threat at Jewish high school in Toronto, Canada.Earlier this month Khalistani Terrorist Gurpatwant Singh Pannu gave a twin threat
— Shuvankar Biswas (@manamuntu) November 17, 2023
A) Bomb Air India Flights
B) Attack India's representative office in Ramalah for supporting Israel
Analysts believe this man is a ticking 💣 pic.twitter.com/ZHbLLOrg2M
ಇದನ್ನೂ ಓದಿ: ಏರ್ ಇಂಡಿಯಾ ಪ್ರಯಾಣಿಕರಿಗೆ ಬೆದರಿಕೆ! ಪನ್ನುನ್ ವಿರುದ್ಧ ಎನ್ಐಎ ಕೇಸ್
ಗುರುಪತ್ವಂತ್ ಸಿಂಗ್ ಪನ್ನುನ್ ಯಾರು?
2020 ರಲ್ಲಿ ಭಾರತದಿಂದ ಭಯೋತ್ಪಾದಕ ಎಂದು ಕರೆಯಲಾದ ಪನ್ನುನ್, ಯುಎಸ್ ಮೂಲದ ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ (ಎಸ್ಎಫ್ಜಿ) ಗುಂಪಿನ ಸ್ಥಾಪಕರಲ್ಲಿ ಒಬ್ಬ. ಕೆನಡಾದ ಟೊರೊಂಟೊದಲ್ಲಿ ವಾಸಿಸುತ್ತಿದ್ದ ಆತ ಚಂಡೀಗಢದ ಪಂಜಾಬ್ ವಿಶ್ವವಿದ್ಯಾಲಯದಿಂದ ಪದವಿ ಪಡೆದ್ದಾನೆ. ಹರ್ದೀಪ್ ಸಿಂಗ್ ನಿಜ್ಜರ್ ಜತೆ ನಿಕಟ ಸಂಬಂಧ ಹೊಂದಿದ್ದ ಎಂದು ವರದಿಯಾಗಿದೆ, ನಿಜ್ನರ್ ಹತ್ಯೆಯ ಹಿಂದೆ ಭಾರತ ಸರ್ಕಾರದವಿದೆ ಎಂದು ಕೆನಡಾ ಆರೋಪಿಸಿದ ಬಳಿಕ ಪನ್ನುನ್ ಭಾರತದ ಹಿಂದೂಗಳಿಗೆ ಬೆದರಿಕೆ ಹಾಕಿದ್ದ. ಪನ್ನುನ್ ಮೇಲೆ ಭಯೋತ್ಪಾದನೆ ಮತ್ತು ದೇಶದ್ರೋಹದ ಆರೋಪಗಳು ಸೇರಿದಂತೆ 2017 ರಿಂದ ಪನ್ನುನ್ ವಿರುದ್ಧ 22 ಪ್ರಕರಣಗಳು ದಾಖಲಾಗಿವೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ