Site icon Vistara News

PM Degree Row: ದಿಲ್ಲಿ ಸಿಎಂ ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಕೇಸ್ ವಿಚಾರಣೆ ತಡೆಗೆ ಸುಪ್ರೀಂ ಕೋರ್ಟ್ ನಕಾರ

Arvind Kejriwal

No protection from arrest to Arvind Kejriwal in liquor policy money laundering case, says Delhi HC

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಶೈಕ್ಷಣಿಕ ಅರ್ಹತೆಯ ಕುರಿತು ಗುಜರಾತ್ ವಿಶ್ವವಿದ್ಯಾನಿಲಯ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ (Defamation Case) ಮೊಕದ್ದಮೆಗೆ ತಡೆ ನೀಡುವಂತೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (delhi cm arvind kejriwal) ಅವರ ಮನವಿಯನ್ನು ಗುಜರಾತ್ ಹೈಕೋರ್ಟ್ (Gujarat High Court) ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ (Supreme Court)ಮೊರೆ ಹೋಗಿದ್ದ ದಿಲ್ಲಿ ಸಿಎಂಗೆ ಅಲ್ಲೂ ಹಿನ್ನಡೆಯಾಗಿದೆ. ಹೈಕೋರ್ಟ್ ಆದೇಶವನ್ನು ತಿರಸ್ಕರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ(PM Degree Row).

ಆರ್‌ಟಿಐ ಕಾಯ್ದೆಯಡಿ ಮೋದಿಯ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ಮುಖ್ಯ ಮಾಹಿತಿ ಆಯುಕ್ತರ ಆದೇಶವನ್ನು ಗುಜರಾತ್ ಹೈಕೋರ್ಟ್ ರದ್ದುಗೊಳಿಸಿದ ನಂತರ ಗುಜರಾತ್ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಪಿಯೂಷ್ ಪಟೇಲ್ ಅವರು ಕೇಜ್ರಿವಾಲ್ ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಈ ಪ್ರಕರಣವು ಗುಜರಾತ್ ಹೈಕೋರ್ಟ್‌ನಲ್ಲಿ ಬಾಕಿ ಇರುವ ಕಾರಣ ಮತ್ತು ಆಗಸ್ಟ್ 29 ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿರುವುದರಿಂದ ಅರ್ಜಿಯ ಕುರಿತು ನೋಟಿಸ್ ನೀಡುತ್ತಿಲ್ಲ ಎಂದು ಹೇಳಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಗುಜರಾತ್ ಹೈಕೋರ್ಟ್ ಮತ್ತು ಅರವಿಂದ್ ಕೇಜ್ರಿವಾಲ್ ಅವರು ಗುಜರಾತ್‌ ಹೈಕೋರ್ಟ್‌ಗೆ ಸಲ್ಲಿಸಬಹುದಾಗಿದೆ ಎಂದು ಪೀಠ ಹೇಳಿತು.

ಈ ಸುದ್ದಿಯನ್ನೂ ಓದಿ: Shruti Shanmuga Priya: ಕೆಟ್ಟ ಚಟಗಳೇ ಅರವಿಂದ್‌ಗೆ ಮುಳುವಾಯ್ತಾ? ಕಿರುಕುಳ ನೀಡಬೇಡಿ ಎಂದ ನಟಿ ಶ್ರುತಿ!

ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಸಿಂಘ್ವಿ ಅವರು ವಾದ ಮಂಡಿಸಿ, ದಿಲ್ಲಿ ಸಿಎಂ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆಗೆ ಮಧ್ಯಂತರ ತಡೆ ನೀಡಲು ಹೈಕೋರ್ಟ್ ತಪ್ಪಾಗಿ ನಿರಾಕರಿಸಿದೆ ಎಂದರು. ಆದರೆ, ಪೀಠವು ತಡೆ ನೀಡಲು ನಿರಾಕರಿಸಿತು.

ದೇಶದ ಇನ್ನಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Exit mobile version