Site icon Vistara News

PM Garib Kalyan Yojana | ಪಿಎಂಜಿಕೆಎವೈ ಅಡಿಯಲ್ಲಿ ಆಹಾರಧಾನ್ಯ ದಾಸ್ತಾನು ಸಾಕಷ್ಟಿದೆ: ಶೋಭಾ ಕರಂದ್ಲಾಜೆ

Ashwathnarayan statement to beat up Siddaramaiah is 100 per cent wrong says Shobha Karandlaje Karnataka Election 2023 updates

ನವ ದೆಹಲಿ: ಕಳೆದ 28 ತಿಂಗಳಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PM Garib Kalyan Yojana) ಅಡಿಯಲ್ಲಿ ಬಡವರಿಗೆ ಉಚಿತ ಪಡಿತರ ವಿತರಣೆಗೆ 1.80 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ. ಹಾಗೆಯೇ ಪಿಎಂಜಿಕೆಎವೈ ಅಡಿಯಲ್ಲಿ ಸಾಕಷ್ಟು ಆಹಾರ ಧಾನ್ಯಗಳ ದಾಸ್ತಾನು ಕೂಡ ಇದೆ ಎಂದು ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಆಹಾರ ಭದ್ರತಾ ಕಾನೂನು ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಅವಶ್ಯಕತೆಗಳನ್ನು ಪೂರೈಸಲು ಸರ್ಕಾರವು ಸಾಕಷ್ಟು ಆಹಾರ ಧಾನ್ಯಗಳನ್ನು ಹೊಂದಿದೆ ಎಂದು ತಿಳಿಸಿದರು.

ಉತ್ತರ ಪ್ರದೇಶ, ಬಿಹಾರ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಬೆಳೆಗಳ ಮೇಲೆ ಬರ ಮತ್ತು ಹವಾಮಾನ ಬದಲಾವಣೆಯ ಪರಿಣಾಮವಾಗಿ “ಅಕ್ಕಿ ಮತ್ತು ಗೋಧಿಯ ಉತ್ಪಾದನೆಯಲ್ಲಿ ಕುಸಿತವಾಗಿದೆ ಎಂಬ ತಪ್ಪು ಕಲ್ಪನೆ ಹರಡಿದ್ದರೂ ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಮತ್ತು ಪಿಎಂಜಿಕೆಎವೈಯಂತಹ ಕಲ್ಯಾಣ ಯೋಜನೆಗಳಿಗೆ ಆಹಾರ ಧಾನ್ಯಗಳ ಖರೀದಿಯು ಸುಗಮವಾಗಿ ನಡೆಯುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ | ಪಂಚಮಸಾಲಿ ಮೀಸಲಾತಿ | ಬೀಸೋ ದೊಣ್ಣೆಯಿಂದ 7 ದಿನ ತಪ್ಪಿಸಿಕೊಂಡ ಬೊಮ್ಮಾಯಿ ಸರ್ಕಾರ; ತಾಯಿ ಮೇಲೆ ಆಣೆ ಮಾಡಿದ್ದಾರೆ ಎಂದ ಯತ್ನಾಳ್‌

ಆಧುನಿಕ ತಂತ್ರಜ್ಞಾನದೊಂದಿಗೆ ಪಿ.ಡಿ.ಎಸ್. ವ್ಯವಸ್ಥೆಯನ್ನು ಸುಧಾರಿಸಲು ತೆಗೆದುಕೊಂಡ ಕ್ರಮಗಳ ಕುರಿತು ವಿವರ ನೀಡಿದ ಅವರು, ಇದರಿಂದಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಗಾಗಿ‌ ಸಂಗ್ರಹಿಸಲಾಗುವ ಆಹಾರ ಧಾನ್ಯಗಳು ಹಾಳಾಗುವುದು ಮತ್ತು ಸೋರಿಕೆಯನ್ನು ನಿಯಂತ್ರಿಸಲು ಸಾಧ್ಯವಾಗುವುದರ ಜತೆಗೆ ರೈತರಿಗೆ ಡಿ.ಬಿ.ಟಿ (ನೇರ ಲಾಭ ವರ್ಗಾವಣೆ) ವಿಧಾನದ ಮೂಲಕ ಸಂಗ್ರಹಿಸಿದ ಧಾನ್ಯಗಳಿಗೆ ಬೆಂಬಲ ಬೆಲೆ ಪಾವತಿಸಲು ಸಾಧ್ಯವಾಗುತ್ತಿದೆ ಎಂದರು.

2023ರಲ್ಲಿ ಆಚರಿಸಲಾಗುವ ಅಂತಾರಾಷ್ಟ್ರೀಯ ಸಿರಿ ಧಾನ್ಯ ವರ್ಷಕ್ಕೆ ಮುಂಚಿತವಾಗಿ ಸಿರಿ ಧಾನ್ಯಗಳ ಉತ್ಪಾದನೆ ಮತ್ತು ರಫ್ತಿಗೆ ಉತ್ತೇಜನ ನೀಡುವುದರತ್ತ ಕೂಡ ಗಮನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ | Border Dispute | ಗಡಿ ವಿವಾದ ಮುಗಿದು ಹೋದ ಅಧ್ಯಾಯ; ಮಹಾರಾಷ್ಟ್ರ ನಡೆ ಖಂಡನೀಯ: ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ

Exit mobile version