ನವದೆಹಲಿ: ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (Prime Minister Kisan Samman Nidhi Scheme-PM-KISAN)ಯ 15ನೇ ಕಂತನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು (ನವೆಂಬರ್ 15) ಬಿಡುಗಡೆ ಮಾಡಿದ್ದಾರೆ. ಝಾರ್ಖಂಡ್‌ನ ಕುಂಟಿಯಲ್ಲಿ ನಡೆದ ಸಮಾರಂಭದಲ್ಲಿ ಈ ಘೋಷಣೆಯನ್ನು ಪ್ರಕಟಿಸಲಾಯಿತು. 8.5 ಕೋಟಿ ಅರ್ಹ ರೈತರ ಖಾತೆಗಳಿಗೆ 18,000 ಕೋಟಿ ರೂ. ಜಮೆ ಮಾಡಲಾಗಿದೆ.
ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ರೈತರ ಖಾತೆಗಳಿಗೆ ಹಣ ಜಮೆ ಮಾಡುವ ಯೋಜನೆ ಇದಾಗಿದೆ. ಇದುವರೆಗೆ ಕೇಂದ್ರ ಸರ್ಕಾರ ಸುಮಾರು 2.75 ಲಕ್ಷ ಕೋಟಿ ರೂಗಳನ್ನು ಫಲಾನುಭವಿಗಳ ಖಾತೆಗೆ ವರ್ಗಾಯಿಸಿದೆ. ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2೦19ರಲ್ಲಿ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದೆ. 14ನೇ ಕಂತನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ವರ್ಷದ ಜುಲೈನಲ್ಲಿ ಬಿಡುಗಡೆ ಮಾಡಿದ್ದರು. 2023ರ ಫೆಬ್ರವರಿಯಲ್ಲಿ 13 ಕಂತು ಬಿಡುಗಡೆಯಾಗಿ 5 ತಿಂಗಳ ಬಳಿಕ ಇದು ಜಮೆಯಾಗಿತ್ತು.
ಪಿಎಂ-ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಎಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ.
ಇದನ್ನೂ ಓದಿ: Money Guide: ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
ಹೀಗೆ ಪರಿಶೀಲಿಸಿ
ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಹೀಗೆ ಮಾಡಿ.
- ಅಧಿಕೃತ ವೆಬ್ಸೈಟ್ pmkisan.gov.in ಭೇಟಿ ನೀಡಿ
- ಆಗ ಓಪನ್ ಆಗುವ ಪೇಜ್ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್ ಮಾಡಿ
- ರಿಜಿಸ್ಟ್ರೇಷನ್ ನಂಬರ್ ನಮೂದಿಸಿ, ಕ್ಯಾಪ್ಚ ಕೋಡ್ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್ ಮಾಡಿ
- ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್ ಮೇಲೆ ಮೂಡುತ್ತದೆ
ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ
- ಅಧಿಕೃತ ವೆಬ್ಸೈಟ್ www.pmkisan.gov.inಗೆ ಭೇಟಿ ನೀಡಿ
- ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
- ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
- ‘Get report’ ಆಯ್ಕೆಯನ್ನು ಸೆಲೆಕ್ಟ್ ಮಾಡಿ
ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಹೆಸರು ನೋಂದಾಯಿಸುವ ವಿಧಾನ
- ಅಧಿಕೃತ ವೆಬ್ಸೈಟ್ pmkisan.gov.in ಭೇಟಿ ನೀಡಿ
- ‘New Farmer Registration’ ಆಯ್ಕೆ ಮೇಲೆ ಕಲಿಕ್ ಮಾಡಿ ಮತ್ತು ಆಧಾರ್ ಕಾರ್ಡ್ ನಂಬರ್ ನಮೂದಿಸಿ ಕ್ಯಾಪ್ಚ ಕೋಡ್ ಭರ್ತಿ ಮಾಡಿ
- ಅಗತ್ಯ ಮಾಹಿತಿ ತುಂಬಿ ‘Yes’ ಬಟನ್ ಕ್ಲಿಕ್ ಮಾಡಿ
- ಅರ್ಜಿ ಫಾರಂ ತುಂಬಿ, ಸೇವ್ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್ ಔಟ್ ತೆಗೆದಿಡಿ
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ