Vladimir Putin | ಪ್ರಧಾನಿ ಮೋದಿ ಮಹಾನ್ ದೇಶಭಕ್ತ, ಭಾರತಕ್ಕಿದೆ ಅದ್ಭುತ ಭವಿಷ್ಯ ಎಂದ ರಷ್ಯಾ ಅಧ್ಯಕ್ಷ ಪುಟಿನ್​ - Vistara News

ದೇಶ

Vladimir Putin | ಪ್ರಧಾನಿ ಮೋದಿ ಮಹಾನ್ ದೇಶಭಕ್ತ, ಭಾರತಕ್ಕಿದೆ ಅದ್ಭುತ ಭವಿಷ್ಯ ಎಂದ ರಷ್ಯಾ ಅಧ್ಯಕ್ಷ ಪುಟಿನ್​

ಭಾರತದ ವಿದೇಶಾಂಗ ನೀತಿಯನ್ನು ಬೇರೆ ಹಲವು ದೇಶಗಳು ಮೆಚ್ಚಿಕೊಂಡಿವೆ. ಯುಎಇ ಸಚಿವ ಒಮರ್‌ ಸುಲ್ತಾನ್‌ ಅಲ್‌ ಒಲಾಮಾ (Omar Sultan Al Olama) ಕೂಡ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ರನ್ನು ಈ ಬಗ್ಗೆ ಶ್ಲಾಘಿಸಿದ್ದರು.

VISTARANEWS.COM


on

Modi Putin Discuss
ಪ್ರಧಾನಿ ಮೋದಿ ಮತ್ತು ವ್ಲಾಡಿಮಿರ್​ ಪುಟಿನ್​
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತದ ವಿದೇಶಾಂಗ ನೀತಿಯನ್ನು ಮತ್ತು ಪ್ರಧಾನಿ ನರೇಂದ್ರ ಮೋದಿಯವರನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್​ ಪುಟಿನ್​ ಶ್ಲಾಘಿಸಿದ್ದಾರೆ. ಹಾಗೇ ಭಾರತ ಮತ್ತು ರಷ್ಯಾ ದೇಶಗಳು ಅತ್ಯುತ್ತಮ ಸಂಬಂಧ ಹೊಂದಿವೆ. ನಮ್ಮ ರಾಷ್ಟ್ರಗಳ ಮಧ್ಯೆ ಯಾವುದೇ ವಿಚಾರದಲ್ಲಿ, ಯಾವುದೇ ಸಮಸ್ಯೆಗಳೂ ಇಲ್ಲ ಎಂದೂ ಹೇಳಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಒಬ್ಬ ಮಹಾನ್ ದೇಶಭಕ್ತ ಎಂದು ಪುಟಿನ್​ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಾಸ್ಕೋ ಮೂಲದ ಚಿಂತಕರ ಚಾವಡಿಯಂತಿರುವ ವಾಲ್ಡೈ ಕ್ಲಬ್​ನಲ್ಲಿ ನಡೆದ ಸಮ್ಮೇಳನದಲ್ಲಿ ಮಾತನಾಡಿದ ವ್ಲಾಡಿಮಿರ್​ ಪುಟಿನ್, ‘ಪ್ರಧಾನಮಂತ್ರಿ ನರೇಂದ್ರ ಮೋದಿ ಮಹಾನ್​ ದೇಶಭಕ್ತರು. ಎಷ್ಟೇ ಅಡೆತಡೆಗಳು ಎದುರಾದರೂ, ಇತಿಮಿತಿ ಇದ್ದರೂ, ಅದನ್ನೆಲ್ಲ ಮೀರಿ ಸ್ವತಂತ್ರ ವಿದೇಶಾಂಗ ನೀತಿ ರೂಪಿಸುವಲ್ಲಿ ಅವರು ಸಮರ್ಥರಾಗಿದ್ದಾರೆ. ಭಾರತಕ್ಕೆ ಖಂಡಿತ ಒಳ್ಳೆಯ ಭವಿಷ್ಯ ಇದೆ. ಜಾಗತಿಕ ವ್ಯವಹಾರದಲ್ಲಿ ಅದರ ಪಾತ್ರ ಗಣನೀಯವಾಗಿ ಹೆಚ್ಚುತ್ತಿದೆ’ ಎಂದು ಹೇಳಿದರು.

‘ಭಾರತ ಬ್ರಿಟಿಷ್​ ವಸಹತುಶಾಹಿಯಿಂದ ಸ್ವತಂತ್ರ, ಆಧುನಿಕತೆಯೆಡೆಗೆ ಅದ್ಭುತವಾಗಿ ಅಭಿವೃದ್ಧಿಯಾಗಿದೆ. ಆ ದೇಶ ಸ್ವಾತಂತ್ರ್ಯ ಪಡೆದ ಇತಿಹಾಸ ಸುದೀರ್ಘವಾದದ್ದು. ಭಾರತ ಮತ್ತು ರಷ್ಯಾ ನಡುವೆ ವಿಶೇಷ ಸೌಹಾರ್ದತೆ, ಒಪ್ಪಂದಗಳು ಇವೆ. ಪರಸ್ಪರ ಬೆಂಬಲಿಸುತ್ತಲೇ ಬಂದಿದ್ದೇವೆ. ಭವಿಷ್ಯದಲ್ಲೂ ಇದು ಮುಂದುವರಿಯುತ್ತದೆ ಎಂಬ ಖಾತ್ರಿ ನನಗೆ ಇದೆ’ ಎಂದು ಪುಟಿನ್​ ಹೇಳಿದರು.

ಪುಟಿನ್ ಯಾವಾಗಲೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಹೊಗಳುತ್ತಾರೆ. ಅವರು ನನ್ನ ಸ್ನೇಹಿತ ಎಂದೂ ಈಗಾಗಲೇ ಹೇಳಿದ್ದಾರೆ. ಜಗತ್ತಿನ ಬಹುತೇಕ ಎಲ್ಲ ರಾಷ್ಟ್ರಗಳ ಅಧ್ಯಕ್ಷರು/ಪ್ರಧಾನಿಗಳೊಂದಿಗೂ ಅಸಮಾಧಾನವನ್ನೇ ಹೊಂದಿರುವ ಪುಟಿನ್​, ಭಾರತ ಮತ್ತು ಪ್ರಧಾನಿ ಮೋದಿ ಬಗ್ಗೆ ವಿಶೇಷ ಅಭಿಮಾನ ಇರುವುದಾಗಿ ಆಗಾಗ ಹೇಳುತ್ತಲೇ ಇರುತ್ತಾರೆ. ಅದರಲ್ಲೂ ಉಕ್ರೇನ್​-ರಷ್ಯಾ ಯುದ್ಧ ಶುರುವಾದಾಗಿನಿಂದಲೂ ಭಾರತ ತಟಸ್ಥ ನೀತಿಯನ್ನೇ ಅನುಸರಿಸಿಕೊಂಡು ಬರುತ್ತಿದೆ. ವಿಶ್ವದ ಎಲ್ಲ ರಾಷ್ಟ್ರಗಳೂ ರಷ್ಯಾ ವಿರುದ್ಧ ತಿರುಗಿಬಿದ್ದಿದ್ದರೂ ಭಾರತ ರಷ್ಯಾ ಮತ್ತು ಉಕ್ರೇನ್​ ಎರಡೂ ದೇಶಗಳೊಂದಿಗೆ ಸೌಹಾರ್ದಯುತವಾಗಿಯೇ ಇದೆ. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ಮತದಾನ ಮಾಡುವ ಸಂದರ್ಭ ಬಂದಾಗಲೆಲ್ಲ ತಟಸ್ಥ ನೀತಿ ಪಾಲನೆ ಮಾಡಿದೆ.

ಇದನ್ನೂ ಓದಿ: Nuclear Weapons | ಯಾವುದೇ ಕಾರಣಕ್ಕೂ ಅಣ್ವಸ್ತ್ರ ಬಳಕೆ ಕೂಡದು, ರಷ್ಯಾಗೆ ರಾಜನಾಥ್‌ ಸಿಂಗ್‌ ಆಗ್ರಹ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Aadhaar Crads For Dog: ದೆಹಲಿಯಲ್ಲಿ ನಾಯಿಗಳಿಗೂ ಬಂತು ಆಧಾರ್ ಕಾರ್ಡ್!

Aadhaar Crads For Dog ಜನರು ತಮ್ಮ ಆಧಾರ್ ಕಾರ್ಡ್ ಗಳನ್ನು ಪಡೆಯಲು ಸೈಬರ್ ಸೆಂಟರ್, ಸರ್ಕಾರಿ ಕಚೇರಿಗಳ ಮುಂದೆ ಕ್ಯೂ ನಿಲ್ಲುತ್ತಾರೆ. ಆದರೆ ಇದೀಗ ನಾಯಿಗಳು ಆಧಾರ್ ಕಾರ್ಡ್ ಹೊಂದಿರಬೇಕು ಎಂಬ ನಿಯಮ ಜಾರಿಗೆ ಬಂದಿದೆ.

VISTARANEWS.COM


on

Aadhaar Crads For Dog
Koo

ದೆಹಲಿ: ಸಾಮಾನ್ಯವಾಗಿ ಜನಸಾಮಾನ್ಯರು ಆಧಾರ್ ಕಾರ್ಡ್ ಗಳನ್ನು ಕಡ್ಡಾಯವಾಗಿ ಹೊಂದಿರಲೇಬೇಕು ಎಂಬ ನಿಯಮ ದೇಶದಾದ್ಯಂತ ಜಾರಿಯಲ್ಲಿದೆ. ಹಾಗಾಗಿ ಜನರು ತಮ್ಮ ಆಧಾರ್ ಕಾರ್ಡ್ ಗಳನ್ನು ಪಡೆಯಲು ಸೈಬರ್ ಸೆಂಟರ್, ಸರ್ಕಾರಿ ಕಚೇರಿಗಳ ಮುಂದೆ ಕ್ಯೂ ನಿಲ್ಲುತ್ತಾರೆ. ಆದರೆ ಇದೀಗ ನಾಯಿಗಳು ಆಧಾರ್ ಕಾರ್ಡ್ (Aadhaar Crads For Dog) ಹೊಂದಿರಬೇಕು ಎಂಬ ನಿಯಮ ಜಾರಿಗೆ ಬಂದಿದೆ.

ಹೌದು. ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೂ ಆಧಾರ್ ಕಾರ್ಡ್ ಅನ್ನು ನೀಡಲಾಗಿದೆ. ದಾರಿತಪ್ಪಿದ ನಾಯಿಗಳನ್ನು ರಕ್ಷಿಸಲು ಮತ್ತು ಅವುಗಳನ್ನು ಸ್ಥಳಾಂತರ ಮಾಡಲು ಎನ್ ಜಿಓ ಈ ಕ್ರಮಗಳನ್ನು ಜಾರಿಗೆ ತಂದಿದೆ. ಈಗಾಗಲೇ ದೆಹಲಿಯಲ್ಲಿ 100 ನಾಯಿಗಳಿಗೆ ತಮ್ಮದೇ ಆದ ಆಧಾರ್ ಕಾರ್ಡ್ ಅನ್ನು ನೀಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಮಾಧ್ಯಮದ ವರದಿ ಪ್ರಕಾರ ಈ 100 ನಾಯಿಗಳು ದೆಹಲಿಯ ಟರ್ಮಿನಲ್ 1 ವಿಮಾನ ನಿಲ್ದಾಣ, ಇಂಡಿಯಾ ಗೇಟ್ ಮತ್ತು ಪ್ರಾಣಿ ಕಾರ್ಯಕರ್ತೆ ಮಾನವಿ ರೈ ನಡೆಸುತ್ತಿರುವ ದೆಹಲಿಯ ನಾಯಿ ಆಶ್ರಯ ಸೇರಿದಂತೆ ವಿವಿಧ ಸ್ಥಳಗಳಿಗೆ ಸೇರಿವೆ ಎನ್ನಲಾಗಿದೆ.

ಏಪ್ರಿಲ್ 27ರಂದು ನಾಯಿಗಳಿಗೆ ಆಧಾರ್ ಕಾರ್ಡ್ ನೀಡುವ ಕ್ರಮಕ್ಕೆ ಚಾಲನೆ ನೀಡಿದ್ದು, ಇಂದು ಮುಂಜಾನೆಯಿಂದ ಈ ಕೆಲಸ ಪ್ರಾರಂಭವಾಗಿದೆ. ಇದಕ್ಕೆ ಸಂಬಂಧಪಟ್ಟ ನಾಯಿಗಳಿಗೆ ಆಧಾರ್ ಕಾರ್ಡ್ ಟ್ಯಾಗ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಪ್ರಾಣಿ ಕಾರ್ಯಕರ್ತೆ ಮಾನವಿ ರೈ ಅವರು ನಾಯಿಗಳಿಗೆ ಈ ಆಧಾರ್ ಕಾರ್ಡ್ ಜೀವಸೆಲೆ ಎಂದು ತಿಳಿಸಿದ್ದಾರೆ. “ಇಂದು ಈ ಕ್ಯೂಆರ್ ಆಧಾರಿತ ಟ್ಯಾಗ್ ಗಳು ನಮ್ಮ ನಾಯಿಗಳಿಗೆ ವಿಶೇಷವಾಗಿ ಸಂಕಷ್ಟದ ಸಮಯದಲ್ಲಿ ಜೀವಸೆಲೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ” ಎಂದು ಅವರು ಹೇಳಿದ್ದಾರೆ.

ನಾಯಿಗಳಿಗೆ ನೀಡಿದ ಆಧಾರ್ ಕಾರ್ಡ್ ಕ್ಯೂ ಆರ್ ಆಧಾರಿತವಾಗಿದೆ. ಇದನ್ನು Pawfriend.in ಎಂಬ ಎನ್ ಜಿಒ ಆವಿಷ್ಕಾರ ಮಾಡಿದೆ. ಕಂಪೆನಿಯ ಪ್ರಕಾರ, ಬೀದಿ ನಾಯಿಗಳ ಆರೈಕೆಗೆ ಇದು ಉತ್ತಮ ಪರಿಹಾರವಾಗಿದೆ. ಇದು ಮೈಕ್ರೋಚಿಪ್ ಗಳನ್ನು ಒಳಗೊಂಡಿದ್ದು, ಈ ಟ್ಯಾಗ್ ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಯಾರಾದರೂ ಸ್ಕ್ಯಾನ್ ಮಾಡಿದರೆ ಆ ನಾಯಿಗಳ ಬಗ್ಗೆ ವಿವರಗಳು ಮತ್ತು ತುರ್ತು ಸಂಪರ್ಕಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸುತ್ತದೆ. ಇದರಿಂದ ಕಳೆದುಹೋದ ನಾಯಿಗಳನ್ನು ಅವುಗಳ ಯಜಮಾನನೊಂದಿಗೆ ಸೇರಿಸಲು ಸಹಾಯ ಮಾಡುತ್ತದೆಯಂತೆ.

ಇದನ್ನೂ ಓದಿ:Wedding Eye Makeup Tips: ಮದುವೆಯಲ್ಲಿ ಮದುಮಗಳ ಐ ಮೇಕಪ್‌ಗೆ 5 ಸಿಂಪಲ್‌ ಸೂತ್ರ

Pawfriend.inನ ಸ್ಥಾಪಕ ಅಕ್ಷಯ್ ರಿದ್ಲಾನ್ , ತಮ್ಮ ವ್ಯಾಪ್ತಿಯನ್ನು ವಿಸ್ತರಿಸುವ ಸಂಸ್ಥೆಯ ಬದ್ಧತೆಯನ್ನು ಎತ್ತಿ ತೋರಿಸಿದರು. ಈ ಬಗ್ಗೆ ಮಾತನಾಡಿದ ಅವರು, “ನಾವು ಭಾರತದಾದ್ಯಂತ ಸರಿಸುಮಾರು 6350 ಟ್ಯಾಗ್ ಗಳನ್ನು ವಿತರಿಸಿದ್ದೇವೆ ಮತ್ತು ವರ್ಷದೊಳಗೆ ಇದನ್ನು ಹತ್ತು ಪಟ್ಟು ಹೆಚ್ಚಿಸುವ ಗುರಿ ಹೊಂದಿದ್ದೇವೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಬೀದಿ ನಾಯಿಗಳ ದಾಳಿ ಮಾತ್ರವಲ್ಲದೇ ಸಾಕು ನಾಯಿಗಳು ದಾಳಿ ಮಾಡುತ್ತಿವೆ. ಅಲ್ಲದೇ ದೆಹಲಿಯಲ್ಲಿ ಕೆಲವರು ಪಿಟ್ ಬುಲ್ಡಾ ಗ್ ಗಳನ್ನು ಸಾಕಿದ್ದು, ಅವುಗಳ ದಾಳಿ ಮಾಡುತ್ತಿರುವ ವಿಡಿಯೋ ನೋಡಿದ ಅಧಿಕಾರಿಗಳು ಇನ್ನು ಮುಂದೆ ಈ ತಳಿಯ ನಾಯಿಗಳನ್ನು ಸಾಕಬಾರದು ಎಂದು ಆದೇಶ ಹೊರಡಿಸಿದ್ದಾರೆ. ಹಾಗೇ ಇನ್ನೂ ಕೆಲವು ತಳಿಗಳ ನಾಯಿಗಳನ್ನು ಸಹ ನಿಷೇಧಿಸಿದ್ದಾರೆ.

Continue Reading

Lok Sabha Election 2024

Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Congress Candidate List: ಲೋಕಸಭಾ ಚುನಾವಣೆಯ ಎರಡು ಹಂತಗಳ ಮತದಾನ ಮುಗಿದಿದೆ. ಕಾಂಗ್ರೆಸ್‌ ಇನ್ನೂ ದೇಶದ ಪ್ರತಿಷ್ಠಿತ ಕಣಗಳಾದ ಉತ್ತರ ಪ್ರದೇಶದ ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿನ ತನ್ನ ಅಭ್ಯರ್ಥಿಗಳನ್ನು ಇನ್ನೂ ಘೋಷಿಸಿಲ್ಲ. ಇಲ್ಲಿ ರಾಹುಲ್‌ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಸ್ಪರ್ಧಿಸುತ್ತಾರಾ ಎನ್ನುವ ಕುತೂಹಲ ಮೂಡಿದೆ. ನಾಳೆಯೇ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು ಹೀಗಾಗಿ ಇಂದು ಅಭ್ಯರ್ಥಿಗಳ ಘೋಷಣೆಯಾಗಲಿದೆ. ಈ ಮೂಲಕ ಮಿಲಿಯನ್‌ ಡಾಲರ್‌ ಪ್ರಶ್ನೆಗೆ ಉತ್ತರ ಸಿಗಲಿದೆ.

VISTARANEWS.COM


on

Congress Candidate List
Koo

ಲಕ್ನೋ: ದೇಶದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಅದರ ಜತೆಗೆ ಲೋಕಸಭಾ ಚುನಾವಣೆ (Lok Sabha Election 2024)ಯ ಕಾವು ಕೂಡ ಏರಿಕೆಯಾಗುತ್ತಿದೆ. ಈಗಾಗಲೇ ಎರಡು ಹಂತದ ಮತದಾನ ಯಶಸ್ವಿಯಾಗಿ ಮುಗಿದಿದ್ದು, ಮೂರನೇ ಹಂತ ಮೇ 7ರಂದು ನಡೆಯಲಿದೆ. ಈ ಮಧ್ಯೆ ದೇಶದ ಪ್ರತಿಷ್ಠಿತ ಕಣವಾದ ಉತ್ತರ ಪ್ರದೇಶದ ಅಮೇಥಿ (Amethi) ಮತ್ತು ರಾಯ್‌ಬರೇಲಿ (Raebareli)ಯಲ್ಲಿ ತನ್ನ ಅಭ್ಯರ್ಥಿಯನ್ನು ಘೋಷಿಸದ ಕಾಂಗ್ರೆಸ್‌ ಇನ್ನೂ ಗುಟ್ಟು ಕಾಪಾಡಿಕೊಂಡು ಬಂದಿದೆ. ನಾಮಪತ್ರ ಸಲ್ಲಿಕೆಗೆ ನಾಳೆಯೇ (ಮೇ 3) ಕೊನೆಯ ದಿನವಾಗಿದ್ದು ಇಂದು ಕೈಪಡೆ ಅಭ್ಯರ್ಥಿಗಳನ್ನು ಘೋಷಿಸಲಿದೆ (Congress Candidate List). ಅಮೇಥಿ ಕ್ಷೇತ್ರದಿಂದ ರಾಹುಲ್‌ ಗಾಂಧಿ(Rahul Gadhi) ಮತ್ತು ರಾಯ್‌ ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ(Priyanka Gandhi) ಸ್ಪರ್ಧಿಸುತ್ತಾರಾ ಎನ್ನುವ ಕುತೂಹಲಕ್ಕೆ ಇಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೆರೆ ಎಳೆಯಲಿದ್ದಾರೆ.

2019ರಲ್ಲಿ ಅಮೇಥಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಅನಿರೀಕ್ಷಿತ ಸೋಲನ್ನು ಅನುಭವಿಸಿದ ರಾಹುಲ್ ಗಾಂಧಿ ಮತ್ತೆ ಅಲ್ಲಿಂದ ಸ್ಪರ್ಧಿಸುವ ನಿರೀಕ್ಷೆಯಿದೆ. ಈಗಾಗಲೇ ಅವರು ಕೇರಳದ ವಯನಾಡ್‌ನಲ್ಲಿ ಸ್ಪರ್ಧಿಸಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಎರಡು ಕಡೆ ಕಣಕ್ಕಿಳಿಯುವ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎನ್ನುತ್ತಿವೆ ಮೂಲಗಳು.

ಇನ್ನು ರಾಯ್‌ ಬರೇಲಿ ಕಾಂಗ್ರೆಸ್‌ನ ಭದ್ರಕೋಟೆ ಎನಿಸಿಕೊಂಡಿದೆ. 2004ರಿಂದ ಇದು ಸೋನಿಯಾ ಗಾಂಧಿ ಅವರ ವಶದಲ್ಲಿದೆ. ಈ ಬಾರಿ ಸೋನಿಯಾ ಗಾಂಧಿ ರಾಯ್‌ ಬರೇಲಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಹಿಂದೆಯೇ ಘೋಷಿಸಿದ್ದರು. ಈ ಮೂಲಕ ರಾಜ್ಯಸಭೆ ಪ್ರವೇಶಿಸಿದ್ದರು. ಹೀಗಾಗಿ ಪ್ರಿಯಾಂಕಾ ಗಾಂಧಿ ರಾಯ್‌ ಬರೇಲಿ ಕ್ಷೇತ್ರದಿಂದ ಕಣಕ್ಕಿಳಿಯುವ ಮೂಲಕ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಮಾತುಗಳು ವ್ಯಾಪಕವಾಗಿ ಕೇಳಿ ಬಂದಿದೆ. ಇದರ ಜತೆಗೆ ಬಿಜೆಪಿ ಆಗಾಗ ಉಲ್ಲೇಖಿಸುವ ʼವಂಶಪಾರಂಪರ್ಯ ರಾಜಕೀಯʼ ಆರೋಪವನ್ನು ಪರಿಗಣಿಸಿ ಅವರನ್ನು ಕಣಕ್ಕಿಳಿಸುವುದು ಅನುಮಾನ ಎನ್ನುವ ಮಾತೂ ಕೇಳಿ ಬಂದಿದೆ.

ʼʼಅಭ್ಯರ್ಥಿಗಳ ಆಯ್ಕೆ ಬಗ್ಗೆ ಯಾವುದೇ ಗೊಂದಲಗಳಿಲ್ಲ. ನಾವು ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆʼʼ ಎಂದು ಹಿರಿಯ ಮುಖಂಡ ಜೈರಾಮ್‌ ರಮೇಶ್‌ ತಿಳಿಸಿದ್ದಾರೆ. ಇದರ ನಡುವೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಅವರೂ ರಾಜಕೀಯ ಪ್ರವೇಶಿಸುತ್ತಾರೆ ಎನ್ನುವ ಗಾಳಿಸುದ್ದಿಯೂ ಹಬ್ಬಿದೆ.

ಇದನ್ನೂ ಓದಿ: Lok Sabha Election 2024: ಅಮೇಥಿ, ರಾಯ್‌ಬರೇಲಿಗೆ ರಾಹುಲ್‌, ಪ್ರಿಯಾಂಕಾ ಫಿಕ್ಸ್‌? ಖರ್ಗೆ ನಿರ್ಧಾರ ಫೈನಲ್‌

ರಾಯ್‌ ಬರೇಲಿ ಕ್ಷೇತ್ರದ ಇತಿಹಾಸ

ಇಂದಿರಾ ಗಾಂಧಿ ಅವರ ಪತಿ ಮತ್ತು ಕಾಂಗ್ರೆಸ್ ನಾಯಕ ಫಿರೋಜ್ ಗಾಂಧಿ 1952 ಮತ್ತು 1957ರಲ್ಲಿ ರಾಯ್‌ ಬರೇಲಿಯಿಂದ ಎರಡು ಬಾರಿ ಗೆದ್ದಿದ್ದರು. ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಮೊಮ್ಮಗ ಅರುಣ್ ನೆಹರೂ ಅವರು 1980 ಮತ್ತು 1984ರ ಉಪಚುನಾವಣೆಯಲ್ಲಿ ಇಲ್ಲಿ ಗೆಲುವು ಸಾಧಿಸಿದ್ದರು. ಜವಾಹರಲಾಲ್ ನೆಹರೂ ಅವರ ಅತ್ತಿಗೆ ಶೀಲಾ ಕೌಲ್ 1989 ಮತ್ತು 1991ರಲ್ಲಿ ಗೆಲುವು ಸಾಧಿಸಿದ್ದರು. ನೆಹರೂ-ಗಾಂಧಿ ಕುಟುಂಬದ ಸದಸ್ಯರು 1962 ಮತ್ತು 1999ರಲ್ಲಿ ಮಾತ್ರ ಇಲ್ಲಿಂದ ಸ್ಪರ್ಧಿಸಿರಲಿಲ್ಲ. ಇನ್ನು 2004ರಿಂದ 2024ರ ವರೆಗೆ ಈ ಕ್ಷೇತ್ರವನ್ನು ಸೋನಿಯಾ ಗಾಂಧಿ ಪ್ರತಿನಿಧಿಸಿದ್ದಾರೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ.

Continue Reading

ದೇಶ

Asaduddin Owaisi: ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

Asaduddin Owaisi: ಹೈದರಾಬಾದ್‌ ಕ್ಷೇತ್ರದಲ್ಲಿ ನೀಲಿ ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮಾ ಧರಿಸಿ ತಮ್ಮ ಟ್ರಿಯಂಫ್‌ ಬೊನ್ನೆವಿಲ್ಲೆ ಬೈಕ್‌ನಲ್ಲಿ ಸಾರ್ವಜನಿಕ ಸಭೆಗೆ ಆಗಮಿಸುವ ಮೂಲಕ ಓವೈಸಿ ಎಲ್ಲರ ಗಮನ ಸೆಳೆದಿದ್ದಾರೆ. ಓವೈಸಿ ಅವರು ತಮ್ಮ ಬೆಂಬಲಿಗರೊಂದಿಗೆ ಬೈಕ್‌ ರೈಡ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

VISTARANEWS.COM


on

Asaduddin Owaisi
Koo

ಹೈದರಾಬಾದ್‌: ಎಐಎಂಐಎಂ ಅಧ್ಯಕ್ಷ, ಸಂಸದ ಅಸಾದುದ್ದೀನ್‌ ಓವೈಸಿ(Asaduddin Owaisi) ಭರ್ಜರಿಯಾಗಿ ಬೈಕ್‌ ರೈಡಿಂಗ್‌(Bike ride) ಮಾಡುತ್ತಾ ಪ್ರಚಾರ ನಡೆಸಿದ್ದಾರೆ. ಹೈದರಾಬಾದ್‌(Hyderabad) ಕ್ಷೇತ್ರದಲ್ಲಿ ನೀಲಿ ಬಣ್ಣದ ಕುರ್ತಾ ಮತ್ತು ಬಿಳಿ ಪೈಜಾಮಾ ಧರಿಸಿ ತಮ್ಮ ಟ್ರಿಯಂಫ್‌ ಬೊನ್ನೆವಿಲ್ಲೆ(Triumph Bonneville) ಬೈಕ್‌ನಲ್ಲಿ ಸಾರ್ವಜನಿಕ ಸಭೆಗೆ ಆಗಮಿಸುವ ಮೂಲಕ ಓವೈಸಿ ಎಲ್ಲರ ಗಮನ ಸೆಳೆದಿದ್ದಾರೆ. ಓವೈಸಿ ಅವರು ತಮ್ಮ ಬೆಂಬಲಿಗರೊಂದಿಗೆ ಬೈಕ್‌ ರೈಡ್‌ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಬರೋಬ್ಬರಿ ನಾಲ್ಕು ಬಾರಿ ಹೈದರಾಬಾದ್‌ ಕ್ಷೇತ್ರವನ್ನು ಪ್ರತಿನಿಧಿಸಿರುವ ಓವೈಸಿ, ಮೇ 13ರಂದು ನಡೆಯಲಿರುವ ನಡೆಯಲಿರುವ ನಾಲ್ಕನೇ ಹಂತದ ಚುನಾವಣೆಗೆ ಮನೆ ಮನೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ನಾಲ್ಕನೇ ಹಂತದಲ್ಲಿ ತೆಲಂಗಾಣದ ಎಲ್ಲಾ 17ಲೋಕಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ. ಇನ್ನು ಓವೈಸಿ ಎದುರು ಬಿಜೆಪಿಯ ಮಾಧವಿ ಲತಾ ಸ್ಪರ್ಧಿಸುತ್ತಿದ್ದಾರೆ. 2019ರಲ್ಲಿ ಓವೈಸಿ ಬಿಜೆಪಿಯ ಭಗವಂತ್‌ ರಾವ್‌ ಅವರನ್ನು 2.5 ಲಕ್ಷ ಮತಗಳಿಂದ ಸೋಲಿಸಿದ್ದರು. ಹೈದರಾಬಾದ್‌ ಲೋಕಭಾ ಕ್ಷೇತ್ರ ಬಹದ್ದೂರ್‌ಪುರ, ಚಂದ್ರಯಾನ್‌ಗುಟ್ಟಾ. ಚಾರ್‌ಮಿನಾರ್‌, ಘೋಷಮಹಲ್‌, ಕಾರ್ವಾನ್‌, ಮಲಕಪೇಟೆ ಮತ್ತು ಯಾಕತ್‌ಪುರ ಸೇರಿದ್ದಂತೆ ಒಟ್ಟು 7ವಿಧಾನಸಭಾ ಕ್ಷೇತ್ರವನ್ನು ಒಳಗೊಂಡಿದೆ.

ಎರಡು ದಿನಗಳ ಹಿಂದೆ ಉತ್ತರಪ್ರದೇಶದ ಅಮೇಠಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡ ಸ್ಕೂಟರ್‌ನಲ್ಲಿ ತೆರಳಿ ಭರ್ಜರಿ ಪ್ರಚಾರ ಕೈಗೊಂಡಿದ್ದರು. ಸ್ಕೂಟರ್‌ ರೈಡ್‌ ಮಾಡಿಕೊಂಡು ತಮ್ಮ ಕ್ಷೇತ್ರಕ್ಕೆ ಬಂದಿದ್ದ ತಮ್ಮ ನೆಚ್ಚಿನ ನಾಯಕಿಯನ್ನು ಕಂಡು ಬೆಂಬಲಿಗರು ಹರ್ಷ ವ್ಯಕ್ತಪಡಿಸಿದ್ದರು. ಅವರ ಜೊತೆ ಸೆಲ್ಫಿ, ಫೊಟೋಗೆ ಪೋಸ್‌ ಕೊಟ್ಟರು. ಅಲ್ಲದೇ ಸ್ಥಳೀಯ ಬಿಜೆಪಿ ನಾಯಕರೊಂದಿಗೆ ಪ್ರಸ್ತು ಸ್ಥಿತಿಗತಿ ಬಗ್ಗೆ ಚರ್ಚಿಸಿದ್ದರು.

ಇದನ್ನೂ ಓದಿ:SSLC Result 2024: ಕರ್ನಾಟಕದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಣೆಗೆ ದಿನ ಫಿಕ್ಸ್

ಕಾಂಡೋಮ್‌ಗಳನ್ನು ಮುಸ್ಲಿಮರೇ ಹೆಚ್ಚು ಬಳಸ್ತಾರೆ

ಎರಡು ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಓವೈಸಿ,ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚು ಬಳಸುತ್ತಾರೆ ಎಂದಿದ್ದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ, ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ. ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ. ನಮ್ಮ ಧರ್ಮ ಬೇರೆ ಆಗಿರಬಹುದು ಆದರೆ, ನಾವು ಕೂಡ ಈ ದೇಶದ ನಿವಾಸಿಗಳು ಎಂದಿದ್ದಾರೆ.
ಯಾಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂಬ ಭಯವನ್ನು ಏಕೆ ಹರಡಲು ಪ್ರಯತ್ನಿಸುತ್ತಿದ್ದೀರಿ? ಮೋದಿ ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ದರ ಕುಸಿದಿದೆ ಎಂದಿದೆ. ಯಾಕೆಂದರೆ ಮುಸ್ಲಿಮರು ಕಾಂಡೋಮ್‌ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದನ್ನು ಹೇಳಲು ನನಗೆ ಮುಜುಗರವಿಲ್ಲ ಎಂದು ಕಿಡಿಕಾರಿದರು.

Continue Reading

ದೇಶ

Vande Bharat Metro: ಮೊದಲ ವಂದೇ ಭಾರತ್‌ ಮೆಟ್ರೋ ಸಂಚಾರಕ್ಕೆ ಸಿದ್ಧ; ಇಲ್ಲಿದೆ ವಿಡಿಯೊ

Vande Bharat Metro: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸದ್ಯ ಭಾರತದಲ್ಲಿ ಸಂಪರ್ಕ ಕ್ರಾಂತಿಯನ್ನೇ ಉಂಟು ಮಾಡಿದೆ. ಇದೀಗ ವಂದೇ ಭಾರತ್‌ ಮೆಟ್ರೋ ಸರದಿ. ಹೌದು ದೇಶೀಯವಾಗಿ ನಿರ್ಮಿಸಲಾಗುತ್ತಿರುವ ವಂದೇ ಭಾರತ್‌ ಮೆಟ್ರೋದ ಬೋಗಿಗಳನ್ನು ಪಂಜಾಬ್‌ನ ಕಪುರ್ಥಾಲಾ ದ ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ನಿರ್ಮಿಸಲಾಗುತ್ತಿದೆ. ಜುಲೈಯಲ್ಲಿ ಈ ಮೆಟ್ರೋಸ ಪರೀಕ್ಷಾರ್ಥ ಸಂಚಾರ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಈ ಮೆಟ್ರೋದ ವಿಡಿಯೊ ಹೊರ ಬಿಡಲಾಗಿದ್ದು, ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಮೆಟ್ರೋ ಹೇಗಿದೆ? ನೀವೂ ನೋಡಿ.

VISTARANEWS.COM


on

Vande Bharat Metro
Koo

ನವದೆಹಲಿ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು-ಇದು ಸದ್ಯ ಭಾರತದಲ್ಲಿ ಸಂಪರ್ಕ ಕ್ರಾಂತಿಯನ್ನೇ ಉಂಟು ಮಾಡಿದೆ. ಆರಂಭವಾಗಿ ಕೆಲವೇ ದಿನಗಳಲ್ಲಿ ಜನ ಮನ ಗೆದ್ದಿದೆ. ಇದೇ ಯಶಸ್ಸಿನಿಂದ ಸ್ಫೂರ್ತಿ ಪಡೆದು ವಂದೇ ಭಾರತ್‌ ಮೆಟ್ರೋ (Vande Bharat Metro) ಸಿದ್ಧಪಡಿಸಲಾಗುತ್ತಿದ್ದು, ಜುಲೈ ವೇಳೆಗೆ ಪರೀಕ್ಷಾರ್ಥ ಓಡಾಟ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ. ಪಂಜಾಬ್‌ನ ಕಪುರ್ಥಾಲಾ (Punjab’s Kapurthala)ದ ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ವಂದೇ ಭಾರತ್ ಮೆಟ್ರೋದ ಬೋಗಿಗಳನ್ನು ನಿರ್ಮಿಸಲಾಗುತ್ತದೆ. ಸದ್ಯ ಇದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಗಮನ ಸೆಳೆಯುತ್ತಿದೆ (Viral Video).

ಮೊದಲ ಹಂತದಲ್ಲಿ 50 ವಂದೇ ಭಾರತ್ ಮೆಟ್ರೋ ರೈಲುಗಳನ್ನು ನಿರ್ಮಾಣ ಮಾಡಲಾಗುತ್ತದೆ ಮತ್ತು ಕ್ರಮೇಣ ಸಂಖ್ಯೆಯನ್ನು 400ಕ್ಕೆ ಏರಿಸಲಾಗುವುದು ಎಂದು ರೈಲ್ವೆ ಮೂಲಗಳು ತಿಳಿಸಿವೆ. ಭಾರತದಲ್ಲೇ ನಿರ್ಮಾಣವಾಗುತ್ತಿರುವ ಮೆಟ್ರೋ ರೈಲು ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿರುವ ಇದು ದೊಡ್ಡ ನಗರಗಳಲ್ಲಿ ಮೆಟ್ರೋ ಸೇವೆಯನ್ನು ವಿಸ್ತರಣೆ ಮಾಡಲು ಸಹಾಯ ಮಾಡಲಿದೆ. ಅಲ್ಲದ ಮಹಾನಗರಗಳ ಅಕ್ಕಪಕ್ಕದ ನಗರಗಳಿಗೂ ಮೆಟ್ರೋ ಸೇವೆ ವಿಸ್ತರಿಸುವ ಯೋಜನೆಗೆ ಇದು ಉತ್ತೇಜನ ನೀಡಲಿದೆ.

ವಂದೇ ಭಾರತ್ ಮೆಟ್ರೋ 100 ಕಿ.ಮೀ.ನಿಂದ 250 ಕಿ.ಮೀ.ವರೆಗೆ ಪ್ರಯಾಣಿಸುವ ಸಾಮರ್ಥ್ಯ ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಇದು 12 ಬೋಗಿಗಳನ್ನು ಹೊಂದಿದೆ. ಬೇಕಾದರೆ 16 ಬೋಗಿಗಳವರೆಗೆ ವಿಸ್ತರಿಸಬಹುದು ಎಂದು ಅವರು ಹೇಳಿದ್ದಾರೆ.

ಇರಲಿದೆ ಹಲವು ವೈಶಿಷ್ಟ್ಯ

ವಂದೇ ಭಾರತ್‌ ಮೆಟ್ರೋ ಅಸ್ತಿತ್ವದಲ್ಲಿರುವ ಹಳಿಗಳಲ್ಲಿ ಕಾರ್ಯನಿರ್ವಹಿಸಲಿದ್ದು, ಲಕ್ನೋ-ಕಾನ್ಪುರ, ಆಗ್ರಾ-ಮಥುರಾ ಮತ್ತು ತಿರುಪತಿ-ಚೆನ್ನೈನಂತಹ ಮಾರ್ಗಗಳಲ್ಲಿ ಸಂಚರಿಸಲಿದೆ. ಇದು ವಿಶಾಲವಾದ ಒಳಾಂಗಣ ಮತ್ತು ದೊಡ್ಡ ಸ್ವಯಂಚಾಲಿತ ಬಾಗಿಲುಗಳನ್ನು ಹೊಂದಿದೆ. ಜತೆಗೆ ಪ್ರಸ್ತುತ ಚಾಲನೆಯಲ್ಲಿರುವ ಮೆಟ್ರೋ ರೈಲುಗಳಲ್ಲಿ ಲಭ್ಯವಿಲ್ಲದ ಹಲವಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ ಎಂದು ಮೂಲಗಳು ತಿಳಿಸಿವೆ.‌ ಅಧಿಕಾರಿಗಳು ಈ ವರ್ಷವೇ ರೈಲು ಓಡಾಟ ಆರಂಭಿಸಲು ಸಾಧ್ಯವಾಗಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

2019ರಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಪ್ರಾರಂಭವಾದಾಗಿನಿಂದ ಭಾರತದ ಸೆಮಿ-ಹೈಸ್ಪೀಡ್ ರೈಲು ಪ್ರಯಾಣದಲ್ಲಿ ಹಲವು ಸುಧಾರಣೆ ಕಂಡು ಬಂದಿದೆ. ಸದ್ಯ ವಂದೇ ಭಾರತ್‌ ಮೆಟ್ರೋ ಕೂಡ ಈ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ ಎನ್ನುವ ನಿರೀಕ್ಷೆ ಇದೆ.

ಇದನ್ನೂ ಓದಿ: PM Narendra Modi: ಬೆಂಗಳೂರು- ಕಲಬುರಗಿ, ಮೈಸೂರು- ಚೆನ್ನೈ ಸೇರಿ 10 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಪ್ರಯಾಣಿಕರ ಸುರಕ್ಷತೆಗೆ ಒತ್ತು ನೀಡಲು ಪ್ರಧಾನಿ ಸೂಚನೆ

ರೈಲು ಪ್ರಯಾಣದಲ್ಲಿನ ಸುರಕ್ಷತೆಯನ್ನು ಹೆಚ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ 2014ರಿಂದ ಹಲವಾರು ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ರೈಲ್ವೆ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸುರಕ್ಷತೆಗೆ ಸಂಬಂಧಿಸಿದ ಕೆಲಸಗಳಿಗಾಗಿ ಮೀಸಲಾದ ನಿಧಿಯನ್ನು ರಚಿಸುವುದು, ಮಾನವರಹಿತ ಲೆವೆಲ್ ಕ್ರಾಸಿಂಗ್‌ಗಳನ್ನು ತೆಗೆದು ಹಾಕುವುದು, ಹಳಿಗಳ ನವೀಕರಣಕ್ಕೆ ಹೆಚ್ಚಿನ ಒತ್ತು ನೀಡುವುದು ಮತ್ತು ಸುರಕ್ಷಿತ ಪ್ರಯಾಣಿಕರ ಬೋಗಿಗಳ ಟ್ರ್ಯಾಕ್ ರೋಲ್ ಔಟ್ ಅನ್ನು ಹೆಚ್ಚಿನ ವೇಗದಲ್ಲಿ ಆಧುನೀಕರಿಸುವುದು ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಹೇಳಿದೆ.

Continue Reading
Advertisement
Parineeti Chopra husband Raghav Chadha doing well after eye surgery
ಬಾಲಿವುಡ್17 seconds ago

Parineeti Chopra: ಪರಿಣಿತಿ ಚೋಪ್ರಾ ಪತಿ ಕಣ್ಣು ಕಳೆದುಕೊಳ್ಳುವ ಸಾಧ್ಯತೆ: ವೈದ್ಯರು ಹೇಳೋದೇನು?

Rahul Gandhi
ಪ್ರಮುಖ ಸುದ್ದಿ7 mins ago

Rahul Gandhi: ಇಂದು ಶಿವಮೊಗ್ಗದಲ್ಲಿ ರಾಹುಲ್‌ ಗಾಂಧಿ ಪ್ರಚಾರ; ಪ್ರಜ್ವಲ್‌ ರೇವಣ್ಣ ವಿಚಾರ ತೆಗೀತಾರಾ?

Job Alert
ಉದ್ಯೋಗ12 mins ago

Job Alert: ಗಮನಿಸಿ; ಹಟ್ಟಿ ಚಿನ್ನದ ಗಣಿ ಕಂಪನಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ

After SSLC career options
ಶಿಕ್ಷಣ16 mins ago

Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಯಾವುದು ಉತ್ತಮ ಆಯ್ಕೆ?

Thomas Cup 2024
ಬ್ಯಾಡ್ಮಿಂಟನ್16 mins ago

Thomas Cup 2024: ಅಂತಿಮ ಲೀಗ್​ ಪಂದ್ಯದಲ್ಲಿ ಇಂಡೊನೇಷ್ಯಾಕ್ಕೆ ಮಣಿದ ಭಾರತ

Aadhaar Crads For Dog
ಪ್ರಮುಖ ಸುದ್ದಿ20 mins ago

Aadhaar Crads For Dog: ದೆಹಲಿಯಲ್ಲಿ ನಾಯಿಗಳಿಗೂ ಬಂತು ಆಧಾರ್ ಕಾರ್ಡ್!

Pushpa 2 The Rule Title track out
ಟಾಲಿವುಡ್32 mins ago

Pushpa 2: ‘ಪುಷ್ಪ 2’ ಟೈಟಲ್​ ಸಾಂಗ್ ಔಟ್‌: ಸ್ಟೈಲಿಶ್‌ ಆಗಿ ಎಂಟ್ರಿ ಕೊಟ್ಟ ಅಲ್ಲು ಅರ್ಜುನ್!

Congress Candidate List
Lok Sabha Election 202436 mins ago

Congress Candidate List: ಅಮೇಥಿ, ರಾಯ್‌ ಬರೇಲಿಯಿಂದ ರಾಹುಲ್‌, ಪ್ರಿಯಾಂಕಾ ಸ್ಪರ್ಧಿಸುತ್ತಾರಾ? ಕುತೂಹಲಕ್ಕೆ ಇಂದು ತೆರೆ

Asaduddin Owaisi
ದೇಶ38 mins ago

Asaduddin Owaisi: ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

IPL 2024 Points Table
ಕ್ರೀಡೆ50 mins ago

IPL 2024 Points Table: ಚೆನ್ನೈ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಪ್ರಗತಿ ಸಾಧಿಸಿದ ಪಂಜಾಬ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ4 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌