Site icon Vistara News

Train Accident : ರೈಲು ದುರಂತದಲ್ಲಿ ಮಡಿದವರಿಗೆ ಪರಿಹಾರ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

Rail Accident

ನವದೆಹಲಿ: ಅಲಮಂಡಾ ಮತ್ತು ಕಂಟಕಪಲ್ಲಿ ವಿಭಾಗದ ನಡುವೆ ರೈಲು ಹಳಿ ತಪ್ಪಿದ ಘಟನೆಯಲ್ಲಿ (Train Accident) ಮೃತಪಟ್ಟವರ ಕುಟುಂಬಗಳಿಗೆ ಪಿಎಂಎನ್ಆರ್​ಪಿಎಫ್​ನಿNದ (ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ) ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ ಘೋಷಿಸಿದ್ದಾರೆ. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಪಿಎಂಒ ತಿಳಿಸಿದೆ.

ಅದಕ್ಕಿಂತ ಮೊದಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ., ಸಾಮಾನ್ಯ ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಪ್ರಕಟಿಸಿದ್ದಾರೆ. ಗಾಯಗೊಂಡ ಎಲ್ಲರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಘೋಷಿಸಿದರು.

ಘಟನೆ ನಡೆದ ಜಾಗದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ ಎಂಬುದಾಗಿಯೂ ಮಾಹಿತಿ ನೀಡಿದ್ದಾರೆ. “ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಎಲ್ಲರನ್ನೂ ರಕ್ಷಿಸಲಾಗಿದೆ ಮತ್ತು ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಪ್ರಧಾನಿ ಮೋದಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ನಾನು ಆಂಧ್ರಪ್ರದೇಶದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದೇನೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ವೈಷ್ಣವ್ ಹೇಳಿದ್ದಾರೆ.

ಇದನ್ನೂ ಓದಿ: Rahul Gandhi : ಛತ್ತೀಸ್​​ಗಢದಲ್ಲಿ ಬಡವರಿಗೆ 10 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ಭರವಸೆ ಕೊಟ್ಟ ರಾಹುಲ್​

ಮಾಹಿತಿ ಪಡೆದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮಾತನಾಡಿದ್ದಾರೆ. ಅಲಮಂಡಾ ಮತ್ತು ಕಂಟಕಪಲ್ಲಿ ವಿಭಾಗದ ನಡುವಿನ ದುರದೃಷ್ಟಕರ ರೈಲು ಹಳಿ ತಪ್ಪಿದ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆಯಲಾಗಿದೆ. ಅಧಿಕಾರಿಗಳು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದಾರೆ. ದುಃಖಿತ ಕುಟುಂಬಗಳಿಗೆ ಪ್ರಧಾನಿ ಸಂತಾಪ ವ್ಯಕ್ತಪಡಿಸುತ್ತಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ಕಚೇರಿಯ ಪೋಸ್ಟ್​ನಲ್ಲಿ ತಿಳಿಸಲಾಗಿದೆ.

ರೈಲು ಅಪಘಾತದ ಬಗ್ಗೆ ಆಂಧ್ರಪ್ರದೇಶದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್ ದುಃಖ ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮುನ್ನ ಅವರಿಗೆ ಅಗತ್ಯ ಪರಿಹಾರ ವ್ಯವಸ್ಥೆಗಳನ್ನು ನೀಡುವಂತೆ ಸಲಹೆ ನೀಡಿದ್ದಾರೆ.

ಪರಿಹಾರ ಕಾರ್ಯ

ಘಟನೆ ನಡೆದ ಸ್ಥಳದಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ. ಸಿಪಿಆರ್​ಒ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. “ನಾವು ಪ್ರಸ್ತುತ ರಕ್ಷಣಾ ಕಾರ್ಯಾಚರಣೆಯತ್ತ ಗಮನ ಹರಿಸುತ್ತಿದ್ದೇವೆ. ವಿಶಾಖಪಟ್ಟಣಂ ಮತ್ತು ಸಂಬಲ್ಪುರದ ಆರ್​ಎಂಗಳು ಸ್ಥಳಕ್ಕೆ ತಲುಪಿದ್ದಾರೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ನಾವು ಪ್ರಯತ್ನಿಸುತ್ತಿದ್ದೇವೆ ಎಂದು ಪೂರ್ವ ಕರಾವಳಿ ರೈಲ್ವೆಯ ಸಿಪಿಆರ್​​ಒ ಬಿಸ್ವಜಿತ್ ಸಾಹೂ ಪಿಟಿಐಗೆ ತಿಳಿಸಿದ್ದಾರೆ.

ಏನಾಗಿತ್ತು ಘಟನೆ?

ಆಂಧ್ರಪ್ರದೇಶದಲ್ಲಿ ಎಕ್ಸ್​ಪ್ರೆಸ್​​ ರೈಲು ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಡಿಕ್ಕಿ ಹೊಡೆದ (Train Accident) ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 25 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಿಹಾರ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೃತರ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗುತ್ತಿದೆ. ಪ್ಯಾಸೆಂಜರ್ ರೈಲು ವಿಶಾಖಪಟ್ಟಣಂನಿಂದ ರಾಯಗಡಕ್ಕೆ ಹೋಗುತ್ತಿತ್ತು. ಓವರ್ ಹೆಡ್ ಕೇಬಲ್ ಸಮಸ್ಯೆಯಿಂದಾಗಿ ಅದು ಏಕಾಏಕಿ ನಿಂತಿತ್ತು. ಎಕ್ಸ್​ಪ್ರೆಸ್ ರೈಲು ಅದಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣಂ-ರಗಡ ಪ್ಯಾಸೆಂಜರ್ ರೈಲು ನಡುವೆ ಡಿಕ್ಕಿಯಾಗಿದೆ. ಅಪಘಾತಕ್ಕೆ 3 ಬೋಗಿಗಳು ಒಳಗಾಗಿವೆ. ಮೂರು ಮಂದಿ ಮೃತಪಟ್ಟಯ 10 ಮಂದಿ ಗಾಯಗೊಂಡಿದ್ದಾರೆ.

Exit mobile version