ಕನ್ಯಾಕುಮಾರಿ: ಲೋಕಸಭೆ ಚುನಾವಣೆಯ (Lok Sabha Election 2024) ಕೊನೆಯ ಹಂತದ ಮತದಾನವು ಜೂನ್ 1ರಂದು ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆಯೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲಾ ಸ್ಮಾರಕದಲ್ಲಿ 45 ಗಂಟೆಗಳ ಧ್ಯಾನ (Modi Meditation) ಆರಂಭಿಸಿದ್ದಾರೆ. ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಅವರು ಗುರುವಾರ (ಮೇ 30) ಸಂಜೆ 7 ಗಂಟೆ ಸುಮಾರಿಗೆ ಧ್ಯಾನ ಆರಂಭಿಸಿದ್ದು, ಜೂನ್ 1ರಂದು ಮುಗಿಸಲಿದ್ದಾರೆ.
ನರೇಂದ್ರ ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು. ಮೋದಿ ಅವರು ಎರಡು ದಿನ ಧ್ಯಾನ ಮಾಡುವ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತಲೂ 2 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ವಿವೇಕಾನಂದ ಬಂಡೆಯ ಮಹತ್ವ ಏನು?
ಹಿಂದೂ ಮಹಾಸಾಗರ, ಅರಬ್ಬೀ ಸಮುದ್ರ ಮತ್ತು ಬಂಗಾಳಕೊಲ್ಲಿಯ ಸಂಗಮದಲ್ಲಿರುವ ಭಾರತದ ದಕ್ಷಿಣ ತುದಿಯಾದ ಕನ್ಯಾಕುಮಾರಿಯ ವವತುರೈ ಕಡಲತೀರದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಈ ದ್ವೀಪದ ಮೇಲೆ ಧ್ಯಾನ ಮಾಡುವಾಗ ಸ್ವಾಮಿ ವಿವೇಕಾನಂದರು ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡಿದ್ದರು. ಭಾರತದಾದ್ಯಂತ ನಾಲ್ಕು ವರ್ಷಗಳ ಕಾಲ ಅಲೆದಾಡಿದ ಅವರು ದೈವಿಕ ಸ್ವಭಾವ, ಸತ್ಯ, ಶುದ್ಧತೆ, ಪ್ರಾಮಾಣಿಕತೆ, ಪರಿಶ್ರಮ, ಧೈರ್ಯ, ಶಕ್ತಿ ಮತ್ತು ಪ್ರೀತಿಯಲ್ಲಿ ನಂಬಿಕೆಯ ಇಡುವ ತತ್ತ್ವವನ್ನು ಸಾರಿದರು.
#WATCH | Prime Minister Narendra Modi offers prayer at Bhagavathy Amman Temple in Kanyakumari, Tamil Nadu
— ANI (@ANI) May 30, 2024
He will meditate from 30th May evening to 1st June evening.
PM Modi will meditate day and night at the same place where Swami Vivekanand did meditation, at the Dhyan… pic.twitter.com/xKqZpnuQbV
ಮೋದಿ ಈ ಸ್ಥಳ ಆಯ್ಕೆ ಮಾಡಿದ್ದು ಯಾಕೆ?
ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ. ಕಳೆದ ವರ್ಷ ರಾಮಕೃಷ್ಣ ಮಿಷನ್‌ನ 125 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮೋದಿ, ಸ್ವಾಮಿ ವಿವೇಕಾನಂದರು ಭಾರತದ ಬಗ್ಗೆ ಕಂಡಿರುವ ಕನಸನ್ನು ನನಸು ಮಾಡಲು ಭಾರತವು ಕೆಲಸ ಮಾಡುವುದನ್ನು ಅವರು ಹೆಮ್ಮೆಯಿಂದ ನೋಡುತ್ತಿದ್ದಾರೆ ಎಂದು ನನಗೆ ಖಾತ್ರಿಯಿದೆ ಎಂದು ಹೇಳಿದ್ದರು. ಇದೇ ಕಾರಣಕ್ಕಾಗಿ ವಿವೇಕಾನಂದ ರಾಕ್ ಮೆಮೋರಿಯಲ್‌ನಲ್ಲಿ ಮೋದಿ ಅವರು ಧ್ಯಾನ ಮಾಡಲು ಆರಂಭಿಸಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: PM Narendra Modi: ಪ್ರಧಾನಿ ಮೋದಿ ಸ್ಪರ್ಧೆ ಅನರ್ಹತೆಗೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ