ಮುಂಬಯಿ: ಮಹಾರಾಷ್ಟ್ರದ ೨೦ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ ಶಿಂಧೆ ಹಾಗೂ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ದೇವೇಂದ್ರ ಫಡ್ನವಿಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜಕೀಯದಲ್ಲಿ ತಳಮಟ್ಟದಿಂದ ಬೆಳೆದು ಬಂದು ಅಪಾರ ರಾಜಕೀಯ ಮತ್ತು ಆಡಳಿತದ ಅನುಭವ ಹೊಂದಿರುವ ಏಕನಾಥ ಶಿಂಧೆ ತಮ್ಮ ಆಡಳಿತದ ಅವಧಿಯಲ್ಲಿ ಮಹಾರಾಷ್ಟ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ ಎಂದು ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ಅಭಿನಂದಿಸಿದ್ದಾರೆ.
ಇನ್ನೊಂದು ಟ್ವೀಟ್‌ನಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಅಭಿನಂದಿಸಿರುವ ಮೋದಿ, ಇವರು ಪ್ರತಿಯೋರ್ವ ಬಿಜೆಪಿ ಕಾರ್ಯಕರ್ತರಿಗೆ ದೇವೇಂದ್ರ ಫಡ್ನವಿಸ್ ಸ್ಫೂರ್ತಿ. ಇವರ ಅನುಭವ ಮತ್ತು ತಜ್ಞತೆ ಸರ್ಕಾರಕ್ಕೆ ಆಸ್ತಿಯಾಗಲಿದೆ. ಇವರು ಮಹಾರಾಷ್ಟ್ರದ ಅಭಿವೃದ್ಧಿಯ ಪಥಕ್ಕೆ ಇನ್ನಷ್ಟು ಕೊಡುಗೆ ನೀಡಲಿ ಎಂದು ಹಾರೈಸಿದ್ದಾರೆ.
ಗೃಹ ಸಚಿವ ಅಮಿತ್ ಶಾ, ಒಂದೇ ಟ್ವೀಟ್‌ನಲ್ಲಿ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯನ್ನು ಅಭಿನಂದಿಸಿದ್ದರೆ, ಎನ್‌ಸಿಪಿ ನಾಯಕ ಶರದ್ ಪವಾರ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಪ್ರಮುಖ ನಾಯಕರು ಕೂಡ ಟ್ವಿಟ್ಟರ್‌ನಲ್ಲಿ ಅಭಿನಂದನೆ ತಿಳಿಸಿದ್ದಾರೆ.
ಇದನ್ನೂ ಓದಿ| ಬಿಜೆಪಿಯ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರ ಸಿಎಂ ಹುದ್ದೆ ಬಿಟ್ಟುಕೊಟ್ಟಿದ್ದೇಕೆ?