ಭ್ರೂಣದ ಹೃದಯಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ಏಮ್ಸ್​ ವೈದ್ಯರನ್ನು ಶ್ಲಾಘಿಸಿದ ಪ್ರಧಾನಿ ಮೋದಿ; ಹೆಮ್ಮೆಯಾಗುತ್ತದೆ ಎಂದು ಟ್ವೀಟ್​ - Vistara News

ದೇಶ

ಭ್ರೂಣದ ಹೃದಯಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ಏಮ್ಸ್​ ವೈದ್ಯರನ್ನು ಶ್ಲಾಘಿಸಿದ ಪ್ರಧಾನಿ ಮೋದಿ; ಹೆಮ್ಮೆಯಾಗುತ್ತದೆ ಎಂದು ಟ್ವೀಟ್​

26ವರ್ಷದ ಮಹಿಳೆ ಏಳು ತಿಂಗಳ ಗರ್ಭಿಣಿ. ಹಿಂದೆ ಎರಡು ಬಾರಿ ಆಕೆಗೆ ಗರ್ಭಪಾತ ಆಗಿತ್ತು. ಈ ಸಲ ಹೊಟ್ಟೆಯಲ್ಲಿರುವ ಮಗುವಿಗೂ ಹೃದಯ ಸಂಬಂಧಿ ಕಾಯಿಲೆ ಇರುವ ಬಗ್ಗೆ ವೈದ್ಯರು ಎಚ್ಚರಿಕೆ ಕೊಟ್ಟಿದ್ದರು.

VISTARANEWS.COM


on

Narendra Modi Plans To Lok Sabha Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: 26ವರ್ಷದ ಮಹಿಳೆಯ ಗರ್ಭದಲ್ಲಿದ್ದ ಭ್ರೂಣದ ದ್ರಾಕ್ಷಿ ಗಾತ್ರದ ಹೃದಯಕ್ಕೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಮಾಡಿದ ದೆಹಲಿ ಏಮ್ಸ್​ ಆಸ್ಪತ್ರೆ ವೈದ್ಯರನ್ನು ಪ್ರಧಾನಿ ನರೇಂದ್ರ ಮೋದಿ (PM Modi)ಶ್ಲಾಘಿಸಿದ್ದಾರೆ. ಅಪರೂಪದಲ್ಲೇ ಅಪರೂಪದ ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರನ್ನು ಅಭಿನಂದಿಸಿ, ಕೇಂದ್ರ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಅವರು ಟ್ವೀಟ್ ಮಾಡಿದ್ದರು. ಆರೋಗ್ಯ ಸಚಿವರ ಈ ಟ್ವೀಟ್​ನ್ನು ರೀಟ್ವೀಟ್ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿ, ‘ಭಾರತದ ವೈದ್ಯರ ಬಗ್ಗೆ, ಅವರ ದಕ್ಷತೆ ಮತ್ತು ಹೊಸ ಆವಿಷ್ಕಾರದ ಬಗ್ಗೆ ಅತ್ಯಂತ ಹೆಮ್ಮೆ ಎನ್ನಿಸುತ್ತದೆ’ ಎಂದು ಹೇಳಿದ್ದಾರೆ.

ಈ 26ವರ್ಷದ ಮಹಿಳೆ ಏಳು ತಿಂಗಳ ಗರ್ಭಿಣಿ. ಹಿಂದೆ ಎರಡು ಬಾರಿ ಆಕೆಗೆ ಗರ್ಭಪಾತ ಆಗಿತ್ತು. ಈ ಸಲ ಹೊಟ್ಟೆಯಲ್ಲಿರುವ ಮಗುವಿಗೂ ಹೃದಯ ಸಂಬಂಧಿ ಕಾಯಿಲೆ ಇರುವ ಬಗ್ಗೆ ವೈದ್ಯರು ಎಚ್ಚರಿಕೆ ಕೊಟ್ಟಿದ್ದರು. ಆದರೆ ಗರ್ಭಪಾತಕ್ಕೆ ಆಕೆ ಒಪ್ಪಿರಲಿಲ್ಲ. ಅದರ ಬದಲು ಹೊಟ್ಟೆಯಲ್ಲಿದ್ದ ಭ್ರೂಣಕ್ಕೆ ಚಿಕಿತ್ಸೆ ನೀಡುವ, ವೈದ್ಯರ ಸಲಹೆಗೆ ಒಪ್ಪಿಗೆ ಸೂಚಿಸಿದ್ದರು. ಅದರಂತೆ ಏಮ್ಸ್​ ವೈದ್ಯರು ಕೇವಲ 90 ಸೆಕೆಂಡ್​ಗಳಲ್ಲಿ ಭ್ರೂಣಕ್ಕೆ ಹೃದಯ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಮಗು ಹುಟ್ಟಿದ ಬಳಿಕ ಹೃದಯ ಸಂಬಂಧಿ ತೊಂದರೆ ಇರುವುದಿಲ್ಲ ಎಂಬ ಭರವಸೆಯನ್ನೂ ವ್ಯಕ್ತಪಡಿಸಿದ್ದಾರೆ. ವೈದ್ಯಕೀಯ ಭಾಷೆಯಲ್ಲಿ ಅದನ್ನು ಬಲೂನ್​ ಡಿಲೇಷನ್​ ಪ್ರೊಸೀಜರ್​ ಎಂದು ಕರೆಯಲಾಗುತ್ತದೆ.

ಏಮ್ಸ್ ವೈದ್ಯರ ಈ ಶಸ್ತ್ರಚಿಕಿತ್ಸೆ ಬಳಿಕ ಆರೋಗ್ಯ ಸಚಿವ ಮನ್​ಸುಖ್​ ಮಾಂಡವಿಯಾ ಅವರು ಟ್ವೀಟ್ ಮಾಡಿ ‘ಏಮ್ಸ್ ವೈದ್ಯರ ತಂಡಕ್ಕೆ ನನ್ನ ಅಭಿನಂದನೆಗಳು. ಆ ತಾಯಿ-ಮಗು ಆರೋಗ್ಯವಾಗಿರಲಿ ಎಂದು ಪ್ರಾರ್ಥಿಸುತ್ತೇನೆ’ ಎಂದಿದ್ದರು. ಈ ಟ್ವೀಟ್​​ನ್ನು ಈಗ ಪ್ರಧಾನಿ ಮೋದಿ ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಾಯಿ ಗರ್ಭದಲ್ಲೇ ಭ್ರೂಣದ ದ್ರಾಕ್ಷಿ ಗಾತ್ರದ ಹೃದಯಕ್ಕೆ 90 ಸೆಕೆಂಡ್‌ನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Horlicks Label: ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಾರ್ಲಿಕ್ಸ್‌ ಸೇರಿ ಹಲವು ಮಾಲ್ಟ್‌ ಆಧಾರಿತ ಪಾನೀಯಗಳ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಎಂಬ ಲೇಬಲ್‌ ತೆಗೆದುಹಾಕಲಾಗಿದೆ. ಇನ್ನು ಇವು ಕ್ರಿಯಾತ್ಮಕ ಪೌಷ್ಟಿಕ ಪಾನೀಯ ಎನಿಸಿಕೊಳ್ಳಲಿವೆ. ಇದರಿಂದ ಜನರ ದಾರಿ ತಪ್ಪಿಸುವ ಜಾಹೀರಾತು, ಗ್ರಾಹಕರ ಗೊಂದಲ ನಿವಾರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

VISTARANEWS.COM


on

Horlicks Label
Koo

ನವದೆಹಲಿ: ಭಾರತದಲ್ಲಿ ಹಾರ್ಲಿಕ್ಸ್‌ ಕುಡಿಯದವರೇ ಇರಲಿಕ್ಕಿಲ್ಲ. ಚಿಕ್ಕ ಮಕ್ಕಳಿಂದ ಹಿಡಿದು, ದೊಡ್ಡವರವರೆಗೆ ಕುಡಿಯುತ್ತಾರೆ. ಅದರಲ್ಲೂ, ಯಾರು ಬಾಲ್ಯದಲ್ಲಿ ಹಾರ್ಲಿಕ್ಸ್‌ ಕುಡಿದಿಲ್ಲವೋ, ಅಷ್ಟರಮಟ್ಟಿಗೆ ಅವರ ಬಾಲ್ಯ ‘ಸಪ್ಪೆ’ ಎಂದೇ ಹೇಳಲಾಗುತ್ತಿದೆ. ಇಂತಹ ನೆನಪುಗಳ ಹಿನ್ನೆಲೆ ಹೊಂದಿರುವ ಹಾರ್ಲಿಕ್ಸ್‌ ಬಾಟಲಿ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ (Health Food Drinks) ಎಂಬ ಲೇಬಲ್‌ಅನ್ನು (Horlicks Label) ಹಿಂದುಸ್ತಾನ್‌ ಯುನಿಲಿವರ್‌ (HUL) ತೆಗೆದುಹಾಕಿದೆ. ಇತ್ತೀಚಿನ ನಿಯಮಗಳ ಬದಲಾವಣೆ ಭಾಗವಾಗಿ ಲೇಬಲ್‌ಅನ್ನು ತೆಗೆದುಹಾಕಿದೆ ಎಂದು ಹೇಳಲಾಗುತ್ತಿದೆ.

ಹಾರ್ಲಿಕ್ಸ್‌ ಬಾಟಲಿ ಮೇಲಿನ ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಲೇಬೆಲ್‌ ತೆಗೆದುಹಾಕಲಾಗಿದ್ದು, ಈಗ ಹಾರ್ಲಿಕ್ಸ್‌ ಸೇರಿ ಹಲವು ರೀತಿಯ ಪಾನೀಯಗಳನ್ನು ಕ್ರಿಯಾತ್ಮಕ ಪೌಷ್ಟಿಕ ಪಾನೀಯ (Functional Nutritional Drinks) ಎಂಬ ಹೊಸ ಕೆಟಗರಿಗೆ ಸೇರಿಸಲಾಗಿದೆ. ಪಾನೀಯಗಳನ್ನು ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಕೆಟಗರಿಯಿಂದ ತೆಗೆದು, ಕ್ರಿಯಾತ್ಮಕ ಪೌಷ್ಟಿಕ ಪಾನೀಯಗಳ ಪಟ್ಟಿಗೆ ಸೇರಿಸಬೇಕು. ವೆಬ್‌ಸೈಟ್‌ ಸೇರಿ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲೂ ಇದನ್ನೇ ನಮೂದಿಸಬೇಕು ಎಂಬುದಾಗಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯವು ಸೂಚನೆ ನೀಡಿದ ಹಿನ್ನೆಲೆಯಲ್ಲಿ ಹಿಂದುಸ್ತಾನ್‌ ಯುನಿಲಿವರ್‌ ಈ ಕ್ರಮ ತೆಗೆದುಕೊಂಡಿದೆ.

“ಸಚಿವಾಲಯದ ಸೂಚನೆಯಂತೆ ನಾವು ಹೆಲ್ತ್‌ ಫುಡ್‌ ಡ್ರಿಂಕ್ಸ್‌ ಕೆಟಗರಿಯನ್ನು ಕ್ರಿಯಾತ್ಮಕ ಪೌಷ್ಟಿಕ ಪಾನೀಯ ಎಂಬುದಾಗಿ ಬದಲಾಯಿಸಿದ್ದೇವೆ. ಈ ಹೆಸರಿನಿಂದಲೇ ಕರೆಯುವುದು ಸಮಂಜಸ ಎಂಬ ನಿರ್ಧಾರಕ್ಕೆ ಬರಲಾಗಿದೆ. ಹಾಗೆಯೇ, ಹೊಸ ಹೆಸರು ಪಾರ್ದರ್ಶಕವಾಗಿಯೂ ಇದೆ. ಹಾಗಾಗಿ, ಹೊಸ ಹೆಸರನ್ನು ಇಡಲಾಗಿದೆ” ಎಂದು ಹಿಂದುಸ್ತಾನ್‌ ಯುನಿಲಿವರ್‌ನ ಚೀಫ್‌ ಫೈನಾನ್ಶಿಯಲ್‌ ಆಫೀಸರ್‌ ರಿತೇಶ್‌ ತಿವಾರಿ ಮಾಹಿತಿ ನೀಡಿದ್ದಾರೆ. ಇದರಿಂದ ದಾರಿತಪ್ಪಿಸುವ ಜಾಹೀರಾತುಗಳ ತಡೆಯಾಗುವುದರ ಜತೆಗೆ ಗ್ರಾಹಕರಿಗೂ ಗೊಂದಲ ಇರುವುದಿಲ್ಲ ಎಂಬುದು ಸಚಿವಾಲಯದ ಚಿಂತನೆಯಾಗಿದೆ ಎಂದು ತಿಳಿದುಬಂದಿದೆ.

ಆಹಾರ ಸುರಕ್ಷತೆ ಮತ್ತು ಗುಣಮಟ್ಟಗಳ ಕಾಯ್ದೆ ಅಡಿಯಲ್ಲಿ ಹೆಲ್ತ್‌ ಡ್ರಿಂಕ್ಸ್‌ ಎಂಬ ಪದಕ್ಕೆ ಸರಿಯಾದ ವ್ಯಾಖ್ಯಾನ ಸಿಗದ ಕಾರಣ ಹೊಸ ಹೆಸರು ಸೂಚಿಸಲಾಗಿದೆ. ಇದೇ ಕಾರಣಕ್ಕಾಗಿ ಇತ್ತೀಚೆಗೆ ಭಾರತೀಯ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಪ್ರಾಧಿಕಾರವು (FSSAI) ಇತ್ತೀಚೆಗೆ ಎಲ್ಲ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ಗಳಿಗೆ ಹೆಲ್ತ್‌ ಡ್ರಿಂಕ್ಸ್‌ ಅಥವಾ ಎನರ್ಜಿ ಡ್ರಿಂಕ್ಸ್‌ ಎಂಬ ಕೆಟಗರಿಯನ್ನು ತೆಗೆದುಹಾಕಬೇಕು ಎಂದು ಸೂಚಿಸಿತ್ತು. ಡೇರಿ, ಸಿರೀಲ್‌ ಅಥವಾ ಮಾಲ್ಟ್‌ ಆಧಾರಿತ ಪಾನೀಯಗಳ ಮೇಲಿನ ಲೇಬೆಲ್‌ ತೆಗೆದುಹಾಕಲು ಸೂಚಿಸಿತ್ತು. ಅದರಂತೆ, ಕೆಟಗರಿಯನ್ನು ತೆಗೆದುಹಾಕಲಾಗಿದೆ.

ಇದನ್ನೂ ಓದಿ: MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಗುಣಮಟ್ಟ ತಪಾಸಣೆಗೆ ಸೂಚನೆ

Continue Reading

Lok Sabha Election 2024

Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Madhavi Latha: ಬಿಜೆಪಿಯ ಹೈದರಾಬಾದ್ ಅಭ್ಯರ್ಥಿ 221 ಕೋಟಿ ಆಸ್ತಿ ಹೊಂದಿದ್ದು, ತೆಲಂಗಾಣದ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ವ್ಯಾಪಾರಿ ದಂಪತಿ ಮೂವರು ಮಕ್ಕಳನ್ನು ಹೊಂದಿದ್ದು, ಹೆಚ್ಚಿನ ಹಣವನ್ನು ಹೂಡಿಕೆ ಮಾಡಿರುವುದಾಗಿ ಅಫಿಡವಿಟ್ ನಲ್ಲಿ ಘೋಷಿಸಿದ್ದಾರೆ.

VISTARANEWS.COM


on

By

Madhavi Latha
Koo

ಹೈದರಾಬಾದ್: ತೆಲಂಗಾಣದ (Telangana) ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿರುವ ಹೈದರಾಬಾದ್ (Hyderabad) ಲೋಕಸಭಾ (lok sabha) ಕ್ಷೇತ್ರದ ಬಿಜೆಪಿ (bjp) ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ (Kompella Madhavi Latha) ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 221.37 ಕೋಟಿ ರೂ. ಎಂಬುದಾಗಿ ಬುಧವಾರ ನಾಮಪತ್ರ (nomination) ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ( Election Commission) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಮಾಧವಿ ಲತಾ ಮತ್ತು ಅವರ ಪತಿ ಕೊಂಪೆಲ್ಲಾ ವಿಶ್ವನಾಥ್ ಇಬ್ಬರೂ ವ್ಯಾಪಾರಿಗಳು. ಅವರ ಮೂವರು ಅವಲಂಬಿತ ಮಕ್ಕಳು, 165.46 ಕೋಟಿ ರೂಪಾಯಿಗಳ ಚರ ಆಸ್ತಿಯನ್ನು ಹೊಂದಿದ್ದಾರೆ ಮತ್ತು ಮಾಧವಿ ಲತಾ ದಂಪತಿ 55.91 ಕೋಟಿ ರೂಪಾಯಿಗಳ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ.

ತೆಲಂಗಾಣದ ಅವಳಿ ನಗರವಾದ ಸಿಕಂದರಾಬಾದ್‌ನಲ್ಲಿ ನೆಲೆಸಿರುವ 49 ವರ್ಷದ ಮಾಧವಿ ಲತಾ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡರು. ಮೊದಲ ಬಾರಿಗೆ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: Rahul Gandhi: ಶೀಘ್ರವೇ ಅಯೋಧ್ಯೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ರಾಮಲಲ್ಲಾನ ದರ್ಶನ!

ಮಾಧವಿ ಲತಾ ಅವರು ಲಿಸ್ಟೆಡ್ ಮತ್ತು ಅನ್ ಲಿಸ್ಟೆಡ್ ಕಂಪನಿಗಳಲ್ಲಿ 25.20 ಕೋಟಿ ಹೂಡಿಕೆ ಸೇರಿದಂತೆ 31.31 ಕೋಟಿ ರೂ.ಗಳ ಚರ ಆಸ್ತಿಯನ್ನು ಹೊಂದಿದ್ದಾರೆ ಎಂದು ಅವರು ಘೋಷಿಸಿದರು.


ವಿರಿಂಚಿ ಲಿಮಿಟೆಡ್‌ನಲ್ಲಿ 7.80 ಕೋಟಿ ರೂಪಾಯಿ ಹೂಡಿಕೆಯನ್ನು ಹೊಂದಿರುವ ಅವರು 3.78 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹೊಂದಿದ್ದಾರೆ.

ಮಾಧವಿ ಲತಾ ಅವರ ಪತಿ ವಿರಿಂಚಿ ಲಿಮಿಟೆಡ್‌ನಲ್ಲಿ 52.36 ಕೋಟಿ ರೂ. ಮೌಲ್ಯದ ಷೇರುಗಳನ್ನು ಒಳಗೊಂಡಂತೆ 88.31 ಕೋಟಿ ರೂ. ಚರ ಆಸ್ತಿಯನ್ನು ಹೊಂದಿದ್ದಾರೆ. ಅವರ ಮೂವರು ಅವಲಂಬಿತ ಮಕ್ಕಳು ಸಹ 45 ಕೋಟಿ ರೂ. ಗೂ ಹೆಚ್ಚು ಒಟ್ಟು ಚರ ಆಸ್ತಿ ಹೊಂದಿದ್ದಾರೆ. ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು 6.32 ಕೋಟಿ ಸ್ಥಿರಾಸ್ತಿ ಹೊಂದಿದ್ದು, ಪತಿಯ ಸ್ಥಿರಾಸ್ತಿ ಮೌಲ್ಯ 49.59 ಕೋಟಿ ರೂ. ಗಳಾಗಿದೆ.

ಆಸ್ತಿಗಳಲ್ಲಿ ಕೃಷಿಯೇತರ ಭೂಮಿ, ಹೈದರಾಬಾದ್ ಮತ್ತು ಸುತ್ತಮುತ್ತಲಿನ ವಾಣಿಜ್ಯ ಮತ್ತು ವಸತಿ ಕಟ್ಟಡಗಳು ಸೇರಿವೆ.
ಮಾಧವಿ ಲತಾ ಅವರು 90 ಲಕ್ಷ ರೂ., ಅವರ ಪತಿಯು 26.13 ಕೋಟಿ ರೂ. ಇಕ್ವಿಟಿ ಹೊಂದಿದ್ದಾರೆ. 2022-23ರಲ್ಲಿ ಅವರ ಆದಾಯ 3.76 ಲಕ್ಷ ರೂ.ಗಳಾಗಿದ್ದರೆ, 2021-22ರಲ್ಲಿ 1.22 ಕೋಟಿ ರೂ. ಗಳಾಗಿತ್ತು. 2022-23ರಲ್ಲಿ ವಿಶ್ವನಾಥ್ ಅವರ ಆದಾಯ 2.82 ಕೋಟಿ ರೂ. ಗಳಾಗಿದ್ದರೆ, 2021- 22ರಲ್ಲಿ 6.86 ಕೋಟಿ ರೂ.

ಒಂದು ಕ್ರಿಮಿನಲ್ ಕೇಸ್

ಬಿಜೆಪಿ ಅಭ್ಯರ್ಥಿ ಒಂದು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಕಳೆದ ವಾರ ಆಕೆಯ ವಿರುದ್ಧ ಬೇಗಂ ಬಜಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295-ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಿ ಅಂಬರ್ ಬಜಾರ್ ವೃತ್ತದಲ್ಲಿರುವ ಮಸೀದಿಯಲ್ಲಿ ಕಾಲ್ಪನಿಕ ಬಾಣದ ಚಿತ್ರ ಬಿಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

Continue Reading

ದೇಶ

Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Kotak Bank: ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ. ಆದರೆ, ಆರ್‌ಬಿಐ ನಿರ್ಬಂಧದ ಹಿನ್ನೆಲೆಯಲ್ಲಿ ಗುರುವಾರ ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ ಮೌಲ್ಯವು ಶೇ.10ರಷ್ಟು ಕುಸಿತ ಕಂಡಿದೆ.

VISTARANEWS.COM


on

Kotak Bank
Koo

ಮುಂಬೈ: ಸುರಕ್ಷತಾ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಹೊಸ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆ ಒದಗಿಸಬಾರದು ಎಂದು ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ (Kotak Mahindra Bank) ಆರ್‌ಬಿಐ ನಿರ್ಬಂಧ ವಿಧಿಸಿದೆ. ಇದರ ಬೆನ್ನಲ್ಲೇ, ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ (Kotak Bank Shares) ಮೌಲ್ಯವು ಗುರುವಾರ (ಏಪ್ರಿಲ್‌ 25) ಶೇ.10ರಷ್ಟು ಕುಸಿತವಾಗಿದೆ. ಇದರಿಂದ ಹೂಡಿಕೆದಾರರಿಗೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಗುರುವಾರ ಷೇರುಪೇಟೆಯಲ್ಲಿ ವಹಿವಾಟು ಆರಂಭವಾಗುತ್ತಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಷೇರುಗಳ ಮೌಲ್ಯವು ಕುಸಿಯುತ್ತ ಹೋಯಿತು. ಒಟ್ಟು ಶೇ.10ರಷ್ಟು ಮೌಲ್ಯ ಕುಸಿತ ಕಂಡಿದ್ದು, ಬಿಎಸ್‌ಇಯಲ್ಲಿ ಕೊಟಕ್‌ ಬ್ಯಾಂಕ್‌ನ ಒಂದು ಷೇರಿನ ಮೌಲ್ಯವು 1,658.75 ರೂ.ಗೆ ಕುಸಿತವಾಗಿದೆ. ಅಷ್ಟೇ ಅಲ್ಲ, ಆರ್‌ಬಿಐ ನಿರ್ಬಂಧದಿಂದ ಕೊಟಕ್‌ ಮಹಿಂದ್ರಾ ಬ್ಯಾಂಕ್‌ಗೆ ಮುಂದಿನ ದಿನಗಳಲ್ಲಿ ಭಾರಿ ನಷ್ಟವಾಗಲಿದೆ. ಬ್ಯಾಂಕ್‌ ಏಳಿಗೆ, ಹೊಸ ಗ್ರಾಹಕರನ್ನು ಸೆಳೆಯುವಲ್ಲಿಯೂ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಆರ್‌ಬಿಐ ನಿರ್ಬಂಧಕ್ಕೆ ಕಾರಣ ಏನು?

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ. 2022 ಹಾಗೂ 2023ರಲ್ಲಿ ಐಟಿ ಪರಿಶೀಲನೆ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Continue Reading

ದೇಶ

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

Samsung: ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ್ಯ ಹೆಚ್ಚಿಸಲು ವಿನ್ಯಾಸ ಮಾಡಲಾದ ರಾಷ್ಟ್ರೀಯ ಕೌಶಲ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಷನ್ ಕ್ಯಾಂಪಸ್ ನ ಎರಡನೇ ಆವೃತ್ತಿಯನ್ನು ಸ್ಯಾಮ್‌ಸಂಗ್ ಇಂಡಿಯಾ ಪ್ರಾರಂಭಿಸಿದೆ.

VISTARANEWS.COM


on

Samsung India launched the 2nd edition of Samsung Innovation Campus
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್ (Samsung) ಎಐ, ಐಒಟಿ, ಬಿಗ್ ಡೇಟಾ, ಮತ್ತು ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಮುಂತಾದ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ ಹೆಚ್ಚಿಸಲು ವಿನ್ಯಾಸ ಮಾಡಲಾದ ತನ್ನ ರಾಷ್ಟ್ರೀಯ ಕೌಶಲ್ಯ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಕಾರ್ಯಕ್ರಮವು 18-25 ವರ್ಷ ವಯಸ್ಸಿನ ಯುವಜನತೆಗೆ ಭವಿಷ್ಯದ ತಂತ್ರಜ್ಞಾನಗಳ ಕೌಶಲ ಒದಗಿಸುವ ಮತ್ತು ಆ ಮೂಲಕ ಅವರಿಗೆ ಉದ್ಯೋಗಾವಕಾಶ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಯುವಜನತೆಗೆ ಸರಿಯಾದ ಅವಕಾಶಗಳನ್ನು ಸೃಷ್ಟಿ ಮಾಡಲು ರೂಪಿಸಲಾಗಿರುವ ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳನ್ನು ಬೆಂಬಲಿಸಲು ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

ಭಾರತದಾದ್ಯಂತ ಇರುವ 3,500 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ತಿಳುವಳಿಕೆ ಒಪ್ಪಂದಕ್ಕೆ ಈ ವಾರದ ಆರಂಭದಲ್ಲಿ ಸ್ಯಾಮ್‌ಸಂಗ್ ಮತ್ತು ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ ಆಫ್ ಇಂಡಿಯಾ (ಇಎಸ್‌ಎಸ್‌ಸಿಐ) ನಡುವೆ ಸಹಿ ಮಾಡಲಾಗಿದೆ.

ಈ ವರ್ಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ ಒದಗಿಸುವುದರ ಜತೆಗೆ ಇನ್ನೂ ಹೆಚ್ಚಿನ ಆಸಕ್ತಿಕರ ಅಂಶಗಳು ಸೇರ್ಪಡೆಗೊಂಡಿವೆ. ಪ್ರತಿ ಕ್ಷೇತ್ರದಲ್ಲಿ ರಾಷ್ಟ್ರೀಯ ಟಾಪರ್‌ ಸ್ಥಾನ ಪಡೆಯುವವರು ದೆಹಲಿ/ಎನ್‌ಸಿಆರ್‌ನಲ್ಲಿರುವ ಸ್ಯಾಮ್‌ಸಂಗ್ ಘಟಕಗಳಿಗೆ ಭೇಟಿ ನೀಡುವ ಅವಕಾಶ ಪಡೆಯುತ್ತಾರೆ. ಜತೆಗೆ ರೂ. 1 ಲಕ್ಷದ ನಗದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಘಟಕಗಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ಸ್ಯಾಮ್‌ಸಂಗ್‌ನ ನಾಯಕತ್ವದ ತಂಡಗಳೊಂದಿಗೆ ಸಂವಹನ ನಡೆಸುವ ಮತ್ತು ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಹೊಂದಲಿದ್ದಾರೆ. ರಾಷ್ಟ್ರ ಮಟ್ಟದ ಕೋರ್ಸ್ ಟಾಪರ್‌ಗಳು ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ವಾಚ್‌ಗಳಂತಹ ಅತ್ಯಾಕರ್ಷಕ ಸ್ಯಾಮ್‌ಸಂಗ್ ಉತ್ಪನ್ನಗಳನ್ನು ಸಹ ಪಡೆಯಲಿದ್ದಾರೆ.

ಈ ಕುರಿತು ಮಾತನಾಡಿದ ಸ್ಯಾಮ್‌ಸಂಗ್ ನೈಋತ್ಯ ಏಷ್ಯಾದ ಅಧ್ಯಕ್ಷ ಮತ್ತು ಸಿಇಓ ಜೆಬಿ ಪಾರ್ಕ್, ಸ್ಯಾಮ್‌ಸಂಗ್ ಭಾರತದಲ್ಲಿ ಕಳೆದ 28 ವರ್ಷಗಳಿಂದ ತನ್ನ ಅಸ್ತಿತ್ವ ಹೊಂದಿದ್ದು, ಈ ಎಲ್ಲಾ ವರ್ಷಗಳಲ್ಲಿ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಿದೆ. ನಮ್ಮ ದೃಷ್ಟಿಕೋನವು ಯುವಜನರಿಗೆ ಕೌಶಲ್ಯ ಒದಗಿಸುವ ಮತ್ತು ಅವರಿಗೆ ವೃತ್ತಿಪರ ಬೆಳವಣಿಗೆಯ ಅವಕಾಶಗಳನ್ನು ಒದಗಿಸಿ ಅವರನ್ನು ಸಬಲೀಕರಣಗೊಳಿಸುವ ಭಾರತ ಸರ್ಕಾರದ ಉದ್ದೇಶಗಳೊಂದಿಗೆ ಸರಿಯಾಗಿ ಹೊಂದಿಕೆಯಾಗುತ್ತದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಮೂಲಕ, ನಾವು ಯುವಜನತೆಯ ಕೌಶಲ್ಯವನ್ನು ವೃದ್ಧಿಸುವ ಕೌಶಲ್ಯ ಆಧಾರಿತ ಕಲಿಕೆಯ ವೇದಿಕೆಯನ್ನು ನಿರ್ಮಿಸುತ್ತಿದ್ದೇವೆ. ಅದರಿಂದ ಯುವಕರು ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ ಮತ್ತು ಅರ್ಥಪೂರ್ಣ ಬದಲಾವಣೆ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

ಇಎಸ್‌ಎಸ್‌ಸಿಐ ಸಂಸ್ಥೆಯು ಕೌಶಲಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಉದ್ಯಮ ಸಂಘಗಳಿಂದ ಉತ್ತೇಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ಕೌಶಲ ಒದಗಿಸುವ ಸಂಸ್ಥೆಯಾಗಿದೆ ಮತ್ತು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ಅಡಿಯಲ್ಲಿ ಸೆಕ್ಟರ್ ಸ್ಕಿಲ್ ಕೌನ್ಸಿಲ್ (ವಲಯ ಕೌಶಲ್ಯ ಮಂಡಳಿ) ಆಗಿ ಕಾರ್ಯನಿರ್ವಹಿಸುತ್ತದೆ. ಇದು ತನ್ನ ರಾಷ್ಟ್ರವ್ಯಾಪಿ ಇರುವ ಅನುಮೋದಿತ ತರಬೇತಿ ಮತ್ತು ಶಿಕ್ಷಣ ಪಾಲುದಾರರ ನೆಟ್‌ವರ್ಕ್ ಮೂಲಕ ಸ್ಥಳೀಯ ಮಟ್ಟದಲ್ಲಿ ತರಬೇತಿಯನ್ನು ನೀಡುತ್ತದೆ. ಇಎಸ್‌ಎಸ್‌ಸಿಐ ಸಂಸ್ಥೆಯು ಭಾರತದ ಸಣ್ಣ ಪಟ್ಟಣಗಳಲ್ಲಿ ಎಲ್ಲೆಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನ ಶಿಕ್ಷಣದ ಲಭ್ಯತೆ ಇಲ್ಲವೋ ಅಲ್ಲೆಲ್ಲಾ ಯುವಜನತೆಗೆ ಕೋರ್ಸ್‌ಗಳನ್ನು ಒದಗಿಸುವ ಅವಕಾಶಗಳನ್ನು ಕೂಡ ಎದುರು ನೋಡುತ್ತದೆ.

ಈ ಕುರಿತು ಇಎಸ್‌ಎಸ್‌ಸಿಐ ಚೀಫ್ ಆಫರೇಟಿಂಗ್ ಆಫೀಸರ್ (Officiating CEO) ಡಾ. ಅಭಿಲಾಷಾ ಗೌರ್ ಮಾತನಾಡಿ, ದೇಶದಲ್ಲಿ ಕೌಶಲ ಒದಗಿಸುವ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಸಿಎಸ್‌ಆರ್‌ ಉಪಕ್ರಮಕ್ಕಾಗಿ ಸ್ಯಾಮ್‌ಸಂಗ್ ಜತೆಗೆ ಪಾಲುದಾರಿಕೆ ಹೊಂದಲು ಇಎಸ್‌ಎಸ್‌ಸಿಐ ಸಂತೋಷ ಪಡುತ್ತದೆ. ನಮ್ಮ ಉದ್ದೇಶಕ್ಕೆ ಅನುಗುಣವಾಗಿ ರಾಷ್ಟ್ರದ ಯುವಜನರಿಗೆ ಅದರಲ್ಲೂ ವಿಶೇಷವಾಗಿ ಕಡಿಮೆ ಸವಲತ್ತು ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಕೌಶಲ ಮತ್ತು ಅಗತ್ಯ ಜ್ಞಾನವನ್ನು ಒದಗಿಸಲು ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಒದಗಿಸುತ್ತದೆ ಮತ್ತು ಅವರನ್ನು ಉದ್ಯೋಗಕ್ಕೆ ಸಿದ್ಧಗೊಳಿಸುತ್ತದೆ ಎಂಬ ಭರವಸೆ ನಮಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ದಾಖಲಾದ ಯುವಜನತೆ ತರಗತಿ ಮೂಲಕ ಮತ್ತು ಆನ್‌ಲೈನ್ ತರಬೇತಿ ಪಡೆಯುತ್ತಾರೆ ಹಾಗೂ ಎಐ, ಐಒಟಿ, ಬಿಗ್ ಡೇಟಾ ಮತ್ತು ಕೋಡಿಂಗ್ ಆಂಡ್ ಪ್ರೋಗ್ರಾಮಿಂಗ್‌ನಲ್ಲಿ ತಮ್ಮ ಆಯ್ದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್ ಅನ್ನು ಪೂರ್ಣಗೊಳಿಸುತ್ತಾರೆ.

ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಸಾಫ್ಟ್ ಸ್ಕಿಲ್ಸ್ ತರಬೇತಿಯನ್ನೂ ನೀಡಲಾಗುವುದು. ಭಾಗವಹಿಸುವವರು ಭಾರತದಾದ್ಯಂತ ಇರುವ ಇಎಸ್‌ಎಸ್‌ಸಿಐಯ ತರಬೇತಿದಾರರು ಮತ್ತು ಶಿಕ್ಷಣ ಪಾಲುದಾರರ ಮೂಲಕ ಸಿದ್ಧಗೊಳಿಸಲಾಗುತ್ತದೆ. ಈ ಕಾರ್ಯಕ್ರಮವು ಆಫ್‌ಲೈನ್ ಮತ್ತು ಆನ್‌ಲೈನ್ ಕಲಿಕೆ, ಹ್ಯಾಕಥಾನ್‌ಗಳು ಮತ್ತು ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್‌ಗಳು ಮತ್ತು ಸ್ಯಾಮ್‌ಸಂಗ್ ಉದ್ಯೋಗಿಗಳು ಒದಗಿಸುವ ಪರಿಣಿತ ಮಾರ್ಗದರ್ಶನವನ್ನು ಒಳಗೊಂಡಿರುತ್ತದೆ.

ಈ ಕಾರ್ಯಕ್ರಮವು ನಾಲ್ಕು ರಾಜ್ಯಗಳಲ್ಲಿ ಎಂಟು ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುತ್ತದೆ. ದೇಶದ ಉತ್ತರ ಭಾಗದಲ್ಲಿ, ದೆಹಲಿ ಎನ್‌ಸಿಆರ್‌ನಲ್ಲಿರುವ ಎರಡು ಕೇಂದ್ರಗಳ ಜತೆಗೆ ಲಕ್ನೋ ಮತ್ತು ಗೋರಖ್‌ಪುರದಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಭಾರತದಲ್ಲಿ, ತಮಿಳುನಾಡಿನ ಚೆನ್ನೈ ಮತ್ತು ಶ್ರೀಪೆರಂಬದೂರಿನಲ್ಲಿ 2 ಕೇಂದ್ರಗಳು ಮತ್ತು ಕರ್ನಾಟಕದ ಬೆಂಗಳೂರಿನಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

ಕಾರ್ಯಕ್ರಮವು ಏಪ್ರಿಲ್ 2024 ರಲ್ಲಿ ಪ್ರಾರಂಭವಾಗಲಿದೆ ಮತ್ತು ವಿಶೇಷವಾಗಿ ವಿನ್ಯಾಸಗೊಳಿಸಲಾದ ಆರು ತಿಂಗಳ ಕೋರ್ಸ್ ಅಕ್ಟೋಬರ್ 2024ರಲ್ಲಿ ಕೊನೆಗೊಳ್ಳುತ್ತದೆ. ನವೆಂಬರ್ 2024ರಲ್ಲಿ ಕೋರ್ಸ್ ಟಾಪರ್‌ಗಳ ಹೆಸರನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

Continue Reading
Advertisement
Horlicks Label
ದೇಶ1 min ago

Horlicks Label: ಹಾರ್ಲಿಕ್ಸ್‌ ಇನ್ನು ಹೆಲ್ತ್‌ ಡ್ರಿಂಕ್ಸ್‌ ಅಲ್ಲ ಎಂದ ಹಿಂದುಸ್ತಾನ್‌ ಯುನಿಲಿವರ್;‌ ಕಾರಣ ಏನು?

Salaar Movie In star suvarna
ಕಿರುತೆರೆ2 mins ago

Salaar Movie: ಕಿರುತೆರೆಗೆ ಬಂದೇ ಬಿಡ್ತು ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’!

Ranbir Kapoor trainer shares transformation Of Ranbir
ಬಾಲಿವುಡ್4 mins ago

Ranbir Kapoor: ಸಖತ್ ಫಿಟ್ ಆ್ಯಂಡ್ ಫೈನ್​ ಆದ ರಣಬೀರ್! ಫೋಟೊ ಶೇರ್‌ ಮಾಡಿದ ಟ್ರೈನರ್‌!

Road Accident in Chamarajanagar
ಚಾಮರಾಜನಗರ14 mins ago

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

IPL 2024
ಕ್ರೀಡೆ29 mins ago

IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

gold rate today 34
ಚಿನ್ನದ ದರ33 mins ago

Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

Lok sabha election 2024
Lok Sabha Election 202458 mins ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

leopard Attack
ಕ್ರೀಡೆ1 hour ago

leopard Attack: ಚಿರತೆ ದಾಳಿ; ಜಿಂಬಾಬ್ವೆ ಮಾಜಿ ಕ್ರಿಕೆಟಿಗನಿಗೆ ತೀವ್ರ ಗಾಯ

Madhavi Latha
Lok Sabha Election 20241 hour ago

Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Tamannaah Bhatia Summoned in Illegal IPL Streaming Case
South Cinema1 hour ago

Tamannaah Bhatia: ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ; ನಟಿ ತಮನ್ನಾಗೆ ಸಮನ್ಸ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌