Site icon Vistara News

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Modi Meditation

PM Modi Meditation In Kanniyakumari; See In Pics

ಕನ್ಯಾಕುಮಾರಿ: ಲೋಕಸಭೆ ಚುನಾವಣೆ (Lok Sabha Election 2024), ಅಬ್ಬರದ ಪ್ರಚಾರ, ಸಾಲು ಸಾಲು ರ‍್ಯಾಲಿಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು (Narendra Modi) ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲೆ ಸ್ಮಾರಕದಲ್ಲಿ (Vivekananda Rock Memorial) ಗುರುವಾರದಿಂದ (ಮೇ 30) 45 ಗಂಟೆಗಳ ಧ್ಯಾನ (Modi Meditation) ಆರಂಭಿಸಿದ್ದಾರೆ. ಜೂನ್‌ 1ರವರೆಗೆ ಮೋದಿ ಅವರು ಧ್ಯಾನಸ್ಥರಾಗಿಯೇ ಇರಲಿದ್ದಾರೆ. ಮೋದಿ ಅವರು ಗಾಢವಾಗಿ ಧ್ಯಾನ ಮಾಡುತ್ತಿರುವ ಫೋಟೊಗಳು ಇಲ್ಲಿವೆ.

ಸುಮಾರು 131 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಧ್ಯಾನ ಮಾಡುತ್ತಿದ್ದಾರೆ.
ನರೇಂದ್ರ ಮೋದಿ ಅವರು ಧ್ಯಾನ ಮಾಡುವ 45 ಗಂಟೆಯೂ ಆಹಾರ ಸೇವಿಸುವುದಿಲ್ಲ. ಹಣ್ಣುಗಳನ್ನು ಕೂಡ ಅವರು ಸೇವಿಸುವುದಿಲ್ಲ. ಎರಡು ದಿನವೂ ಅವರು ಪಾನೀಯ ಮಾತ್ರ ಸೇವಿಸಲಿದ್ದಾರೆ.
ನರೇಂದ್ರ ಮೋದಿ ಅವರು ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಇದಾದ ಬಳಿಕ ಮೋದಿ ಅವರು ಧ್ಯಾನ ಆರಂಭಿಸಿದರು.
ನರೇಂದ್ರ ಮೋದಿ ಧ್ಯಾನದ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತ ಭದ್ರತೆಗಾಗಿ 2 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವಿವೇಕಾನಂದ ಅವರನ್ನು ತಮ್ಮ ಜೀವನಕ್ಕೆ ಆದರ್ಶ ಎಂದು ಪರಿಗಣಿಸುತ್ತಾರೆ. ಸ್ವಾಮಿ ವಿವೇಕಾನಂದರು ಸ್ಥಾಪಿಸಿರುವ ರಾಮಕೃಷ್ಣ ಮಿಷನ್‌ನ ಸದಸ್ಯರೂ ಆಗಿದ್ದಾರೆ.

ಇದನ್ನೂ ಓದಿ: Modi Meditation: ಮೋದಿ ಮಾಡ್ತಿರೋದು ‘ಧ್ಯಾನ’ ಅಲ್ಲ ‘ಡ್ರಾಮಾ’ ಎಂದ ಮಲ್ಲಿಕಾರ್ಜುನ ಖರ್ಗೆ!

Exit mobile version