ನವದೆಹಲಿ: ನ್ಯಾಷನಲ್ ಕೆಡೆಟ್ ಕಾರ್ಪ್ಸ್‌ಗೆ (NCC) 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 75 ರೂ. ಮುಖಬೆಲೆಯ ವಿಶೇಷ ನಾಣ್ಯವನ್ನು (75 Years To NCC) ಬಿಡುಗಡೆ ಮಾಡಿದ್ದಾರೆ. ದೆಹಲಿಯಲ್ಲಿರುವ ಕಾರ್ಯಪ್ಪ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ, ವಿಶೇಷ ನಾಣ್ಯವನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಮೋದಿ, “ಎನ್‌ಸಿಸಿ ಸ್ಥಾಪನೆಯಾಗಿ 75 ವರ್ಷ ಕಳೆದಿವೆ. ದೇಶದ ನಿರ್ಮಾಣದಲ್ಲಿ ಎನ್‌ಸಿಸಿಯ ಪಾತ್ರ ಮಹತ್ತರವಾಗಿದೆ. ದೇಶದ ಸೇವೆಯ ಮನೋಬಲದಿಂದ ಯುವಕರು ಎನ್‌ಸಿಸಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ಸೇವೆ, ಕೊಡುಗೆ ಸ್ಮರಿಸೋಣ” ಎಂದರು.
“ದೇಶದ ಸೇನೆಯಲ್ಲಿ ಹೆಣ್ಣುಮಕ್ಕಳ ಸಬಲೀಕರಣವಾಗಿದೆ. ರಕ್ಷಣಾ ಕಾರ್ಯದಲ್ಲೂ ದೇಶದ ಪುತ್ರಿಯರು ದಿಟ್ಟವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ 19 ದೇಶಗಳ 196 ಅಧಿಕಾರಿಗಳು ಭಾಗವಹಿಸಿದ್ದು ವಿಶೇಷವಾಗಿತ್ತು.
ಇದನ್ನೂ ಓದಿ: Prajadhwani: ಮೋದಿ ಕೊಟ್ಟ ಭರವಸೆಗಳಲ್ಲಿ ಒಂದಾದರೂ ಈಡೇರಿಸಿದ್ದಾರಾ: ಡಿ.ಕೆ. ಶಿವಕುಮಾರ್